ಬೆಳಗಾವಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಭೆ ನಡೆಸಿದ ಸ್ಥಳಕ್ಕೆ ಗಂಗಾಜಲ ಪ್ರೋಕ್ಷಿಸಿ ಶುದ್ಧೀಕರಣ ನಡೆಸಲಾಗಿದ್ದು, ಇದು ನಮ್ಮ ನಾಯಕರಿಗೆ ಅಪಮಾನ ಮಾಡಲಾಗಿದೆ ಇದು ಖಂಡಿನೀಯ ಎಂದು ಶುಕ್ರವಾರ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಭವನದಿಂದ ಆರ್‌ಟಿಒ ಬಳಿಯ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಿಜೆಪಿ ಹಾಗೂ ಸಂಘ ಪರಿವಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …
Read More »Monthly Archives: ಆಗಷ್ಟ್ 2026
ಹೋಟೆಲ್, ಢಾಬಾಗಳ ಮೇಲೆ ದಾಳಿ; 29 ಗೃಹಬಳಕೆಯ ಸಿಲಿಂಡರ್ ಜಪ್ತಿ
ಬೆಳಗಾವಿ: ಚಿಕ್ಕೋಡಿ ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ಅನಧಿಕೃತವಾಗಿ ಬಳಕೆ ಮಾಡಲಾಗುತ್ತಿದ್ದ ಗೃಹಬಳಕೆ ಅನಿಲ ಸಿಲಿಂಡರ್‌ಗಳ ವಿರುದ್ಧ ಚಿಕ್ಕೋಡಿ ತಹಶಿಲ್ದಾರ ರಾಜೇಶ ಬುರ್ಲಿ ನೇತೃತ್ವದಲ್ಲಿ ದಾಳಿ ನಡೆಸಿ 29 ಸಿಲಿಂಡರ್ ವಶಕ್ಕೆ ಪಡೆಯಲಾಗಿದೆ. ಈ ದಾಳಿ ವೇಳೆ ವಾಣಿಜ್ಯ ಉದ್ದೇಶಕ್ಕಾಗಿ ಗೃಹಬಳಕೆ ಸಿಲಿಂಡರ್‌ಗಳನ್ನು ಅಕ್ರಮವಾಗಿ ಬಳಸುತ್ತಿದ್ದುದು ಪತ್ತೆಯಾಗಿದ್ದು, ಒಟ್ಟು ಸುಮಾರು 29 ಸಿಲಿಂಡರ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿಕೊಳ್ಳಲಾಗಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಕಾನೂನುಬಾಹಿರವಾಗಿದ್ದು, …
Read More »ಆಗಸ್ಟ್ 23 ರಂದು ಬೆಳಗಾವಿ ನಗರದಲ್ಲಿ ವಿದ್ಯುತ್ ವ್ಯತ್ಯಯ
ಬೆಳಗಾವಿ: ಕ.ವಿ.ಪ್ರ.ನಿ.ನಿ ವತಿಯಿಂದ 2ನೇ ತ್ರೈಮಾಸಿಕ ಕೆಲಸ ಕೈಗೊಳ್ಳುವ ಪ್ರಯುಕ್ತ 110 ಕೆ.ವಿ ಉದ್ಯಮಭಾಗ & 33/11 ಕೆವಿ ಜಿ.ಆಯ್.ಎಸ್ ಆರ್ ಎಮ್-2 ವಿದ್ಯುತ್ ಉಪಕೇಂದ್ರದಿಂದ ಹೊರಡುವ ಬೆಳಗಾವಿ ನಗರ ಪ್ರದೇಶಗಳಲ್ಲಿ ಆಗಸ್ಟ್ 23. 2026 ರಂದು ಮುಂಜಾನೆ 10 ಗಂಟೆಯಿಂದ ಸಂಜೆ 5, ಘಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. 110 ಕೆ.ವಿ ಉದ್ಯಮಭಾಗ ಉಪಕೇಂದ್ರ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಎಲ್ಲಾ ಫೀಡರುಗಳು ಮತ್ತು ಪ್ರದೇಶಗಳು, ಜೈನ್‌ಇಂಜಿನಿಯರಿಂಗ್, …
Read More »ಆ.24 ರಂದು ಕರಡು ಮತದಾರರ ಪಟ್ಟಿ ಪ್ರಕಟ: ಡಿಸಿ ಮೊಹಮ್ಮದ್ ರೋಷನ್
ಬೆಳಗಾವಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವು ಜಿಲ್ಲೆಯಲ್ಲಿ ಪಾರದರ್ಶಕತೆಯಿಂದ ಜರುಗುತ್ತಿದೆ. ಆಗಸ್ಟ 24 ರಂದು ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರದ ಚಟುವಟಿಕೆಗಳ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶುಕ್ರವಾರ (ಆ.21) ಜರುಗಿದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಪ್ರಕಟಣೆ ನಂತರದ ಚಟುವಟಿಕೆಗಳ ಕುರಿತು ಜರುಗಿದ …
Read More »ರೈಲು ಅಪಘಾತದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ
ಬೆಳಗಾವಿ: ರಾಜಹಂಸಗಡ ಗ್ರಾಮದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ 28 ವರ್ಷದ ಸುನಿಲ್ ಬಸ್ತವಾಡಕರ್ ಅವರು ಇತ್ತೀಚೆಗೆ ಚಿಕ್ಕೋಡಿ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ ಅಕಾಲಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿದರು. ಮೃತ ಸುನಿಲ್ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ದುಃಖದಲ್ಲಿರುವ ಕುಟುಂಬಕ್ಕೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ಯುವಕನ ಅಕಾಲಿಕ …
Read More »ಚಿನ್ನದ ದರ 1,771 ರೂ., ಬೆಳ್ಳಿ ದರ 3,128 ರೂ. ಏರಿಕೆ
ನವದೆಹಲಿ: ಅಮೆರಿಕ ಡಾಲರ್ ದುರ್ಬಲತೆ, ಅಮೆರಿಕದ ಬಡ್ಡಿದರಗಳಲ್ಲಿ ಆಗುತ್ತಿರುವ ಬದಲಾವಣೆ ಹಾಗೂ ಸುರಕ್ಷಿತ ಹೂಡಿಕೆ ಹುಡುಕಾಟ ಹೀಗೆ ಅನೇಕ ಕಾರಣಗಳಿಂದ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಚಿನ್ನ, ಬೆಳ್ಳಿ ದರ ಏರಿಕೆಯಾಗಿದೆ. ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್ ನಲ್ಲಿ ಶುಕ್ರವಾರ (ಇಂದು) ಮಧ್ಯಾಹ್ನ 3:10ರ ವೇಳೆಗೆ ಚಿನ್ನದ ಫ್ಯೂಚರ್ಸ್ ಬೆಲೆ 10 ಗ್ರಾಂಗೆ ಸುಮಾರು 1,61,196 ರೂ.ನಷ್ಟಕ್ಕೆ ತಲುಪಿತ್ತು. ಹಿಂದಿನ ಮುಕ್ತಾಯದ ಬೆಲೆಗೆ ಹೋಲಿಸಿದರೆ …
Read More »`ಮಹಾ’ ದುರಂತ – ಮಗನನ್ನ ರಕ್ಷಿಸಲು ಹೋದ ತಂದೆ, ಬಳಿಕ ತಾಯಿ; ಮೂವರೂ ಸಾವು
ಮುಂಬೈ: ಮಹಾರಾಷ್ಟ್ರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಬೆಟ್ಟದ ಅಂಚಿನಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸುತ್ತಿದ್ದ ಯುವಕನನ್ನ ರಕ್ಷಿಸಲು ಮುಂದಾದ ತಂದೆ, ಬಳಿಕ ತಾಯಿ ಕೂಡ ಬೆಟ್ಟದಿಂದ ಬಿದ್ದು ಮೃತಪಟ್ಟಿದ್ದಾರೆ. 18/19 ವರ್ಷದ ಮಗ ಸೇರಿದಂತೆ ಒಂದೇ ಕುಟುಂಬದ ಮೂವರು ದುರಂತ ಸಾವಿಗೀಡಾಗಿದ್ದಾರೆ. ಮೃತರನ್ನು ನಗರದ ಜಲ್ತಾ ಫಾಟಾ ಪ್ರದೇಶದ ನಿವಾಸಿಗಳಾದ ಮುರಳೀಧರ್ ಚಾಂದ್ಗುಡೆ (48), ಅವರ ಪತ್ನಿ ಸಂಗೀತಾ ಹಾಗೂ ಪುತ್ರ ಕುನಾಲ್ ಎಂದು ಪೊಲೀಸರು ಗುರುತಿಸಿದ್ದಾರೆ. ಹೊಸ …
