Breaking News

Monthly Archives: ಆಗಷ್ಟ್ 2026

SIR ವೇಳೆ ಮ್ಯಾಪಿಂಗ್ ಆಗದ 43.84 ಲಕ್ಷ ಮತದಾರರಿಗೆ ನೋಟಿಸ್

ಬೆಂಗಳೂರು: ಕರ್ನಾಟಕದಲ್ಲಿ ಎಸ್‌ಐಆರ್ ಮೊದಲ ಹಂತ ಮುಕ್ತಾಯ ಆಗಿದೆ. ಈಗ ಮತ್ತೊಂದು ಹಂತದ ಪ್ರಕ್ರಿಯೆಗೆ ಮುಂದಾಗಿದ್ದು, ಮ್ಯಾಪಿಂಗ್ ಆಗದ ಗೊಂದಲಮಯ ಆಗಿರುವ ಮತದಾರರಿಗೆ ನೋಟಿಸ್ ನೀಡಲಿದ್ದಾರೆ. ಒಟ್ಟು 1.07 ಕೋಟಿ ಮತದಾರರನ್ನು ಎಎಸ್‌ಡಿಡಿಒ ಅಂತಾ ಗುರುತು ಮಾಡಲಾಗಿದ್ದು, ಈ ಪೈಕಿ 43,84 ಲಕ್ಷ ಮತದಾರರಿಗೆ ನೋಟಿಸ್ ಬರಲಿದೆ. ಈ ಮತದಾರರು ಗುರತು, ಪೌರತ್ವ ಮತ್ತು ಜನ್ಮದಿನಾಂಕ ಸಾಬೀತುಪಡಿಸಬೇಕಿದೆ. 43.84 ಲಕ್ಷ ಮತದಾರರ ಪೈಕಿ 23.45 ಲಕ್ಷ ಮತದಾರರು ಮ್ಯಾಪಿಂಗ್ ಲಭ್ಯವಿಲ್ಲ. …

Read More »

ಕೆಇಎ ನೇಮಕಾತಿ: ಆ.22ಕ್ಕೆ ಕಡ್ಡಾಯ ಕನ್ನಡ ಪರೀಕ್ಷೆ

ಬೆಂಗಳೂರು: ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಡ್ಡಾಯ ಕನ್ನಡ ಪರೀಕ್ಷೆ ಆ.22ರಂದು ನಗರದಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಸಕಲ ಸಿದ್ಧತೆ ಮಾಡಿಕೊಂಡಿದೆ. ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡದಿರುವ ಅಭ್ಯರ್ಥಿಗಳು ನೇಮಕಾತಿ ಸಂದರ್ಭದಲ್ಲಿ ಕನ್ನಡ ಕಡ್ಡಾಯ ಪರೀಕ್ಷೆ ಬರೆಯಬೇಕು ಎನ್ನುವುದು ನಿಯಮ. ಆ ಪ್ರಕಾರ ಸುಮಾರು 6 ಸಾವಿರ ಮಂದಿ ಶನಿವಾರ (ಆ.22) ಪರೀಕ್ಷೆ ಬರೆಯಲಿದ್ದಾರೆ …

Read More »

