Breaking News

Daily Archives: ಆಗಷ್ಟ್ 14, 2026

ಮಲೆ ಮಹದೇಶ್ವರ ಬೆಟ್ಟದಲ್ಲಿ 108 ಕುಂಭಾಭಿಷೇಕ

ಚಾಮರಾಜನಗರ: ಶ್ರಾವಣ ಮಾಸದ ಅಮಾವಾಸ್ಯೆ ಅಂಗವಾಗಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ 108 ಕುಂಭಾಭಿಷೇಕ ಭಕ್ತಿಭಾವ ಮತ್ತು ವೈಭವದಿಂದ ನೆರವೇರಿತು. ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, …

Read More »

ದೇಶಾಭಿಮಾನದ ಪ್ರತೀಕ ತ್ರಿವರ್ಣ ಧ್ವಜ

ನಿಪ್ಪಾಣಿ: ದೇಶಕ್ಕೆ ಸ್ವಾತಂತ್ರ‍್ಯ ದೊರಕಿಸಿಕೊಡುವಲ್ಲಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನವನ್ನು ಯುವಪೀಳಿಗೆ ಅರಿತುಕೊಳ್ಳಬೇಕು ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ನಗರದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಂಗಳವಾರ ತಿರಂಗಾ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದ್ದು, ಜಾಗತಿಕ ಮಟ್ಟದಲ್ಲಿ ಭಾರತ ಬಲಿಷ್ಠವಾಗಿದೆ. ಎಲ್ಲರೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶಾಭಿಮಾನ ವ್ಯಕ್ತಪಡಿಸಬೇಕು ಎಂದರು. ರ‍್ಯಾಲಿಯಲ್ಲಿ ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು …

Read More »

ಗ್ಯಾರಂಟಿ ಯೋಜನೆ ನಡುವೆ ಉತ್ತರ ಕರ್ನಾಟಕ ನಿರ್ಲಕ್ಷೃ

ಬೆಳಗಾವಿ :ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಭರಾಟೆಯಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿದೆ. ಆರ್ಥಿಕ ಸಂಕಷ್ಟದಲ್ಲಿರುವ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ವಿಧಾನಪರಿಷತ್‌ನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಟೀಕಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆಯಾಗುತ್ತಿಲ್ಲ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ತಾರತಮ್ಯ ಮಾಡುವುದು ಸರಿಯಲ್ಲ. …

Read More »

ವಕೀಲರ ಸಂಘದ ಅಭಿವೃದ್ಧಿಗೆ ಶ್ರಮಿಸೋಣ

ಹುಕ್ಕೇರಿ: ವಕೀಲರ ನಡುವೆ ಸೌಹಾರ್ದ ಮತ್ತು ಸಹಕಾರ ಅತ್ಯಗತ್ಯ. ಆ ನಿಟ್ಟಿನಲ್ಲಿ ಹುಕ್ಕೇರಿ ಮತ್ತು ಸಂಕೇಶ್ವರ ನ್ಯಾಯಾಲಯಗಳ ವಕೀಲರು ಒಟ್ಟಾಗಿ ವಕೀಲರ ಸಂಘದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಹುಕ್ಕೇರಿ ವಕೀಲರ ಸಂಘದ ಅಧ್ಯಕ್ಷ ಡಿ.ಕೆ.ಅವರಗೋಳ ಹೇಳಿದರು. ಸಂಕೇಶ್ವರ ನ್ಯಾಯಾಲಯದ ವಕೀಲರ ಸಂಘದ ಚುನಾವಣೆಯಲ್ಲಿ ಈಚೆಗೆ ಆಯ್ಕೆಯಾದ ನೂತನ ಪದಾಧಿಕಾರಿಗಳನ್ನು ವಕೀಲರ ಸಂಘದ ಸಭಾಭವನದಲ್ಲಿ ಮಂಗಳವಾರ ಸನ್ಮಾನಿಸಿ ಮಾತನಾಡಿದರು. ವಕೀಲರ ಹಕ್ಕುಗಳ ರಕ್ಷಣೆ ಜತೆಗೆ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಗ್ರಾಮೀಣ …

Read More »

ಅವಳಿಂದ ನನಗೆ… ಡೆತ್​ನೋಟ್​ನಲ್ಲಿ ಪಿಎಚ್​ಡಿ ಮಾಡಿರುವ ಮಹಿಳೆ ಹೆಸರು ಬರೆದಿಟ್ಟು ವೈದ್ಯ ಸಾವಿಗೆ ಶರಣು

1.4 ಕೋಟಿ ರೂ. ವಂಚನೆ ಮಾಡಿದ್ದಾಳೆ ಎಂದು ಮಹಿಳೆ ವಿರುದ್ಧ ಗಂಭೀರ ಆರೋಪ ಹೊರಿಸಿದ್ದ ವೈದ್ಯನೊಬ್ಬ, ಪೊಲೀಸರಿಗೆ ದೂರು ಕೊಟ್ಟ ಬಳಿಕವೂ ಕಟ್ಟಡದಿಂದ ಜಿಗಿದು ದುರಂತ ಅಂತ್ಯ ಕಂಡ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ವರದಿಯಾಗಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪಶುವೈದ್ಯ ಡಾ. ಪರಮಾತ್ಮ ಸಿಂಗ್ (52) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಪರಮಾತ್ಮ ಸಾವಿಗೆ ಶರಣಾಗುವ ಮೊದಲು ಒಂದು ಡೆತ್​ನೋಟ್​ ಅನ್ನು ಬರೆದಿಟ್ಟು, ಬೆಳಗ್ಗೆ ತಿಂಡಿ ಮಾಡಿದ …

