Breaking News

Daily Archives: ಆಗಷ್ಟ್ 25, 2026

ಮಗನಿಂದಲೇ ತಂದೆ – ತಾಯಿಯ ಬರ್ಬರ ಹತ್ಯೆ

ಉಡುಪಿ: ಮಗನೇ ತಂದೆ – ತಾಯಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ನಡೆದಿದೆ. ಗಾಂಧಿನಗರ ನಿವಾಸಿ ಮೆಹಬೂಬ್, ಸಂಶದ್ ಬೇಗಂ ಕೊಲೆಯಾದ ದುರ್ದೈವಿಗಳು. ಶಾಹಿದ್ ಅಲಿ (31) ಕೊಲೆಗೈದ ಆರೋಪಿಯಾಗಿದ್ದಾನೆ. ಸುತ್ತಿಗೆಯಿಂದ ಹೊಡೆದು ಕೊಲೆಗೈದಿರುವ ಶಂಕೆ ವ್ಯಕ್ಯವಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ

Read More »

ಜೇಬಿನಲ್ಲಿದ್ದ ಪವರ್ ಬ್ಯಾಂಕ್ ಬ್ಲಾಸ್ಟ್: ಯುವಕನಿಗೆ ಗಾಯ, ಆಸ್ಪತ್ರೆಗೆ ದಾಖಲು

ಬಾಗಲಕೋಟೆ: ಜೇಬಿನಲ್ಲಿಟ್ಟುಕೊಂಡಿದ್ದ ಪವರ್ ಬ್ಯಾಂಕ್  ಏಕಾಏಕಿ ಸ್ಫೋಟಗೊಂಡ ಪರಿಣಾಮ ಯುವಕನೊಬ್ಬ ಗಾಯಗೊಂಡಿರುವ ಘಟನೆ ಜಮಖಂಡಿಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸಿದ್ದು ಸಾಳೊಂಕಿ (21) ಗಾಯಗೊಂಡ ಯುವಕ. ಜಮಖಂಡಿ ನಗರದ ಬಸ್ ನಿಲ್ದಾಣದ ಬಳಿಯ ಎಟಿಎಂ ಹತ್ತಿರ ಈ ಘಟನೆ ಸಂಭವಿಸಿದೆ. ತನ್ನ ಜೇಬಿನಲ್ಲಿ ಪವರ್ ಬ್ಯಾಂಕ್ ಇಟ್ಟುಕೊಂಡು ನಡೆದುಕೊಂಡು ಹೋಗುತ್ತಿದ್ದಾಗ, ಅದು ಇದ್ದಕ್ಕಿದ್ದಂತೆ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ತೀವ್ರತೆಗೆ ಪವರ್ ಬ್ಯಾಂಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಯುವಕ ಧರಿಸಿದ್ದ …

Read More »

IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಯಾವಾಗ ಬರ್ತಾರೆ ಗೊತ್ತಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್  ನಾಳೆ ಬರ್ತಾರಾ? ನಾಡಿದ್ದು ಬರ್ತಾರಾ ಅಂತ ಗೊತ್ತಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ  ಮಾತಾಡಿದ ಅವರು, ಗ್ಯಾನೇಂದ್ರ ಕುಮಾರ್ ಮಿಸ್ಸಿಂಗ್ ಇದ್ದಾರೆ ಎಂದು ಮಾಧ್ಯಮಗಳಲ್ಲಿ ಬಂದಿತ್ತು. ಹೀಗಾಗಿ ಪರಿಶೀಲನೆ ಮಾಡಿದಾಗ ಲಿಖಿತ ಮೂಲಕ ಅರ್ಜಿ ಬರೆದುಕೊಟ್ಟಿರೋದು ಗೊತ್ತಾಗಿದೆ. ಅರ್ಜಿಯಲ್ಲಿ ನಾನು ತುರ್ತಾಗಿ ಮನೆಗೆ ಹೋಗಬೇಕು‌. ತಂದೆಗೆ ಹುಷಾರಿಲ್ಲ ಅಂತ ಬರೆದಿದ್ದಾರೆ. ಅದನ್ನ ನಾನು ಹೇಳಿದ್ದೆ.ಅವರ ಅಧಿಕೃತ ನಂಬರ್ ಆಫ್ …

