Breaking News

Daily Archives: ಆಗಷ್ಟ್ 22, 2026

ನಟ, ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ 3.85 ಕೋಟಿ ವಂಚನೆ ಆರೋಪ – ದೂರು ದಾಖಲು

ಬೆಂಗಳೂರು: ಖ್ಯಾತ ನಿರ್ದೇಶಕ ಹಾಗೂ ನಟ ಓಂಪ್ರಕಾಶ್ ರಾವ್ ವಿರುದ್ಧ ವಂಚನೆ, ಕಿರುಕುಳ ಹಾಗೂ ಬೆದರಿಕೆ ಆರೋಪದಡಿ ದೂರು ದಾಖಲಾಗಿದೆ. ʻಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಒಟ್ಟು 3 ಕೋಟಿ 85 ಲಕ್ಷ ಹಣ ಪಡೆದು, ಹಣ ವಾಪಸ್ ನೀಡದೇ ವಂಚಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ ಎಂಬುವರು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ, ʻಫೀನಿಕ್ಸ್’ ಸಿನಿಮಾ ನಿರ್ಮಾಣದ …

Read More »

500 ಕೆಪಿಎಸ್‌ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ನೆರವು – ಎಡಿಬಿ ಜೊತೆ ಒಪ್ಪಂದಕ್ಕೆ ಸಿಎಂ ಡಿಕೆಶಿ ಸಹಿ

ಬೆಂಗಳೂರು: ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ ಸಹಯೋಗದೊಂದಿಗೆ 1,750 ಕೋಟಿ ರೂ. ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಅವರು ವಿಧಾನಸೌಧದಲ್ಲಿ ಶುಕ್ರವಾರ ಸಹಿ ಹಾಕಿದರು. ಈ ವೇಳೆ ಡಿಸಿಎಂ ಡಾ. ಜಿ. ಪರಮೇಶ್ವರ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ …

Read More »

ನಾಗೇಂದ್ರ ರಾಜೀನಾಮೆ ಬಗ್ಗೆ ನೋಟಿಸ್‌ ‌ಕೊಟ್ಟು ವಿಪಕ್ಷ ಚರ್ಚೆ ಮಾಡಲಿ: ಡಿಕೆಶಿ

ಬೆಂಗಳೂರು: ವಿಧಾನ ಪರಿಷತ್ ಕಲಾಪ 5ನೇ ದಿನವೂ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕಲಾಪ ಬಲಿಯಾಯ್ತು. ವಿಪಕ್ಷಗಳು ಹೋರಾಟ ಮುಂದುವರೆಸಿದ್ರು. ಈ ವೇಳೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಅವರು ನಾಗೇಂದ್ರ ರಾಜೀನಾಮೆ ಬಗ್ಗೆ ನೋಟಿಸ್‌ ‌ಕೊಟ್ಟು ವಿಪಕ್ಷ ಚರ್ಚೆ ಮಾಡಲಿ ಎಂದಿದ್ದಾರೆ. ಕಲಾಪ ಪ್ರಾರಂಭ ಆದ ಕೂಡಲೇ ಸಭಾಪತಿಗಳು ಪ್ರಶ್ನೋತ್ತರ ಕಲಾಪ, ಬರ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ಆಗಬೇಕು ಅವಕಾಶ ಕೊಡಿ ಅಂತ ಮನವಿ ಮಾಡಿದ್ರು‌‌. ಇದಕ್ಕೂ …

Read More »

28 ಜೀವಾವಧಿ ಶಿಕ್ಷಾ ಬಂಧಿಗಳ ಅವಧಿ ಪೂರ್ವ ಬಿಡುಗಡೆಗೆ ಸಂಪುಟ ಅಸ್ತು

ಬೆಂಗಳೂರು: ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ  ಅನುಭವಿಸುತ್ತಿರುವ ಸನ್ನಡತೆ ಹೊಂದಿರುವ ಅರ್ಹ ಬಂಧಿಗಳ ಪೈಕಿ 28 ಮಂದಿಯನ್ನ ಅವಧಿಪೂರ್ವ ಬಿಡುಗಡೆ ಮಾಡಲು ಇಂದು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಒಟ್ಟು 45 ಪ್ರಕರಣಗಳ ಪೈಕಿ 28 ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇನ್ನೊಂದು ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯದ ಸಹಮತಿ ಪಡೆದು …

Read More »

