Breaking News

Daily Archives: ಆಗಷ್ಟ್ 29, 2026

ಪತ್ನಿ ಕೊಂದು ತಾನೂ ನೇಣಿಗೆ ಶರಣಾದ ಪತಿ‌

ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ  ತಾಲೂಕಿನ ಗರಗ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೌಲಾಸಾಬ್ (28) ಎಂಬಾತನೇ ತನ್ನ ಪತ್ನಿ ಸಲ್ಮಾ (21) ಎಂಬಾಕೆಯನ್ನು ಕೊಲೆ ಮಾಡಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಒಂದೂವರೆ ವರ್ಷದ ಮಗುವಿನ ಎದುರೇ ಮೌಲಾಸಾಬ್ ಪತ್ನಿಯನ್ನು ಕೊಲೆ ಮಾಡಿ ತಾನೂ ನೇಣಿಗೆ ಶರಣಾಗಿದ್ದಾನೆ. ಕಳೆದ ಮೂರು ವರ್ಷಗಳ ಹಿಂದಷ್ಟೇ ಇವರ ವಿವಾಹವಾಗಿತ್ತು. ಗುರುವಾರ …

Read More »

ಪಾಕ್‌ನ ಐಎಸ್‌ಐಗೆ ಸೂಕ್ಷ್ಮ ಮಾಹಿತಿ, ಸಿಮ್‌ಗಳನ್ನು ರವಾನಿಸುತ್ತಿದ್ದ ದಂಪತಿ ಅರೆಸ್ಟ್‌

ನವದೆಹಲಿ: ಪಾಕಿಸ್ತಾನದ ಐಎಸ್‌ಐ (ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್) ಪರ ಬೇಹುಗಾರಿಕೆ ನಡೆಸುತ್ತಿದ್ದ ದಂಪತಿಯನ್ನು ದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಾಹಿಲ್ (25) ಮತ್ತು ಆತನ ಪತ್ನಿ ಸಮೀರಾ (21) ಬಂಧಿತ ಆರೋಪಿಗಳು. ಇಬ್ಬರು ಪಾಕಿಸ್ತಾನ ಮೂಲದ ಗುಪ್ತಚರ ಸಂಸ್ಥೆಯ ಸಿಬ್ಬಂದಿ ಜೊತೆ ಸಂಪರ್ಕದಲ್ಲಿದ್ದರು. ಅವರೊಂದಿಗೆ ಭಾರತಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಇಬ್ಬರು ಹಂಚಿಕೊಳ್ಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಇಬ್ಬರನ್ನೂ ಭಾರತದ ಸಿಮ್ ಕಾರ್ಡ್‌ ಪೂರೈಸಲು, ಕಾರ್ಯಕರ್ತರನ್ನು ನೇಮಿಸಿಕೊಳ್ಳಲು ಮತ್ತು ಸೂಕ್ಷ್ಮ ಮಾಹಿತಿಯನ್ನು …

Read More »

ಯುವತಿಯರ ಒಳಉಡುಪು, ಸ್ಯಾನಿಟರಿ ಪ್ಯಾಡ್‌ ಕಳ್ಳತನ; ವಿಚಿತ್ರವಾಗಿ ಜೋಡಿಸಿ ಲೈಂಗಿಕತೃಪ್ತಿ ಪಡ್ತಿದ್ದ ಕಾಮುಕ

ಬೆಂಗಳೂರು: ಕೋರಮಂಗಲ ವ್ಯಾಪ್ತಿಯ ಕೋ-ಲಿವಿಂಗ್ ಪಿಜಿಗಳಲ್ಲಿ ವಾಸಿಸುವ ಯುವತಿಯರ ಒಳಉಡುಪು ಹಾಗೂ ಸ್ಯಾನಿಟರಿ ಪ್ಯಾಡ್‌ಗಳನ್ನು ಕದ್ದು, ಅವುಗಳನ್ನು ವಿಚಿತ್ರ ರೀತಿಯಲ್ಲಿ ಜೋಡಿಸಿ ಲೈಂಗಿಕ ತೃಪ್ತಿ ಪಡೆಯುತ್ತಿದ್ದ ಕಾಮುಖನೊಬ್ಬನನ್ನು ಕೋರಮಂಗಲ ಪೊಲೀಸರು  ಬಂಧಿಸಿದ್ದಾರೆ. ಆರೋಪಿಯನ್ನ ಗಿರಿರಾಜ್ ಎಂದು ಗುರುತಿಸಲಾಗಿದ್ದು, ಈತ ಪ್ರತಿಷ್ಠಿತ ಸಂಸ್ಥೆಯಲ್ಲಿ ಆಡಿಟ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪಿಜಿಯಲ್ಲೇ ನಡೆಯುತ್ತಿತ್ತು ವಿಚಿತ್ರ ಕಳ್ಳತನ ಕೋರಮಂಗಲದ ಖಾಸಗಿ ಪಿಜಿಯೊಂದರಲ್ಲಿ ಪದೇಪದೇ ಯುವತಿಯರ ಒಳಉಡುಪು ಹಾಗೂ ಸ್ಯಾನಿಟರಿ ಪ್ಯಾಡ್‌ಗಳು ಕಾಣೆಯಾಗುತ್ತಿದ್ದವು. …

