Breaking News

Daily Archives: ಜುಲೈ 30, 2026

ಪಿಎಂ ಸೂರ್ಯಘರ್ ಯೋಜನೆಗೆ ಭಾರೀ ಸ್ಪಂದನೆ, 48 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಲಾಭ – ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪಿಎಂ ಸೂರ್ಯಘರ್; ಮಫ್ತ್ ಬಿಜ್ಲಿ ಯೋಜನೆ’  ದೇಶಾದ್ಯಂತ ಯಶಸ್ವಿಯಾಗಿ ಜಾರಿಯಾಗುತ್ತಿದ್ದು, ಇದುವರೆಗೆ 48.02 ಲಕ್ಷಕ್ಕೂ ಅಧಿಕ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ತಿಳಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಆರಂಭವಾದ ಈ ಯೋಜನೆಯಡಿ ಈಗಾಗಲೇ 39.72 ಲಕ್ಷಕ್ಕೂ ಹೆಚ್ಚು ಸೌರ ಮೇಲ್ಚಾವಣಿ (ರೂಫ್‌ಟಾಪ್ ಸೋಲಾರ್) ವ್ಯವಸ್ಥೆಗಳು ಅಳವಡಿಕೆಯಾಗಿದ್ದು, ಗ್ರಾಮೀಣ ಪ್ರದೇಶಗಳ ಮನೆಗಳಿಗೂ ಯೋಜನೆ ವಿಸ್ತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. …

Read More »

ಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯ

ರಾಮನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಹಿನ್ನೆಲೆ ಬಿಜೆಪಿ  ರಾಜ್ಯಾದ್ಯಂತ ಬರ ಪರಿಸ್ಥಿತಿಯ ಅಧ್ಯಯನಕ್ಕೆ ಮುಂದಾಗಿದ್ದು, ಇಂದು ಸಿಎಂ ಸ್ವಕ್ಷೇತ್ರ ಕನಕಪುರದಲ್ಲಿ ಬಿಜೆಪಿ ನಿಯೋಗ ಬರ ಅಧ್ಯಯನ ಪರಿಶೀಲನೆ ಮಾಡಿದೆ. ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಕನಕಪುರ ತಾಲೂಕಿಗೆ ಭೇಟಿ ನೀಡಿದ ಬಿಜೆಪಿ ನಿಯೋಗ ಸ್ಥಳೀಯ ರೈತರ ಸಂಕಷ್ಟ ಆಲಿಸಿತು. ತಾಲೂಕಿನ ಮಲ್ಲೇಗೌಡನದೊಡ್ಡಿ ಹಾಗೂ ಸಾಸಲಾಪುರ ಗ್ರಾಮಗಳಿಗೆ ಭೇಟಿ ನೀಡಿ, ನೀರಿಲ್ಲದೆ ಒಣಗುತ್ತಿರುವ ಬಾಳೆ …

Read More »

‘ವಂದೇ ಮಾತರಂ’ಗೆ ಅವಮಾನ ಮಾಡಿದ್ರೆ 3 ವರ್ಷ ಜೈಲು – ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ನವದೆಹಲಿ: ‘ವಂದೇ ಮಾತರಂ’ ಗೀತೆಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡುವುದು ಅಥವಾ ಅದರ ಗಾಯನಕ್ಕೆ ಅಡ್ಡಿಪಡಿಸುವುದನ್ನು ಶಿಕ್ಷಾರ್ಹ ಅಪರಾಧವಾಗಿಸುವ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ-2026 ಅನ್ನು ರಾಜ್ಯಸಭೆ  ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಿದೆ. ಮಸೂದೆ ಪ್ರಕಾರ, ತಪ್ಪಿತಸ್ಥರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಮಸೂದೆಯ ಕುರಿತು ನಡೆದ ಸಂಕ್ಷಿಪ್ತ ಚರ್ಚೆಯ ಬಳಿಕ ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅದನ್ನು ಅಂಗೀಕರಿಸಲಾಯಿತು. ಈ …

Read More »

ನಾಮಕರಣಕ್ಕೆ ಪತ್ನಿ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಪತಿ; 11 ತಿಂಗಳ ಸ್ವಂತ ಮಗುವನ್ನೇ ನೆಲಕ್ಕೆ ಎಸೆದು ಹಲ್ಲೆ

