ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ ಇಲ್ಲಿದೆ. ಖಾಲಿ ಇರುವ 20 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ನ್ಯಾಯಾಂಗ ಕ್ಷೇತ್ರದಲ್ಲಿ ಸರ್ಕಾರಿ ನೌಕರಿ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹುದ್ದೆಯ ವಿವರಗಳು ಮತ್ತು ಶೈಕ್ಷಣಿಕ ಅರ್ಹತೆ: ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 20 ದ್ವಿತೀಯ ದರ್ಜೆ …
Read More »Daily Archives: ಆಗಷ್ಟ್ 24, 2026
ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ
ಬಾಗಲಕೋಟೆ: ಸಕ್ಕರೆ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು. ಸಕ್ಕರೆ ದಾಸ್ತಾನು ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ. ಸಕ್ಕರೆ ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ಇನ್ನೂ ಹೆಚ್ಚಾಗಿ ಪ್ರಾರಂಭಿಸಬೇಕು. ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ. ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ. 100 …
Read More »ಈರುಳ್ಳಿ ಬೆಲೆ ದಿಢೀರ್ ಏರಿಕೆ
ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳ ಸಂಭ್ರಮದಲ್ಲಿದ್ದ ಜನಸಾಮಾನ್ಯರಿಗೆ ಈರುಳ್ಳಿ ಬೆಲೆ ಏರಿಕೆ ಶಾಕ್ ನೀಡಿದೆ. ನಿತ್ಯದ ಅಡುಗೆಯ ಅವಿಭಾಜ್ಯ ಅಂಗವಾಗಿರುವ ಈರುಳ್ಳಿಯನ್ನು ಕತ್ತರಿಸುವ ಮೊದಲೇ ಅದರ ದುಬಾರಿ ದರ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದು, ಕೆಲವೇ ದಿನಗಳಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜಿಗೆ ಶತಕ ಬಾರಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಬೆಲೆ ಏರಿಕೆಗೆ ಕಾರಣವೇನು? ರಾಜ್ಯದಲ್ಲಿ ಒಂದೆಡೆ ಮುಂಗಾರು ಮಳೆ ಕೊರತೆಯಿಂದ ಬರಗಾಲ ತಾಂಡವವಾಡುತ್ತಿದೆ. ಮಳೆ, ಬೆಳೆ ಇಲ್ಲದೇ …
Read More »ಟಿಬಿ ಮುಕ್ತ ಭಾರತ ಅಭಿಯಾನ ಅತ್ಯಂತ ಶ್ಲಾಘನೀಯ
ಬೆಳಗಾವಿ : ಭಾರತವನ್ನು ಕ್ಷಯರೋಗ (ಟಿಬಿ) ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿಯಾನ ಅತ್ಯಂತ ಶ್ಲಾಘನೀಯವಾಗಿದೆ. ಇದಕ್ಕೆ ಪ್ರತಿಯೊಬ್ಬರು ಕೈ ಜೋಡಿಸುವ ಮೂಲಕ ಅಭಿಯಾನ ಯಶಸ್ವಿಗೊಳಿಸಬೇಕು ಎಂದು 26 ಕರ್ನಾಟಕ ಎನ್‌ಸಿಸಿ ಬಟಾಲಿಯನ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ಸುನೀಲ್ ದಾಗರ್ ಹೇಳಿದರು. ಜಾಧವ ನಗರದಲ್ಲಿನ 26 ಕರ್ನಾಟಕ ಎನ್‌ಸಿಸಿ ಬಟಾಲಿಯನ್‌ನಲ್ಲಿ ನಡೆಯುತ್ತಿರುವ ವಾರ್ಷಿಕ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿರುವ ಎನ್‌ಸಿಸಿ ಕೆಡೆಟ್‌ಗಳಿಗೆ ಭಾನುವಾರ ಟಿಬಿ ಮುಕ್ತ ಭಾರತ ಪ್ರತಿಜ್ಞಾವಿಧಿ …