ಸೆ.6ಕ್ಕೆ ಕಿಚ್ಚನ ಸಾರಥ್ಯದಲ್ಲಿ ಬಿಗ್‌ಬಾಸ್‌13ರ ʻGrand Take Offʼ

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ʻಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ  ಎಂಟ್ರಿ ಕೊಡಲು ಸ್ಪರ್ಧಿಗಳು ಸಿದ್ಧರಾಗಿದ್ದಾರೆ. ಇದೀಗ ಮನೆಗೆ ಎಂಟ್ರಿ ಕೊಡಲು ಗ್ಯಾಂಡ್‌ ಓಪನಿಂಗ್‌ಗೆ ಮುಹೂರ್ತ ಫಿಕ್ಸ್‌ ಆಗಿದೆ. ಈ ಬಾರಿ ವಿಭಿನ್ನ ರೀತಿಯಲ್ಲಿ ವಾಹಿನಿ ಬಿಗ್‌ ಬಾಸ್‌ ಸೀಸನ್‌ 13ರ ಗ್ರ್ಯಾಂಡ್‌ ಓಪನಿಂಗ್‌ ಪ್ರೋಮೋವನ್ನು ಹಂಚಿಕೊಂಡಿದೆ. ಆ.16ರಿಂದ ಬಿಗ್‌ ಮನೆಗೆ ಎಂಟ್ರಿ ಕೊಡಲು ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಗಾಗಿ ಅಗ್ನಿಪರೀಕ್ಷೆ ನಡೆಯುತ್ತಿದೆ. ಇದೀಗ ಆಯ್ಕೆಯಾದ ಸ್ಪರ್ಧಿಗಳನ್ನು ದೊಡ್ಮನೆಗೆ ಕಳುಹಿಸಲು …

Read More »

ಸಹಕಾರಿ ಸೊಸೈಟಿ ಅವ್ಯವಹಾರ ಕೇಸ್ – ಇಡಿ ಅಧಿಕಾರಿಗಳಿಂದ ಮತ್ತೆ 18.32 ಕೋಟಿ ಆಸ್ತಿ ತಾತ್ಕಾಲಿಕ ಮುಟ್ಟುಗೋಲು

ಬೆಂಗಳೂರು: ಸಿರಿ ವೈಭವ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ  ಸೊಸೈಟಿ ಅವ್ಯವಹಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಮುಂದುವರಿದಿದ್ದು, ಇದೀಗ ಮತ್ತೆ 18.32 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಸೊಸೈಟಿಯ ಅಧ್ಯಕ್ಷೆ ಬಿ.ಎಸ್ ನಾಗವಲ್ಲಿ, ಸಿಇಒ ರಾಜೇಶ್ ಸೇರಿದಂತೆ ಇತರರಿಗೆ ಸೇರಿದ ಜಮೀನು, ನಿವೇಶನ ಹಾಗೂ ಕಟ್ಟಡಗಳನ್ನ ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಸೊಸೈಟಿ ಹಣವನ್ನ ದುರುಪಯೋಗಪಡಿಸಿಕೊಂಡು ರಾಮನಗರ, ಮೈಸೂರು ಹಾಗೂ ಬೆಂಗಳೂರಿನಲ್ಲಿ ಆಸ್ತಿ ಖರೀದಿಸಿದ್ದ …

Read More »

ಕಾರಾಗೃಹ ಇಲಾಖೆಯ ಆಧುನೀಕರಣಕ್ಕೆ ಮತ್ತಷ್ಟು ವೇಗ

ಬೆಂಗಳೂರು: ರಾಜ್ಯದ ಕಾರಾಗೃಹ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಅತ್ಯಾಧುನಿಕ ಉಪಕರಣಗಳ ಖರೀದಿ ಮತ್ತು ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು (ಆ.21) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ದೊರೆತಿದ್ದು, ಕಾರಾಗೃಹಗಳ ಭದ್ರತೆ, ಮೇಲ್ವಿಚಾರಣೆ ಹಾಗೂ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ. ಕಾರಾಗೃಹಗಳಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾಗಳು, ಪೋರ್ಟಬಲ್‌ ಸಿಗ್ನಲ್‌ ಜಾಮರ್‌ಗಳು ಹಾಗೂ ಕೈದಿಗಳ ದೂರವಾಣಿ …

Read More »

ಹಣ ವರ್ಗಾವಣೆ, ಆತ್ಮಹತ್ಯೆ ಪತ್ರ ಸೇರಿ ಎಲ್ಲ ದಾಖಲೆಗಳಿದ್ರೂ ನಾಗೇಂದ್ರ ರಾಜೀನಾಮೆ ನೀಡುತ್ತಿಲ್ಲ – ಆರ್.ಅಶೋಕ್

