ಹುಬ್ಬಳ್ಳಿ: ರಷ್ಯಾದ ಪ್ರಸಿದ್ಧ ಹಠಯೋಗಿಣಿ ಮೊಲ್ಗಾ ಅವರಿಗೆ ವಾರಾಣಸಿಯ ಕಾಶಿ ಜ್ಞಾನ ಪೀಠದಲ್ಲಿ ಶಿವಯೋಗ ದೀಕ್ಷೆ ನೀಡಲಾಯಿತು. ಕಾಶಿ ಜ್ಞಾನ ಪೀಠದ ಹಿರಿಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರು ಮೊಲ್ಗಾ ಅವರಿಗೆ ಶಿವಯೋಗ ದೀಕ್ಷೆ ನೀಡಿ ಆಶೀರ್ವದಿಸಿದರು. ಶಿವಯೋಗವು ಬಾಹ್ಯ ಆಚರಣೆಗಳನ್ನು ಆಂತರಿಕ ಅನುಭಾವವಾಗಿ ಪರಿವರ್ತಿಸುವ ಮಹಾಸಾಧನವಾಗಿದ್ದು, ಆತ್ಮಜ್ಞಾನ ಹಾಗೂ ಪರಮಶಿವನ ಸಾನ್ನಿಧ್ಯದ ಅನುಭೂತಿಗೆ ಕರೆದೊಯ್ಯುವ ಶ್ರೇಷ್ಠ ಸಾಧನಾ ಪಥವಾಗಿದೆ ಎಂದು ಜಗದ್ಗುರುಗಳು ಹೇಳಿದರು. ಪ್ರಾತಃಕಾಲ ನಡೆದ ಇಷ್ಟಲಿಂಗ ಮಹಾಪೂಜೆಯಲ್ಲಿ …
Read More »Daily Archives: ಆಗಷ್ಟ್ 27, 2026
ಯಾರಿಂದಲೂ ಇನ್ನೊಬ್ಬರ ಲೀಡರ್‌ಶಿಪ್ ತಪ್ಪಿಸೋಕೆ ಆಗಲ್ಲ: ಸತೀಶ್ ಜಾರಕಿಹೊಳಿ
ಬೆಂಗಳೂರು: ಯಾರು ಯಾರ ನಾಯಕತ್ವವನ್ನು ತಪ್ಪಿಸೋಕೆ ಆಗಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಒಂದೇ ಡಿಸಿಎಂ ನಾನೇ ಮಾಡಿಸಿದ್ದು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಒಬ್ರೆ ಇದ್ರು. ಇಗಲೂ ಒಬ್ರೆ ಡಿಸಿಎಂ ಇದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಒಂದೇ ಡಿಸಿಎಂ ಇತ್ತು. ಆಗಲೂ ಹೆಚ್ಚುವರಿ ಡಿಸಿಎಂ ಚರ್ಚೆ ಇತ್ತು. ಈಗಲೂ ಇದೆ, ಆದ್ರೆ ಒಂದೇ ಡಿಸಿಎಂ …
Read More »ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟಿಟಿ ಮೇಲೆ ಮಗುಚಿದ ಲಾರಿ, 8 ಮಂದಿಗೆ ಗಾಯ
ಮಡಿಕೇರಿ: ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಿಗರಿದ್ದ ಟಿಟಿ ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದಿದೆ. ಘಟನೆಯಲ್ಲಿ ಟಿಟಿ ವಾಹನದಲ್ಲಿದ್ದ ಆರು ಮಂದಿ ಹಾಗೂ ಲಾರಿಯಲ್ಲಿದ್ದ ಇಬ್ಬರು ಸೇರಿ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಸಂಪಾಜೆ ಸಮೀಪದ ಜೋಡುಪಾಲ ಅಬ್ಬಿಕೊಲ್ಲಿ ಜಲಪಾತದ ಬಳಿ ಈ ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಿಂದ ಕೊಡಗು ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಮಡಿಕೇರಿಯಿಂದ ಮಂಗಳೂರಿನತ್ತ ತೆರಳುತ್ತಿದ್ದರು. ಟಿಟಿ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಕೆಲವರು …
Read More »ಸಾಮೂಹಿಕ ಮದುವೆಯಲ್ಲಿ 106 ಜೋಡಿಗೆ ಸೀಮೆ ಹಸು ಗಿಫ್ಟ್ ಕೊಟ್ಟ `ಕೈ’ ಶಾಸಕ