Read More »

ಮಾಜಿ ಶಾಸಕ ಪ್ರೀತಂಗೌಡಗೆ ಬಿಗ್‌ ರಿಲೀಫ್‌; ಲೋಕಾಯುಕ್ತ ತನಿಖೆ ಆದೇಶಕ್ಕೆ ಹೈಕೋರ್ಟ್‌ ತಡೆ

ಹಾಸನ: ಮಾಜಿ ಶಾಸಕ ಪ್ರೀತಂಗೌಡಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಲೋಕಾಯುಕ್ತ ತನಿಖೆ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಲೋಕಾಯುಕ್ತ ಎಸ್ಪಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿತ್ತು. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ನಲ್ಲಿ ತಡೆ ನೀಡಿದೆ. ಎಲ್ಲಾ ಪ್ರಕ್ರಿಯೆಗಳಿಗೂ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಿಂದ ಆದೇಶ …

Read More »

ಹೊಲದಲ್ಲಿ ಗಾಂಜಾ ಬೆಳೆದ ವ್ಯಕ್ತಿಯನ್ನು ಬಂದಿಸಿದ ಗೋಕಾಕ ಪೋಲಿಸರು

ಗೋಕಾಕ ತಾಲೂಕಿನ ಸಮೀಪದ ಬೆನಚಿಮರಡಿ ಗ್ರಾಮದ ಹೊಲದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆನಚಿಮರಡಿ ಗ್ರಾಮದ ಅವಣ್ಣಾ ಸಿದ್ದಪ್ಪ ತಪಸಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 13 ಕೆಜಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊಲದಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳಗಾವಿ ಎಸ್ ಪಿ, ಕೆ.ರಾಮರಾಜನ್ ಇವರ ಆದೇಶದಂತೆ ಡಿಎಸಪಿ ರವಿ ನಾಯಕ ಇವರ ಮಾರ್ಗದರ್ಶನದಲ್ಲಿ ಸಿಪಿಆಯ್ ಶ್ರೀಶೈಲ ಬ್ಯಾಕೂಡ ಇವರು …

Read More »

ದಂಡು ಮಂಡಳಿ 756 ಎಕರೆ ಪಾಲಿಕೆಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ

ಬೆಳಗಾವಿ:ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ನಾಗರಿಕ ಪ್ರದೇಶಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ವಸತಿ ಪ್ರದೇಶ, ಮಾರುಕಟ್ಟೆ, ರಸ್ತೆಗಳು, ಬಂಗಲೆಗಳು ಸೇರಿದಂತೆ ಒಟ್ಟು 756 ಎಕರೆ ಪ್ರದೇಶವನ್ನು ಪಾಲಿಕೆಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಂಡು ಮಂಡಳಿ ವ್ಯಾಪ್ತಿಯ ನಾಗರಿಕ ಪ್ರದೇಶಗಳನ್ನು ಸ್ಥಳೀಯ ನಗರ ಸಂಸ್ಥೆಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆ ಹಲವು ವರ್ಷಗಳಿಂದ ನಡೆಯುತ್ತಿದೆ. …

Read More »

ರೈತರಿಗೆ ಮಧ್ಯಂತರ ಬೆಳೆ ಹಾನಿ ಪರಿಹಾರವಾಗಿ ₹11 ಕೋಟಿ ಬಿಡುಗಡೆ

ಬೆಳಗಾವಿ: ಮುಂಗಾರು ಅವಧಿಯಲ್ಲಿ ತೀವ್ರ ಮಳೆ ಕೊರತೆಯಿಂದ ಹೆಸರು, ಉದ್ದು, ಶೇಂಗಾ, ಸೂರ್ಯಕಾಂತಿ, ಹತ್ತಿ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿದ್ದು, ರೈತರಿಗೆ ಮಧ್ಯಂತರ ಬೆಳೆ ಹಾನಿ ಪರಿಹಾರವಾಗಿ ₹11 ಕೋಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ತಿಳಿಸಿದರು. ರಾಮದುರ್ಗ, ಸವದತ್ತಿ ಹಾಗೂ ಯರಗಟ್ಟಿ ತಾಲೂಕುಗಳಲ್ಲಿ ಸುಮಾರು 29 ಸಾವಿರ ಎಕರೆ ಪ್ರದೇಶದಲ್ಲಿ ಹೆಸರು ಮತ್ತು ಉದ್ದು ಬೆಳೆ ಹಾನಿಯಾಗಿದೆ. ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವಾಗುವ …

