Breaking News

Daily Archives: ಜುಲೈ 29, 2026

ನನ್ನ ಬಗ್ಗೆ ಸುಳ್ಳು ಆರೋಪ – ಪ್ರಿಯಾಂಕಾ ಕ್ಷಮೆಗೆ ಜೋಶಿ ಆಗ್ರಹ

ನವದೆಹಲಿ: ನನ್ನ ಬಗ್ಗೆ ಸುಳ್ಳು ಆರೋಪ ಮಾಡಿದ ಪ್ರಿಯಾಂಕ್‌ ವಾದ್ರಾಲೋಕಸಭೆಯಲ್ಲಿ ಕ್ಷಮೆ ಕೇಳಬೇಕೆಂದು ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್‌ ಜೋಶಿ(ಆಗ್ರಹಿಸಿದ್ದಾರೆ. ಅತ್ಯಾಚಾರಿಗಳ ಬಿಡುಗಡೆಯನ್ನು ಬೆಂಬಲಿಸಿದ್ದ ವ್ಯಕ್ತಿಯನ್ನು ನರೇಂದ್ರ ಮೋದಿ ಅವರು ದೇಶದ ಶಿಕ್ಷಣ ಸಚಿವರನ್ನಾಗಿ ನೇಮಿಸಿದ್ದಾರೆ. ಈ ಮೂಲಕ ದೇಶದ ಕೋಟ್ಯಂತರ ಹೆಣ್ಣುಮಕ್ಕಳಿಗೆ ಪ್ರಧಾನಿ ಏನು ಸಂದೇಶ ನೀಡುತ್ತಿದ್ದಾರೆ ಎಂದು ಪ್ರಿಯಾಂಕಾ ಲೋಕಸಭೆಯಲ್ಲಿ ಪ್ರಶ್ನಿಸಿದ್ದರು. ಪ್ರಿಯಾಂಕಾ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಜೋಶಿ, ಪ್ರಿಯಾಂಕಾ ಅವರು ತಾವು ನೀಡಿದ ಹೇಳಿಕೆಗಳನ್ನು ದೃಢೀಕರಿಸಬೇಕು. …

Read More »

NEETಗಿಂತ KPSC ಹಗರಣಕ್ಕೆ ಉತ್ತರ ಕೊಡಿ: ಲೋಕಸಭೆಯಲ್ಲಿ ಡಿಕೆಶಿಗೆ ತೇಜಸ್ವಿ ಪ್ರಶ್ನೆ

ನವದೆಹಲಿ: ಮುಖ್ಯಮಂತ್ರಿಗಳು ದೆಹಲಿಗೆ ಬಂದು NEET ಹಗರಣದ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಆದರೆ KPSC ಹಗರಣದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅವರ ನೋವು ಮುಖ್ಯಮಂತ್ರಿಗಳಿಗೆ ಕಾಣುತ್ತಿಲ್ಲವೇ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ  ಪ್ರಶ್ನಿಸಿದರು. ಲೋಕಸಭೆಯಲ್ಲಿ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಮುಖ್ಯಮಂತ್ರಿಗಳಿಗೆ ಕನ್ನಡದಲ್ಲೇ ಪ್ರಶ್ನಿಸಿದ ಅವರು, ʼ10 …

Read More »

FIR ಹಿಂಪಡೆಯದಿದ್ದರೆ ಮತ್ತೆ ದೇಶವ್ಯಾಪಿ ಪ್ರತಿಭಟನೆ: CJP ಹೊಸ ವಾರ್ನಿಂಗ್‌

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಕ್ಷ  ಮತ್ತೊಮ್ಮೆ ರಾಷ್ಟ್ರವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದೆ. ಸುಪ್ರೀಂ ಕೋರ್ಟ್ ಎಫ್‌ಐಆರ್‌ಗಳ ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಸರ್ಕಾರ ಪ್ರತಿಭಟನಾಕಾರರ ವಿರುದ್ಧ ಪ್ರಕರಣಗಳನ್ನು ಆಯುಧವಾಗಿ ಬಳಸಬಹುದು ಎಂದು ಸಂಘಟನೆ ಆತಂಕ ವ್ಯಕ್ತಪಡಿಸಿದೆ. ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಾಂತಿಯುತ ಪ್ರತಿಭಟನಾಕಾರರ …

Read More »

ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು ಆದೇಶ – ಮಂಡ್ಯದ ರೈತರಿಂದ ಪ್ರತಿಭಟನೆ ಎಚ್ಚರಿಕೆ; ಪೊಲೀಸರು ಅಲರ್ಟ್