ಚಿಕ್ಕಬಳ್ಳಾಪುರ: ಸಾಮೂಹಿಕ ವಿವಾಹ ಅಂದ್ರೆ ಸಾಮಾನ್ಯವಾಗಿ ನವಜೋಡಿಗಳಿಗೆ ಬಟ್ಟೆ, ಆಭರಣ ಸೇರಿದಂತೆ ವಿವಿಧ ಉಡುಗೊರೆಗಳನ್ನು ನೀಡಲಾಗುತ್ತದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ನೂತನ ದಂಪತಿಗಳಿಗೆ ನೀಡಿದ ಉಡುಗೊರೆ ಮಾತ್ರ ವಿಭಿನ್ನವಾಗಿತ್ತು. ಮದುವೆಯಾದ ಜೋಡಿಗಳಿಗೆ ಸೀಮೆ ಹಸುವನ್ನೇ ಉಡುಗೊರೆಯಾಗಿ ನೀಡಲಾಗಿದೆ. ಬಾಗೇಪಲ್ಲಿ ತಾಲೂಕಿನ ಗಡಿದಂ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಬಳಿ ಎಸ್.ಎನ್. ಚಾರಿಟೇಬಲ್ ಟ್ರಸ್ಟ್ ವತಿಯಿಂದ 23ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬರೋಬ್ಬರಿ …
Read More »ಬಾಯಲ್ಲೇ 82 ಗ್ರಾಂ ಚಿನ್ನದ ಕ್ಯಾಪ್ಸೂಲ್; ಬೆಂಗಳೂರಲ್ಲಿ ಸಿಕ್ಕಿಬಿದ್ದ ದುಬೈ ಪ್ರಯಾಣಿಕ
ಬೆಂಗಳೂರು: ಚಿನ್ನವನ್ನು (Gold Theft) ಅಕ್ರಮವಾಗಿ ಸಾಗಿಸಲು ಪ್ರಯಾಣಿಕನೊಬ್ಬ ವಿಚಿತ್ರ ಮಾರ್ಗ ಅನುಸರಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಬಾಯಿಯಲ್ಲಿ ಬರೋಬ್ಬರಿ 82 ಗ್ರಾಂ (Gold Capsule) ಚಿನ್ನ ಪತ್ತೆಯಾಗಿದೆ. ಮಹಮ್ಮದ್ ಸಿರಾಜ್ ಎಂಬ ಪ್ರಯಾಣಿಕ ದುಬೈನಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿಳಿದಿದ್ದ. ಬಳಿಕ ಬೆಂಗಳೂರಿನಿಂದ ಗಾಜಿಯಾಬಾದ್‌ಗೆ ತೆರಳಲು ಸಿದ್ಧವಾಗಿದ್ದ. ಈ ವೇಳೆ ಏರ್‌ಪೋರ್ಟ್‌ನಲ್ಲಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಗೆ ಆತನ ವರ್ತನೆ ಅನುಮಾನ …
Read More »ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಮಧು ಬಂಗಾರಪ್ಪ
ಬೆಂಗಳೂರು: ಕಸ್ತೂರಿ ರಂಗನ್ ಸಮಿತಿ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಆದರೆ ರಾಜ್ಯ ಸರ್ಕಾರ ಈಗಾಗಲೇ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿ ಕೇಂದ್ರಕ್ಕೆ ತನ್ನ ನಿರ್ಧಾರವನ್ನು ತಿಳಿಸಿದೆ. ಹೀಗಾಗಿ ವರದಿ ಜಾರಿಗೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. …
Read More »ರಾಜ್ಯದ ರೈತರಿಗೆ ಕಸ್ತೂರಿ ರಂಗನ್ ವರದಿ ಆತಂಕ – ಕೇಂದ್ರದ ಕರಡು ಚರ್ಚೆಗೆ ವಿಶೇಷ ಅಧಿವೇಶನ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕಸ್ತೂರಿ ರಂಗನ್ ವರದಿ ಆತಂಕ ಶುರುವಾಗಿದೆ. ಕೇಂದ್ರ ಪರಿಸರ, ಅರಣ್ಯ ಸಚಿವಾಲಯ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದರನ್ವಯ ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಉಡುಪಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ 39 ತಾಲೂಕುಗಳ 1,449 ಗ್ರಾಮಗಳ 20,668 ಚದರ ಕಿಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಈ ಅಧಿಸೂಚನೆಗೆ …
