ಬೆಂಗಳೂರು: ವಾಲ್ಮೀಕಿ ನಿಗಮದಿಂದ ಆರಂಭವಾಗಿ ಬೆಂಗಳೂರು ರಸ್ತೆ ಗುಂಡಿಗಳನ್ನ ತುಂಬಲು ಲಕ್ಷಾಂತರ ಕೋಟಿವರೆಗೆ ಲೂಟಿ ನಡೆಯುತ್ತಿದೆ. ಸಿಕ್ಕ ಸಿಕ್ಕ ಕಡೆಯಲ್ಲಿ ಲೂಟಿ ಮಾಡುವ ಕಾಂಗ್ರೆಸ್ ಭ್ರಷ್ಟಾಚಾರ ಮಾಡದೇ ಬದುಕುವುದೇ ಇಲ್ಲ ಅಂತ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಾಗೂ ಅಧಿಕಾರಿಗಳು ಲೂಟಿ ಮಾಡುತ್ತಿದ್ದಾರೆ. ಅಧಿಕಾರಿಗಳು ಲೂಟಿ ಮಾಡಲು ಸರ್ಕಾರವೇ ಅವಕಾಶ ನೀಡುತ್ತಿದೆ. …
Read More »Monthly Archives: ಆಗಷ್ಟ್ 2026
ಕೇಂದ್ರ ಸಚಿವರಾಗಿ ಟೋಲ್ ಕಟ್ಟಬೇಡಿ ಅಂತ ಪ್ರಚೋದನೆ ಕೊಡೋದು ಸರಿಯಲ್ಲ: ಪ್ರಿಯಾಂಕ್ ಖರ್ಗೆ ಕಿಡಿ
ಬೆಂಗಳೂರು: ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ಅವರು ಟೋಲ್ ಕಟ್ಟಬೇಡಿ ಅಂತ ಪ್ರಚೋದನೆ ಮಾಡೋದು ಸರಿಯಲ್ಲ ಅಂತ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ , ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾತಾಡಿದ ಅವರು, ನೈಸ್ ಟೋಲ್ ಕಟ್ಟಬೇಡಿ ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇರೋರು ಹೀಗೆ ಹೇಳೋದು ಸರಿಯಲ್ಲ. ಟೋಲ್ ಕಟ್ಟಬೇಡಿ ಅಂತ ಸಾರ್ವಜನಿಕರಿಗೆ ಪ್ರಚೋದನೆ ಕೊಟ್ಟರೆ ಹೇಗೆ? ಏನೇ ಇದ್ದರೂ ಕೋರ್ಟ್ ಇದೆ. ಕೇಂದ್ರದಲ್ಲಿ ಅವರದ್ದೇ …
Read More »ರಾಜ್ಯದಲ್ಲಿ ಬರ ಘೋಷಿಸಿ, 10 ಸಾವಿರ ಕೋಟಿ ಪ್ಯಾಕೇಜ್ ನೀಡಿ: ರವಿಕುಮಾರ್ ಆಗ್ರಹ
ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು. 10 ಸಾವಿರ ಕೋಟಿ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಸರ್ಕಾರವನ್ನ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಮುಂಗಾರು ಮಳೆ ಕಳೆದುಕೊಂಡಿದ್ದಾರೆ. ಇಡೀ ರಾಜ್ಯದಲ್ಲಿ ದನಕರುಗಳಿಗೆ ಕುಡಿಯಲು ನೀರಿಲ್ಲ. ರೈತರು ಕಂಗಾಲಾಗಿ ಗುಳೆ ಹೋಗುತ್ತಿದ್ದಾರೆ. ರೈತರ ಪರವಾಗಿ ಒಂದು ನಿರ್ಧಾರ ಮಾಡಿಲ್ಲ ಈ ಸರ್ಕಾರ. ಕರ್ನಾಟಕ ರಾಜ್ಯದಲ್ಲಿ ಬರ ಇದೆ …
Read More »ಇದು ದಲಿತರನ್ನು ರಕ್ಷಿಸದ ಸರ್ಕಾರ: ಛಲವಾದಿ ಕಿಡಿ
