Breaking News

Monthly Archives: ಆಗಷ್ಟ್ 2026

ಮಂತ್ರಾಲಯದಲ್ಲಿ ಆ.27ರಿಂದ ರಾಯರ 355ನೇ ಆರಾಧನಾ ಮಹೋತ್ಸವ

ರಾಯಚೂರು: ಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ 7 ದಿನಕಾಲ ಗುರು ರಾಯರ 355ನೇ ಆರಾಧನಾ ಮಹೋತ್ಸವ  ಅದ್ಧೂರಿಯಾಗಿ ನಡೆಯಲಿದೆ ಅಂತ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದ್ದಾರೆ. ಮಂತ್ರಾಲಯದಲ್ಲಿ  ಮಾತನಾಡಿದ ಸುಬುಧೇಂದ್ರ ತೀರ್ಥ ಸ್ವಾಮಿಗಳು  ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿವೆ ಎಂದರು. ಆಗಸ್ಟ್ 29, 30, 31ರಂದು ಪರಿಮಳ ತೀರ್ಥ ಪುಷ್ಕರಣಿಯಲ್ಲಿ ಮೂರು ದಿನ ರಾತ್ರಿ ವೇಳೆ ತೆಪ್ಪೋತ್ಸವ ನಡೆಯಲಿದೆ. ಆಗಸ್ಟ್ 29ರಂದು ರಾಯರ …

Read More »

ಐಫೋನ್ EMI ವಿಚಾರಕ್ಕೆ ಕುಟುಂಬ ದುರಂತ ಅಂತ್ಯ?: ಮೃತ ಮಹಿಳೆಯ ಸಹೋದರಿ ಹೇಳಿದ್ದೇನು?

ಮುಂಬೈ: ಮಹಾರಾಷ್ಟ್ರದ ಛತ್ರಪತಿ  ಸಂಭಾಜಿನಗರ ಜಿಲ್ಲೆಯಲ್ಲಿ ಐಫೋನ್ ಇಎಂಐ ವಿಚಾರವಾಗಿ ಜಗಳವಾಗಿ ಒಂದೇ ಕುಟುಂಬದ ಮೂವರು ದುರಂತ ಅಂತ್ಯ  ಕಂಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ, ಈ ವಿಚಾರದ ಬಗ್ಗೆ ಕುಟುಂಬಸ್ಥರೊಬ್ಬರು ಇದೀಗ ಸ್ಪಷ್ಟನೆ ನೀಡಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಆಗಸ್ಟ್ 21ರಂದು ಈ ಘಟನೆ ನಡೆದಿತ್ತು. 19 ವರ್ಷದ ಕುನಾಲ್ ತಾನು ಖರೀದಿಸಿದ್ದ ಐಫೋನ್‌ನ ಇಎಂಐ ಪಾವತಿಸಲು ಸಾಧ್ಯವಾಗದೆ, ಮನೆಯವರ ಬಳಿ ಹಣದ ಸಹಾಯ …

Read More »

ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗವಕಾಶ; 20 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ  ಉದ್ಯೋಗ ಗಿಟ್ಟಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ ಇಲ್ಲಿದೆ. ಖಾಲಿ ಇರುವ 20 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ನ್ಯಾಯಾಂಗ ಕ್ಷೇತ್ರದಲ್ಲಿ ಸರ್ಕಾರಿ ನೌಕರಿ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹುದ್ದೆಯ ವಿವರಗಳು ಮತ್ತು ಶೈಕ್ಷಣಿಕ ಅರ್ಹತೆ: ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 20 ದ್ವಿತೀಯ ದರ್ಜೆ …

Read More »

ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ

ಬಾಗಲಕೋಟೆ: ಸಕ್ಕರೆ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು. ಸಕ್ಕರೆ ದಾಸ್ತಾನು ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ. ಸಕ್ಕರೆ ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ಇನ್ನೂ ಹೆಚ್ಚಾಗಿ ಪ್ರಾರಂಭಿಸಬೇಕು. ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ. ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ. 100 …

Read More »

