Breaking News

Daily Archives: ಆಗಷ್ಟ್ 15, 2026

ವಿಕಸಿತ ಭಾರತಕ್ಕಾಗಿ ಶ್ರಮಿಸೋಣ: ಮೂಗನೂರಮಠ

ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಸ್ವತಂತ್ರ ದಿನಾಚರಣೆ ಬಾಗಲಕೋಟೆ: ಸರ್ವೋತ್ತಮ ಆಡಳಿತ, ಸುಭದ್ರ ರಾಜ್ಯ ನಿರ್ಮಾಣಕ್ಕಾಗಿ ಜ್ಞಾನ, ಕೌಶಲ್ಯ ಮತ್ತು ಸದ್ಗುಣಗಳಿಂದ ಹೋರಾಡುವುದರ ಮೂಲಕ ಸ್ವತಂತ್ರ ಭಾರತವನ್ನು ವಿಕಸಿತ ಭಾರತವನ್ನಾಗಿ ಮಾಡುವ ಹೊಣೆಗಾರಿಕೆ ಪ್ರತಿಯೊಬ್ಬ ಪ್ರಜೆಯ ಮೇಲಿದೆ ಎಂದು ಪ್ರಾಚಾರ್ಯರಾದ ಎಸ್. ಆರ್ ಮೂಗನೂರಮಠ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಕಲಾಹಾವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡಿದರು. ಹೋರಾಟಗಾರರ ಪ್ರಾಣ ಬಲಿದಾನದಿಂದ ಬಂದ ಸ್ವಾತಂತ್ರ್ಯ ಭಾರತವನ್ನು ವಿಕಸಿತ …

Read More »

ನೈಜಿರಿಯಾದ ಕತ್ತಲಲ್ಲಿ ಕಾರಿನ ಬಾಗಿಲು ಬಡಿದ ಮಕ್ಕಳು ಇಂದು ವೈದ್ಯರು: ಸದ್ಗುರು ಶ್ರೀ ಮಧುಸೂದನ ಸಾಯಿ

ಬೆಂಗಳೂರು: ನೈಜಿರಿಯಾದಲ್ಲಿ ನನ್ನ ಕಾರು ಹೋಗುತ್ತಿದ್ದಾಗ ಕತ್ತಲಿನಲ್ಲಿ ಇಬ್ಬರು ಮಕ್ಕಳು ನನ್ನ ಕಾರಿನ ಬಾಗಿಲು ತಟ್ಟಿದ್ದರು. ಅದು ಅಪಾಯಕಾರಿ ಸನ್ನಿವೇಶವಾಗಿದ್ದರೂ ನಾನು ಗಾಜು ಇಳಿಸಿ ಮಕ್ಕಳನ್ನು ನೋಡಿದೆ. ಅವರು ವೈದ್ಯರಾಗಬೇಕು (Doctor) ಎಂದು ಕೋರಿದರು. ಆ ಬಾಲಕ, ಬಾಲಕಿಯರು ಇಂದು ಮುದ್ದೇನಹಳ್ಳಿಯಲ್ಲಿ  ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ ಎಂದು “ಒನ್ ವಲ್ಡ್ ಒನ್ ಫ್ಯಾಮಿಲಿ ಮಿಷನ್” ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ವಿವರಿಸಿದರು. ನಗರದ  ಅರಮನೆ ಮೈದಾನದಲ್ಲಿ ಶುಕ್ರವಾರ (ಆ …

Read More »

