Breaking News

Daily Archives: ಆಗಷ್ಟ್ 26, 2026

ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ವೃದ್ಧೆ ಪಾರು

ಬಾಗಲಕೋಟೆ: ಅಡುಗೆ ಅನಿಲ ಸೋರಿಕೆಯಿಂದ ಮನೆಯಲ್ಲಿ ಬೆಂಕಿ  ಹೊತ್ತಿಕೊಂಡು 67 ವರ್ಷದ ವೃದ್ಧೆಯೊಬ್ಬರು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ಜಮಖಂಡಿಯ ಚೌಡಯ್ಯನಗರದ ಮಾವಿನ ಮಸಾರಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಮನೆಯಲ್ಲಿದ್ದ ಲಕ್ಷ್ಮೀಬಾಯಿ ಪತ್ತಾರ (67) ಅವರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ …

Read More »

ನೇಪಾಳದಲ್ಲಿ ರಣಭೀಕರ ಪ್ರವಾಹಕ್ಕೆ 8 ಬಲಿ – 32 ಪೊಲೀಸರು ಸೇರಿ ನೂರಾರು ಜನ ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಉಂಟಾಗಿರುವ ರಣ ಭೀಕರ ಪ್ರವಾಹದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. 41 ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಭೋಟೆ ಕೋಶಿ ನದಿಯಲ್ಲಿ  ಉಂಟಾದ ಹಠಾತ್ ಪ್ರವಾಹದ ನಂತರ ನೂರಾರು ಜನ ಕಾಣೆಯಾಗಿದ್ದಾರೆ. ಇನ್ನೂ ಕಾಣೆಯಾಗಿರುವ 41 ಭದ್ರತಾ ಸಿಬ್ಬಂದಿ ಪೈಕಿ 32 ಮಂದಿ ನೇಪಾಳ ಪೊಲೀಸರೇ ಆಗಿದ್ದಾರೆ. 9 ಮಂದಿ ಸಶಸ್ತ್ರ ಪೊಲೀಸ್ ಪಡೆಗೆ ಸೇರಿದವರಾಗಿದ್ದಾರೆ. ಈವರೆಗೆ ಮೃತ 8 …

Read More »

KPSC ಕಚೇರಿ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೆ ಶಾಕ್ – OMR ಶೀಟ್ ಸ್ಕ್ಯಾನ್ ಮಾಡಿದ ಹಾರ್ಡ್ ಡಿಸ್ಕ್ ನಾಪತ್ತೆ

ಬೆಂಗಳೂರು: ನೇಮಕಾತಿಯಲ್ಲಿ ಹಗರಣ ಪ್ರಕರಣ ಸಂಬಂಧ ಕೆಪಿಎಸ್‌ಸಿ  ಮೇಲೆ ಅಧಿಕಾರಿಗಳು ದಾಳಿ ಮಾಡಿದ ವೇಳೆ ಶಾಕಿಂಗ್ ವಿಚಾರವೊಂದು ಬಯಲಾಗಿದೆ. ಕೆಪಿಎಸ್‌ಸಿ ಕೇಂದ್ರ ಕಚೇರಿಯಲ್ಲಿಯೇ ಅತಿ ದೊಡ್ಡ ಅಕ್ರಮ ನಡೆದಿದ್ದು, ಒಎಂಆರ್ ಶೀಟ್‌ಗಳನ್ನು  ಸ್ಕ್ಯಾನ್ ಮಾಡಿರುವ ಹಾರ್ಡ್ ಡಿಸ್ಕ್  ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಪರೀಕ್ಷೆ ಪ್ರಾರಂಭ ಆಗುವಾಗ ಸ್ಟ್ರಾಂಗ್ ರೂಂ ತೆರೆಯಬೇಕು. ಪ್ರಶ್ನೆ ಪತ್ರಿಕೆ ಒಎಂಆರ್ ಇಡುವಾಗ 24*7 ಸಿಸಿಟಿವಿ ಕಣ್ಗಾವಲು ಇಡಬೇಕು. ಕೆಪಿಎಸ್‌ಸಿ ಸ್ಟ್ರಾಂಗ್ ರೂಂ ಅಲ್ಲಿ ಸಿಸಿ ಟಿವಿ …

Read More »