Read More »

ರಾತ್ರಿ ಹೊತ್ತು ಗ್ರಾಮಕ್ಕೆ ನುಗ್ಗಿ ಕುರಿ, ನಾಯಿ ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ

ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಕಳೆದ ಹಲವು ದಿನಗಳಿಂದ ಗ್ರಾಮದೊಳಗೆ ಓಡಾಡುತ್ತಿದ್ದ ಚಿರತೆ ಕುರಿ ಹಾಗೂ ನಾಯಿಗಳನ್ನು ಹೊತ್ತೊಯ್ದು ತಿಂದು ಹಾಕುತ್ತಿತ್ತು. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು. ಅಲ್ಲದೆ, ರಘು ಎಂಬುವವರ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆ ಗ್ರಾಮದೊಳಗೆ ಓಡಾಡುತ್ತಿದ್ದ ದೃಶ್ಯವೂ ಸೆರೆಯಾಗಿತ್ತು. ಚಿರತೆ ಹಾವಳಿಯಿಂದ ಭಯಭೀತರಾಗಿದ್ದ ಸ್ಥಳೀಯರು, ಕೂಡಲೇ ಚಿರತೆಯನ್ನ …

Read More »

ಹನೂರು ಎನ್‌ಕೌಂಟರ್ ಪ್ರಕರಣ – ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಹನೂರಿನ ಕಾವೇರಿ ವನ್ಯಧಾಮದಲ್ಲಿ ನಡೆದ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾಗಿದೆ.‌ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದಾರೆ. ಚಾಮರಾಜನಗರ ಎಸಿ ದಿನೇಶ್ ಕುಮಾರ್ ಮೀನಾ ಅವರಿಂದ ಮ್ಯಾಜಿಸ್ಟ್ರೇಟ್ ತನಿಖೆ ನಡೆದಿತ್ತು. ಅರಣ್ಯ ಸಿಬ್ಬಂದಿ ಹಾಗೂ ಪ್ರತ್ಯಕ್ಷ ಸಾಕ್ಷಿ ಮಹಿಮಾ ದಾಸ್ ಹೇಳಿಕೆಗಳನ್ನು ವರದಿಯಲ್ಲಿ ದಾಖಲಿಸಲಾಗಿದೆ. ಅಲ್ಲದೆ, ಮರಣೋತ್ತರ ಪರೀಕ್ಷೆ, ಘಟನಾ ಸ್ಥಳದ …

Read More »

ನಾಗೇಂದ್ರ ರಾಜೀನಾಮೆ; ವ್ಯಕ್ತಿಯಲ್ಲ ವ್ಯವಸ್ಥೆ ವಿರುದ್ಧ ನಮ್ಮ ಹೋರಾಟ: ಸಿ‌.ಸಿ ಪಾಟೀಲ

ಗದಗ: ಮಾಜಿ ಸಚಿವ ನಾಗೇಂದ್ರ ರಾಜೀನಾಮೆ  ನೀಡಿರುವ ವಿಚಾರವಾಗಿ ನರಗುಂದ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಸಿ.ಸಿ. ಪಾಟೀಲ, ಇದು ವ್ಯಕ್ತಿಯ ವಿರುದ್ಧದ ಹೋರಾಟವಲ್ಲ, ವ್ಯವಸ್ಥೆಯ ವಿರುದ್ಧದ ಹೋರಾಟ ಎಂದು ಹೇಳಿದ್ದಾರೆ. ನರಗುಂದದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಾಗೇಂದ್ರ ರಾಜೀನಾಮೆ ನೀಡಿರುವುದರಿಂದ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸಣ್ಣ ಪ್ರಯತ್ನ ಯಶಸ್ವಿಯಾಗಿದೆ. ನೊಂದ ಜನರಿಗೆ ಇದರ ಪ್ರಯೋಜನ ಸಿಗಬೇಕು …

Read More »

ಫುಡ್‌ ಪ್ರೊಸೆಸಿಂಗ್‌ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಆಹಾರ ಪದಾರ್ಥ ಸೀಜ್

