Breaking News

Daily Archives: ಆಗಷ್ಟ್ 29, 2026

ಗುಟ್ಕಾ ನಿಷೇಧ ವಿರೋಧಿಸಿ ದಾವಣಗೆರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ – ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ದಾವಣಗೆರೆ: ರಾಜ್ಯ ಸರ್ಕಾರ ಗುಟ್ಕಾ ನಿಷೇಧ ಆದೇಶ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ಅಡಿಕೆ ಬೆಳೆಗಾರರು ಹಾಗೂ ಬಿಜೆಪಿ ಮುಖಂಡರು ದಾವಣಗೆರೆ ಎಸಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ, ಪರಿಷತ್ ಸದಸ್ಯ ಮಾಡಾಳ್ ಮಲ್ಲಿಕಾರ್ಜುನ್  ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆ.26 ರಿಂದ ಅಯಾ ಕ್ಷೇತ್ರಗಳಿಂದ ಪಾದಯಾತ್ರೆ ನಡೆಸಿದ ಬಿಜೆಪಿ ನಾಯಕರು, ಇಂದು ದಾವಣಗೆರೆಗೆ ಆಗಮಿಸಿ ಪ್ರತಿಭಟನೆ …

Read More »

ಹೆಂಡತಿ ಮೇಲಿನ ಕೋಪಕ್ಕೆ ಮಗುವನ್ನು ನದಿಗೆಸೆದು ಕೊಂದ ಪಾಪಿ ತಂದೆ

ಕಲಬುರಗಿ: ಹೆಂಡತಿ ಮೇಲಿನ ಸಿಟ್ಟಿಗೆ ವ್ಯಕ್ತಿಯೊಬ್ಬ 4 ವರ್ಷದ ಮಗುವನ್ನು ನದಿಗೆ ಎಸೆದು ಹತ್ಯೆ ಮಾಡಿದ ಘಟನೆ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ಸೋಮರಾವ್ ಹೂಗಾರ್ ಮಗುವನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಈತ ಪತ್ನಿ ಕಲ್ಪನಾ ಜೊತೆ ಗಲಾಟೆ ಮಾಡಿಕೊಂಡಿದ್ದ. ಇದೇ ಸಿಟ್ಟಲ್ಲಿ ಕೆಲಕಾಲ ಮಗು ಗುಂಡೇಶ್‌ನನ್ನು ಎತ್ತಿಕೊಂಡು ಆಟವಾಡಿಸುತ್ತಾ ಕರೆದುಕೊಂಡು ಹೋಗಿ ನಾಗರಾಳ ಜಲಾಶಯಕ್ಕೆ ಎಸೆದಿದ್ದಾನೆ. ಈ ವಿಷಯ ತಿಳಿದ ಬಳಿಕ ಗಂಡನ ವಿರುದ್ಧ ಪತ್ನಿ ಕಲ್ಪನಾ ದೂರು …

Read More »

ನೈಸ್ ವಿರುದ್ಧ ಜೆಡಿಎಸ್ ಜಾಗೃತಿ ಅಭಿಯಾನ – Nothing Nice ವೆಬ್‌ಸೈಟ್ ಬಿಡುಗಡೆ ಮಾಡಿದ ನಿಖಿಲ್

ಬೆಂಗಳೂರು: ನೈಸ್ ವಿರುದ್ಧ ಜೆಡಿಎಸ್  ಹೋರಾಟ ಮತ್ತೊಂದು ಹಂತಕ್ಕೆ ತಲುಪಿದೆ. ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿರೋ ಜೆಡಿಎಸ್ “ನಥಿಂಗ್ ನೈಸ್” ವೆಬ್‌ಸೈಟ್ ಬಿಡುಗಡೆ ಮಾಡಿದೆ. ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ  ವೆಬ್‌ಸೈಟ್ ಬಿಡುಗಡೆ ಮಾಡಿದರು. ಈ ವೆಬ್‌ಸೈಟ್‌ನಲ್ಲಿ ನೈಸ್ ಯೋಜನೆಯ ಸಂಪೂರ್ಣ ವಿವರ, ಟೋಲ್ ಯಾಕೆ ಕಟ್ಟಬಾರದು? ಹೈಕೋರ್ಟ್ ಆದೇಶ ಏನು? ಎಂಬುದು ಸೇರಿ ನೈಸ್ ಅಕ್ರಮದ ಸಂಪೂರ್ಣ ದಾಖಲಾತಿಗಳು ಇರಲಿವೆ. ಈ ಮೂಲಕ ಜನರಲ್ಲಿ ಜಾಗೃತಿ ಅಭಿಯಾನ …

