Breaking News

Daily Archives: ಆಗಷ್ಟ್ 30, 2026

ಕೆರೆ ತಡೆಗೋಡೆಗೆ ಖಾಸಗಿ ಬಸ್‌ ಡಿಕ್ಕಿ – 10 ಮಂದಿ ವಿದ್ಯಾರ್ಥಿಗಳಿಗೆ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕೆರೆ ತಡೆಗೋಡೆಗೆ ಖಾಸಗಿ ಬಸ್‌ ಡಿಕ್ಕಿಯಾದ ಪರಿಣಾಮ 10 ಮಂದಿ ವಿದ್ಯಾರ್ಥಿಗಳು ಹಾಗೂ ಓರ್ವ ಉಪನ್ಯಾಸಕಿ ಗಾಯಗೊಂಡ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ಸಾಗರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟಕ್ಕೆ ವಿದ್ಯಾರ್ಥಿಗಳನ್ನ ಖಾಸಗಿ ಬಸ್‌ನಲ್ಲಿ ಕರೆದೊಯ್ಯಲಾಗಿತ್ತು. ಕ್ರೀಡಾಕೂಟ ಮುಗಿಸಿ, ವಾಪಸ್ ಬರುವ ವೇಳೆ ನಿಯಂತ್ರಣ ತಪ್ಪಿ ಕಾಸ್ಪಾಡಿ ಕೆರೆಯ ತಡೆಗೋಡೆಗೆ ಬಸ್‌ ಡಿಕ್ಕಿಯಾಗಿದೆ. ಬಸ್ ನಲ್ಲಿದ್ದ 48 ಜನರ …

Read More »

ಕುಮಾರಸ್ವಾಮಿ ರಾಮನಗರಕ್ಕೆ ಬಂದ್ರೆ ಕಾಲು ತೊಳೆದು ಸ್ವಾಗತ ಮಾಡ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಕುಮಾರಸ್ವಾಮಿಯವರು  ರಾಮನಗರಕ್ಕೆ  ಬಂದರೆ ಕಾಲು ತೊಳೆದು ಸ್ವಾಗತ ಮಾಡುತ್ತೇನೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್ ಆಗುತ್ತಾರೆ ಎಂಬ ಚರ್ಚೆಯ ಕುರಿತು ಪ್ರತಿಕ್ರಿಯಿಸಿದರು. ಅವರು ರಾಜ್ಯ ರಾಜಕಾರಣಕ್ಕೆ ಬಂದರೆ ಸಂತೋಷದಿಂದ ಸ್ವಾಗತಿಸುತ್ತೇವೆ. ಒಂದು ವೇಳೆ ರಾಮನಗರಕ್ಕೆ ಬಂದರೆ ಅವರ ಪಾದ ತೊಳೆದು ಸ್ವಾಗತ ಮಾಡುತ್ತೇವೆ ಎಂದು ಕೌಂಟರ್ ನೀಡಿದ್ದಾರೆ‌. …

Read More »

ಗೃಹಲಕ್ಷ್ಮಿಗೆ ಮೂರರ ಸಂಭ್ರಮ – ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ವಿಧಾನಸೌಧ, ಸುವರ್ಣಸೌಧ, ಮೈಸೂರು ಅರಮನೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿಗೆ  ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ ಸೇರಿ ಹಲವೆಡೆ ಗುಲಾಬಿ ಬಣ್ಣದ ಲೈಟ್‌ಗಳು(P ಕಂಗೊಳಿಸಲಿವೆ. ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತ ಇವೆಲ್ಲವೂ ಭಾನುವಾರ (ಆ.30) ಸಂಜೆ 6ರಿಂದ ರಾತ್ರಿ …

Read More »

ಭ್ರಷ್ಟ ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಮುಂದುವರಿಯುತ್ತದೆ: ವಿಜಯೇಂದ್ರ

ತುಮಕೂರು: ರಾಜ್ಯ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡೇ ಮಾಡುತ್ತೇವೆ. ವಾಲ್ಮೀಕಿ ನಿಗಮದ 187 ಕೋಟಿ ವಾಪಸ್ ಬರೋವರೆಗೂ ಹೋರಾಟ ಇದ್ದೆ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪುನರುಚ್ಚರಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 1ರಿಂದ ಲಿಂಗಸೂರಿನಿಂದ ಬಳ್ಳಾರಿವರೆಗೂ ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ. ಪಾದಯಾತ್ರೆ ಕುರಿತು ರಾಷ್ಟ್ರೀಯ ನಾಯಕರ ಬಳಿ ಇವತ್ತು ಚರ್ಚೆ ಮಾಡಿದ್ದೇನೆ. ಅವರೂ ಗ್ರೀನ್ ಸಿಗ್ನಲ್ ನೀಡಿದ್ದು, ಯಶಸ್ವಿಯಾಗಿ ಮಾಡುವಂತೆ ನಿರ್ದೇಶನ ನೀಡಿದ್ದಾರೆ ಎಂದರು. …

Read More »

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: ಡಿಕೆಶಿ

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ತಪ್ಪು ಮಾಡದೇ ಇದ್ದರೂ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ನಾಗೇಂದ್ರ ರಾಜೀನಾಮೆ ನಂತರವೂ ಬಿಜೆಪಿಯವರು ಪಾದಯಾತ್ರೆ ಮಾಡುವುದಾದರೆ ಮಾಡಲಿ. ಅವರಿಗೆ ರಾಜಕೀಯ ಬೇಕು, ಹೀಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ನನ್ನ ಒಂದೇ ಒಂದು ಪ್ರಶ್ನೆಗೆ ಬಿಜೆಪಿಯವರು ಉತ್ತರ ಕೊಡಲಿಲ್ಲ. ಯಾವ ಕಾರಣಕ್ಕಾಗಿ ನಾಗೇಂದ್ರ ರಾಜೀನಾಮೆ …