Read More »

ರಾಜ್ಯದಲ್ಲಿ ವರದಕ್ಷಿಣೆ ಕಿರುಕುಳಕ್ಕೆ 617 ಮಹಿಳೆಯರು ಬಲಿ! ನಾಲ್ಕುವರೆ ವರ್ಷದಲ್ಲಿ 27,828 ಲೈಂಗಿಕ ದೌರ್ಜನ್ಯ

ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 617 ಮಹಿಳೆಯರು ವರದಕ್ಷಿಣೆ ಕಿರುಕುಳದಿಂದ ಮೃತಪಟ್ಟಿದ್ದಾರೆ. ರಾಜ್ಯ ಮಹಿಳಾ ಆಯೋಗ 2022ರಿಂದ 2026ರ ಜೂನ್​ವರೆಗೆ ರಾಜ್ಯದಲ್ಲಿ ದಾಖಲಾಗಿರುವ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ಅಂಕಿ-ಅಂಶ ಬಿಡುಗಡೆ ಮಾಡಿದ್ದು, ಅದರಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ವರದಕ್ಷಿಣೆ ಕಿರುಕುಳದಿಂದ ಮಹಿಳೆಯರ ಸಾವು, ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಪತಿಯ ಕ್ರೌರ್ಯದ ಪ್ರಕರಣಗಳನ್ನು ಆಯೋಗ ವರದಿಯಲ್ಲಿ ದಾಖಲಿಸಿದೆ. 617 ವರದಕ್ಷಿಣೆ ಸಾವಿನ ಪ್ರಕರಣಗಳ ಪೈಕಿ 32 …

Read More »

ದೇಶಕ್ಕೇ ಮಾದರಿಯಾಗುವಂತೆ ಗಣೇಶ ಉತ್ಸವ ಆಚರಿಸೋಣ : ಡಿಸಿ ಮೊಹಮ್ಮದ್ ರೋಷನ್

ಬೆಳಗಾವಿ: ಬಹಳಷ್ಟು ವಿಶಿಷ್ಟವಾಗಿರುವ ಬೆಳಗಾವಿಯ ಗಣೇಶೋತ್ಸವವನ್ನು ಎಲ್ಲರ ಸಹಕಾರದಿಂದ ವ್ಯವಸ್ಥಿತವಾಗಿ  ಸೌಹಾರ್ಧತೆಯಿಂದ ದೇಶಕ್ಕೇ ಮಾದರಿಯಾಗುವಂತೆ ಆಚರಿಸೋಣವೆಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಗುರುವಾರ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯಿಂದ ಆಯೋಜಿಸಲಾಗಿದ್ದ ಗಣೇಶ ಉತ್ಸವ ಆಚರಣೆ, ಶಾಂತಿ ಸುವ್ಯವಸ್ಥೆ ಕಾಪಾಡುವ ಕುರಿತು  ಗಣೇಶ ಉತ್ಸವ ಮಂಡಳಿಗಳ ಪದಾಧಿಕಾರಿಗಳು ಹಾಗೂ ಗಣೇಶ ಮೂರ್ತಿಕಾರರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಣೇಶೋತ್ಸವದ ಯಶಸ್ವಿಗಾಗಿ ಈಗಾಗಲೇ ಜಿಲ್ಲಾಡಳಿತದೊಂದಿಗೆ ಎಲ್ಲ …

Read More »

ಬಡ್ಡಿ ದಂಧೆಕೋರ ಅಪ್ಪಾ ಮಗನ ಮೇಲೆ ಪ್ರಕರಣ ದಾಖಲು

ಬೆಳಗಾವಿ: ಅನಧಿಕೃತವಾಗಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದ ಅಪ್ಪ ಮಗನ  ಮೇಲೆ ಗೋಕಾಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಲ್ಲಪ್ಪ ಬಿರಾಜಗೋಳ, ಹಾಗೂ ವಿಠ್ಠಲ್ ಯಲ್ಲಪ್ಪ ಬಿರಾಜಗೋಳ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ. ಕೆ ಎಸ್ ಪಿ ಆಪ್ ಮೂಲಕ ದಾಖಲಾಗಿದ್ದ ಅರ್ಜಿಯನ್ನು ಗಂಭಿರವಾಗಿ ಪರಿಗಣಿಸಿದ ಬೆಳಗಾವಿ ಪೊಲೀಸರು ಅರ್ಜಿ ಆದರಿಸಿ ಸರ್ಚ್ ವಾರಂಟ್ ಪಡೆದು ಮನೆಗೆ ತೆರಳಿದ್ದರು. ಈ ವೇಳೆ ಅಕ್ರಮ ಬಡ್ಡಿ ದಂಧೆಯ ಹಲವು ದಾಖಲೆ ಪತ್ತೆಯಾಗಿದೆ. ದಾಖಲೆ …

Read More »