Breaking News

Daily Archives: ಆಗಷ್ಟ್ 26, 2026

ಕಾಂಗ್ರೆಸ್ ಮದ ಇಳಿಸುವ ಶಕ್ತಿ ಬಿಜೆಪಿಗಿದೆ – ಗುಡುಗಿದ ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ ಮಾಡಿದ ಹಗರಣದ ಆರೋಪಿ- ಸಚಿವ ನಾಗೇಂದ್ರ ಅವರು ತನಿಖೆಯ ಬಳಿಕ ನಿರಪರಾಧಿ ಎಂದು ಸಾಬೀತಾದರೆ ಅವರನ್ನ ಮುಖ್ಯಮಂತ್ರಿಯಾಗಿ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ಅವರು ಸವಾಲು ಹಾಕಿದ್ದಾರೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇ.ಡಿ. ಚಾರ್ಜ್‍ಶೀಟ್‌ನಲ್ಲೂ ನಾಗೇಂದ್ರ ಹೆಸರು ಉಲ್ಲೇಖವಾಗಿದೆ. ಶಿವಮೊಗ್ಗದಲ್ಲಿ ಪ್ರಾಮಾಣಿಕ ಅಧಿಕಾರಿ, ಬೋವಿ ಸಮಾಜದ ಚಂದ್ರಶೇಖರ್ ಅವರು …

Read More »

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ: ಖಾದರ್‌ ಸ್ಫೋಟಕ ಹೇಳಿಕೆ

ಬೆಂಗಳೂರು: ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳು ತಾಜಾ ಕಾಣಬೇಕು ಅಂತ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರುಗಳು ಕೇಳಿಬಂದಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ ಖಾದರ್‌  ಸ್ಫೋಟಕ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿಂದು  ಸುದ್ದಿಗೋಷ್ಠಿ ನಡೆಸಿದ ಅವರು, ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ವಿಚಾರದಲ್ಲಿ ದೂರು ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದರು. ದೊಡ್ಡ ದೊಡ್ಡ ಸೂಪರ್ ಮಾರ್ಕೆಟ್ ಮಾಲ್ ಕಂಪನಿಗಳಲ್ಲಿ ತರಕಾರಿ ಹಾಳಗಾದಂತೆ …

Read More »

ವಿಶ್ವವಿಖ್ಯಾತ ಮೈಸೂರು ದಸರಾ ಮೊದಲ ಹಂತದ ಗಜಪಯಣಕ್ಕೆ ಚಾಲನೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ  ಅವರು ದಸರಾ ಗಜಪಡೆಗೆ ಚಾಲನೆ ನೀಡಿದ್ದಾರೆ. ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಯಣದ ಕಾರ್ಯಕ್ರಮ ಜರುಗಿದ್ದು, ಬೆಳಗ್ಗೆ 10 ರಿಂದ 10:28ರ ಶುಭ ತುಲಾ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಕೆಯಾಗಿದೆ. ದಸರಾ ಗಜಪಡೆಗೆ ಪೂಜೆ ಸಲ್ಲಿಸಿದ ಬಳಿಕ, ಫಲತಾಂಬೂಲ ನೀಡುವ ಮೂಲಕ ಚಾಲನೆ ನೀಡಲಾಯಿತು. ಆನಂತರ ಗಜಪಡೆ …

Read More »

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

ವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಾಯಿ ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ (ಮೂಗ) (10), ವಿಕಾಸ (5) ಸಾನಿಕಾ (7) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಆ.23ರಂದು ಗಂಡ ಮಲಕಾರಿ ಜೊತೆ ಶೋಭಾ ಜಗಳವಾಗಿತ್ತು. ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಆನಂತರ ಆ.24ರಂದು …

Read More »

ಸಾಮಾಜಿಕ ಜಾಲತಾಣಗಳ ಮೇಲೆ ಖಾಕಿ ಕಣ್ಣು, ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ: ಚಾ.ನಗರ ಎಸ್‌ಪಿ ಎಚ್ಚರಿಕೆ

ಚಾಮರಾಜನಗರ: ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಚಾಮರಾಜನಗರ ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ನಿಲುವು ತಾಳಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಎಚ್ಚರಿಕೆ ನೀಡಿದ್ದಾರೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದ ಹೊಳೆಮುರಿದಟ್ಟಿ ಮತ್ತು ಕರಿಕಲ್ಲು ಗುಡ್ಡದಲ್ಲಿ ಆ.15ರಂದು ಶೂಟೌಟ್‌ ನಡೆದ ಬಗ್ಗೆ ಹನೂರಿನಲ್ಲಿ ಮಾತನಾಡಿದರು. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು, ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ನಾವು ನಿರಂತರವಾಗಿ ಸೋಶಿಯಲ್ ಮೀಡಿಯಾ …

Read More »

ಪತ್ನಿ ಫೋಟೋ ಸ್ಟೇಟಸ್‌ಗೆ, ಅನೈತಿಕ ಸಂಬಂಧ ಶಂಕೆ – ಕುಡುಗೋಲಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆಗೈದ ದಂಪತಿ

ಬೆಳಗಾವಿ: ಸ್ಟೇಟಸ್ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬನನ್ನು ದಂಪತಿ ಸೇರಿ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ  ತಾಲೂಕಿನ ಕಲ್ಲೋಳಿ  ಪಟ್ಟಣದಲ್ಲಿ ನಡೆದಿದೆ. ಕಲ್ಲೋಳಿ ಗ್ರಾಮದ ಬನಪ್ಪ ಒಡೆಯರ್ ಮತ್ತು ಲಕ್ಷ್ಮೀ ಒಡೆಯರ್ ಇಬ್ಬರು ಸೇರಿಕೊಂಡು ಗುಜನಟ್ಟಿ ಗ್ರಾಮದ ರಮೇಶ್ ಬಂಟ್ರೋಳಿ ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೊಲೆಯಾದ ರಮೇಶ್ ಆರೋಪಿ ಬನಪ್ಪನ ಪತ್ನಿ ಲಕ್ಷ್ಮೀ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂದು …

Read More »

ಕರ್ನಾಟಕ ಸಹಕಾರ ಮಹಾ ಮಂಡಲದ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಆಯ್ಕೆ

ಬೆಂಗಳೂರು: ಕರ್ನಾಟಕ ಸಹಕಾರ ಮಹಾ ಮಂಡಲ  ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ನೇತೃತ್ವದ ತಂಡ ಗೆಲುವು ಸಾಧಿಸಿದ್ದು, ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ  ಆಯ್ಕೆಯಾಗಿದ್ದಾರೆ. ಜಿ.ಟಿ. ದೇವೇಗೌಡ ಅವರಿಗೆ ಅಧ್ಯಕ್ಷ ಸ್ಥಾನ ನೀಡುವ ವಿಚಾರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಕೂಡ ಒಪ್ಪಿಗೆ ನೀಡಿದ್ದಾರೆ. ಚುನಾವಣೆಗೂ ಮುನ್ನ ಮುಖ್ಯಮಂತ್ರಿ ನಿವಾಸದಲ್ಲಿ ಈ ಸಂಬಂಧ ಮಹತ್ವದ ಸಭೆ ನಡೆದಿತ್ತು. ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಜಿ.ಟಿ. …

Read More »

SIR ಆಕ್ಷೇಪಣೆ ಅವಧಿ ವಿಸ್ತರಣೆಗೆ ಡಿಕೆ ಮನವಿ – ಕೇಂದ್ರ ಚುನಾವಣಾ ಆಯೋಗಕ್ಕೆ 2 ಪುಟಗಳ ಪತ್ರ

ಬೆಂಗಳೂರು: ರಾಜ್ಯದ ಎಸ್‌ಐಆರ್ ಕರಡು ಪಟ್ಟಿ ಪ್ರಕಟವಾಗಿದ್ದು, 1.7 ಕೋಟಿ ಮತದಾರರು ಎಎಸ್‌ಡಿಡಿಓ ವ್ಯಾಪ್ತಿಯಲ್ಲಿದ್ದಾರೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್‌ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಎರಡು ಪುಟಗಳ ಪತ್ರ ಬರೆದಿದ್ದಾರೆ. 1.07 ಕೋಟಿಗೂ ಹೆಚ್ಚು ಮತದಾರರನ್ನು ಎಎಸ್‌ಡಿಡಿಓ ಎಂದು ಗುರುತಿಸಲಾಗಿದೆ. ಸುಮಾರು 43 ಲಕ್ಷ ಮತದಾರರಿಗೆ ನೋಟಿಸ್‌ಗಳನ್ನ ನೀಡಲಾಗುತ್ತಿದೆ. ಈ ಕುರಿತು ಹಲವು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಡಿಕೆಶಿ ಮನವಿ ಮಾಡಿದ್ದಾರೆ. …

Read More »

ರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ: ಗೋವಿಂದ ಕಾರಜೋಳ

ಚಿತ್ರದುರ್ಗ: ವಿಶ್ವದ ರೇಷ್ಮೆ ಉತ್ಪಾದನೆಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ನಮ್ಮ ದೇಶದಲ್ಲಿ ಕರ್ನಾಟಕ ರೇಷ್ಮೆ ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಕಠಿಣ ಶ್ರಮ ಹಾಗೂ ತಾಂತ್ರಿಕ ಸಂಶೋಧನೆಗಳ ಮೂಲಕ ಭಾರತ  ರೇಷ್ಮೆ ಉತ್ಪಾದನೆಯಲ್ಲಿ ಪ್ರಥಮ ಸ್ಥಾನಕ್ಕೇರುವಂತೆ ರೈತರು ಹಾಗೂ ವಿಜ್ಞಾನಿಗಳು ಶ್ರಮಿಸಬೇಕು ಎಂದು ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು. ನಗರದ ರೇಷ್ಮೆ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಕೇಂದ್ರ ರೇಷ್ಮೆ ಮಂಡಳಿ ಹಾಗೂ ರೇಷ್ಮೆ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ …

Read More »

ಸಿಎಂ ಡಿಕೆಶಿ ನನ್ನನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಮಾಡುವ ನಂಬಿಕೆ ಇದೆ: ಕೆ.ವೈ.ನಂಜೇಗೌಡ

ಕೋಲಾರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೊಟ್ಟ ಮಾತಿನಂತೆ ನನಗೆ ಕೆಎಂಎಫ್  ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಮಾಡಿಕೊಡುತ್ತಾರೆ ಎಂಬ ನಂಬಿಕೆಯಿದೆ ಎಂದು ಮಾಲೂರು ಶಾಸಕ ಕೆ.ವೈ. ನಂಜೇಗೌಡ ಹೇಳಿದ್ದಾರೆ. ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಧಿವೇಶನ ಮುಗಿದ ಬಳಿಕ ಕೆಎಂಎಫ್ ಚುನಾವಣೆ ನಡೆಯಲಿದ್ದು, ಈ ಬಾರಿ ನನಗೆ ಅವಕಾಶ ಸಿಗುವ ನಿರೀಕ್ಷೆಯಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಭೀಮಾ ನಾಯಕ್ ಅವರನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. …

Read More »