Breaking News

Daily Archives: ಆಗಷ್ಟ್ 24, 2026

ಒಳ ಉಡುಪಿನಲ್ಲಿ ಸಿಮ್‌ ಮಾದರಿಯ ಬ್ಲೂಟೂತ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ – 10 ಲಕ್ಷ ಕೊಟ್ಟಿದ್ದ ಅಭ್ಯರ್ಥಿ ಲಾಕ್‌

ಲಕ್ನೋ: UPSSSC ಪದವಿ ಮಟ್ಟದ ಮುಖ್ಯ ಪರೀಕ್ಷೆಯಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯನ್ನ (UPSSSC Aspirant) ಉತ್ತರ ಪ್ರದೇಶ STF ಅಧಿಕಾರಿಗಳು ರೆಡ್‌ಹ್ಯಾಂಡಾಗಿ ಬಂಧಿಸಿದ್ದಾರೆ. ಪ್ರಯಾಗ್‌ರಾಜ್ ಮೂಲದ ಬ್ರಿಜೇಶ್ ಕುಮಾರ್ ಯಾದವ್ ಲಕ್ನೋನ ಸೆಕ್ಟರ್-ಸಿ, ಮಹಾನಗರದಲ್ಲಿರುವ ದಯಾನಂದ ಕನ್ಯಾ ಇಂಟರ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಕ್ಕಿಬಿದ್ದಿದ್ದಾನೆ. ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಾಗಿ ಹೇಳಿ ಆತ ಪರೀಕ್ಷಾ ದಂಧೆ ನಡೆಸುತ್ತಿದ್ದ ರಮೇಶ್ ಚಂದ್ರ ಪಟೇಲ್‌ಗೆ ಮುಂಗಡವಾಗಿ 10 ಲಕ್ಷ ರೂ. …

Read More »

ಐಫೋನ್ EMI ವಿಚಾರಕ್ಕೆ ಮೂವರ ದುರಂತ ಅಂತ್ಯ – 2025ರಲ್ಲಿ ಅದೇ ಜಾಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ

ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ  ಜಿಲ್ಲೆಯಲ್ಲಿ ಐಫೋನ್ ಇಎಂಐ  ವಿಚಾರವಾಗಿ ಜಗಳವಾಗಿ ಒಂದೇ ಕುಟುಂಬದ ಮೂವರು ದುರಂತ ಅಂತ್ಯ ಕಂಡಿದ್ದಾರೆ. ಈ ಪ್ರಕರಣ ಸಂಬಂಧ ಒಂದೊಂದೇ ವಿಷಯಗಳು ಹೊರಬರುತ್ತಿವೆ. ಇದೀಗ ಅದೇ ಜಾಗದಲ್ಲಿ 2025ರಲ್ಲೂ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಎಂಬ ವಿಚಾರ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕೊಹಡ್ಯಾ ಡೋಂಗರ್‌ನಲ್ಲಿ ನಡೆದ ಹೃದಯವಿದ್ರಾವಕ ಘಟನೆ ಇಡೀ ಪ್ರದೇಶವನ್ನೇ ಬೆಚ್ಚಿಬೀಳಿಸಿದೆ. ಐಫೋನ್ ಖರೀದಿಯ ಇಎಂಐ ಪಾವತಿ ವಿಚಾರವಾಗಿ ಮನೆಯಲ್ಲಿ ಉಂಟಾದ …

Read More »

15 ವರ್ಷಗಳ ಬಳಿಕ ಮಾರಿಹಾಳದಲ್ಲಿ ಮಹಾಲಕ್ಷ್ಮಿ ಜಾತ್ರೆ: ಜಾತ್ರೆಯ ಸಿದ್ಧತೆ, ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಸುಮಾರು 15 ವರ್ಷಗಳ ಬಳಿಕ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರೆಯನ್ನು ಯಶಸ್ವಿಯಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಜಾತ್ರಾ ಕಮೀಟಿಯ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಪ್ರಮುಖ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಮಾರಿಹಾಳ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆಯು ಹಲವು ವರ್ಷಗಳ …

Read More »