Read More »ಬ್ಯಾಂಕ್ ಎದುರೇ ಗುಂಡಿಕ್ಕಿ ಪತ್ನಿ ಕೊಲೆ | ಟೊಮ್ಯಾಟೋ ಕೊಳೆತಿದ್ದಕ್ಕೆ ಹಲ್ಲೆ ಮಾಡಿದ್ದ: ಕರಾಳ ಸತ್ಯ ಬಿಚ್ಚಿಟ್ಟ ಮೃತಳ ಸಹೋದರಿ
ಲಕ್ನೋ: ಇಲ್ಲಿನ ಬ್ಯಾಂಕ್‌ವೊಂದರ ಹೊರಗೆ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಗುಂಡಿಟ್ಟು ಹತ್ಯೆ ಮಾಡಿ, ಬಳಿಕ ತನ್ನ ತಂಗಿಯನ್ನೂ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದಾಗಿಯೇ ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ. ಮೃತ ಮಹಿಳೆಯ ಸಹೋದರಿ ಹಾಗೂ ಯೂಟ್ಯೂಬರ್ ಪ್ರಗ್ಯಾ ಮಿಶ್ರಾ ಅವರು ಪತಿ ಮಾನಸ್ ವಾಜಪೇಯಿ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡ ಅವರು, ಮೃತ ಪತ್ನಿ ದಿವ್ಯಾ ಅನುಭವಿಸಿದ್ದ ದೌರ್ಜನ್ಯ ಮತ್ತು …
Read More »ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸಚಿವ ಸಂಪುಟ ಶಿಫಾರಸು
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟವು ರಾಜ್ಯಪಾಲರಿಗೆ ಅಧಿಕೃತವಾಗಿ ಶಿಫಾರಸು ಮಾಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈ ಹಿಂದೆ ಹೊರಡಿಸಿದ್ದ ಅಮಾನತು ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದ ಬೆನ್ನಲ್ಲೇ, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ವಾರದ ರಾಜ್ಯಪಾಲರ ಅಮಾನತು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ …
Read More »ಮಂಜಿನ ನಗರಿ ಮಡಿಕೇರಿ ದಸರಾಕ್ಕೆ 2 ಕೋಟಿ ಘೋಷಿಸಿದ ರಾಜ್ಯ ಸರ್ಕಾರ
ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ ಘೋಷಣೆಯಾಗಿದೆ. ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ದಸರಾ ಸಮಿತಿಯ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ ಬೆನ್ನಲ್ಲೇ ಘೋಷಣೆ ಹೊರಬಿದ್ದಿದೆ. ಮಡಿಕೇರಿಯ ಐತಿಹಾಸಿಕ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂ. ಅನುದಾನ ಘೋಷಿಸಿದೆ. ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಅವರ ನೇತೃತ್ವದಲ್ಲಿ ದಸರಾ ಸಮಿತಿಯ …
Read More »
Laxmi News 24×7