ದೇವಾಲಯದ ಕೆರೆಗೆ ಬಿದ್ದು ವಿದ್ಯಾರ್ಥಿ ಸಾವು

ಉಡುಪಿ: ದೇವಾಲಯದ ಕೆರೆಗೆ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಡುಪಿ ನಗರದ ತೆಂಕಪೇಟೆಯಲ್ಲಿರುವ ವೆಂಕಟರಮಣ ದೇವಾಲಯದಲ್ಲಿ ನಡೆದಿದೆ. ಮೃತನನ್ನು ಕುಕ್ಕಿಕಟ್ಟೆ ನಿವಾಸಿ ಆದಿತ್ಯ ನಾಯಕ್ (13) ಎಂದು ಗುರುತಿಸಲಾಗಿದೆ. ದೇವಾಲಯದಲ್ಲಿ ನಡೆಯುತ್ತಿದ್ದ ಭಜನಾ ಸಪ್ತಾಹ ಕಾರ್ಯಕ್ರಮದ ವೇಳೆ ಘಟನೆ ಸಂಭವಿಸಿದೆ. ಅಕ್ಕನ ಮಗನ ಒತ್ತಾಯದ ಮೇರೆಗೆ ಈಜಲು ಕೆರೆಗೆ ಇಳಿದಿದ್ದ ಆದಿತ್ಯನಿಗೆ ಈಜಲು ಬರುತ್ತಿರಲಿಲ್ಲ ಎನ್ನಲಾಗಿದೆ. ಸುಮಾರು 20 ಅಡಿ ಆಳದ ಕೆರೆಯಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ. …

Read More »

ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ: ಶಾಸಕ ಪ್ರಕಾಶ್ ಕೋಳಿವಾಡಗೆ 500 ರೂ. ದಂಡ

ಹಾವೇರಿ: ಟ್ರಾಫಿಕ್ ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ ಅವರಿಗೆ ಟ್ರಾಫಿಕ್ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಆಗಸ್ಟ್ 25ರಂದು ಪ್ರಕಾಶ್ ಕೋಳಿವಾಡ ಅವರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್ ಚಲಾಯಿಸಿದ್ದರು. ಈ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಇದಕ್ಕೆ ಸಾರ್ವಜನಿಕರಿಂದಲೂ ಟೀಕೆ ವ್ಯಕ್ತವಾಗಿತ್ತು. ಸಾಮಾನ್ಯ ಜನರು ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸಿದರೆ ದಂಡ ಹಾಕುತ್ತಾರೆ. ಆದರೆ, ಜನಪ್ರತಿನಿಧಿಗಳಿಗೆ …

Read More »

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ

ಮೈಸೂರು: ಈ ಬಾರಿಯ ದಸರಾದಲ್ಲಿ  ಕಂಬಳ  ಇರುತ್ತದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಾಗ ಗುರುತು ಮಾಡಿರುವ ಜಾಗದಲ್ಲಿ ಕಂಬಳ ನಡೆಯುತ್ತದೆ. ಸಿಎಂ ಕೂಡ ಕಂಬಳ ನಡೆಸಿ ಎಂದು ಸೂಚನೆ ಕೊಟ್ಟಿದ್ದಾರೆ ಎಂದರು. ಇಂದು ಗಜಪಯಣ ಆರಂಭವಾಗಿದೆ. ವೀರನಹೊಸಹಳ್ಳಿಯಲ್ಲಿ ಪೂಜೆ ಸಲ್ಲಿಸಲಾಗಿದೆ. 25 ವರ್ಷಗಳಿಂದ ದಸರಾದಲ್ಲಿ ಅಭಿಮನ್ಯು ಭಾಗಿಯಾಗಿತ್ತು. ಈ ಬಾರಿ ಅಭಿಮನ್ಯು ನಿವೃತ್ತಿಯಾಗಿದೆ. …

Read More »

ಖೇಲೋ ಇಂಡಿಯಾ; ನಾಳೆ ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ

ನವದೆಹಲಿ: 2026 ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ (National Sports Day) ಅಂಗವಾಗಿ ಗುರುವಾರ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಖೇಲೋ ಇಂಡಿಯಾ (Khelo India) ಸಂವಾದದಲ್ಲಿ ಯುವಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ನಿಗದಿಯಾಗಿರುವ ಈ ಕಾರ್ಯಕ್ರಮವನ್ನು ಮೇರಾ ಯುವ ಭಾರತ್ (ಎಂವೈ ಭಾರತ್) ಆಯೋಜಿಸಿದೆ. ಯುವಜನರು ಭಾರತದ ಕ್ರೀಡಾ ಪಯಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಯುವ …

Read More »