ಹಾವೇರಿ: ಜಿಲ್ಲೆಯ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ರಾಣೇಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಒಟ್ಟು 1,033 ಕೆಜಿ ಆಹಾರ ಪದಾರ್ಥಗಳನ್ನು ಸೀಜ್ ಮಾಡಲಾಗಿದೆ. ರಾಣೇಬೆನ್ನೂರು ತಾಲೂಕಿನ ಕೃಷ್ಣಾಪುರ, ತರೇದಹಳ್ಳಿ ಹಾಗೂ ಹನುಮನಹಳ್ಳಿ ಗ್ರಾಮದಲ್ಲಿರುವ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಇತ್ತೀಚೆಗೆ ದಿಢೀರ್ ತಪಾಸಣೆ ನಡೆಸಲಾಯಿತು. ಈ ವೇಳೆ ಆಹಾರ ಪದಾರ್ಥಗಳನ್ನು ಸರಿಯಾಗಿ ಪ್ಯಾಕ್ ಮಾಡದೆ ಸಾಗಣೆ ಮಾಡುತ್ತಿರುವುದು ಅಧಿಕಾರಿಗಳ …

Read More »

ಜಮೀನಿಗಾಗಿ 20 ವರ್ಷಗಳಿಂದ ಅಲೆದಾಟ – ಕಾರ್ಗಿಲ್‌ ಯುದ್ಧದಲ್ಲಿ ಹೋರಾಡಿದ್ದ ಯೋಧನಿಂದ ಆತ್ಮಹತ್ಯೆಗೆ ಯತ್ನ

ಚಿಕ್ಕಬಳ್ಳಾಪುರ: ಜಮೀನಿಗಾಗಿ 20 ವರ್ಷಗಳ ಕಾಲ ಅಲೆದಾಡಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಮಾಜಿ ಯೋಧರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಂತಾಮಣಿಯಲ್ಲಿ ನಡೆದಿದೆ. ರಾಯಪಲ್ಲಿ ನಿವಾಸಿ ಮಾಜಿ ಸೈನಿಕ ಶಿವಾನಂದ ರೆಡ್ಡಿ ವಿಷ ಸೇವಿಸಿದ ಮಾಜಿ ಯೋಧ. 1987ರಲ್ಲಿ ಭಾರತೀಯ ಸೇನೆ ಸೇರಿದ್ದ ಇವರು, 1999ರ ಕಾರ್ಗಿಲ್ ಯುದ್ಧದ ವೇಳೆ ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಗಂಭೀರವಾಗಿ ಗಾಯಗೊಂಡಿದ್ದರು. ಕಾಲಿಗೆ ಫ್ರ‍್ಯಾಕ್ಚರ್ ಆಗಿ ವಿಕಲಚೇತನರಾಗಿ ಕೊನೆಗೆ 2004ರಲ್ಲಿ …

Read More »

101 ತಾಲೂಕುಗಳಲ್ಲಿ ಬರ; ವಿಬಿಜಿ ರಾಮ್ ಜಿ ಯೋಜನೆಯಲ್ಲಿ 15 ದಿನದೊಳಗೆ ಕೂಲಿ ಪಾವತಿಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಗ್ರಾಮೀಣ ಜನರಿಗೆ ವಿಬಿಜಿ ರಾಮ್ ಜಿ ಯೋಜನೆಯಡಿ ಹೆಚ್ಚಿನ ಉದ್ಯೋಗ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರು ದಕ್ಷಿಣ, ಹಾಸನ, ಚಿಕ್ಕಮಗಳೂರು, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ವಿಬಿಜಿ ರಾಮ್ ಜಿ ಯೋಜನೆಯ ಅನುಷ್ಠಾನದ ಬಗ್ಗೆ ಸಚಿವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದರು. ಗ್ರಾಮೀಣ …

Read More »

ಸಾಕು ನಾಯಿಯನ್ನು ಕಚ್ಚಿದ ಬೀದಿನಾಯಿಗೆ ಗುಂಡಿಕ್ಕಿ ಹತ್ಯೆ – ಆರೋಪಿ ಅರೆಸ್ಟ್‌

ಶಿವಮೊಗ್ಗ: ತಾನು ಸಾಕಿದ ನಾಯಿಯನ್ನ ಕಚ್ಚಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಸಾಗರ ತಾಲೂಕಿನ ನಾಡವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಿಂಗಮೂರ್ತಿ ನಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಗ್ರಾಮದ ಬೋರಪ್ಪ ಎಂಬವರು ಪ್ರತಿನಿತ್ಯ ದನ ಮೇಯಿಸಲು ತೆರಳುತ್ತಿದ್ದ ವೇಳೆ ಅವರೊಂದಿಗೆ ಬೀದಿ ನಾಯಿಯೊಂದು ಹಿಂಬಾಲಿಸಿ ಬರುತ್ತಿತ್ತು. ಅದೇ ನಾಯಿ ಗ್ರಾಮದ ಲಿಂಗಮೂರ್ತಿಯ ಮನೆ ಬಳಿ ಬಂದಾಗ ಅಲ್ಲಿದ್ದ ಸಾಕು ನಾಯಿಗಳನ್ನು ಕಚ್ಚಿತ್ತು. …

Read More »