Breaking News

Daily Archives: ಜುಲೈ 29, 2026

ವಿಶ್ವ ಹೆಪಾಟೈಟಿಸ ದಿನಾಚರಣೆ ಅಂಗವಾಗಿ ಜಾಗೃತ ನಡಿಗೆ

ಬೆಳಗಾವಿ: ವಿಶ್ವ ಹೆಪಾಟೈಟಿಸ ದಿನಾಚರಣೆ ಅಂಗವಾಗಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ, ಗ್ಯಾಸ್ಟ್ರೊಎಂಟ್ರಾಲಾಜಿ ವಿಭಾಗ, ಕಾಹೆರ, ಜೆಎನ್‌ ವೈದ್ಯಕೀಯ ಮಹಾವಿದ್ಯಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಹಿರಿಯ ಗ್ಯಾಸ್ಟ್ರೊಎಂಟ್ರಾಲಾಜಿಸ್ಟ ಡಾ. ಸಂತೋಷ ಹಜಾರೆ ಅವರು, ಏರ್ಪಡಿಸಿದ್ದ ಹೆಪಾಟೈಟಿಸ ಬಿ ಹಾಗೂ ಅಂಗಾಂಗ ದಾನಗಳ ಕುರಿತ ಜಾಗೃತಿ ನಡಿಗೆಯನ್ನು ಕಾಹೆರ ಕುಲಪತಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರು ಹಸಿರು ನಿಶಾನೆ ತೋರಿಸುವದರ ಮೂಲಕ ಉದ್ಘಾಟಿಸಿದರು. …

Read More »

ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಕೊಠಡಿ ಸಂಖ್ಯೆ 354ರಲ್ಲಿ ಬೆಳಗಾವಿ ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (BUDA) ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ವಿವಿಧ ನಗರಾಭಿವೃದ್ಧಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, …

Read More »

ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳಿಗೆ ಬಿತ್ತು ದಂಡ

ಬೆಳಗಾವಿ: ಕರ್ನಾಟಕ ಮಾಹಿತಿ ಆಯೋಗ ಪೀಠದಲ್ಲಿ ಜುಲೈ 28 ರಂದು ಮೇಲ್ಮನವಿಗಳ ವಿಚಾರಣೆ ನಡೆಸಿ ಅರ್ಜಿದಾರರಿಗೆ ಸಕಾಲದಲ್ಲಿ ಮಾಹಿತಿ ನೀಡದೆ ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘಿಸಿದ್ದರಿಂದ ಸಾರ್ವಜನಿಕ ಮಾಹಿತಿ ಅಧಿಕಾರಿ. ಪುರಸಭೆ ಸಿಂದಗಿ, ಹುಬ್ಬಳ್ಳಿ ತಾಲೂಕು ತಹಶೀಲ್ದಾರ್ ಮತ್ತು ಗಜೇಂದ್ರಗಡ ತಾಲೂಕಿನ ಇಟಗಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ರವರಿಗೆ ತಲಾ ರೂ.10,000 ದಂಡ ವಿಧಿಸಿ ಶಿಸ್ತು ಕ್ರಮ ಜರುಗಿಸಿಲಾಗಿದೆ. ಮೇಲ್ಮನವಿದಾರರು ಅನುಭವಿಸಿದ ಕಷ್ಟ ಮತ್ತು ಇತರೆ ವೆಚ್ಚಗಳಿಗಾಗಿ 5,000 ರೂ. …

Read More »

ಶಿವಶಂಕರ ಜೊಲ್ಲೆ ಇಂಗ್ಲಿಷ್ ಮೀಡಿಯಮ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ

ಬೆಳಗಾವಿ: ಜೊಲ್ಲೆ ಗ್ರೂಪ್‌ನ ಶಿವಶಂಕರ ಜೊಲ್ಲೆ ಇಂಗ್ಲಿಷ್ ಮೀಡಿಯಮ್ ಪಬ್ಲಿಕ್ ಶಾಲೆ, (ಸಿ.ಬಿ.ಎಸ್.ಇ)  ನಣದಿ ಕ್ಯಾಂಪಸ್‌ನಲ್ಲಿ  ಸನ್ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ಪದ ಗ್ರಹಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜೊಲ್ಲೆ ಸಂಸ್ಥೆಯ ಸಹ ಸಂಸ್ಥಾಪಕರು ಹಾಗೂ  ನಿಪ್ಪಾಣಿಯ ಶಾಸಕರಾದ ಶಶಿಕಲಾ ಜೊಲ್ಲೆ ಅವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಆಶಾ ಜ್ಯೋತಿ ವಿಶೇಷ ಮಕ್ಕಳ ವಸತಿಯುತ ಶಾಲೆಯ ಆಧ್ಯಕ್ಷರಾದ ಜ್ಯೋತಿಪ್ರಸಾದ ಜೊಲ್ಲೆ ಅವರು …

Read More »