ಬೆಂಗಳೂರು: 7ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿ, ಯುವಕ ಗಂಭಿರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ನಡೆದಿದೆ. ಜನನಿ ಮೃತ ಯುವತಿ, ಈಕೆ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಳು ಎಂದು ತಿಳಿದುಬಂದಿದೆ. ಮಾಣಿಕ್ಯ ವೇಲು ಗಂಭೀರವಾಗಿ ಗಾಯಗೊಂಡ ಯುವಕ. ಆತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Read More »Monthly Archives: ಆಗಷ್ಟ್ 2026
ಪಿಡಿಒ ದಂಪತಿ ಮನೆಯಲ್ಲಿ 1.42 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ
ಶಿವಮೊಗ್ಗ: ಇಲ್ಲಿನ ವಿದ್ಯಾನಗರದಲ್ಲಿ ವಾಸವಾಗಿದ್ದ ಪಿಡಿಒ ದಂಪತಿ ಮನೆಯಲ್ಲಿ 1.42 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ವಿದ್ಯಾನಗರದ 4ಎ ಕ್ರಾಸ್‌ನಲ್ಲಿ ಬಾಡಿಗೆ ಮನೆಯಲ್ಲಿ ಪಿಡಿಒ ದಂಪತಿ ವಾಸವಾಗಿದ್ದರು. ಎಂದಿನಂತೆ ದಂಪತಿ ಕರ್ತವ್ಯಕ್ಕೆ ತೆರಳಿದ್ದಾಗ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. ಮನೆ ಬೀಗ ಮುರಿದು, ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ಮನೆ ಕಳ್ಳತನ ಹಾಗೂ ಕಳ್ಳ ಪರಾರಿಯಾದ ದೃಶ್ಯ ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೇವಲ 30 ನಿಮಿಷದಲ್ಲಿ 943 ಗ್ರಾಂ …
Read More »ದೌರ್ಜನ್ಯದ ರೂಪದಲ್ಲಿ ನನ್ನ ರಾಜೀನಾಮೆ ಪಡೆದಿದ್ದು ಬಹಳ ನೋವು ತಂದಿದೆ: ಬಸವರಾಜ ಹೊರಟ್ಟಿ
ಗದಗ: ನನ್ನ ರಾಜೀನಾಮೆ ಪಡೆಯಲು ಸ್ವತಃ ಸಿಎಂ ಅವರೇ ಸ್ಪೀಕರ್ ಕಚೇರಿಗೆ ಬಂದು ಬಾಗಿಲು ಹಾಕಿಕೊಂಡು ಒಂದೂವರೆ ಗಂಟೆ ಕುಳಿತು, ದೌರ್ಜನ್ಯದ ರೀತಿಯಲ್ಲಿ ರಾಜೀನಾಮೆ ಪಡೆದರು. ಇದು ನನಗೆ ಬಹಳ ನೋವು ತಂದಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಕಾರ್ಯಕರ್ತರ ಜೊತೆ ಮಾತನಾಡಿದ ಹೊರಟ್ಟಿ, ಸಿಎಂ ಡಿ.ಕೆ. ಶಿವಕುಮಾರ್ ನಡೆ ಬಗ್ಗೆ ಬೇಸರ ವ್ಯಕ್ತಪಡಿಸಿದರು. …
Read More »ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಹಜ್ ಯಾತ್ರೆಗೆ ಹೋಗುವ ಆಸೆಯಿದೆ: ಬಸವರಾಜ ರಾಯರೆಡ್ಡಿ
ಕೊಪ್ಪಳ: ಜಗತ್ತಿನಲ್ಲಿ ಇಸ್ಲಾಂ ಅತ್ಯಂತ ಶ್ರೇಷ್ಠ ಹಾಗೂ ವೈಜ್ಞಾನಿಕವಾದ ಧರ್ಮವಾಗಿದ್ದು, ನನಗೆ ಮಕ್ಕಾ-ಮದೀನಾದ ಹಜ್ ಯಾತ್ರೆಗೆ ಹೋಗುವ ತೀವ್ರ ಆಸೆಯಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಹೇಳಿದ್ದಾರೆ. ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಧರ್ಮ ಹಾಗೂ ಧಾರ್ಮಿಕ ಆಚರಣೆಗಳ ಕುರಿತು ಹಲವು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಇಸ್ಲಾಂ ಧರ್ಮದ ಬಗ್ಗೆ ಸಮಾಜದಲ್ಲಿ ತಪ್ಪು ಕಲ್ಪನೆಗಳನ್ನು ಹರಡಲಾಗುತ್ತಿದೆ. ಆದರೆ ಇಸ್ಲಾಂ ಅತ್ಯಂತ …