Read More »ಬೆಂಗ್ಳೂರಲ್ಲಿ ಭಾರತದ ಮೊದಲ ಬೀದಿನಾಯಿ ಶೆಲ್ಟರ್ ನಿರ್ಮಾಣ
ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದ ಬಳಿಕ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಡಾಗ್ ಶೆಲ್ಟರ್ ನಿರ್ಮಾಣ ಆಗಿದೆ. ಉತ್ತರ ನಗರ ಪಾಲಿಕೆಯ ಮೇಡಿ ಅಗ್ರಹಾರದಲ್ಲಿ ಡಾಗ್ ಶೆಲ್ಟರ್ ನಿರ್ಮಾಣ ಆಗಿದ್ದು, 500 ನಾಯಿಗಳಿಗೆ ಆಶ್ರಯ ನೀಡುವ ಸಾಮರ್ಥ್ಯ ಹೊಂದಿದೆ. ಬೀದಿನಾಯಿಗಳಿಗೆ ಶೆಲ್ಟರ್ ನಿರ್ಮಾಣ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ಮಾಡಿತ್ತು. ಕೋರ್ಟ್ ನಿರ್ದೇಶನದ ಬಳಿಕ ಇದೇ ಮೊದಲ ಬಾರಿಗೆ ಪ್ರಥಮ ಡಾಗ್ ಶೆಲ್ಟರ್ ಬೆಂಗಳೂರು ಉತ್ತರ ನಗರ ಪಾಲಿಕೆಯ ಮೇಡಿ …
Read More »389 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗೋಳಿಕಟ್ಟಾ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಒತ್ತುವರಿ ತೆರವಿಗೆ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅರಣ್ಯ ಇಲಾಖೆಗೆ ಸೇರಿದ 389.07 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದೆ. ಈ ಹಿಂದೆ ಗೋಳಿಕಟ್ಟಾದಲ್ಲಿ ಕಾಮಧೇನು ಹಾಲು ಹಾಗೂ ಹಣ್ಣು ಸಂಸ್ಕರಣಾ ಸಹಕಾರಿ ಸಂಘಕ್ಕೆ ಅರಣ್ಯ ಇಲಾಖೆ ತನ್ನ ಜಾಗವನ್ನು ಲೀಸ್ ನೀಡಿತ್ತು. ಲೀಸ್ ಮುಕ್ತಾಯವಾದರೂ ಜಾಗವನ್ನು ಬಿಟ್ಟುಕೊಟ್ಟಿರಲಿಲ್ಲ. ಈ ಸಂಬಂಧ ಧಾರವಾಡದ ಹೈಕೋರ್ಟ್ ಪೀಠದಲ್ಲಿ ದಾವೆ …
Read More »ವಿದ್ಯುತ್ ಕಂಬಕ್ಕೆ ಪಿಕಪ್ ಡಿಕ್ಕಿ – ಮೂವರು ಕಾರ್ಮಿಕರ ದುರ್ಮರಣ, 15 ಮಂದಿಗೆ ಗಾಯ
ಯಾದಗಿರಿ: ವಿದ್ಯುತ್ ಕಂಬಕ್ಕೆ ಬುಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ನಡೆದಿದೆ. ಭಾಗ್ಯಶ್ರೀ (35), ಸತ್ಯಮ್ಮ (30), ಹೊನ್ನಿಂಗಮ್ಮ (18) ಮೃತ ಕಾರ್ಮಿಕರು. ಚಾಲಕನ ನಿಯಂತ್ರಣ ತಪ್ಪಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಶಹಾಪುರ …
Read More »ಹುಲಿ ಹೆಜ್ಜೆ ಪತ್ತೆ..! ಗಂಗಾವತಿಯಲ್ಲಿ ಟೈಗರ್ ಟೆನ್ಷನ್ – 20ಕ್ಕೂ ಹೆಚ್ಚು ಕ್ಯಾಮೆರಾ ಕಣ್ಗಾವಲು