ಬೆಂಗಳೂರು: ನಾಮಕರಣಕ್ಕೆ ತವರು ಮನೆಯಿಂದ ಪತ್ನಿ ಮತ್ತು ಆಕೆಯ ಕುಟುಂಬ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಪತಿ ತನ್ನದೇ 11 ತಿಂಗಳ ಮಗುವನ್ನು ನೆಲಕ್ಕೆ ಎಸೆದ ಅಮಾನವೀಯ ಘಟನೆ ಬೆಂಗಳೂರಿನ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿ ನಡೆದಿದೆ. ಜುಲೈ 17ರಂದು ಬನಶಂಕರಿ ಸೆಕೆಂಡ್ ಸ್ಟೇಜ್‌ನ ಗೋಕುಲ್ ವೆಜ್ ಪಾರ್ಟಿ ಹಾಲ್‌ನಲ್ಲಿ ಮಗುವಿನ ನಾಮಕರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಳಗ್ಗೆ 10:30ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಹೆಸರುಘಟ್ಟದಲ್ಲಿರುವ ತವರು ಮನೆಯಿಂದ ಪತ್ನಿ ರಮ್ಯಾ ಹಾಗೂ ಆಕೆಯ …

Read More »

ಪೊಲೀಸ್ ನೇಮಕಾತಿ ಪರೀಕ್ಷೆಗೆ ಎಐ ಕಣ್ಗಾವಲು

ಬೆಳಗಾವಿ:ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಸಿವಿಲ್ ಪೊಲೀಸ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಯ ಪರೀಕ್ಷೆಗಳು ಆಗಸ್ಟ 2 ರಂದು ನಡೆಯಲಿದ್ದು, ನಿಯೋಜಿತ ಸಿಬ್ಬಂದಿ ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಪರೀಕ್ಷಾ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು. ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಬುಧವಾರ  ನಡೆದ ಪೊಲೀಸ್ ಹುದ್ದೆಗಳ ನೇಮಕಾತಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ಮಾತನಾಡಿ, ದೂರದಿಂದ ಬರುವಂತಹ …

Read More »

ನಗರದಲ್ಲಿ ಆಟೋಗಳಿಗೆ ಮೀಟರ್ ಕಡ್ಡಾಯ

ಬೆಳಗಾವಿ:ನಗರದಲ್ಲಿ ಪ್ರಯಾಣಿಕರಿಂದ ಮನಬಂದಂತೆ ದರ ವಸೂಲಿ ಮಾಡುವ ಆಟೋರಿಕ್ಷಾಗಳಿಗೆ ಕಡಿವಾಹಣ ಹಾಕಬೇಕು. ಮೀಟರ್ ಆಧಾರದಲ್ಲೇ ಎಲ್ಲ ಆಟೋಗಳು ಸಂಚರಿಸಬೇಕು ಆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ ರೋಷನ್‌ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿ, ಮುಂದಿನ 15 ದಿನಗಳೊಳಗೆ ನಗರದ ಎಲ್ಲಾ ಆಟೋರಿಕ್ಷಾಗಳು ಮೀಟರ ಅಳವಡಿಸಿಕೊಂಡು ನಿಗದಿತ ದರದಂತೆ ಸೇವೆ ನೀಡಬೇಕು.ಮೊದಲ 1.6 ಕಿಲೋಮೀಟರ್‌ಗೆ …

Read More »

ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಬಿಡಲು ಒತ್ತಾಯ

ಬೆಳಗಾವಿ:ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ಬಲದಂಡೆ ಕಾಲುವೆಗೆ 2ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಸವದತ್ತಿ ತಾಲೂಕಿನ ವಿವಿಧ ಗ್ರಾಮಸ್ಥರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.  ಈ ಬಾರಿ ಮುಂಗಾರಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವ ಹಿನ್ನೆಲೆ ಕೆರೆ ಕಟ್ಟೆಗಳು ನೀರಿಲ್ಲದೆ ಬತ್ತುತ್ತಿವೆ. ಅಂತರ್ಜಲ ಮಟ್ಟ ತೀವ್ರ ಕುಸಿತದಿಂದಾಗಿ ಕೊಳವೆ ಬಾವಿಗಳು ಬಂದ್ ಆಗುತ್ತಿವೆ. ಇದರಿಂದಾಗಿ ಗ್ರಾಮಗಳಲ್ಲಿ ಜನ ಜಾನುವಾರಗಳಿಗೆ ಕುಡಿಯುವ …

Read More »