Read More »ರೈಲಿನಲ್ಲಿ ಮಹಿಳೆಯ ಅರೆಬೆತ್ತಲೆ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ
ಧಾರವಾಡ: ಸೋಲ್ಲಾಪುರದಿಂದ ಧಾರವಾಡಕ್ಕೆ ಬಂದಿದ್ದ ರೈಲಿನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಳೆದ ರಾತ್ರಿ ಮಹಾರಾಷ್ಟ್ರದ ಸೊಲ್ಲಾಪೂರದಿಂದ ಹೊರಟಿದ್ದ ರೈಲು ಬೆಳಗ್ಗೆ ಧಾರವಾಡ ತಲುಪಿತ್ತು. ಈ ರೈಲಿನಲ್ಲಿ ರಾತ್ರಿ ಸಮಯದಲ್ಲಿ ಮಹಿಳೆಯ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ರೈಲ್ವೆ ಸಿಬ್ಬಂದಿ ಬೋಗಿ ಸ್ವಚ್ಛ ಮಾಡಲು ಬಂದಾಗ ಶವ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ. ಬಳಿಕ ಸಿಬ್ಬಂದಿ ರೇಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಮಹಿಳೆ ಯಾರು …
Read More »ದೀರ್ಘಾವಧಿಯ ಯುರೇನಿಯಂ ಒಪ್ಪಂದಕ್ಕೆ ಭಾರತ-ಉಜ್ಬೇಕಿಸ್ತಾನ್ ಸಹಿ
ತಾಷ್ಕೆಂಟ್: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮುಖ ಭೇಟಿ ಯಶಕಂಡಿದೆ. ಭಾರತ ಮತ್ತು ಉಜ್ಬೇಕಿಸ್ತಾನ್ ದೀರ್ಘಾವಧಿಯ ಯುರೇನಿಯಂ ಒಪ್ಪಂದಕ್ಕೆ ಸಹಿ ಹಾಕಿವೆ. ಭಾರತವು ವರ್ಷಗಳಲ್ಲಿ ತನ್ನ ಅತ್ಯಂತ ಪ್ರಮುಖ ಪರಮಾಣು ಇಂಧನ ವಿಜಯಗಳಲ್ಲಿ ಒಂದಾಗಬಹುದಾದದನ್ನು ಪಡೆದುಕೊಂಡಿದೆ. ಭಾರತ ಮತ್ತು ಉಜ್ಬೇಕಿಸ್ತಾನ್ ದೀರ್ಘಾವಧಿಯ ಯುರೇನಿಯಂ ಪೂರೈಕೆ ವ್ಯವಸ್ಥೆಯನ್ನು ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಭಾನುವಾರ ದೃಢಪಡಿಸಿದ್ದಾರೆ. ಇದು ಭಾರತದ ಪರಮಾಣು ವಿದ್ಯುತ್ ಯೋಜನೆಗಳನ್ನು ದೀರ್ಘಾವಧಿಯವರೆಗೆ ಟ್ರ್ಯಾಕ್‌ನಲ್ಲಿಡಲು ಸಹಾಯ ಮಾಡುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ …
Read More »ಈ ಬಾರಿಯ ಬಿಗ್ ಬಾಸ್ ನನಗೆ ತುಂಬಾ ವಿಶೇಷ: ಶೂಟಿಂಗ್ ಗುಟ್ಟು ಬಿಚ್ಚಿಟ್ಟ ಕಿಚ್ಚ ಸುದೀಪ್
ಬೆಂಗಳೂರು: ಬಹುನಿರೀಕ್ಷಿತ ಬಿಗ್ ಬಾಸ್ ಕನ್ನಡದ ಹೊಸ ಸೀಸನ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯ ಬಿಗ್ ಬಾಸ್ ಹಲವು ಕಾರಣಗಳಿಂದ ತಮಗೆ ಬಹಳ ವಿಶೇಷ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ. ಸೆಪ್ಟೆಂಬರ್ 6 ರಿಂದ ಬಿಗ್ ಬಾಸ್ ಶುರುವಾಗಲಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿನಿಮಾ ಚಿತ್ರೀಕರಣ ಮತ್ತು ಬಿಗ್ ಬಾಸ್ ಶೋ ನಡುವಿನ ಸಮಯ ಹೊಂದಾಣಿಕೆಯ ಬಗ್ಗೆ ಸ್ವಾರಸ್ಯಕರ ಮಾಹಿತಿ ಹಂಚಿಕೊಂಡರು. ಹಿಂದಿನ …