ಅಂಡಮಾನ್‌ ಸಮುದ್ರದಲ್ಲಿ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ – ಆರ್‌.ಅಶೋಕ್‌ ಪುತ್ರ ಶರತ್‌ಗೆ ಸನ್ಮಾನ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸ್ವರಾಜ್‌ ದ್ವೀಪ್‌ನಲ್ಲಿ ಸಮುದ್ರದ ನೀರಿನಲ್ಲಿ ಅತಿ ದೊಡ್ಡ ರಾಷ್ಟ್ರಧ್ವಜ  ಹಾರಿಸುವ ಮೂಲಕ ಐತಿಹಾಸಿಕ ಸಾಧನೆಯಲ್ಲಿ ಭಾಗಿಯಾದ ಬೆಂಗಳೂರಿನ ಶರತ್ ಅಶೋಕ್  ಅವರನ್ನು ಅಂಡಮಾನ್‌ ನಿಕೋಬಾರ್‌ನ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ.ಜೋಶಿ ಸನ್ಮಾನಿಸಿದರು. ಲೋಕ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿನ್ನೆಸ್ ವಿಶ್ವ ದಾಖಲೆಯ ಪ್ರಮಾಣ ಪತ್ರವನ್ನು ಲೆಪ್ಟಿನೆಂಟ್‌ ಗರ್ವನರ್‌ ಅಡ್ಮಿರಲ್ ಡಿ.ಕೆ.ಜೋಶಿ, ಶರತ್‌ ಅಶೋಕ್‌ ಅವರಿಗೆ ನೀಡಿ ಸನ್ಮಾನಿಸಿದರು. 2026 ರ ಮೇ 2 …

Read More »

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

ಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಯಾತ್ರೆಯಲ್ಲಿ ಈಸೂರು ದಂಗೆಯ ಸ್ತಬ್ಧಚಿತ್ರಗಳು ಜನರ ಗಮನ ಸೆಳೆಯಿತು. ತಿರಂಗ ಯಾತ್ರೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಭಾಗಿಯಾಗಿ, ದೇಶದ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ದೇಶಕ್ಕಾಗಿ ಏನಾದ್ರೂ ಕೊಡುಗೆ ನೀಡುವ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು. ‘ಏಕ್ ಭಾರತ್ ಶ್ರೇಷ್ಠ ಭಾರತ್’ ತಿರಂಗಾ ಯಾತ್ರೆ ಮೂಲಕ ದೇಶದ ಜನರನ್ನು …

Read More »

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

ಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್‌ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ನೆರವೇರಿಸಿದ ಧ್ವಜಾರೋಹಣ ಇದಾಗಿದೆ. ಸಿಎಂ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ವಂದೇ ಮಾತರಂ ಗೀತೆ ಹಾಗೂ ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಪ್ರಸ್ತುತಿ ಪಡಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸಿದ …

Read More »

ಬೆಂಗಳೂರಲ್ಲಿ ಶಂಕಿತ ಉಗ್ರನ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ಶಂಕಿತ ಉಗ್ರನ ಬಂಧನವಾಗಿದೆ. ಪಶ್ಚಿಮ ಬಂಗಾಳ ಮೂಲದ ಅಸಾಫುಲ್‌ ಮಲ್ಲಿಕ್‌ ಎಂಬಾತನನ್ನು ಸೆರೆ ಹಿಡಿಯಲಾಗಿದೆ. ಪಾಕಿಸ್ತಾನ ಸೇನೆಯಿಂದ ನಡೆಯುವ ದೌರ್ಜನ್ಯ, ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ವಿವಾದ‌, ಇಸ್ರೇಲ್ ದೇಶಕ್ಕೆ ಪಾಕಿಸ್ತಾನ ಸೇನೆ ಸಹಾಯ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದ. ಅಲ್ಲದೇ, ಮುಸ್ಲಿಮರಿಗೆ ಭಾರತದಲ್ಲಿ ತೊಂದರೆ ಆದರೆ ಇಲ್ಲಿಯೂ ಪ್ರತೀಕಾರಕ್ಕೆ ಮಲ್ಲಿಕ್ ತೀರ್ಮಾನಿಸಿದ್ದ. ​ಪಾಕಿಸ್ತಾನ ಸೇನೆ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಟಿಟಿಪಿ ಎಂಬ ಉಗ್ರ ಸಂಘಟನೆ ಸಂಪರ್ಕ …

Read More »

80ನೇ ಸ್ವಾತಂತ್ರ್ಯೋತ್ಸವದ ಮುನ್ನಾದಿನ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮಾಡಿದ ಭಾಷಣದ ಪೂರ್ಣ ಪಾಠ..