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಭಾಗದ ಬೆಟ್ಟದ ಸಾಲುಗಳಲ್ಲಿ ಹುಲಿ ಕಾಣಿಸಿಕೊಂಡಿದೆ ಎಂಬ ಆತಂಕದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇದೀಗ ಎಚ್ಚೆತ್ತುಕೊಂಡಿದ್ದಾರೆ. ಗ್ರಾಮಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಎಚ್ಚರಿಕೆ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ. ಭಾನುವಾರ ಸಂಜೆಯಿಂದ ಆನೆಗೊಂದಿ ಸುತ್ತಮುತ್ತಲಿನ ಹಾಗೂ ಬೆಟ್ಟದ ಸಮೀಪದಲ್ಲಿರುವ ಜನವಸತಿ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಾಹನಗಳ ಮೂಲಕ ಸಂಚರಿಸಿ ಧ್ವನಿವರ್ಧಕದ ಮೂಲಕ ಜಾಗೃತಿ ಸಂದೇಶ ನೀಡುತ್ತಿದ್ದಾರೆ. ಒಂಟಿಯಾಗಿ ಸಂಚರಿಸದಂತೆ ಹಾಗೂ ಜಾನುವಾರುಗಳನ್ನ ಮೇಯಿಸಲು ಬೆಟ್ಟದ …
Read More »ದೆಹಲಿಯಲ್ಲಿ ರಸ್ತೆ ಅಪಘಾತ – ಬೆಳಗಾವಿ ಶಾಸಕ ಅಭಯ್ ಪಾಟೀಲ್ ಪ್ರಾಣಾಪಾಯದಿಂದ ಪಾರು
ನವದೆಹಲಿ: ಭಾನುವಾರ ರಾತ್ರಿ ದೆಹಲಿಯ ಐಟಿಒ ಜಂಕ್ಷನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಹಾಗೂ ದೆಹಲಿಯ ಕಿರಾರಿ ಕ್ಷೇತ್ರದ ಶಾಸಕ ಅನಿಲ್ ಝಾ ಸೇರಿ ಒಟ್ಟು 6 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಸುಮಾರು 9:30 ರ ಸುಮಾರಿಗೆ ಲಕ್ಷ್ಮೀ ನಗರದಿಂದ ಐಟಿಒ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರಿನ ಸಿಲಿಂಡರ್ ಪಿಡಬ್ಲ್ಯೂಡಿ ಕಚೇರಿ ಬಳಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇದರ ಪರಿಣಾಮವಾಗಿ …
Read More »ಅಕ್ರಮ ಹಣದ ವ್ಯವಹಾರಲ್ಲೂ ಭಾಗಿಯಾಗಿದ್ದಾರಾ ಗ್ಯಾನೇಂದ್ರ? ಸತತ 5 ಗಂಟೆಗಳಿಂದ ಇಡಿ ಶೋಧ
ಬೆಂಗಳೂರು: ನಾಪತ್ತೆಯಾಗಿರುವ ಐಎಎಸ್ ಗ್ಯಾನೇಂದ್ರ ಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ 5 ಗಂಟೆಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಜಯಮಹಲ್ ಎಕ್ಸ್‌ಟೆನ್ಞನ್ ರಸ್ತೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಇದರ ಮಧ್ಯೆಯೇ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಅಕ್ರಮ ಹಣದ ವ್ಯವಹಾರದಲ್ಲೂ ಗ್ಯಾನೇಂದ್ರ ಭಾಗಿಯಾಗಿದ್ದಾರೆ ಅನ್ನೋ ಮಾಹಿತಿ ಇಡಿ ಮೂಲಗಳಿಂದ ತಿಳಿದುಬಂದಿದೆ. ಇದಕ್ಕೂ ಮುನ್ನ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಶಾಂತ ಹೊಸಮನಿ, ಕೆಪಿಎಸ್ಸಿ …
Read More »
Laxmi News 24×7