ಬೆಂಗಳೂರು: ನೈಸ್ ಯೋಜನೆ ಸರ್ಕಾರ ಕೂಡಲೇ ವಶಪಡಿಸಿಕೊಳ್ಳಬೇಕು. ಟೋಲ್ ಸಂಗ್ರಹ ನಿಲ್ಲಿಸಬೇಕು ಅಂತ ಜೆಡಿಎಸ್ ನಿಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಕೆ ಮಾಡಿದೆ. ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ನೇತೃತ್ವದ ಶಾಸಕರ ನಿಯೋಗ ಸಿಎಸ್‌ಗೆ ಮನವಿ ಸಲ್ಲಿಸಿದ್ರು ಮನವಿ ಸಲ್ಲಿಕೆ ಬಳಿಕ ಮಾತನಾಡಿದ ಸುರೇಶ್ ಬಾಬು, ನೈಸ್ ಯೋಜನೆಯಲ್ಲಿ ಹಗಲು ದರೋಡೆ ಆಗ್ತಿದೆ. ಯಾರು ಇವರ ರಕ್ಷಣೆ ಮಾಡ್ತಾ ಇದ್ದಾರೆ. ಹೈಕೋರ್ಟ್ ಕೂಡಾ …
Read More »Monthly Archives: ಆಗಷ್ಟ್ 2026
ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಜಿಗಿದ ಮಹಿಳೆ; ತಾಯಿ, ಮಗು ರಕ್ಷಣೆ – ಇಬ್ಬರು ಬಾಲಕಿಯರು ಕಣ್ಮರೆ
ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂರು ಮಕ್ಕಳೊಂದಿಗೆ ಮಹಿಳೆಯೊಬ್ಬಳು ನಗರದಲ್ಲಿ ಹರಿಯುವ ತುಂಗಾ ನದಿಗೆ ಹಾರಿದ್ದು, ಅಲ್ಲೇ ಇದ್ದ ಯುವಕರು ಮಹಿಳೆ ಹಾಗೂ ಆಕೆಯ ಮಗನನ್ನು ರಕ್ಷಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ. ಚಿತ್ರದುರ್ಗ ಮೂಲದ ಮಹಿಳೆ ನದಿಗೆ ಹಾರಿದ್ದರು. ಅದೃಷ್ಟವಶಾತ್ ಮಹಿಳೆ ಹಾಗೂ ಆಕೆಯ 11 ತಿಂಗಳ ಮಗನನ್ನು ಜನ ಬಚಾವ್ ಮಾಡಿದ್ದಾರೆ. ಆದರೆ ಇನ್ನಿಬ್ಬರು ಮಕ್ಕಳಾದ ಸಾನ್ವಿಕಾ (6), ತನ್ವಿಕಾ (4) ತುಂಗಾ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. …
Read More »ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಯಶ್ – ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪೂಜೆ
