ನವದೆಹಲಿ: ಭಾರತದ ವಾಯುಪಡೆಯ ಗೇಮ್‌ಚೇಂಜರ್ ಅಂತಲೇ ಖ್ಯಾತಿಗಳಿಸಿರುವ ಸ್ವದೇಶಿ ನಿರ್ಮಿತ ತೇಜಸ್ ಎಂಕೆ-2 ಫೈಟರ್ ಜೆಟ್‌ಗಳ ಕಾರ್ಯಕ್ಷಮತೆ, ದಕ್ಷತೆಯನ್ನು ಇತ್ತೀಚೆಗಷ್ಟೇ ವಾಯಪಡೆಯಿಂದ ನಿವೃತ್ತರಾಗಿರುವ ಮಾಜಿ ಉಪಮುಖ್ಯಸ್ಥ ನಾಗೇಶ್ ಕಪೂರ್ ಟೀಕಿಸಿದ್ದಾರೆ. ಭಾರತದಲ್ಲೇ ತಯಾರಾಗುತ್ತಿರುವ ತೇಜಸ್ ಎಂಕೆ-2 (ಮಾರ್ಕ್-2) ಯುದ್ಧ ಚಿಮಾನವು 2030ರ ದಶಕದ ಮಧ್ಯಭಾಗದಲ್ಲಿ ಗಣ ಸಂಖ್ಯೆಯಲ್ಲಿ ಸೇವೆಗೆ ಸೇರ್ಪಡೆಯಾಗುವ ವೇಳೆಗೆ, ಮುಂಚೂಣಿ ಕಾರ್ಯಾಚರಣೆಗಳಿಗೆ ಪ್ರಸ್ತುತವಾಗದೇ ಇರಬಹುದು ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಚೀನಾ ಈಗಾಗಲೇ 6ನೇ ತಲೆಮಾರಿನ ಯುದ್ಧ ವಿಮಾನಗಳತ್ತ …
Read More »Monthly Archives: ಆಗಷ್ಟ್ 2026
ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಕೊಲೆ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳದ ಮುಖ್ಯರಸ್ತೆಯಲ್ಲಿ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಂಗಮ್ಮನಪಾಳ್ಯದ ನಿವಾಸಿ, ಮೆಡಿಕಲ್ ಶಾಪ್ ನಡೆಸುತ್ತಿದ್ದ ಸುಹೇಲ್ ಕೊಲೆಯಾದ ದುರ್ದೈವಿ. ಶನಿವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಸುಹೇಲ್ ಮಡಿವಾಳದಿಂದ ಕೊರಮಂಗಲ ಕಡೆಗೆ ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಟ್ರಾಫಿಕ್ ಜಾಮ್‌ನಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದಾಗ, ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳ ಗ್ಯಾಂಗ್ ಏಕಾಏಕಿ ತಲ್ವಾರ್‌ಗಳಿಂದ …
Read More »ಆಟವಾಡುತ್ತಾ ಕೀ ಆನ್ ಮಾಡಿದ ಮಗು – ಟ್ರ್ಯಾಕ್ಟರ್ ಮೈಮೇಲೆ ಹರಿದು ತಂದೆ ದಾರುಣ ಸಾವು
ಹಾಸನ: ಮೂರು ವರ್ಷದ ಮಗು ಆಟವಾಡುತ್ತಾ ಟ್ರ್ಯಾಕ್ಟರ್ ಕೀ ಆನ್ ಮಾಡಿದ ಪರಿಣಾಮ ತಂದೆಯ ಮೇಲೆ ಚಕ್ರ ಹರಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ನಡೆದಿದೆ. ಯಶ್ವಂತ್ (37) ಟ್ರಾಕ್ಟರ್ ಹರಿದು ಸಾವನ್ನಪ್ಪಿದ ವ್ಯಕ್ತಿ. ಸಾರಿಗೆ ಸಂಸ್ಥೆಯ ನೌಕರರಾಗಿದ್ದ ಅವರು, ಅರಕಲಗೂಡು ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಹೊಸ ಮನೆ ಕಟ್ಟಿಸುತ್ತಿದ್ದ ಯಶ್ವಂತ್, ವರಮಹಾಲಕ್ಷ್ಮೀ ಹಬ್ಬದ ದಿನದಂದು ಆರ್‌ಸಿಸಿಗಾಗಿ ಟ್ರಾಕ್ಟರ್‌ನಲ್ಲಿ ಸೆಂಟ್ರಿಂಗ್ ಸಾಮಾಗ್ರಿಗಳನ್ನು ತರಿಸಿದ್ದರು. ಈ …
Read More »ಕರಾವಳಿಯಲ್ಲಿ ಪನಾಮ ಧ್ವಜ ಹೊತ್ತ ಹಡಗು ಮುಳುಗಡೆ – ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ
ಭುವನೇಶ್ವರ: ಒಡಿಶಾದ ಪ್ಯಾರದೀಪ್ ಕರಾವಳಿಯಿಂದ ಸುಮಾರು 240 ನಾಟಿಕಲ್ ಮೈಲು (444 ಕಿಮೀ) ದೂರದಲ್ಲಿರುವ ಬಂಗಾಳ ಕೊಲ್ಲಿಯಲ್ಲಿ ಪನಾಮ ಧ್ವಜ ಹೊತ್ತ ಹಡಗು ಮುಳುಗಡೆಯಾಗಿದೆ. ಹಡಗಿನಲ್ಲಿದ್ದ 24 ಮಂದಿಯಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ. 22 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕಬ್ಬಿಣದ ಅದಿರಿನ ಸರಕುಗಳನ್ನ ತುಂಬಿಕೊಂಡು ಒಡಿಶಾದಿಂದ ಸಿಂಗಾಪುರದ ಕಡೆಗೆ ಹಡಗು ಸಾಗುತ್ತಿತ್ತು. ಹಡಗು ಮುಂದಿನ ಪ್ರಯಾಣ ಆರಂಭಿಸುವುದಕ್ಕೂ ಮುನ್ನ ಆ.20 ರಂದು ಪ್ಯಾರದೀಪ್ ಕರಾವಳಿಗೆ ತಲುಪಿತ್ತು. ಇಲ್ಲಿಂದ …
Read More »ನಕಲಿ ಔಷಧ ಜಾಲದ ಕಿಂಗ್‌ಪಿನ್ ವಿದೇಶದಲ್ಲಿ ಲಾಕ್!
ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನಕಲಿ ಹಾಗೂ ಕಳಪೆ ಔಷಧ ಮಾರಾಟ ಜಾಲಕ್ಕೆ ಅಂತಾರಾಷ್ಟ್ರೀಯ ನಂಟು ಇರುವುದು ಬಯಲಾಗಿದ್ದು, ಪ್ರಕರಣದ ಪ್ರಮುಖ ರೂವಾರಿ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಪಶ್ಚಿಮ ಏಷ್ಯಾದ ದೇಶವೊಂದರ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಪಶ್ಚಿಮ ಏಷ್ಯಾದ ದೇಶದಲ್ಲಿ ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳ ಔಷಧಗಳು ಅತ್ಯಂತ ಕಡಿಮೆ ಬೆಲೆಗೆ ದೊರೆಯುತ್ತವೆ. ಈ ಹಿನ್ನೆಲೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಔಷಧಗಳನ್ನು ಅಕ್ರಮವಾಗಿ …
Read More »ಬೆಂಗಳೂರು: 200 ರೂ. ಕೊಡ್ಲಿಲ್ಲ ಅಂತ ಮಂಗಳಮುಖಿ ಬರ್ಬರ ಹತ್ಯೆ – ಆರೋಪಿ ಅರೆಸ್ಟ್
ಬೆಂಗಳೂರು: 200 ರೂಪಾಯಿ ಕೊಡಲಿಲ್ಲ ಅಂತ ಮಂಗಳಮುಖಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ದೇವಿ ಕೊಲೆಯಾದ ಮಂಗಳಮುಖಿ. ಕೊಲೆ ಆರೋಪಿ ಗೌತಮ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಕೊಲೆಯಾಗಿದೆ. ಚಾಕುವಿನಿಂದ ಮಂಗಳಮುಖಿ ಕುತ್ತಿಗೆ ಸೀಳಿ ಕೊಲೆ ಮಾಡಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ರಾಮಮೂರ್ತಿ ನಗರ ನಿವಾಸಿಯಾಗಿರುವ ಗೌತಮ್ ರಾಬರಿ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ. ದರೋಡೆ …
Read More »ಪತ್ನಿ ಕುಟುಂಬಸ್ಥರಿಂದ ಥಳಿತ; ಸಾಫ್ಟ್‌ವೇರ್ ಕಂಪನಿಯಲ್ಲಿ ವರ್ಷಕ್ಕೆ 60 ಲಕ್ಷ ಪ್ಯಾಕೇಜ್ ಹೊಂದಿದ್ದ ಟೆಕ್ಕಿ ಸಾವು
ನವದೆಹಲಿ: ಮಗುವಿಗೆ ಔಷಧಿ ನೀಡುವ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಜಗಳವಾಗಿದ್ದು, ಪತ್ನಿ ಕುಟುಂಬಸ್ಥರಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಟೆಕ್ಕಿ ಸಾವನ್ನಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ 31 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ವಿನಯ್ ಗುಪ್ತಾ ಕೊಲೆಯಾದ ಟೆಕ್ಕಿ. ಅವರ ಅತ್ತೆ-ಮಾವ ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ವಿನಯ್ ಗುಪ್ತಾ ಮತ್ತು ಅವರ ಪತ್ನಿ ರೇಖಾ ನಡುವೆ ತಮ್ಮ ಮಗುವಿಗೆ ಔಷಧಿ ನೀಡುವ ಬಗ್ಗೆ ವಾಗ್ವಾದ ನಡೆದಿದೆ. ಈ ಸಮಯದಲ್ಲಿ, ರೇಖಾ ತನ್ನ ಕುಟುಂಬ …