ಈರುಳ್ಳಿ ಬೆಲೆ ದಿಢೀರ್​ ಏರಿಕೆ

ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳ ಸಂಭ್ರಮದಲ್ಲಿದ್ದ ಜನಸಾಮಾನ್ಯರಿಗೆ ಈರುಳ್ಳಿ ಬೆಲೆ ಏರಿಕೆ ಶಾಕ್​ ನೀಡಿದೆ. ನಿತ್ಯದ ಅಡುಗೆಯ ಅವಿಭಾಜ್ಯ ಅಂಗವಾಗಿರುವ ಈರುಳ್ಳಿಯನ್ನು ಕತ್ತರಿಸುವ ಮೊದಲೇ ಅದರ ದುಬಾರಿ ದರ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದು, ಕೆಲವೇ ದಿನಗಳಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜಿಗೆ ಶತಕ ಬಾರಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಬೆಲೆ ಏರಿಕೆಗೆ ಕಾರಣವೇನು? ರಾಜ್ಯದಲ್ಲಿ ಒಂದೆಡೆ ಮುಂಗಾರು ಮಳೆ ಕೊರತೆಯಿಂದ ಬರಗಾಲ ತಾಂಡವವಾಡುತ್ತಿದೆ. ಮಳೆ, ಬೆಳೆ ಇಲ್ಲದೇ …

Read More »

ಟಿಬಿ ಮುಕ್ತ ಭಾರತ ಅಭಿಯಾನ ಅತ್ಯಂತ ಶ್ಲಾಘನೀಯ

ಬೆಳಗಾವಿ : ಭಾರತವನ್ನು ಕ್ಷಯರೋಗ (ಟಿಬಿ) ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿಯಾನ ಅತ್ಯಂತ ಶ್ಲಾಘನೀಯವಾಗಿದೆ. ಇದಕ್ಕೆ ಪ್ರತಿಯೊಬ್ಬರು ಕೈ ಜೋಡಿಸುವ ಮೂಲಕ ಅಭಿಯಾನ ಯಶಸ್ವಿಗೊಳಿಸಬೇಕು ಎಂದು 26 ಕರ್ನಾಟಕ ಎನ್‌ಸಿಸಿ ಬಟಾಲಿಯನ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ಸುನೀಲ್ ದಾಗರ್ ಹೇಳಿದರು. ಜಾಧವ ನಗರದಲ್ಲಿನ 26 ಕರ್ನಾಟಕ ಎನ್‌ಸಿಸಿ ಬಟಾಲಿಯನ್‌ನಲ್ಲಿ ನಡೆಯುತ್ತಿರುವ ವಾರ್ಷಿಕ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿರುವ ಎನ್‌ಸಿಸಿ ಕೆಡೆಟ್‌ಗಳಿಗೆ ಭಾನುವಾರ ಟಿಬಿ ಮುಕ್ತ ಭಾರತ ಪ್ರತಿಜ್ಞಾವಿಧಿ …

Read More »

ಬೆಂಗ್ಳೂರಲ್ಲಿ ಭಾರತದ ಮೊದಲ ಬೀದಿನಾಯಿ ಶೆಲ್ಟರ್ ನಿರ್ಮಾಣ

ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದ ಬಳಿಕ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಡಾಗ್ ಶೆಲ್ಟರ್  ನಿರ್ಮಾಣ ಆಗಿದೆ. ಉತ್ತರ ನಗರ ಪಾಲಿಕೆಯ ಮೇಡಿ ಅಗ್ರಹಾರದಲ್ಲಿ ಡಾಗ್ ಶೆಲ್ಟರ್ ನಿರ್ಮಾಣ ಆಗಿದ್ದು, 500 ನಾಯಿಗಳಿಗೆ ಆಶ್ರಯ ನೀಡುವ ಸಾಮರ್ಥ್ಯ ಹೊಂದಿದೆ. ಬೀದಿನಾಯಿಗಳಿಗೆ ಶೆಲ್ಟರ್ ನಿರ್ಮಾಣ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ಮಾಡಿತ್ತು. ಕೋರ್ಟ್ ನಿರ್ದೇಶನದ ಬಳಿಕ ಇದೇ ಮೊದಲ ಬಾರಿಗೆ ಪ್ರಥಮ ಡಾಗ್ ಶೆಲ್ಟರ್ ಬೆಂಗಳೂರು ಉತ್ತರ ನಗರ ಪಾಲಿಕೆಯ ಮೇಡಿ …