ಮಂಡ್ಯ: ಕಾವೇರಿ ಕೊಳ್ಳದ ರೈತರಿಗೆ ಮತ್ತೊಮ್ಮೆ ಆತಂಕ ಎದುರಾಗಿದೆ. ಮಳೆಯಿಲ್ಲದೇ ಈಗಾಗಲೇ ಹಳೆ ಮೈಸೂರು ಭಾಗದಲ್ಲಿ ಬರದ ಪರಿಸ್ಥಿತಿ ತಲೆದೋರಿದೆ. ಇದರ ನಡುವೆಯೂ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದ್ದು, ಮಂಡ್ಯದ ರೈತರಲ್ಲಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಒಂದೆಡೆ ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದರೆ, ಮತ್ತೊಂದೆಡೆ ತಮಿಳುನಾಡಿಗೆ  ನೀರು ಹರಿಸುತ್ತಿರುವುದು ರೈತರ  ಕೆಂಗಣ್ಣಿಗೆ ಗುರಿಯಾಗಿದೆ. ಸಿಡಿದೆದ್ದಿರುವ ಮಂಡ್ಯ …

Read More »

ಖೋದಾನಪುರ ಬಾರ್ ಬಂದ್‌ಗೆ ಆಗ್ರಹ

ಬೆಳಗಾವಿ: ಚನ್ನಮ್ಮನ ಕಿತ್ತೂರು ತಾಲೂಕಿನ  ಖೋದಾನಪುರ ಗ್ರಾಮದ ಬಳಿಯ ಶ್ರೀ ಸಾಯಿ  ಸ್ಪೋರ್ಟ್ಸ್ ಕ್ಲಬ್ ಹೆಸರಿನಲ್ಲಿ ನಡೆಸುತ್ತಿರುವ ಬಾರ್ ಬಂದ್ ಮಾಡಲು ಆಗ್ರಹಿಸಿ ಖೋದಾನಪುರ ಗ್ರಾಮಸ್ಥರು ಸೋಮವಾರ ಅಬಕಾರಿ ಇಲಾಖೆ ಕಚೇರಿ ಎದುರು ಪ್ರತಿಭಟಿಸಿದರು. ಕರ್ನಾಟಕ ಬಹುಜನ ಚಳವಳಿ ಸಂಘದ ನೇತೃತ್ವದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು, ಏಳು ದಿನಗಳೊಳಗೆ ಬಂದ್ ಮಾಡದಿದ್ದರೆ ಮಹಿಳೆಯರು, ವಿದ್ಯಾರ್ಥಿಗಳು ಸೇರಿ ಬಾರ್ ಎದುರೇ ಹೋರಾಟ ಆರಂಭಿಸುವುದಾಗಿ ಎಚ್ಚರಿಕೆ ನೀಡಿದರು. ಯುವಕರು ಅತಿಯಾದ ಮದ್ಯ …

Read More »

ಗೋವಿಗೆ ರಾಷ್ಟ್ರಮಾತೆ ಸ್ಥಾನಮಾನ ನೀಡಲು ಆಗ್ರಹ

ಬೆಳಗಾವಿ: ಗೋವನ್ನು ರಾಷ್ಟ್ರಮಾತೆಯನ್ನಾಗಿ ಘೋಷಿಸಲು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಲಾಯಿತು. ಚನ್ನಮ್ಮ ವೃತ್ತದಿಂದ ಗೋವು ಸಮೇತ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಆಗಮಿಸಿ ಗೋಮಾತೆ ಅಭಿಮಾನದ ಪ್ರಯುಕ್ತ ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಸಂಗ್ರಹಿಸಿದ ಒಟ್ಟು 1.80 ಲಕ್ಷ ಸಹಿ ಸಂಗ್ರಹದ ಪ್ರತಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು. ಸವದತ್ತಿ ತಾಲೂಕು ಶಿಂದೋಗಿ ನಿತ್ಯಾನಂದ ಆಶ್ರಮದ ಮುಕ್ತಾನಂದ ಸ್ವಾಮೀಜಿ ಮಾತನಾಡಿ, ಈಗಾಗಲೇ ಒಂದು ಹಂತದ ಅಭಿಯಾನ ಪೂರ್ಣಗೊಂಡಿದೆ. ದೇಶವ್ಯಾಪ್ತಿಯಲ್ಲಿ ಎರಡನೇ ಹಂತದ ಸಹಿ …

Read More »

ಬೆಳಗಾವಿ ಪಾಲಿಕೆ ಸೂಪರ್ ಸೀಡ್ ಎಚ್ಚರಿಕೆ!

