ಮಧ್ಯಪ್ರದೇಶ: ಕಾರು ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಪ್ರದೇಶದ 23 ವರ್ಷದ ಯೂಟ್ಯೂಬರ್ ಹಾಗೂ ಆಕೆಯ ತಾಯಿ ಇಬ್ಬರೂ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಯೂಟ್ಯೂಬರ್ ತಂದೆ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಜ್ಜಯಿನಿ-ಗರೋತ್ ಹೆದ್ದಾರಿಯ ರಾಮಖೇಡಿ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಅಪಘಾತ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಎರ್ಟಿಗಾ ಕಾರು ಮುಂದೆ ಹೋಗುತ್ತಿದ್ದ ಟ್ರಕ್‌ನ ಹಿಂಭಾಗಕ್ಕೆ …
Read More »Daily Archives: ಆಗಷ್ಟ್ 27, 2026
ನಾಗೇಂದ್ರ ಪಕ್ಷದ ಶಿಸ್ತಿನ ಸಿಪಾಯಿ ಸದ್ಯಕ್ಕೆ ರಾಜೀನಾಮೆ ವಿಚಾರ ಇಲ್ಲ: ಸಿಎಂ
ಬೆಂಗಳೂರು: ನಾಗೇಂದ್ರ ಪಕ್ಷದ ಶಿಸ್ತಿನ ಸಿಪಾಯಿ. ಅವರ ನಾಯಕತ್ವದ ಮೇಲೆ ನಮಗೆ ನಂಬಿಕೆ ಇದೆ. ಸದ್ಯಕ್ಕೆ ರಾಜೀನಾಮೆ ವಿಚಾರ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿಎಂ, ಸಚಿವರಾದ ಬೈರತಿ ಸುರೇಶ್ ಹಾಗೂ ಯು.ಟಿ. ಖಾದರ್ ಅವರ ಜೊತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಬರ, ನೀರಾವರಿ, ರೈತರ ಸಮಸ್ಯೆ, ಸರ್ಕಾರದ ಗ್ಯಾರಂಟಿ ಯೋಜನೆಗಳು, ಎಸ್‌ಐಆರ್, ಕಸ್ತೂರಿ ರಂಗನ್ ವರದಿ ಸೇರಿದಂತೆ ಹಲವು ವಿಚಾರಗಳ …
Read More »ತುಂಗಾ ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು
ಶಿವಮೊಗ್ಗ: ತುಂಗಾ ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಬಳಿಯ ತುಂಗಾ ಮೇಲ್ದಂಡೆ ನಾಲೆಯಲ್ಲಿ ನಡೆದಿದೆ. ಬೊಮ್ಮನಕಟ್ಟೆಯ ನಿವಾಸಿ ಕೃಷ್ಣ (15) ನೀರುಪಾಲಾದ ಬಾಲಕ. ಕೃಷ್ಣ ಶಿವಮೊಗ್ಗ ನಗರದ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಆರು ಜನ ಸ್ನೇಹಿತರ ಜೊತೆ ತುಂಗಾ ನಾಲೆಗೆ ಈಜಲು ತೆರಳಿದ್ದ ವೇಳೆ ನಾಲೆಯಲ್ಲಿ ನೀರಿನ ಹರಿವು ಹೆಚ್ಚಿದ್ದರಿಂದ ನಿಯಂತ್ರಣ ಕಳೆದುಕೊಂಡು ಕೃಷ್ಣ ಕಣ್ಮರೆಯಾಗಿದ್ದಾನೆ. ಬಾಲಕ ಕೃಷ್ಣನ ರಕ್ಷಿಸಲು …
Read More »ಸಚಿವ ನಾಗೇಂದ್ರ ರಾಜೀನಾಮೆ ಕೊಡಲೇಬೇಕು: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಲೇಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಾಗೇಂದ್ರ ಅವರ ವಿರುದ್ಧದ ಆರೋಪ ಹೊಸದಲ್ಲ. ಕಳೆದ ವರ್ಷವೇ ಈ ಆರೋಪ ಕೇಳಿಬಂದಿತ್ತು. ಹಿಂದಿನ ಮುಖ್ಯಮಂತ್ರಿ ಅವರೇ ಸದನದಲ್ಲಿ ₹87 ಕೋಟಿ ಅಕ್ರಮ ನಡೆದಿದೆ ಎಂದು ಒಪ್ಪಿಕೊಂಡಿದ್ದರು ಎಂದು ಹೇಳಿದರು. ಬೇರೆ ಸಮರ್ಥ ವ್ಯಕ್ತಿಗಳಿಗೆ …