Read More »

389 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗೋಳಿಕಟ್ಟಾ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ  ಅರಣ್ಯ ಒತ್ತುವರಿ ತೆರವಿಗೆ  ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅರಣ್ಯ ಇಲಾಖೆಗೆ ಸೇರಿದ 389.07 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದೆ. ಈ ಹಿಂದೆ ಗೋಳಿಕಟ್ಟಾದಲ್ಲಿ ಕಾಮಧೇನು ಹಾಲು ಹಾಗೂ ಹಣ್ಣು ಸಂಸ್ಕರಣಾ ಸಹಕಾರಿ ಸಂಘಕ್ಕೆ ಅರಣ್ಯ ಇಲಾಖೆ ತನ್ನ ಜಾಗವನ್ನು ಲೀಸ್ ನೀಡಿತ್ತು. ಲೀಸ್ ಮುಕ್ತಾಯವಾದರೂ ಜಾಗವನ್ನು ಬಿಟ್ಟುಕೊಟ್ಟಿರಲಿಲ್ಲ. ಈ ಸಂಬಂಧ ಧಾರವಾಡದ ಹೈಕೋರ್ಟ್ ಪೀಠದಲ್ಲಿ ದಾವೆ …

Read More »

ವಿದ್ಯುತ್ ಕಂಬಕ್ಕೆ ಪಿಕಪ್ ಡಿಕ್ಕಿ – ಮೂವರು ಕಾರ್ಮಿಕರ ದುರ್ಮರಣ, 15 ಮಂದಿಗೆ ಗಾಯ

ಯಾದಗಿರಿ: ವಿದ್ಯುತ್ ಕಂಬಕ್ಕೆ  ಬುಲೆರೋ ಪಿಕಪ್  ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು  ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಯಾದಗಿರಿ  ಜಿಲ್ಲೆಯ ಶಹಾಪುರ  ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ನಡೆದಿದೆ. ಭಾಗ್ಯಶ್ರೀ (35), ಸತ್ಯಮ್ಮ (30), ಹೊನ್ನಿಂಗಮ್ಮ (18) ಮೃತ ಕಾರ್ಮಿಕರು. ಚಾಲಕನ ನಿಯಂತ್ರಣ ತಪ್ಪಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಶಹಾಪುರ …

Read More »

ಹುಲಿ ಹೆಜ್ಜೆ ಪತ್ತೆ..! ಗಂಗಾವತಿಯಲ್ಲಿ ಟೈಗರ್‌ ಟೆನ್ಷನ್‌ – 20ಕ್ಕೂ ಹೆಚ್ಚು ಕ್ಯಾಮೆರಾ ಕಣ್ಗಾವಲು

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಭಾಗದ ಬೆಟ್ಟದ ಸಾಲುಗಳಲ್ಲಿ ಹುಲಿ ಕಾಣಿಸಿಕೊಂಡಿದೆ ಎಂಬ ಆತಂಕದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇದೀಗ ಎಚ್ಚೆತ್ತುಕೊಂಡಿದ್ದಾರೆ. ಗ್ರಾಮಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಎಚ್ಚರಿಕೆ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ. ಭಾನುವಾರ ಸಂಜೆಯಿಂದ ಆನೆಗೊಂದಿ ಸುತ್ತಮುತ್ತಲಿನ ಹಾಗೂ ಬೆಟ್ಟದ ಸಮೀಪದಲ್ಲಿರುವ ಜನವಸತಿ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಾಹನಗಳ ಮೂಲಕ ಸಂಚರಿಸಿ ಧ್ವನಿವರ್ಧಕದ ಮೂಲಕ ಜಾಗೃತಿ ಸಂದೇಶ ನೀಡುತ್ತಿದ್ದಾರೆ. ಒಂಟಿಯಾಗಿ ಸಂಚರಿಸದಂತೆ ಹಾಗೂ ಜಾನುವಾರುಗಳನ್ನ ಮೇಯಿಸಲು ಬೆಟ್ಟದ …

Read More »