ನವದೆಹಲಿ: 80ನೇ ಸ್ವಾತಂತ್ರ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದ ಪೂರ್ಣ ಪಾಠ ಇಲ್ಲಿದೆ. ನನ್ನ ಪ್ರೀತಿಯ ದೇಶವಾಸಿಗಳೇ ನಮಸ್ಕಾರ! ನಮ್ಮ ಸ್ವಾತಂತ್ರ್ಯೋತ್ಸವದ ಮುನ್ನಾದಿನದಂದು, ಈ ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇನ್ನು ಕೆಲವೇ ಗಂಟೆಗಳಲ್ಲಿ ನಮ್ಮ ದೇಶ ಸ್ವಾತಂತ್ರ್ಯ ಪಡೆದ 80ನೇ ವರ್ಷದ ಶುಭಾರಂಭಕ್ಕೆ ಸಾಕ್ಷಿಯಾಗಲಿದೆ. ದೇಶದಲ್ಲಿರುವ ಹಾಗೂ ವಿದೇಶಗಳಲ್ಲಿ ನೆಲೆಸಿರುವ ಎಲ್ಲ ಭಾರತೀಯರೂ ಈ ರಾಷ್ಟ್ರೀಯ ಹಬ್ಬವನ್ನು ಅತ್ಯಂತ …

Read More »

ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿಗೆ ಗೌರವ ವಂದನೆ – ರಾಷ್ಟ್ರಗೀತೆಗೂ ಮುನ್ನ ಮೊಳಗಿದ ವಂದೇ ಮಾತರಂ ಗೀತೆ

ನವದೆಹಲಿ: ದೇಶಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಸ್ವಾತಂತ್ರ್ಯೋತ್ಸವದ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದಾರೆ. ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸ್ಮಾರಕಕ್ಕೆ ಗೌರವ ಪುಷ್ಪನಮನ ಸಲ್ಲಿಸಿದ ಬಳಿಕ ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಹಾಗೂ ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಸ್ವಾಗತ ಕೋರಿ ಬರಮಾಡಿಕೊಂಡರು. …

Read More »

ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಹರಿದ ಕಾವೇರಿ ನೀರು

ಮಂಡ್ಯ: ತಮಿಳುನಾಡಿಗೆ  ಕಾವೇರಿ ನದಿ ನೀರು ಬಿಡುಗಡೆ ಪ್ರಕ್ರಿಯೆ ಮುಂದುವರಿದಿದ್ದು, ಇದೀಗ ಕೆಆರ್‌ಎಸ್ ಡ್ಯಾಂನಿಂದ ನೀರನ್ನು ನದಿಗೆ ಹರಿಸಲಾಗಿದೆ. ಇಷ್ಟು ದಿನ ಕೇವಲ ಕಬಿನಿ ಜಲಾಶಯದಿಂದ ಮಾತ್ರ ತಮಿಳುನಾಡಿಗೆ ನೀರು ಹರಿಸಲಾಗುತ್ತಿತ್ತು. ಆದರೆ ಇತ್ತೀಚಿಗೆ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ತಗ್ಗಿದ ಹಿನ್ನೆಲೆ ನೀರಿನ ಪ್ರಮಾಣ ಸರಿದೂಗಿಸಲು ಕೆಆರ್‌ಎಸ್ ಡ್ಯಾಂನಿಂದ ನೀರು ಬಿಡಲು ನಿರ್ಧರಿಸಲಾಗಿದೆ. ಸರ್ಕಾರದ ಆದೇಶ ಹಾಗೂ ಸೂಚನೆಯ ಮೇರೆಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಕಳೆದ ರಾತ್ರಿಯಿಂದಲೇ …

Read More »

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಈ ನಿಟ್ಟಿನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಡಿಕೆ ಶಿವಕುಮಾರ್‌  ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿ, ಬಳಿಕ ರಾಷ್ಟ್ರಗೀತೆ, ವಂದೇ ಮಾತರಂ ಗೀತೆಗೆ ಗೌರವ ಸಲ್ಲಿಸಿದರು. ಇದೇ ವೇಳೆ ನಾಡಿನ ಜನತೆಗೆ ಶುಭಾಶಯ ಕೋರಿದರು. ನಾಡಿನ ಜನತೆಗೆ ಮತ್ತು ಭಾರತದ ನಾಗರಿಕರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರುತ್ತೇನೆ. ದೇಶದ ಶಾಂತಿಗೊಸ್ಕರ ದುಡಿದ ಎಲ್ಲರಿಗೂ …

Read More »