Read More »ನೇಪಾಳದಲ್ಲಿ ಭೀಕರ ಪ್ರವಾಹ; ಉತ್ತರಪ್ರದೇಶದ ಗಂಡಕ್ ನದಿಗೆ ತೇಲಿಬಂದ 7 ಶವಗಳು
ಲಕ್ನೋ: ನೇಪಾಳದಲ್ಲಿ ಭೀಕರ ಪ್ರವಾಹ ಉಂಟಾಗಿ ನದಿಯ ನೀರಿನ ಹರಿವು ತೀವ್ರವಾಗಿ ಏರಿಕೆಯಾಗಿದ್ದು, ಉತ್ತರ ಪ್ರದೇಶದ ಮಹಾರಾಜಗಂಜ್ ಮತ್ತು ಕುಶಿನಗರ ಜಿಲ್ಲೆಗಳ ಗಂಡಕ್ (ನಾರಾಯಣಿ) ನದಿಯಿಂದ ಕನಿಷ್ಠ ಏಳು ಅಪರಿಚಿತ ಶವಗಳು ಪತ್ತೆಯಾಗಿವೆ. ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಜ್‌ಗಂಜ್ ಜಿಲ್ಲೆಯ ತೆಲ್ಫಾಲ್ ಪ್ರದೇಶದಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷನ ಶವಗಳು ಪತ್ತೆಯಾಗಿವೆ. ನದಿಯ ಉದ್ದಕ್ಕೂ ಕಣ್ಗಾವಲು ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಸಶಸ್ತ್ರ …
Read More »ನಿಜವಾದ ಶತ್ರುಗಳನ್ನು ಗುರುತಿಸಿ – ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ
ಟೆಹ್ರಾನ್: ನಿಜವಾದ ಶತ್ರುಗಳನ್ನು ಗುರುತಿಸಿ ಎಂದು ಮುಸ್ಲಿಂ ರಾಷ್ಟ್ರಗಳಿಗೆ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಕರೆ ನೀಡಿದ್ದಾರೆ. ಇರಾನ್, ಅಮೆರಿಕ, ಇಸ್ರೇಲ್ ನಡುವಿನ ಯುದ್ಧ ಪ್ರಾರಂಭದ ಆರು ತಿಂಗಳ ನಂತರ ಅವರು ಈ ಲಿಖಿತ ಸಂದೇಶ ಹಂಚಿಕೊಂಡಿದ್ದಾರೆ. ಈ ಪ್ರದೇಶದ ಮುಸ್ಲಿಂ ರಾಷ್ಟ್ರಗಳು ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಒಗ್ಗೂಡುವಂತೆ ಕರೆ ನೀಡಿದ್ದಾರೆ. ಏಕತೆ, ಸ್ನೇಹ ಮತ್ತು ಸಹಕಾರ ಇಸ್ಲಾಮಿಕ್ ರಾಷ್ಟ್ರಗಳ ಸಮಸ್ಯೆಗಳಿಗೆ ಪರಿಹಾರವಾಗಿದೆ. ಯಾರಾದರೂ, ಯಾವುದೇ ಸ್ಥಾನದಲ್ಲಿದ್ದರೂ, …
Read More »₹2 ಕೋಟಿ ವೆಚ್ಚದಲ್ಲಿ ನೂತನ ದೇವಸ್ಥಾನ, ಸಭಾಮಂಟಪ ನಿರ್ಮಾಣ: ಚೆಕ್ ಹಸ್ತಾಂತರಿಸಿದ ಮೃಣಾಲ್ ಹೆಬ್ಬಾಳಕರ್
ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ 2 ಕೋಟಿ ರೂ. ಅನುದಾನದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ನೂತನ ಶ್ರೀ ಕಲ್ಮೇಶ್ವರ ದೇವಸ್ಥಾನ ಹಾಗೂ ಸಭಾಮಂಟಪ ನಿರ್ಮಾಣವಾಗಲಿದೆ. ಕಾಮಗಾರಿಯ ಮೊದಲ ಹಂತವಾಗಿ ₹19.81 ಲಕ್ಷ ಮೊತ್ತದ ಅನುದಾನದ ಚೆಕ್‌ನ್ನು ದೇವಸ್ಥಾನ ಕಮಿಟಿ ಸದಸ್ಯರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹಸ್ತಾಂತರಿಸಿದರು. ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ …
Read More »
Laxmi News 24×7