ಬೆಂಗಳೂರು: ಈ ಸರ್ಕಾರದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ ಜಾಸ್ತಿ ಆಗಿದೆ. ಇದು ದಲಿತರನ್ನು ರಕ್ಷಿಸದ ಸರ್ಕಾರ ಎಂದು ವಿಧಾನಪರಿಷತ್ತಿನ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿ (BJP) ಕಚೇರಿಯಲ್ಲಿ ಮಾತಾಡಿದ ಅವರು, ದಲಿತರ ಮೇಲೆ ದೌರ್ಜನ್ಯ, ಜಾತಿ ನಿಂದನೆ ಹೆಚ್ಚಿದೆ. ದಲಿತರ ರಕ್ಷಣೆಗೆ ಸರ್ಕಾರ ಬಂದಿಲ್ಲ. ದೇವದುರ್ಗ ದಲಿತ ಅನ್ನೋ ಕಾರಣಕ್ಕೆ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಅತ್ಯಾಚಾರ ಕೊಲೆ ಮಾಡುತ್ತಿದ್ದಾರೆ. ಗೃಹ ಇಲಾಖೆ ಕಣ್ಣು ಮುಚ್ಚಿ ಕೂತಿದೆ. …
Read More »ಬರಗಾಲದ ಎಫೆಕ್ಟ್ – ಗಗನಕ್ಕೇರಿದ ‘ಸಕ್ಕರೆ ನಾಡಿನ’ ಬೆಲ್ಲದ ಬೆಲೆ
ಮಂಡ್ಯ: ಮಂಡ್ಯದ ಕಂಪು ಖ್ಯಾತಿಯ ಅಚ್ಚ ಬೆಲ್ಲ ಈಗ ಅಕ್ಷರಶಃ ಬಂಗಾರವಾಗಿದೆ. ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರಗಾಲದ ಛಾಯೆ ಕಾವೇರಿ ನಾಡಿನ ರೈತರನ್ನು ಹೈರಾಣಾಗಿಸಿದ್ದು, ಇದರ ನೇರ ಬಿಸಿ ಈಗ ಮಾರುಕಟ್ಟೆಯಲ್ಲಿ ಬೆಲ್ಲದ ಬೆಲೆ ಮೇಲೆ ತಟ್ಟಿದೆ. ಇತಿಹಾಸದಲ್ಲೇ ಎಂದೂ ಕಾಣದ ರೀತಿಯಲ್ಲಿ ಮಂಡ್ಯದ ಬೆಲ್ಲದ ದರ ದಾಖಲೆಯ ಏರಿಕೆ ಕಂಡಿದೆ. ಬೆಲೆ ಜಿಗಿತ: ಈ ಹಿಂದೆ ಕ್ವಿಂಟಾಲ್‌ಗೆ 4,500 ರೂ. ಇದ್ದ ಬೆಲ್ಲದ ದರ, ಕಳೆದ ಎರಡಮೂರು ದಿನಗಳಲ್ಲಿ ಬರೋಬ್ಬರಿ …
Read More »ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ಪಾತ್ರವಿಲ್ಲ – ಸಿಎಂ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ ಸಮರ್ಥನೆ
ಮಡಿಕೇರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ 8 ಎಫ್‌ಐಆರ್‌ಗಳ ತನಿಖೆ ಪೂರ್ಣಗೊಂಡಿದ್ದು, ಸಿಐಡಿ ಚಾರ್ಜ್‌ಶೀಟ್ ಸಲ್ಲಿಸಿದೆ ಎಂದು ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್ ಪೊನ್ನಣ್ಣ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಸಿಐಡಿ ತನಿಖೆಯಲ್ಲಿ ಸಚಿವ ನಾಗೇಂದ್ರ ಅವರ ಪಾತ್ರಕ್ಕೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ನಿಗಮದ ಹಣ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿರುವುದು, ಹಣದ ದುರುಪಯೋಗ, ನಂತರ ಹಣ ವಾಪಸ್ ಪಡೆಯಲಾಗಿರುವ ಕುರಿತು …
Read More »ರಂಗನಾಥಸ್ವಾಮಿ ಮುಂದೆ ಪುತ್ರ ಪ್ರಜ್ವಲ್‌ನನ್ನು ನೆನೆದು ಕಣ್ಣೀರಿಟ್ರಾ ಭವಾನಿ ರೇವಣ್ಣ?