ʻಟಾಕ್ಸಿಕ್ʼ ಸಿನಿಮಾ ನಾಳೆ (ಆ.26) ವಿಶ್ವದಾದ್ಯಂತ ತೆರೆ ಕಾಣುತ್ತಿದೆ. ಈ ಬೆನ್ನಲ್ಲೇ ನಟ ಯಶ್ ಅವರು ಇಂದು (ಆ.25) ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ನಟ ಯಶ್, ಬಳಿಕ ಧರ್ಮಸ್ಥಳ ಶ್ರೀಕ್ಷೇತ್ರಕ್ಕೆ ತೆರಳಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು, ಗರ್ಭಗುಡಿಯ ಸಮೀಪ ನಿಂತು ಸುಮಾರು 10 ನಿಮಿಷಗಳ ಕಾಲ …
Read More »ಕುಮಾರಸ್ವಾಮಿ ಈವರೆಗೂ ಹೇಳಿದ ಯಾವುದೇ ದಾಖಲಾತಿ ಬಿಡುಗಡೆ ಮಾಡಿಲ್ಲ: ಚಲುವರಾಯಸ್ವಾಮಿ
ಬೆಂಗಳೂರು: ನೈಸ್ ಯೋಜನೆ ಕುರಿತು ಸಿಎಂ ವಿರುದ್ಧ ಕುಮಾರಸ್ವಾಮಿ ಏನು ದಾಖಲಾತಿ ಬಿಡುಗಡೆ ಮಾಡುತ್ತಾರೋ ಮಾಡಲಿ ಎಂದು ಸಚಿವ ಚಲುವರಾಯಸ್ವಾಮಿ ಸವಾಲ್ ಹಾಕಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಲಿ. ಅವರು ಇದುವರೆಗೂ ಬಿಡುಗಡೆ ಮಾಡ್ತೀನಿ ಅಂದರು ಯಾವುದೇ ದಾಖಲಾತಿ ಬಿಡುಗಡೆ ಮಾಡಿಲ್ಲ. ಕಳೆದ 3 ವರ್ಷದಲ್ಲಿ ಯಾವುದಾದರೂ ದಾಖಲೆ ಬಿಡುಗಡೆ ಮಾಡಿದ್ರಾ? ಯಾವುದು ಬಿಡುಗಡೆ ಮಾಡಿಲ್ಲ. ಕುಮಾರಸ್ವಾಮಿ ಅವರನ್ನ ಯಾಕೆ ಬಿಡುಗಡೆ ಮಾಡಲ್ಲ ಕೇಳಿ ಎಂದು …
Read More »ಕೆಪಿಎಸ್‌ಸಿ ಹಗರಣ | ಸಿಎಂ ಗೃಹಕಚೇರಿ ʻಕೃಷ್ಣಾʼ ಮುತ್ತಿಗೆಗೆ ವಿದ್ಯಾರ್ಥಿಗಳ ಯತ್ನ
ಬೆಂಗಳೂರು: ಕೆಪಿಎಸ್‌ಸಿ ಹಗರಣದ ಪರೀಕ್ಷಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಆದ ಆನ್ಯಾಯ ಖಂಡಿಸಿ ಮುಖ್ಯಮಂತ್ರಿ ಅವರ ಅಧಿಕೃತ ಗೃಹ ಕಚೇರಿ ‘ಕೃಷ್ಣಾ’ಗೆ ಮುತ್ತಿಗೆ ಹಾಕಲು ಎಬಿವಿಪಿ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಯತ್ನಿಸಿದ್ದಾರೆ. 2 ತಂಡಗಳಲ್ಲಿ ಆಗಮಿಸಿದ ಎಬಿವಿಪಿ ಕಾರ್ಯಕರ್ತರು ‘ಕೃಷ್ಣಾ’ ಕಚೇರಿ ಮುಂಭಾಗಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನ ತಡೆದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆ ಕೆಲಕಾಲ ಗಲಿಬಿಲಿ ವಾತಾವರಣ …
Read More »ಕೆಪಿಎಸ್‌ಸಿ ಹಗರಣ – 329 ಅಭ್ಯರ್ಥಿಗಳಿಗೆ ಸಿಐಡಿ ಶಾಕ್, ಇಂದೇ ವಿಚಾರಣೆಗೆ ಹಾಜರಾಗಲು ನೋಟಿಸ್!