Read More »

ಸರಣಿ ಕಳ್ಳತನ ಮಾಡ್ತಿದ್ದ ಮೂವರು ಖದೀಮರ ಬಂಧನ – 20 ಲಕ್ಷ ಮೌಲ್ಯದ ಚಿನ್ನಾಭರಣಗಳು ವಶಕ್ಕೆ

ರಾಮನಗರ: ಮಾಗಡಿ  ತಾಲೂಕಿನಲ್ಲಿ ಸರಣಿ ಕಳ್ಳತನ  ನಡೆಸಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಮೂವರು ಖದೀಮರನ್ನು ಬಂಧಿಸುವಲ್ಲಿ ಮಾಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 20.5 ಲಕ್ಷ ರೂ. ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಗಸ್ಟ್ 7ರಂದು ಮಾಗಡಿ ಪೊಲೀಸ್  ಠಾಣಾ ವ್ಯಾಪ್ತಿಯ ಗೇರಹಳ್ಳಿ ಗ್ರಾಮದಲ್ಲಿ ಅಪರಿಚಿತರು ಮನೆಗೆ ನುಗ್ಗಿ, ನಿದ್ರಿಸುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು. ಅದೇ ದಿನ ಗೇರಹಳ್ಳಿ ಗ್ರಾಮದ ದೇವಸ್ಥಾನವೊಂದರಲ್ಲಿ ಹಾಗೂ …

Read More »

ನಿನ್ನ ತಲೆದಂಡ ಮಾಡಿದ್ದು ಕಾಂಗ್ರೆಸ್, ರಾಮಾಯಣದ ಕಥೆ ಹೇಳಿ ಜನರನ್ನ ದಾರಿ ತಪ್ಪಿಸಬೇಡ: ನಾಗೇಂದ್ರಗೆ ರೆಡ್ಡಿ ತಿರುಗೇಟು

ಬಳ್ಳಾರಿ: ನಿನ್ನ ತಲೆದಂಡ ಮಾಡಿದ್ದು ಕಾಂಗ್ರೆಸ್, ರಾಮಾಯಣದ ಕಥೆ ಹೇಳಿ ಜನರನ್ನು ದಾರಿ ತಪ್ಪಿಸಬೇಡ ಎಂದು ಬಿ.ನಾಗೇಂದ್ರವಿರುದ್ಧ ಮಾಜಿ ಸಚಿವ, ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಗೇಂದ್ರ ಸ್ವಯಂ ಘೋಷಿತ ಶಂಭುಕ. ನಾಗೇಂದ್ರ ಅವರು ಕಣ್ಣೀರು ಹಾಕುತ್ತಾ ನಾಟಕ ಮಾಡುತ್ತಿರುವುದನ್ನು ನೋಡಿದ್ದೇನೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ನಾಸೀರ್ …

Read More »

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್

ಬೆಂಗಳೂರು: ನಿರ್ಗಮಿತ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ – ಜೆಡಿಎಸ್‌ ಹೋರಾಟದ ಫಲ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಬಣ್ಣಿಸಿದರು. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಪಕ್ಷ ನಾಯಕರು, ನಾಗೇಂದ್ರ ರಾಜೀನಾಮೆ ಪ್ರಕರಣದ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ನಾಗೇಂದ್ರ ರಾಜೀನಾಮೆ ಪ್ರಕರಣ ಅಪರೂಪದ್ದು. ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ನಾಗೇಂದ್ರ ವಿಚಾರವನ್ನು ವಿಧಾನಸಭೆಯಲ್ಲಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿವೆ. …

Read More »

ಬಿಟ್ ಕಾಯಿನ್ ಹಗರಣ – ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ  ಹಾಗೂ ರಾಬಿನ್ ಖಂಡೇವಾಲ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು  ಇ.ಡಿ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಕೆಲ ತಿಂಗಳ ಹಿಂದೆ ಪ್ರಕರಣ ದಾಖಲಿಸಿಕೊಂಡು ಹಲವು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು. …

Read More »

ಹಾಸ್ಯನಟ ಚಿಕ್ಕಣ್ಣ-ಪಾವನಾ ಅದ್ಧೂರಿ ರಿಸೆಪ್ಷನ್; ಗಣ್ಯರು, ಸಿನಿತಾರೆಯರಿಂದ ವಿಶ್

ಕಾಮಿಡಿ ಕಿಂಗ್ ಎಂದೇ ಗುರುತಿಸಿಕೊಂಡಿರುವ ಸ್ಯಾಂಡಲ್‌ವುಡ್ ಹಾಸ್ಯನಟ ಚಿಕ್ಕಣ್ಣ  ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ಉದ್ಯಮಿ ಪಾವನಾ ಗೌಡ ಜೊತೆ ನಾಳೆ ಭಾನುವಾರ ಸಪ್ತಪದಿ ತುಳಿಯಲಿದ್ದಾರೆ. ಮದುವೆಗೂ ಮೊದಲು ಇಂದು ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ಅದ್ಧೂರಿ ರೆಸೆಪ್ಷನ್ ಆಯೋಜಿಸಲಾಗಿದೆ. ಆರತಕ್ಷತೆ ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಹಾಗೂ ಪಾವನಾ ಗೌಡ ಜೋಡಿ ಎಲ್ಲರ ಗಮನಸಳೆದಿದ್ದಾರೆ. ಚಿಕ್ಕಣ್ಣ ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಶರ್ಟ್ ಹಾಗೂ ನೀಲಿ ಬ್ಲೇಜರ್ ಧರಿಸಿದ್ದರೆ, ಪಾವನಾ ಗೌಡ ನೀಲಿ ಬಣ್ಣದ …

Read More »