Read More »

ದರ್ಶನ್‌ಗೆ ಸಂಕಷ್ಟ ಫಿಕ್ಸ್‌ – ಪ್ರದೋಷ್ ಮಾಫಿ ಸಾಕ್ಷಿಗೆ ಮುಹೂರ್ತ ಫಿಕ್ಸ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ  ಸಂಕಷ್ಟ ಎದುರಾಗುವ ಕಾಲ ಸನ್ನಿಹಿತವಾದಂತಿದೆ. ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿ ನುಡಿಯಲು ಕೋರ್ಟ್‌ ಕೊನೆಗೂ ಮುಹೂರ್ತ ಫಿಕ್ಸ್‌ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ  ಸಾಕ್ಷ್ಯ ನೀಡುವಂತೆ 59ನೇ ಸಿಸಿಹೆಚ್ ಕೋರ್ಟ್‌ ಪ್ರದೋಷ್‌ಗೆ ವಿಟ್ನೆಸ್ ಸಮನ್ಸ್ ಜಾರಿಗೊಳಿಸಿದೆ. ಪ್ರಕರಣದ ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್, ಪ್ರದೋಷ್‌ಗೆ ವಿಟ್ನೆಸ್‌ ಸಮನ್ಸ್‌ ಜಾರಿಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಮನವಿಯನ್ನ ಪರಿಗಣಿಸಿದ ನ್ಯಾಯಾಲಯ …

Read More »

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ

ಧಾರವಾಡ: ಜಿ.ಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಡಿ ಜೈಲು ಪಾಲಾಗಿದ್ದ ಶಾಸಕ ವಿನಯ್ ಕುಲಕರ್ಣಿ  ಅವರು ಆರು ವರ್ಷಗಳ ಬಳಿಕ ಇದೀಗ ಧಾರವಾಡ ಜಿಲ್ಲಾ ಪ್ರವೇಶ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಅಲ್ಲಿಂದ ನೇರವಾಗಿ ಧಾರವಾಡದ ಪ್ರಸಿದ್ಧ ಮುರುಘಾಮಠಕ್ಕೆ ಬಂದ ಶಾಸಕ ವಿನಯ್ ಅವರನ್ನು ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು. ಮುರುಘೇಂದ್ರ ಮಹಾಶಿವಯೋಗಿಗಳ ಹಾಗೂ ಮೃತ್ಯುಂಜಯಪ್ಪಗಳ ಗದ್ದುಗೆಗೆ ಶಾಸಕ ವಿನಯ್ ಪೂಜೆ …

Read More »

ಅರಮನೆ ಪ್ರವೇಶದ ವೇಳೆ ಗಾಬರಿಗೊಂಡ ಶ್ರೀರಾಮ ಆನೆ – ಕೆಲಕಾಲ ಆತಂಕ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಹಿನ್ನೆಲೆಯಲ್ಲಿ ದಸರಾ ಗಜಪಡೆಗಳಿಗೆ ಅರಣ್ಯ ಭವನದಲ್ಲಿ ಇಂದು ಬೆಳಗ್ಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಯಿತು. ಒಟ್ಟು 9 ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗಜಪಡೆಗಳು ಮೈಸೂರು ಅರಮನೆಯತ್ತ ಹೆಜ್ಜೆ ಹಾಕಿದವು. ಅರಮನೆ ದ್ವಾರಕ್ಕೆ ಆಗಮಿಸಿದ ದಸರಾ ಗಜಪಡೆಗಳನ್ನ  ಇಂದು ಸಂಪ್ರದಾಯಬದ್ಧವಾಗಿ ಸ್ವಾಗತಿಸಲಾಯಿತು. ಶುಭ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆ ಪ್ರವೇಶಿಸಬೇಕಿದ್ದ ಹಿನ್ನೆಲೆ ಮೈಸೂರು ಜಿಲ್ಲಾಡಳಿತ ವತಿಯಿಂದ ಆನೆಗಳನ್ನ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅರಣ್ಯ …

Read More »