ಬೆಳಗಾವಿ  :ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ, ಮಹಾಜನ ವರದಿಯೇ ಅಂತಿಮ ಎಂಬ ಗೊತ್ತುವಳಿಯನ್ನು ಕೈಗೊಳ್ಳಲು ಹಿಂದೇಟು ಹಾಕಿದರೆ ಬೆಳಗಾವಿ ಮಹಾನಗರ ಪಾಲಿಕೆ ಸೂಪರ್ ಸೀಡ್‌ಗೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆಯ ಆಡಳಿತವು  ಕನ್ನಡ ಭಾಷೆ, ನೆಲ, ಜಲ ಸಂರಕ್ಷಣೆ ವಿಷಯದಲ್ಲಿ ಬದ್ಧರಾಗಿರಬೇಕು.  ಪಾಲಿಕೆಯಲ್ಲಿ ಕನ್ನಡ …

Read More »

ರಸ್ತೆ ದುರಸ್ತಿ ಆಗ್ರಹಿಸಿ ಇಟಗಿಗ್ರಾಮಸ್ಥರ ಧರಣಿ

ಖಾನಾಪುರ: ಇಟಗಿಯಿಂದ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳ ದುರಸ್ತಿ ಕೈಗೊಳ್ಳಬೇಕೆಂದು ಆಗ್ರಹಿಸಿ ಗ್ರಾಮಸ್ಥರು, ಕರ್ನಾಟಕ ರಕ್ಷಣಾ ವೇದಿಕೆ, ನೇಗಿಲಯೋಗಿ ಸುರಕ್ಷಾ ರೈತ ಸಂಘ ಹಾಗೂ ವಿವಿಧ ದಲಿತ ಪರ ಸಂಘಟನೆಗಳ ವತಿಯಿಂದ ಗ್ರಾಮದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಬಳಿಕ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ಕೈಗೊಂಡರು. ಗ್ರಾಮದಲ್ಲಿ ಎಲ್ಲ ಅಂಗಡಿ ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ವ್ಯಾಪಾರಸ್ಥರು ಪ್ರತಿಭಟನೆಗೆ …

Read More »

ಸಿ.ಟಿ. ರವಿ ವಿರುದ್ಧ ಬಲವಂತದ ಕ್ರಮ ಬೇಡ| High court

ಬೆಂಗಳೂರು: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ವಿಧಾನಪರಿಷತ್​ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್​ ನಿರ್ದೇಶನ ನೀಡಿದೆ. ತಮ್ಮ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದಾಖಲಾಗಿರುವ ಕೋಮುದ್ವೇಷ ಹರಡುವ ಆರೋಪದ ಪ್ರಕರಣ ರದ್ದುಕೋರಿ ಸಿ.ಟಿ. ರವಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಪ್ರತಿವಾದಿ ಪೊಲೀಸರಿಗೆ ನೋಟಿಸ್​ ಜಾರಿಗೊಳಿಸಲಾಗಿದ್ದು, ಮುಂದಿನ ವಿಚಾರಣೆ …

Read More »

ಬೃಹತ್ ಬೆಳಗಾವಿ ಮಹಾನಗರ ಪಾಲಿಕೆ ಎಂದು ಘೋಷಣೆ ಮಾಡುವಂತೆ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಕರವೇ ಮನವಿ

ಗಡಿನಾಡು ಗುಡಿ, ಬೆಳಗಾವಿ ಮಹಾನಗರ ನಾಲ್ಕು ದಿಕ್ಕುಗಳಲ್ಲಿ ದಿನದಿಂದ ದಿನಕ್ಕೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ.ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯಾಗುವ ಹೊಸ್ತಿಲಲ್ಲಿದೆ. ಹದಿನೈದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಬೆಳಗಾವಿ ಮಹಾನಗರ ಮೆಟ್ರೋಪಾಲಿಟನ್ ನಗರವಾಗುವತ್ತ ದಾಪುಗಾಲು ಹಾಕುತ್ತಿದೆ. ಹೀಗಾಗಿ ಬೆಳಗಾವಿ ಮಹಾನಗರದ ಬೆಳವಣಿಗೆಗೆ ತಕ್ಕಂತೆ ಬೆಳಗಾವಿ ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೆ ಏರಿಸುವ ಅವಶ್ಯಕತೆ ಇದ್ದು ಸರ್ಕಾರ ಕೂಡಲೇ ಬೆಳಗಾವಿ ಮಹಾನಗರ ಪಾಲಿಕೆಯನ್ನು ಬೃಹತ್ ಬೆಳಗಾವಿ ಮಹಾನಗರ ಪಾಲಿಕೆ ಎಂದು ಘೋಷಣೆ ಮಾಡಬೇಕು,ಈ …

Read More »