Read More »

ಬೆಳಗಾವಿಯಲ್ಲಿ 5.13 ಲಕ್ಷ ಮತದಾರರು ಹೊರಗುಳಿದಿದ್ದಾರೆ

ಬೆಳಗಾವಿ:ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ 5,13,439 ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆಗೂ ಮುನ್ನ ಜಿಲ್ಲೆಯಲ್ಲಿ ಸುಮಾರು 41 ಲಕ್ಷ ಮತದಾರರಿದ್ದು, ಇದೀಗ 35,93,561 ಮತದಾರರ ಹೆಸರು ಮಾತ್ರ ಕರಡು ಪಟ್ಟಿಯಲ್ಲಿ ಉಳಿದಿದೆ. ಜಿಲ್ಲೆಯ ಎಲ್ಲ ಮತದಾರರ ವಿವರ ಹಾಗೂ ಪೌರತ್ವವನ್ನು ಪರಿಶೀಲನೆಗೆ ಒಳಪಡಿಸಿ …

Read More »

ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲವೇ? ಹೆಸರು ಸೇರ್ಪಡೆಗೆ ಅವಕಾಶವಿದೆ

ಬೆಳಗಾವಿ: ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಮೊದಲ ಹಂತ ಮುಕ್ತಾಯಗೊಂಡು ಕರಡು ಮತದಾರರ ಪಟ್ಟಿ ಪ್ರಕಟಗೊಂಡಿದೆ. ಕರಡು ಪಟ್ಟಿಯಲ್ಲಿ ಹೆಸರು ಕಾಣಿಸದಿರುವ ಮತದಾರರು ಆತಂಕಪಡುವ ಅಗತ್ಯವಿಲ್ಲ. ಅರ್ಹ ಮತದಾರರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಹೆಸರು ಸೇರ್ಪಡೆಗೆ ಅವಕಾಶವಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಹಾಗೂ ಮತದಾರರ ಮುಖ್ಯ ನೋಂದಣಾಧಿಕಾರಿ ಕಾರ್ತಿಕ್‌ ಎಂ. ಸ್ಪಷ್ಟಪಡಿಸಿದ್ದಾರೆ. ಸೋಮವಾರ ಪಾಲಿಕೆ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ …

Read More »

ಮೂಲ ಮಾಲೀಕರಂತೆ ನಟಿಸಿ ಕೃಷಿ ಜಮೀನು ಮಾರಾಟ: ಆರೋಪಿತನ ಬಂಧನ

ಬೆಳಗಾವಿ: ಮೂಲ ಮಾಲೀಕರಂತೆ ನಟಿಸಿ ಮತ್ತೊಬ್ಬರ ಹೆಸರಿನಲ್ಲಿದ್ದ ಕೃಷಿ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿ ವಂಚನೆ ಮಾಡಿದ ಆರೋಪದ ಮೇಲೆ 64 ವರ್ಷದ ವ್ಯಕ್ತಿಯನ್ನು ಬೆಳಗಾವಿ ನಗರದ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆನಂದ ಮೋರೆ (64), ಕಲ್ಲೇಶ್ವರ ಗಲ್ಲಿ, ಸೋನಾರವಾಡಿ, ಖಾನಾಪುರ ತಾಲೂಕು, ಬೆಳಗಾವಿ ಜಿಲ್ಲೆ ಎಂದು ಗುರುತಿಸಲಾಗಿದೆ. ಈ ಕುರಿತು ಚಂದ್ರಕಾಂತ ರಾಮಚಂದ್ರ ಬಡಮಂಜಿ (64), ಉದ್ಯಮಬಾಗ, ಬೆಳಗಾವಿ ಅವರು ಮಾರ್ಕೆಟ್ ಪೊಲೀಸ್ ಠಾಣೆಗೆ ನೀಡಿದ …

Read More »