ಬೆಂಗಳೂರು: ರ್ನಾಟಕ ಲೋಕಸೇವಾ ಆಯೋಗ ನಡೆಸಿರು ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಅಪರಾಧ ತನಿಖಾ ಇಲಾಖೆ ಅಧಿಕಾರಿಗಳು 329 ಅಭ್ಯರ್ಥಿಗಳಿಗೆ ಏಕಾಏಕಿ ನೋಟಿಸ್ ಜಾರಿ ಮಾಡಿದ್ದಾರೆ. ಜಾರಿ ನಿರ್ದೇಶನಾಲಯದ ಮುಂದೆ ಕೆಲವರು ಅಕ್ರಮ ನಡೆಸಿರುವುದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ಸಿಐಡಿ ಈ ಮಹತ್ವದ ಕ್ರಮ ಕೈಗೊಂಡಿದೆ. ನೋಟಿಸ್ ಪಡೆದಿರುವ ಎಲ್ಲಾ 329 ಅಭ್ಯರ್ಥಿಗಳು ಇಂದೇ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. …
Read More »ಸಿಗ್ನಲ್‌ನಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿಹೊಡೆದ ಕಾರು – 50 ಅಡಿ ಹಾರಿಬಿದ್ದು ಬೈಕ್ ಸವಾರ ಸಾವು
ಬೆಂಗಳೂರು: ವೇಗವಾಗಿ ಬಂದ ಕಾರೊಂದು ಸಿಗ್ನಲ್‌ನಲ್ಲಿ ನಿಂತಿದ್ದ ಮತ್ತೊಂದು ಕಾರು ಹಾಗೂ ಬೈಕ್‌ಗೆ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರದಲ್ಲಿ ನಡೆದಿದೆ. ನವೀನ್ (33) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ. ನವೀನ್ ವಿಜ್ಞಾನ ನಗರದ ಸಿಗ್ನಲ್‌ನಲ್ಲಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಮತ್ತೊಂದು ಕಾರು ಹಾಗೂ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ 50 …
Read More »ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ – ಕರಾವಳಿ, ಮಲೆನಾಡಿನ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ , ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗಲಿದೆ. ಅಲ್ಲದೇ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ …
Read More »ಸರಗಳ್ಳತನ ಮಾಡುವಾಗ ಜನರಿಂದ ಪೆಟ್ಟು ತಿಂದು ಪರಾರಿಯಾಗಿದ್ದ ರೌಡಿಶೀಟರ್ ಶವವಾಗಿ ಪತ್ತೆ
ಬೆಂಗಳೂರು: ಸರಗಳ್ಳತನ ಮಾಡುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದು, ಹಿಗ್ಗಾಮುಗ್ಗಾ ಗೂಸ ತಿಂದಿದ್ದ ರೌಡಿಶೀಟರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ತಾಲೂಕಿನ ದೊಡ್ಡೇರಿ ಗ್ರಾಮದ ಕೆರೆಯಲ್ಲಿ ಆತನ ಶವ ಪತ್ತೆಯಾಗಿದೆ. ಬ್ಯಾಟರಿ ಜಯಂತ್ ಸಾವನ್ನಪ್ಪಿದ ರೌಡಿಶೀಟರ್. ನೆಲಮಂಗಲದ ಕುಲುವನಹಳ್ಳಿ ಗೇಟ್ ಬಳಿ ಬ್ಯಾಟರಿ ಜಯಂತ್ ಹಾಗೂ ಯತೀಶ್ ಸೇರಿ ವೃದ್ಧೆಯೊಬ್ಬಳ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿದ್ದರು. ಈ ವೇಳೆ ಸಿಕ್ಕಿಬಿದ್ದು, ಸಾರ್ವಜನಿಕರ ಬಳಿ ಪೆಟ್ಟು ತಿಂದು ಪ್ರಜ್ಞೆ ತಪ್ಪಿದ್ದರು. ಇಬ್ಬರನ್ನೂ 108 …
Read More »ಕೊಡಗಿನಲ್ಲಿ ವರುಣನ ಅಬ್ಬರ – ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮಡಿಕೇರಿ: ರಾಜ್ಯದಲ್ಲಿ ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕಾವೇರಿಯ ತವರು ಕೊಡಗು ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾಗಮಂಡಲ ಹಾಗೂ ಬ್ರಹ್ಮಗಿರಿ ತಪ್ಪಲಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪರಿಣಾಮವಾಗಿ ಪವಿತ್ರ ತ್ರಿವೇಣಿ ಸಂಗಮ ಹಾಗೂ ಸಮೀಪದ ಉದ್ಯಾನವನ …
Read More »
Laxmi News 24×7