ಡಾ.ಕೋರೆ ಹುಟ್ಟು ಹಬ್ಬದ ಅಂಗವಾಗಿ ಕಾರ್ಯಕ್ರಮ ಆಯೋಜನೆ

ಚಿಕ್ಕೋಡಿ: ಶಿಕ್ಷಣ,ಆರೋಗ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸುವ ಮೂಲಕ ದೇಶದ ಅತ್ಯುನ್ನತ ಪ್ರಶಸ್ತಿ ಪದ್ಮಶ್ರೀ ಪುರಸ್ಕೃತರಾದ ಡಾ. ಪ್ರಭಾಕರ ಕೋರೆ ಅವರ ೭೯ನೇ ಜನ್ಮದಿನ ಅಂಗವಾಗಿ ಅ.೧ ರಂದು ವಿವಿಧ ಸಾಮಾಜಿಕ ಮತ್ತು ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಡಾ.ಪ್ರಭಾಕರಣ್ಣಾ ಕೋರೆ ಹುಟ್ಟುಹಬ್ಬ ಆಚರಣಾ ಸಮಿತಿಯ ಅಧ್ಯಕ್ಷ ಮತ್ತು ಕೆಎಲ್ಇ ಸಂಸ್ಥೆಯ ನಿರ್ದೇಶಕ ಬಿ.ಆರ್.ಪಾಟೀಲ ತಿಳಿಸಿದರು. ತಾಲೂಕಿನ ಅಂಕಲಿ ಶಿವಾಲಯದ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು …

Read More »

ರಕ್ಕಸಕೊಪ್ಪ ಜಲಾಶಯ ಭರ್ತಿ

ಬೆಳಗಾವಿ : ಜಿಲ್ಲೆಯಲ್ಲಿ ಹಾಗೂ ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕೆಲ ದಿನದಿಂದ ಸುರಿದ ಮಳೆಯಿಂದಾಗಿ ಜಿಲ್ಲೆಯ ಸಂಗ್ರಹ ನದಿಗಳು ಮೈದುಂಬಿ ಹರಿಯುತ್ತಿವೆ,ಇದೀಗ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ರಕ್ಕಸಕೊಪ್ಪ ಜಲಾಶಯ ಭರ್ತಿ:  ಮಳೆಯಿಂದಾಗಿ ಕೃಷ್ಣಾ,ವೇದಗಂಗಾ,ದೂಧಗಂಗಾ ,ಹಿರಣ್ಯಕೇಶಿ,ಘಟಪ್ರಭಾ,ಮಲಪ್ರಭಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.ಮಾರ್ಕೆಂಡಯ ನದಿ ನೀರಿನಿಂದ 2475 ಅಡಿ ಸಾಮರ್ಥ್ಯದ ರಕಸಕೊಪ್ಪ ಜಲಾಶಯ ಭರ್ತಿ ಹಂತ ತಲುಪಿದ್ದು,ಬುಧವಾರ 2473 ಅಡಿ ನೀರು ಸಂಗ್ರಹವಾಗಿದ್ದು,ಹೆಚ್ಚಿನ ನೀರು ಹೊರ ಬಿಡಲಾಗುತ್ತಿದೆ. ಕೃಷ್ಣಾ …

Read More »

ರಾಧಾಕೃಷ್ಣ ಯೋಜನೆಗೆ ಹೆಚ್ಚಿದ ವಿರೋಧ

ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಹಿನ್ನೀರನ್ನು ಇಚಲಕರಂಜಿಗೆ ಸಾಗಿಸಲು ಮಹಾರಾಷ್ಟç ಸರ್ಕಾರ ಯೋಜನೆ ರೂಪಿಸಿದೆ. ಕಲ್ಲೋಳ ಬ್ಯಾರೇಜ್ ಹಿನ್ನೀರಿನ ಕರ್ನಾಟಕದ ಗಡಿ ಗ್ರಾಮಗಳಿಗೆ ಆಯ್ತು, ಮಹಾರಾಷ್ಟçದ ಕೊಲ್ಲಾಪುರ ಜಿ±್ಲೆ ಶಿರೋಳ ತಾಲೂಕಿನ ದಾನವಾಡ, ದತ್ತವಾಡ, ಸೈನಿಕ ಟಾಕಳಿ, ಟಾಕಳಿವಾಡಿ, ಅಕ್ಕಿವಾಟ, ಖಿದರಾಪುರ, ಘೋಸರವಾಡ, ರಾಜಾಪುರ, ಮಧುರೇವಾಡಿ, ಹೆರವಾಡ ​​ಮತ್ತು ತೆರವಾಡ ​​ಸೇರಿದಂತೆ ಹತ್ತಾರು ಗ್ರಾಮಗಳಿಗೆ ಜಲ ಮೂಲವಾಗಿದೆ. ಜಾರಿಯಾದರೆ ಈ ಎಲ್ಲ ಗ್ರಾಮಗಳಲ್ಲಿ ನೀರಿನ ಕೊರತೆಯಾಗಲಿದೆ ಎಂಬ ಆಕ್ರೋಶ ಗಡಿ …

Read More »