ಬೆಂಗಳೂರು: ಸಚಿವ ಚ187 ಕೋಟಿ ರೂ. ಹಗರಣ ನಡೆಸಿರುವುದಕ್ಕೆ ಹಣ ವರ್ಗಾವಣೆ, ಆತ್ಮಹತ್ಯೆ ಪತ್ರ ಸೇರಿ ಸೂಕ್ತ ದಾಖಲೆಗಳಿದ್ದರೂ ಅವರನ್ನು ವಜಾ ಮಾಡುತ್ತಿಲ್ಲ. ಅಂದರೆ ಈ ಹಗರಣದಲ್ಲಿ ಕೋಟ್ಯಂತರ ರೂಪಾಯಿ ಕಾಂಗ್ರೆಸ್ ಹೈಕಮಾಂಡ್‌ಗೆ ಸಂದಾಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಶಾಸಕರ ಭವನದ ಆವರಣದ ಶ್ರೀ ವಾಲ್ಮೀಕಿ ಮಹರ್ಷಿ ಪ್ರತಿಮೆ ಬಳಿ ಪ್ರತಿಭಟನೆ ವೇಳೆ ಮಾತನಾಡಿದ ಅವರು, ನಾವು ಮುಟ್ಟಿಸಿರುವ ಬಿಸಿಯನ್ನು ತಡೆದುಕೊಳ್ಳಲಾಗದೇ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ (Congress) …

Read More »

KKRTC ಬಸ್‌ನಲ್ಲಿ ವಿದ್ಯಾರ್ಥಿಯಿಂದ ಟಿಕೆಟ್ ವಿತರಣೆ – ಚಾಲಕ-ಕಂ-ಕಂಡಕ್ಟರ್‌ ಅಮಾನತು

ಕಲಬುರಗಿ: ಕೆಕೆಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರಿಗೆ ವಿದ್ಯಾರ್ಥಿ ಮೂಲಕ ಟಿಕೆಟ್ ವಿತರಿಸಿದ ಪ್ರಕರಣ ಸಂಬಂಧ, ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಕಂಡಕ್ಟರ್‌ನನ್ನ ಅಮಾನತುಗೊಳಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿ ವಿಭಾಗ-1ರ ವ್ಯಾಪ್ತಿಯ ಕಾಳಗಿ ಘಟಕದ ಚಾಲಕ-ಕಂ-ನಿರ್ವಾಹಕ ಸಿದ್ದಪ್ಪನನ್ನು ಅಮಾನತುಗೊಳಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಸಿದ ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಜಿ ಗಂಗಾಧರ, ಕಳೆದ ಆಗಸ್ಟ್ 18 ರಂದು ಕಾಳಗಿ-ಕಲಬುರಗಿ-ಮಂಗಲಗಿ ಮಾರ್ಗದ KA-32 …

Read More »

ಗ್ರಾಮದೊಳಗೆ ರಾಜಾರೋಷವಾಗಿ ಓಡಾಡಿದ ಚಿರತೆ

ಚಿಕ್ಕಮಗಳೂರು: ಕಡೂರು  ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಚಿರತೆಯೊಂದು ರಾಜಾರೋಷವಾಗಿ ಓಡಾಡಿದೆ. ಚಿರತೆ ಓಡಾಡಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಫೋಟೋ ಒಂದರಲ್ಲಿ ವೃದ್ಧೆಯೊಬ್ಬಳು ಮನೆಯಂಗಳದಲ್ಲಿ ನಿಂತಿದ್ದಾಗ, ಬಹಳ ಸಮೀಪದಲ್ಲೇ ಚಿರತೆ ಹೋಗಿರುವುದು ಸೆರೆಯಾಗಿದೆ. ಚಿರತೆ ಮನೆಯೊಂದರ ಕಾಂಪೌಂಡ್ ಮೇಲೆ ಮಲಗಿ ವಿಶ್ರಾಂತಿ ಪಡೆಯುತ್ತಿರುವ ದೃಶ್ಯ ಸಹ ಮೊಬೈಲ್‌ನಲ್ಲಿ ಗ್ರಾಮಸ್ಥರು ಸೆರೆಹಿಡಿದಿದ್ದಾರೆ. ಚಿರತೆಯ ಓಡಾಟದಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಚಿರತೆ ಓಡಾಟದಿಂದ ಕೂಲಿ ಕಾರ್ಮಿಕರು, ಬೈಕ್‌ ಸವಾರರು, ಶಾಲಾ ಮಕ್ಕಳ ಓಡಾಟಕ್ಕೆ …

Read More »