ಹಾಸನ: ಹೊಳೆನರಸೀಪುರದ ಬೆಟ್ಟದ ಮಾವಿನಕೆರೆ ರಂಗನಾಥಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದ ಭವಾನಿ ರೇವಣ್ಣ ಅವರು ಪೂಜೆ ವೇಳೆ ಕಣ್ಣೀರಿಟ್ಟಿದ್ದಾರೆ. ಎರಡನೇ ಶ್ರಾವಣ ಶನಿವಾರದ ಹಿನ್ನೆಲೆ ರಂಗನಾಥಸ್ವಾಮಿ ದೇವಾಲಯಕ್ಕೆ ಭವಾನಿ ರೇವಣ್ಣ ಅವರು ಕುಟುಂಬಸ್ಥರ ಜೊತೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕುಟುಂಬದ ಸದಸ್ಯರ ಜೊತೆ ರಂಗನಾಥಸ್ವಾಮಿಗೆ ಅಭಿಷೇಕ ನೆರವೇರಿಸಿದರು. ಸುಮಾರು ಒಂದು ಗಂಟೆ ಕಾಲ ಗರ್ಭಗುಡಿಯಲ್ಲಿ ಕುಳಿತು ಪೂಜೆ ನೆರವೇರಿಸಿದರು. ಪೂಜೆ ವೇಳೆ ಅವರು ಕಣ್ಣೀರಿಟ್ಟರು. ಜೈಲಲ್ಲಿರುವ ಪುತ್ರ ಮಾಜಿ …
Read More »ಹಂಪಿಯ ತುಂಗಭದ್ರಾ ನದಿಯಲ್ಲಿ ಕಾಲುಜಾರಿ ಬಿದ್ದು ತಾಯಿ, ಮಗಳು ನಾಪತ್ತೆ
ಬಳ್ಳಾರಿ: ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿರುವ ಘಟನೆ ವಿಜಯನಗರ (Vijayanagara) ಜಿಲ್ಲೆ ಹೊಸಪೇಟೆ (Hospet) ತಾಲೂಕಿನ ಹಂಪಿಯಲ್ಲಿ ನಡೆದಿದೆ. ಯಾಸ್ಮೀನ್(13) ಹಾಗೂ ಶಾಹೀನ್(38) ಹಂಪಿ ಬಳಿಯ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿರುವ ತಾಯಿ, ಮಗಳು. ಆಂಧ್ರ ಪ್ರದ್ರೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದಿಂದ ಸಂಬಂಧಿಕರೊಂದಿಗೆ ತಾಯಿ, ಮಗಳು ಪ್ರವಾಸಕ್ಕೆ ಬಂದಿದ್ದರು. ಅಡುಗೆ ಮಾಡಿ ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಸ್ನಾನಕ್ಕೆ ತೆರಳಿದ್ಧ ವೇಳೆ ದುರ್ಘಘಟನೆ ಸಂಭವಿಸಿದೆ. ಕಾಲುಜಾರಿ ನದಿಯಲ್ಲಿ …
Read More »ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ – ದಾಖಲೆಗಳು ಭಸ್ಮ
ರಾಯಚೂರು: ಲಿಂಗಸುಗೂರು ಪಟ್ಟಣದಲ್ಲಿನ ರೇಷ್ಮೆ ಇಲಾಖೆಯ ತಾಲೂಕು ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡ ಹೊತ್ತಿ ಉರಿದಿದೆ. ಇಂದು (ಆ.22) ಬೆಳಗ್ಗೆ ಈ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕನೇ ಶನಿವಾರ ಸರ್ಕಾರಿ ರಜಾ ದಿನ ಹಿನ್ನೆಲೆ ಕಚೇರಿಗೆ ಬೀಗ ಹಾಕಲಾಗಿತ್ತು. ಈ ವೇಳೆ ಅಗ್ನಿ ಅವಘಡ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕಚೇರಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಪೀಠೋಪಕರಣಗಳು, ಕಂಪ್ಯೂಟರ್‌ಗಳು, …
Read More »ಉರುಳಿಗೆ ಸಿಕ್ಕ ಚಿರತೆಯನ್ನು ಸುಟ್ಟು ವಿಡಿಯೋ ಹಂಚಿಕೊಂಡ ಯುವಕರು – ಮೂವರು ಅರೆಸ್ಟ್
ತುಮಕೂರು: ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳಿಗೆ ತಿಳಿಸದೇ ಗ್ರಾಮಸ್ಥರೇ ಸುಟ್ಟು ಹಾಕಿದ ಘಟನೆ ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಚಿರತೆ ಸುಡುವ ವಿಡಿಯೋ ವೈರಲ್ ಆಗಿದ್ದು, ಮೂವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಗೌರಗೊಂಡನಹಳ್ಳಿಯ ಜಿ.ಡಿ.ಶಿವಕುಮಾರ್, ನಾರಾಯಣಪ್ಪ ಹಾಗೂ ಚಂದ್ರಶೇಖರ್ ಬಂಧಿತ ಆರೋಪಿಗಳು. ನಾರಾಯಣಪ್ಪನ ಹೊಲಕ್ಕೆ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಉರುಳು ಹಾಕಿದ್ದ. ಇತ್ತೀಚೆಗೆ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿತ್ತು. ಬಳಿಕ ಗ್ರಾಮಸ್ಥರು ಚಿರತೆಯನ್ನು ಸುಟ್ಟು …
Read More »
Laxmi News 24×7