Read More »ನೇಪಾಳದಲ್ಲಿ ಜಲ ಪ್ರಳಯ; 100ಕ್ಕೇರಿದ ಸಾವಿನ ಸಂಖ್ಯೆ
ಕಠ್ಮಂಡು: ಉತ್ತರ ನೇಪಾಳದ ರಸುವಾ ಜಿಲ್ಲೆಗೆ ಬೆಳಗ್ಗೆ ಅಪ್ಪಳಿಸಿದ ಭೀಕರ ಪ್ರವಾಹವು ವ್ಯಾಪಕ ವಿನಾಶ ಉಂಟು ಮಾಡಿದೆ. ನದಿಗಳ ಮೇಲೆ ನಿರ್ಮಿಸಲಾದ ಸೇತುವೆಗಳು ಮತ್ತು ಮನೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ನೂರಾರು ಮಂದಿ ನಾಪತ್ತೆಯಾಗಿದ್ದು, ಈವರೆಗೂ 100 ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಚರಣೆ ಭರದಿಂದ ಸಾಗಿದೆ. ನೇಪಾಳದಲ್ಲಿ ಜಲ ಪ್ರಳಯ ಸಂಭವಿಸಿದೆ. ಟಿಬೆಟ್ ಗಡಿಯ ಬಳಿಯ ನೇಪಾಳದ ರಸುವಾ ಜಿಲ್ಲೆಯಲ್ಲಿ ಬೆಳಗ್ಗೆ ಭೋಟೆ ಕೋಶಿ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾಗಿದ್ದು …
Read More »ಈದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೆಸ್ತೀನ್ ಧ್ವಜ – ಪೊಲೀಸರಿಂದ ಧ್ವಜ ವಶಕ್ಕೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಸಾಗುತ್ತಿದ್ದ ವೇಳೆ ಕೆಲವರು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಸ್ಥಳದಲ್ಲೇ ಧ್ವಜವನ್ನು ವಶಕ್ಕೆ ಪಡೆದು ಮುನ್ನೆಚ್ಚರಿಕೆ ನೀಡಿದ್ದಾರೆ. ಯಾವುದೇ ಗೊಂದಲ ಅಥವಾ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಪರಿಸ್ಥಿತಿಯನ್ನು ತಿಳಿಗೊಳಿಸಿದ ಪೊಲೀಸರು, ಇಂತಹ ಧ್ವಜಗಳನ್ನು ಹಾರಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಮೆರವಣಿಗೆ ಶಾಂತಿಯುತವಾಗಿ ಮುಂದುವರಿಯಲು ಅವಕಾಶ …
Read More »ಟಾಕ್ಸಿಕ್‌ಗೆ ಮೊದಲ ದಿನ ಭರ್ಜರಿ ರೆಸ್ಪಾನ್ಸ್
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಸಿನಿಮಾ (Toxic) ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ವಿಶ್ವಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. 4 ವರ್ಷಗಳ ಬಳಿಕ ಯಶ್ ಅವರನ್ನು ಬೆಳ್ಳಿತೆರೆಯಲ್ಲಿ ಕಂಡ ಅಭಿಮಾನಿಗಳು ಥಿಯೇಟರ್‌ಗಳ ಮುಂದೆ ಹಬ್ಬದ ವಾತಾವರಣ ಸೃಷ್ಟಿಸಿದ್ದಾರೆ. ಚಿತ್ರವು ವಿಶ್ವಾದ್ಯಂತ 6 ಭಾಷೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿದೆ. ಭಾರತದಲ್ಲಿ 5,500ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಸಿನಿಮಾ ತೆರೆಕಂಡಿದ್ದು, ಕರ್ನಾಟಕದಲ್ಲಿ 500ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ರಿಲೀಸ್ …
Read More »
Laxmi News 24×7