Read More »ನಿಂತಿದ್ದ ಟಾಟಾ ಏಸ್‌ಗೆ ಬೈಕ್ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು
ಕೊಪ್ಪಳ: ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಬನ್ನಿಕೊಪ್ಪ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಅಪಘಾತ ಸಂಭವಿಸಿದೆ. ನರಗುಂದ ಮೂಲದ ಮೂವರು ಯುವಕರು ನರಗುಂದದಿಂದ ಕೊಪ್ಪಳದತ್ತ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮಾಬೂಸಾಬ್ …
Read More »ರಷ್ಯಾದ ಹಠಯೋಗಿಣಿಗೆ ಕಾಶಿ ಜಗದ್ಗುರುಗಳಿಂದ ಶಿವಯೋಗ ದೀಕ್ಷೆ
ಹುಬ್ಬಳ್ಳಿ: ರಷ್ಯಾದ ಪ್ರಸಿದ್ಧ ಹಠಯೋಗಿಣಿ ಮೊಲ್ಗಾ ಅವರಿಗೆ ವಾರಾಣಸಿಯ ಕಾಶಿ ಜ್ಞಾನ ಪೀಠದಲ್ಲಿ ಶಿವಯೋಗ ದೀಕ್ಷೆ ನೀಡಲಾಯಿತು. ಕಾಶಿ ಜ್ಞಾನ ಪೀಠದ ಹಿರಿಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರು ಮೊಲ್ಗಾ ಅವರಿಗೆ ಶಿವಯೋಗ ದೀಕ್ಷೆ ನೀಡಿ ಆಶೀರ್ವದಿಸಿದರು. ಶಿವಯೋಗವು ಬಾಹ್ಯ ಆಚರಣೆಗಳನ್ನು ಆಂತರಿಕ ಅನುಭಾವವಾಗಿ ಪರಿವರ್ತಿಸುವ ಮಹಾಸಾಧನವಾಗಿದ್ದು, ಆತ್ಮಜ್ಞಾನ ಹಾಗೂ ಪರಮಶಿವನ ಸಾನ್ನಿಧ್ಯದ ಅನುಭೂತಿಗೆ ಕರೆದೊಯ್ಯುವ ಶ್ರೇಷ್ಠ ಸಾಧನಾ ಪಥವಾಗಿದೆ ಎಂದು ಜಗದ್ಗುರುಗಳು ಹೇಳಿದರು. ಪ್ರಾತಃಕಾಲ ನಡೆದ ಇಷ್ಟಲಿಂಗ ಮಹಾಪೂಜೆಯಲ್ಲಿ …
Read More »ಯಾರಿಂದಲೂ ಇನ್ನೊಬ್ಬರ ಲೀಡರ್‌ಶಿಪ್ ತಪ್ಪಿಸೋಕೆ ಆಗಲ್ಲ: ಸತೀಶ್ ಜಾರಕಿಹೊಳಿ
ಬೆಂಗಳೂರು: ಯಾರು ಯಾರ ನಾಯಕತ್ವವನ್ನು ತಪ್ಪಿಸೋಕೆ ಆಗಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಒಂದೇ ಡಿಸಿಎಂ ನಾನೇ ಮಾಡಿಸಿದ್ದು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಒಬ್ರೆ ಇದ್ರು. ಇಗಲೂ ಒಬ್ರೆ ಡಿಸಿಎಂ ಇದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಒಂದೇ ಡಿಸಿಎಂ ಇತ್ತು. ಆಗಲೂ ಹೆಚ್ಚುವರಿ ಡಿಸಿಎಂ ಚರ್ಚೆ ಇತ್ತು. ಈಗಲೂ ಇದೆ, ಆದ್ರೆ ಒಂದೇ ಡಿಸಿಎಂ …
Read More »ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟಿಟಿ ಮೇಲೆ ಮಗುಚಿದ ಲಾರಿ, 8 ಮಂದಿಗೆ ಗಾಯ