ಗ್ರಾಮೀಣಾಭಿವೃದ್ಧಿ ಇಲಾಖೆ ಎಇಇ ನೇಮಕಾತಿ ಅಕ್ರಮದಲ್ಲಿ ಪ್ರಿಯಾಂಕ್ ಖರ್ಗೆ ಭಾಗಿ: ಹೆಚ್‌ಡಿಕೆ ಬಾಂಬ್‌

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನಿಯರ್ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ. ಈ ಅಕ್ರಮದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ  ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಭಾರೀ ಅಕ್ರಮಗಳ ಕುರಿತು ಆರೋಪ ಮಾಡಿದ್ದಾರೆ. ಎಇಇ ಅಕ್ರಮದ ಬಗ್ಗೆ ತನಿಖೆ ನಡೆದಿದೆ. 24 ಅಭ್ಯರ್ಥಿಗಳ ನೇಮಕಾತಿಯಲ್ಲಿ ಅಕ್ರಮ ಸಾಬೀತಾಗಿದ್ದರೂ, ಅಂದಿನ ಗ್ರಾಮೀಣಾಭಿವೃದ್ಧಿ …

Read More »

ಪ್ರಪಾತಕ್ಕೆ ಉರುಳಿದ ಬಸ್‌; ತನಿಖೆಗೆ ತೆರಳಿದ್ದ ಬೆಂಗ್ಳೂರು ಇನ್ಸ್‌ಪೆಕ್ಟರ್‌ ಸಾವು

ಭೋಪಾಲ್‌: ಸೈಬರ್‌ ಕ್ರೈಂ  ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಬಸ್‌ ಪ್ರಪಾತಕ್ಕೆ ಉರುಳಿದ ಪರಿಣಾಮ ಇನ್ಸ್‌ಪೆಕ್ಟರ್‌ ರವಿ ಕೆ.ಬಿ.  ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ರವಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ …

Read More »

ಮಂಡ್ಯ ಕಾರಾಗೃಹದಲ್ಲಿ ರಾಜ್ಯಾತಿಥ್ಯ ಆರೋಪ – ವೈರಲ್ ಪತ್ರದಲ್ಲಿ ಬೀಡಿ-ಸಿಗರೇಟ್ ಬೇಡಿಕೆಯ ಸೀಕ್ರೆಟ್ ಬಯಲು

ಮಂಡ್ಯ: ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ನೀಡಲು ಅಧಿಕಾರಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಪತ್ರ ವೈರಲ್ ಆದ ಬೆನ್ನಲ್ಲೇ ಪ್ರಕರಣಕ್ಕೀಗ ಸ್ಫೋಟಕ ತಿರುವು ಸಿಕ್ಕಿದೆ. ಜೈಲಧಿಕಾರಿಗಳ ಆಂತರಿಕ ತನಿಖೆಯಲ್ಲಿ ಇದು ಕೈದಿಗಳೇ ಹೆಣೆದ ಷಡ್ಯಂತ್ರ ಎಂಬ ಸತ್ಯಾಂಶ ಬೆಳಕಿಗೆ ಬಂದಿದ್ದು, ಜೈಲು ಅಧೀಕ್ಷಕಿ ಶಾಂತಮ್ಮ ಅವರು ಈ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್  ಅವರು ಮಂಡ್ಯ ಜೈಲಿಗೆ ಮೊನ್ನೆ ಭೇಟಿ ನೀಡಿದ್ದರು. …

Read More »

ಓವರ್‌ಟೇಕ್‌ ಭರದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ

ತುಮಕೂರು: ಓವರ್‌ಟೇಕ್‌ ಮಾಡುವಾಗ ಎರಡು ಕಾರುಗಳ  ನಡುವೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಚಿಕ್ಕನಾಯಕನಹಳ್ಳಿ  ತಾಲೂಕಿನ ಗೋಡೆಕೆರೆ ಗೇಟ್ ಬಳಿ ನಡೆದಿದೆ. ವೋಕ್ಸವೇಗನ್ ಹಾಗೂ ಕಿಯಾ ಸಾನೆಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಎರಡೂ ಕಾರಿನಲ್ಲಿದ್ದ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ತುರುವೇಕೆರೆ ಮೂಲದ ಆನಂ (3), ದಾವುದ್ ಪಾಷ (38) ಹಾಗೂ ಚಿಕ್ಕನಾಯಕನಹಳ್ಳಿ ಮೂಲದ ಅನಿಲ್ (32), ವಿವೇಕ್ (31) ಮೃತರು. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. …

Read More »