ಹಾಸನ: ಪ್ರೀತಿಸಿ ಮದುವೆಯಾಗಿದ್ದಕ್ಕೆ ಪತಿಯ ಕುಟುಂಬಸ್ಥರು ಮನೆಯಿಂದ ಹೊರಹಾಕಿ, ನಿರಂತರ ಕಿರುಕುಳ ನೀಡಿದ್ದಕ್ಕೆ ಬೇಸತ್ತು ಮಹಿಳೆಯೊಬ್ಬಳು ಮಗುವನ್ನು ಕೊಂದು ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಆಲೂರಿನ ಹೌಸಿಂಗ್ ಬೋರ್ಡ್‌ನಲ್ಲಿ ನಡೆದಿದೆ. ಮೃತ ಮಗಳು ಹಾಗೂ ಆಕೆಯ ಮಗುವಿನ ಕಣ್ಗಳನ್ನು ಕುಟುಂಬಸ್ಥರು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಅನುಪಮಾ (27) ಹಾಗೂ ಆರ್ಯನ್ (2) ದುರಂತ ಅಂತ್ಯ ಕಂಡವರು. ಮಹಿಳೆಯ ಪತಿ ಶ್ರೀನಿವಾಸ್ ತಾಯಿ ಜಯಮ್ಮ ಹಾಗೂ ಆಕೆಯ ಪುತ್ರಿ …
Read More »Daily Archives: ಆಗಷ್ಟ್ 21, 2026
ಕೇಂದ್ರದ ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು: ಪಶ್ಚಿಮ ಘಟ್ಟಗಳ ರಕ್ಷಣೆಗೆ ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸಭೆಯಲ್ಲಿ ಇಂದು ಕೇಂದ್ರದ ಏಳನೇ ಕರಡು ಅಧಿಸೂಚನೆ ವಿರೋಧಿಸಿ ನಡೆದ ಚರ್ಚೆಗೆ ಉತ್ತರ ಕೊಡುವಾಗ ಅರಣ್ಯ ಸಚಿವ ರಾಮಲಿಂಗಾರೆಡ್ಡಿ , ಕೇಂದ್ರದ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ಇದೆ. ರಾಜ್ಯ ಸರ್ಕಾರ ತನ್ನ ಆಕ್ಷೇಪಣೆಗಳನ್ನು ಸಲ್ಲಿಸುವ ಮೂಲಕ ಕೇಂದ್ರದ ಅಧಿಸೂಚನೆಯನ್ನು ತಿರಸ್ಕರಿಸಲಾಗುತ್ತದೆ ಅಂದ್ರು. ಕೇಂದ್ರ …
Read More »ಬೀದರ್‌ನಲ್ಲಿ ಕೃಷ್ಣಮೃಗ ಬೇಟೆಯಾಡಿದ 6 ಬೇಟೆಗಾರರು ಅಂದರ್
ಬೀದರ್: ಜಿಲ್ಲೆಯಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಒಟ್ಟು ಆರು ಜನರ ಪೈಕಿ ಪರಾರಿಯಾಗಿದ್ದ ಮೂವರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸೋಹೆಬ್ ಮಲ್ಲಿಕ್, ಹೈದ್ರಾಬಾದ್ ಮೂಲದ ಅಬ್ದುಲ್ ಸಾಹಿದ್ & ಹಮೀದ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಹೈದ್ರಾಬಾದ್ ಮೂಲದ ನಾಸೀರ್, ಆರೀಫ್ ಖಾನ್ ಮತ್ತು ಮಹ್ಮದ್ ಹಜ್ಜಿ ಮೂವರನ್ನು ಬಂಧಿಸಿದ್ದು, ಒಟ್ಟು ಆರು ಜನರನ್ನು ಬಂಧಿಸದಂತಾಗಿದೆ. ಬೀದರ್ ತಾಲೂಕಿನ ಚೊಂಡಿ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೇಟೆಯಾಡುತ್ತಿದ್ದ ಬೇಟೆಗಾರರನ್ನು …
Read More »ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ; ಸ್ವಪಕ್ಷ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ರವಿಕುಮಾರ್ ಗಣಿಗ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಇದೀಗ ಸ್ವಪಕ್ಷದ ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ. ಮಂಡ್ಯದ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಸರ್ಕಾರದ ನಡೆ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ರವಿಕುಮಾರ್ ಗಣಿಗ, ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ನಮ್ಮ ರಾಜ್ಯದ ರೈತರಿಗೆ ಬೆಳೆಗಳಿಗೆ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾದರೆ ಸಮಸ್ಯೆ ಮತ್ತಷ್ಟು …
Read More »ಬೆಂಗಳೂರಿನಲ್ಲಿ 911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ – ಗೃಹ ಇಲಾಖೆ ಅಂಕಿಅಂಶ ಬಿಡುಗಡೆ
ಬೆಂಗಳೂರು: ನಗರದಲ್ಲಿ ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು ಸರ್ಕಾರ ಒಪ್ಪಿಕೊಂಡಿದೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಗೋಪಿನಾಥ್ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಇಲಾಖೆ ಸಚಿವರು ಉತ್ತರ ನೀಡಿದ್ದಾರೆ. ಅಕ್ರಮ ವಲಸಿಗ ನುಸುಳುಕೋರರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರೋ ಸ್ಪೋಟಕ ಮಾಹಿತಿಯನ್ನು ನೀಡಿದೆ. ಬೆಂಗಳೂರಿನಲ್ಲಿ ವೀಸಾ, ಪಾಸ್‌ಪೋರ್ಟ್ ಅವಧಿ ಇರುವ ವಿದೇಶಿಗರು 5304 ಜನ ಇದ್ದಾರೆ. ವೀಸಾ, ಪಾಸ್‌ಪೋರ್ಟ್ ಅವಧಿ ಮೀರಿದ್ದರೂ ಅಕ್ರಮವಾಗಿ 446 ವಿದೇಶಿಗರು ಇದ್ದಾರೆ. …
Read More »ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್ ಕೊಂಡೊಯ್ದು ಹುಚ್ಚಾಟ – ವಾಹನ ಸೀಜ್
ಚಿಕ್ಕಮಗಳೂರು: ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್ ಕೊಂಡೋಯ್ದು ಪ್ರವಾಸಿಗರು ಹುಚ್ಚಾಟ ಮೆರೆದ ಘಟನೆ ಮೂಡಿಗೆರೆ ತಾಲೂಕಿನ ರಾಣಿಝರಿಯಲ್ಲಿ ನಡೆದಿದೆ. ಅಪಾಯಕಾರಿ ಸ್ಥಳಕ್ಕೆ ಕೊಂಡೊಯ್ದ ಥಾರ್ ವಾಹನವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬೆಂಗಳೂರು ಮೂಲದ ಪ್ರವಾಸಿಗರು ಥಾರ್ ಜೀಪ್‌ನಲ್ಲಿ ರಾಣಿಝರಿಗೆ ಭೇಟಿ ನೀಡಿದ್ದರು. ಈ ವೇಳೆ ರೀಲ್ಸ್‌ಗಾಗಿ ಅಪಾಯಕಾರಿ ಬೆಟ್ಟದ ತುದಿಗೆ ಥಾರ್‌ನ್ನು ಕೊಂಡೊಯ್ದಿದ್ದರು. ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಅಧಿಕಾರಿಗಳು ಥಾರ್‌ನ್ನು …
Read More »ತೆರೆದ ಚರಂಡಿಗೆ ಬಿದ್ದ 8 ವರ್ಷದ ಬಾಲಕ; ಮಗನ ಸಾವಿನ ಸುದ್ದಿ ಕೇಳಿ ತಾಯಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ
ಲಕ್ನೋ: ಉತ್ತರ ಪ್ರದೇಶದ ರಾಮ್‌ಪುರದಲ್ಲಿ ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ತೆರೆದ ಚರಂಡಿಗೆ ಬಿದ್ದು 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮಗನ ಸಾವಿನ ಸುದ್ದಿ ತಿಳಿದು ತಾಯಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ಘಟನೆ ನಡೆದಿದೆ. ರಾಮ್‌ಪುರದ ಕೊತ್ವಾಲಿ ಸಿವಿಲ್ ಲೈನ್ಸ್ ವ್ಯಾಪ್ತಿಯ ಅಜಿತ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಜಮೀರ್ ಅಹ್ಮದ್ ಅವರ ಮಗ ಅಮನ್ ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ. ಶಾಲೆ ಮುಗಿಸಿ ತನ್ನ ಅಣ್ಣನೊಂದಿಗೆ ಮನೆಗೆ …
Read More »ಷೇರು ಮಾರುಕಟ್ಟೆಯಲ್ಲಿ ಲಾಸ್; ಮಕ್ಕಳಿಬ್ಬರ ಸಹಿತ ದಂಪತಿ ಮಿಸ್ಸಿಂಗ್
ದಾವಣಗೆರೆ: ಬೆಂಗಳೂರಿಗೆ ಹೋಗಿ ಬರುತ್ತೇವೆ ಎಂದು ಪೋಷಕರಿಗೆ ಹೇಳಿ ಮನೆಯಿಂದ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕುಟುಂಬದ ನಾಲ್ವರು ಸದಸ್ಯರ ಮೊಬೈಲ್‌ಗಳು ಸ್ವಿಚ್‌ಆಫ್ ಆಗಿರುವುದು ಆತಂಕ ಮತ್ತಷ್ಟು ಹೆಚ್ಚಿಸಿದೆ. ದಾವಣಗೆರೆ ನಗರದ ಬನಶಂಕರಿ ಬಡಾವಣೆಯಲ್ಲಿ ವಾಸವಾಗಿದ್ದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣ (3) ನಾಪತ್ತೆಯಾದವರು. ಮೂಲತಃ ದಾವಣಗೆರೆ ತಾಲೂಕಿನ …
Read More »SBI ಗ್ರಾಹಕರಿಗೆ ಶಾಕ್ – ಅ.1 ರಿಂದ 4ಕ್ಕಿಂತ ಹೆಚ್ಚು ಬಾರಿ ಕ್ಯಾಶ್ ವಿತ್‌ಡ್ರಾ ಮಾಡಿದ್ರೆ 15 ರೂ. ಶುಲ್ಕ
ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ (SBI) ತನ್ನ ಮೂಲ ಉಳಿತಾಯ ಬ್ಯಾಂಕ್ ಠೇವಣಿ ಖಾತೆಗಳಿಗೆ ಅನ್ವಯವಾಗುವ ನಗದು ಹಿಂಪಡೆಯುವ (ಕ್ಯಾಶ್ ವಿತ್‌ಡ್ರಾ) ಶುಲ್ಕದಲ್ಲಿ ಪರಿಷ್ಕರಣೆ ಮಾಡಿದೆ. ಈ ಪರಿಷ್ಕೃತ ಶುಲ್ಕವು ಅಕ್ಟೋಬರ್ 1 ರಿಂದಲೇ ಜಾರಿಗೆ ಬರಲಿದೆ. ಈ ಬಗ್ಗೆ ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ATM ಗಳಲ್ಲಿ ತಿಂಗಳಿಗೆ 4 ಬಾರಿ ಮಾತ್ರ ನಗದು ಹಿಂಪಡೆಯುವ ವ್ಯವಹಾರಗಳು ಉಚಿತವಾಗಿರಲಿವೆ. 4ಕ್ಕಿಂತ ಹೆಚ್ಚು …
Read More »ಕೂಲಿಕಾರರಿಗೆ ವಿಬಿ-ಜಿ ರಾಮ್‌ಜಿ ಕೆಲಸ ಖಾತ್ರಿ
ಬೆಳಗಾವಿ :ಉದ್ಯೋಗದ ಬೇಡಿಕೆ ಸಲ್ಲಿಸುವ ಕೂಲಿಕಾರರಿಗೆ ವಿಳಂಬ ಮಾಡದೆ ಕೆಲಸ ಕಲ್ಪಿಸಬೇಕು. ಯೋಜನೆಯ ಅನುಷ್ಠಾನದಲ್ಲಿ ಯಾವುದೇ ನಿರ್ಲಕ್ಷೃ ಆಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಸುಚಿಸಿದರು. ಬೆಳಗಾವಿ ತಾಲೂಕಿನ ನೀಲಜಿ, ಹೊನಗಾ ಗ್ರಾಪಂ ವ್ಯಾಪ್ತಿಯಲ್ಲಿ ವಿಕ್ಷಿತ್ ಭಾರತ್ ಗ್ಯಾರಂಟಿಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್ ( ವಿಬಿ-ಜಿ ರಾಮ್‌ಜಿ) ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ,ಕೂಲಿಕಾರರ ಹಾಜರಾತಿ, ಕಾಯಕ ಬಂಧುಗಳ ಮೊಬೈಲ್‌ನಲ್ಲಿ ಎನ್‌ಎಂಎಂಎಸ್ ಹಾಜರಾತಿ …
Read More »
Laxmi News 24×7