ಮೃತ ವ್ಯಕ್ತಿಯ ನಕಲಿ ಸಹಿ ಬಳಸಿ ಆಸ್ತಿ ಮಾರಾಟ: 67 ವರ್ಷದ ಆರೋಪಿ ಬಂಧನ

 ಬೆಳಗಾವಿ: ಮಾಲೀಕರ ಮರಣದ ನಂತರವೂ ಅವರೇ ಮಾಲೀಕರಾಗಿದ್ದಾರೆಂದು ಬಿಂಬಿಸಿ, ಮೃತ ವ್ಯಕ್ತಿಯ ನಕಲಿ ಸಹಿ ಬಳಸಿ ಆಸ್ತಿಯನ್ನು ಮಾರಾಟ ಮಾಡಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣೆ ಪೊಲೀಸರು 67 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ.ಕುರುಬರ ಗಲ್ಲಿ, ಹೊನ್ನಿಹಾಳ ನಿವಾಸಿ ಬಸಯ್ಯಾ ಬಾಳಯ್ಯ ಪೂಜೇರಿ ಅವರು 25 ಆಗಸ್ಟ್ 2025ರಂದು ಮಾರ್ಕೆಟ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಖ್ಯೆ …

Read More »

CEIR ಪೋರ್ಟಲ್ ಬಳಸಿ 123 ಕಳುವಾದ ಮೊಬೈಲ್ ಪತ್ತೆ

ಬೆಳಗಾವಿ ನಗರ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಸಾರ್ವಜನಿಕರು ತಮ್ಮ ಮೊಬೈಲ್ ಫೋನ್‌ಗಳನ್ನು ಕಳೆದುಕೊಂಡಿರುವ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಹಲವು ದೂರುಗಳನ್ನು ದಾಖಲಿಸಿದ್ದರು. ಈ ದೂರುಗಳ ಆಧಾರದ ಮೇಲೆ ಪೊಲೀಸರು ಸೆಂಟ್ರಲ್ ಎಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್  ಪೋರ್ಟಲ್ ಬಳಸಿ ಕಾರ್ಯಾಚರಣೆ ನಡೆಸಿದರು.2026ರ ಜನವರಿ 1ರಿಂದ ಆಗಸ್ಟ್ 22ರವರೆಗೆ CEIR ಪೋರ್ಟಲ್ ಮೂಲಕ ವಿವಿಧ ಕಂಪನಿಗಳ ಒಟ್ಟು 123 ಮೊಬೈಲ್ ಫೋನ್‌ಗಳನ್ನು …

Read More »

ಡಿ.ವೈ. ಪಾಟೀಲ ಮನೆಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

ಕೊಲ್ಹಾಪುರ: ಮಹಾರಾಷ್ಟ್ರದ ಹಿರಿಯ ನಾಯಕರು, ಮಾಜಿ ರಾಜ್ಯಪಾಲರು ಹಾಗೂ ಪದ್ಮಶ್ರೀ ಪುರಸ್ಕೃತರಾದ ಡಾ. ಡಿ.ವೈ. ಪಾಟೀಲ ಅವರ ನಿಧನದ ಹಿನ್ನೆಲೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಕೊಲ್ಹಾಪುರದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ, ಮೃತರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದರು. ನಂತರ ಡಾ. ಡಿ.ವೈ. ಪಾಟೀಲ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸತೇಜ್ (ಬಂಟಿ) ಪಾಟೀಲ ಮತ್ತು ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. …

Read More »

ಅಪಘಾತದಲ್ಲಿ ಗಾಯಗೊಂಡ ಯುವಕನ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳಕರ್ ನೆರವು

ಬೆಳಗಾವಿ: ಕಂಗ್ರಾಳಿ ಕೆ.ಎಚ್. ಗ್ರಾಮದ ಯುವಕ ಬಸವಂತ ಅಶೋಕ ಚೌಗುಲೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು, ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತುರ್ತು ಆರ್ಥಿಕ ನೆರವು ನೀಡಿದರು. ಬಸವಂತ ಅವರ ತಾಯಿ ಕಮಲ್ ಅಶೋಕ್ ಚೌಗುಲೆ ಅವರು ಇಂದು ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾಗಿ, ತಮ್ಮ ಕುಟುಂಬದ ದುಸ್ಥಿತಿ ಹಾಗೂ ಮಗನ ಚಿಕಿತ್ಸೆಗೆ ಎದುರಾಗಿರುವ ಆರ್ಥಿಕ ಸಮಸ್ಯೆಗಳನ್ನು ವಿವರಿಸಿದರು. ಬಡ ಕುಟುಂಬಕ್ಕೆ …

Read More »