Read More »105 ವರ್ಷದ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂ
ನವದೆಹಲಿ: 1988ರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 105 ವರ್ಷದ ರಸಿಕ್ ಚಂದ್ರ ಮಂಡಲ್ ಅವರಿಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿ ಮಹತ್ವದ ಆದೇಶ ಹೊರಡಿಸಿದೆ. ವೃದ್ಧಾಪ್ಯ ಹಾಗೂ ಆರೋಗ್ಯ ಸಮಸ್ಯೆಗಳನ್ನು ಪರಿಗಣಿಸಿದ ನ್ಯಾಯಾಲಯ, ಉಳಿದಿರುವ ಜೀವಾವಧಿ ಶಿಕ್ಷೆಯನ್ನು ಮನ್ನಾ ಮಾಡಿ ಅವರನ್ನು ಮತ್ತೆ ಜೈಲಿಗೆ ಕಳುಹಿಸದಂತೆ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಹಾಗೂ ವಿ. ಮೊಹನಾ ಅವರಿದ್ದ ಪೀಠವು ಪ್ರಕರಣವನ್ನು …
Read More »ಯುವ ಮತದಾರರತ್ತ ಬಿಜೆಪಿ ಚಿತ್ತ – ‘Gen Z’ ಸಂಪರ್ಕಕ್ಕೆ ವಿಶೇಷ ತಂಡ
ನವದೆಹಲಿ: ಯುವಜನತೆ ಅದರಲ್ಲೂ Gen Z ಮತದಾರರೊಂದಿಗೆ ನೇರ ಸಂಪರ್ಕ ಸಾಧಿಸುವ ಉದ್ದೇಶದಿಂದ ಬಿಜೆಪಿ ವಿಶೇಷ ತಂಡವೊಂದನ್ನು ರಚಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ನೇತೃತ್ವದಲ್ಲಿ ರೂಪಿಸಿರುವ ತಂಡದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸ್ಮೃತಿ ಇರಾನಿ ಮತ್ತು ವಿನೋದ್ ತಾವಡೆ ಸೇರಿದಂತೆ ಹಲವು ಪ್ರಮುಖ ನಾಯಕರು ಸ್ಥಾನ ಪಡೆದಿದ್ದಾರೆ. ಗುಜರಾತ್ ಸಚಿವ ಹರ್ಷ್ ಸಾಂಘ್ವಿ ಹಾಗೂ ಛತ್ತೀಸ್‌ಗಢ ಸಚಿವ ಒ.ಪಿ. ಚೌಧರಿ ಕೂಡ ತಂಡದ ಭಾಗವಾಗಿದ್ದಾರೆ ಎಂದು ಪಕ್ಷದ …
Read More »ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ – ಪ್ರಮುಖ ಆರೋಪಿ ನ್ಯಾಯಾಂಗ ಬಂಧನಕ್ಕೆ, ನಾಲ್ವರು ಪೇದೆ ಅಮಾನತು
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ನಡೆದಿದ್ದ ಯುವತಿ ಅತ್ಯಾಚಾರ & ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜೊತೆಗೆ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ನಾಲ್ಕು ಜನ ಪೇದೆಗಳನ್ನು ಅಮಾನತು ಮಾಡಿದ್ದಾರೆ. ಹೊಕ್ರಾಣಿ ಗ್ರಾಮದ ಅಶ್ವಿನಿ (21) ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿತ್ತು. ಇದೀಗ ನಾಲ್ಕು ಜನ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಮುಖ ಆರೋಪಿ …
Read More »
Laxmi News 24×7