ಮಡಿಕೇರಿ: ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಿಗರಿದ್ದ ಟಿಟಿ ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದಿದೆ. ಘಟನೆಯಲ್ಲಿ ಟಿಟಿ ವಾಹನದಲ್ಲಿದ್ದ ಆರು ಮಂದಿ ಹಾಗೂ ಲಾರಿಯಲ್ಲಿದ್ದ ಇಬ್ಬರು ಸೇರಿ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಸಂಪಾಜೆ ಸಮೀಪದ ಜೋಡುಪಾಲ ಅಬ್ಬಿಕೊಲ್ಲಿ ಜಲಪಾತದ ಬಳಿ ಈ ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಿಂದ ಕೊಡಗು ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಮಡಿಕೇರಿಯಿಂದ ಮಂಗಳೂರಿನತ್ತ ತೆರಳುತ್ತಿದ್ದರು. ಟಿಟಿ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಕೆಲವರು …
Read More »ಸಾಮೂಹಿಕ ಮದುವೆಯಲ್ಲಿ 106 ಜೋಡಿಗೆ ಸೀಮೆ ಹಸು ಗಿಫ್ಟ್ ಕೊಟ್ಟ `ಕೈ’ ಶಾಸಕ
ಚಿಕ್ಕಬಳ್ಳಾಪುರ: ಸಾಮೂಹಿಕ ವಿವಾಹ ಅಂದ್ರೆ ಸಾಮಾನ್ಯವಾಗಿ ನವಜೋಡಿಗಳಿಗೆ ಬಟ್ಟೆ, ಆಭರಣ ಸೇರಿದಂತೆ ವಿವಿಧ ಉಡುಗೊರೆಗಳನ್ನು ನೀಡಲಾಗುತ್ತದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ನೂತನ ದಂಪತಿಗಳಿಗೆ ನೀಡಿದ ಉಡುಗೊರೆ ಮಾತ್ರ ವಿಭಿನ್ನವಾಗಿತ್ತು. ಮದುವೆಯಾದ ಜೋಡಿಗಳಿಗೆ ಸೀಮೆ ಹಸುವನ್ನೇ ಉಡುಗೊರೆಯಾಗಿ ನೀಡಲಾಗಿದೆ. ಬಾಗೇಪಲ್ಲಿ ತಾಲೂಕಿನ ಗಡಿದಂ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಬಳಿ ಎಸ್.ಎನ್. ಚಾರಿಟೇಬಲ್ ಟ್ರಸ್ಟ್ ವತಿಯಿಂದ 23ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬರೋಬ್ಬರಿ …
Read More »ಬಾಯಲ್ಲೇ 82 ಗ್ರಾಂ ಚಿನ್ನದ ಕ್ಯಾಪ್ಸೂಲ್; ಬೆಂಗಳೂರಲ್ಲಿ ಸಿಕ್ಕಿಬಿದ್ದ ದುಬೈ ಪ್ರಯಾಣಿಕ
ಬೆಂಗಳೂರು: ಚಿನ್ನವನ್ನು (Gold Theft) ಅಕ್ರಮವಾಗಿ ಸಾಗಿಸಲು ಪ್ರಯಾಣಿಕನೊಬ್ಬ ವಿಚಿತ್ರ ಮಾರ್ಗ ಅನುಸರಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಬಾಯಿಯಲ್ಲಿ ಬರೋಬ್ಬರಿ 82 ಗ್ರಾಂ (Gold Capsule) ಚಿನ್ನ ಪತ್ತೆಯಾಗಿದೆ. ಮಹಮ್ಮದ್ ಸಿರಾಜ್ ಎಂಬ ಪ್ರಯಾಣಿಕ ದುಬೈನಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿಳಿದಿದ್ದ. ಬಳಿಕ ಬೆಂಗಳೂರಿನಿಂದ ಗಾಜಿಯಾಬಾದ್‌ಗೆ ತೆರಳಲು ಸಿದ್ಧವಾಗಿದ್ದ. ಈ ವೇಳೆ ಏರ್‌ಪೋರ್ಟ್‌ನಲ್ಲಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಗೆ ಆತನ ವರ್ತನೆ ಅನುಮಾನ …
Read More »
Laxmi News 24×7