IRCTC ನಿರ್ದೇಶಕರಾಗಿ ಆಯ್ಕೆಯಾದ ಸಚಿನ್ ಸಬ್ನಿಸ್ ಅವರಿಗೆ ಸನ್ಮಾನ

ಬೆಳಗಾವಿ: ಭಾರತೀಯ ರೈಲ್ವೆ ಪ್ರವಾಸೋದ್ಯಮ ನಿಗಮದ (IRCTC) ನಿರ್ದೇಶಕರಾಗಿ ಆಯ್ಕೆಯಾಗಿರುವ ಬೆಳಗಾವಿಯ ಹಿರಿಯ ಉದ್ಯಮಿ ಸಚಿನ್ ಸಬ್ನಿಸ್ ಅವರನ್ನು ಬೆಳಗಾಮ್ ಚೆಂಬರ್ ಆಫ್ ಕಾಮರ್ಸ್ ವತಿಯಿಂದ ಗುರುವಾರ ಸನ್ಮಾನಿಸಲಾಯಿತು. ಚೆಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಸ್ವಪ್ನಿಲ್ ಶಹ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿನ್ ಸಬ್ನಿಸ್ ಅವರನ್ನು ಅಭಿನಂದಿಸಿ, ಅವರ ಮುಂದಿನ ಜವಾಬ್ದಾರಿಯ ಯಶಸ್ವಿ ನಿರ್ವಹಣೆಗೆ ಶುಭ ಹಾರೈಸಲಾಯಿತು. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಉದ್ಯಮ, ವ್ಯಾಪಾರ ಹಾಗೂ ಪ್ರವಾಸೋದ್ಯಮ ಕ್ಷೇತ್ರದ …

Read More »

ದೇವಸ್ಥಾನ ನಿರ್ಮಾಣದ ಎರಡನೇ ಹಂತದ ಕಾಮಗಾರಿಗೆ ಚೆಕ್ ಹಸ್ತಾಂತರಿಸಿದ ಲಕ್ಷ್ಮೀ ಹೆಬ್ಬಾಳಕರ್ 

  ಬೆಳಗಾವಿ.:  ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬಾಳೇಕುಂದ್ರಿ ಬಿ.ಕೆ. ಗ್ರಾಮದಲ್ಲಿ ಸುಮಾರು ₹1.20 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಎರಡನೇ ಹಂತದ ಕಾಮಗಾರಿಗಾಗಿ ಬಿಡುಗಡೆಯಾದ ಅನುದಾನದ ಚೆಕ್ ಅನ್ನು ಶುಕ್ರವಾರ ದೇವಸ್ಥಾನದ ಟ್ರಸ್ಟ್ ಕಮಿಟಿಯ ಪದಾಧಿಕಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಅವರು ಹಸ್ತಾಂತರಿಸಿದರು. ಗ್ರಾಮದ ಪ್ರಮುಖ ಧಾರ್ಮಿಕ …

Read More »

ಪೆಲೆಟ್ ಗನ್ ಬಳಕೆ – ರಾಹುಲ್ ಗಾಂಧಿ ಪ್ರತಿಭಟನೆಗೆ ಮಣಿದ ದೆಹಲಿ ಪೊಲೀಸ್‌; FIR ದಾಖಲು

ನವದೆಹಲಿ: ರಾಷ್ಟ್ರ ರಾಜಧಾನಿಯ ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆ ಹೊರಗೆ ರಾಹುಲ್‌ ಗಾಂಧಿ  ನೇತೃತ್ವದ ಧರಣಿ ಕಾವು ಪಡೆದುಕೊಳ್ಳುತ್ತಿದ್ದಂತೆ ದೆಹಲಿ ಪೊಲೀಸರು ಪೆಲೆಟ್‌ ಗನ್‌) ಬಳಕೆ ದೂರಿನ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ನೀಟ್ ಪ್ರತಿಭಟನೆಯ ವೇಳೆ ನಡೆದ ಪೆಲೆಟ್ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತ ವಿದ್ಯಾರ್ಥಿಯೊಂದಿಗೆ ಸಂಸತ್ ರಸ್ತೆಯ ಪೊಲೀಸ್ ಠಾಣೆಗೆ ತೆರಳಿ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಧರಣಿ ಕುಳಿತಿದ್ದರು. ಸಂಸದೆ ಪ್ರಿಯಾಂಕಾ ಗಾಂಧಿ …

Read More »

ಬೆಳಗಾವಿ: AI ಆಧಾರಿತ ಆರೋಗ್ಯ ತಪಾಸಣಾ ಯಂತ್ರ ಕೇಂದ್ರ ಉದ್ಘಾಟನೆ.

ಬೆಳಗಾವಿ: AI ಆಧಾರಿತ ಆರೋಗ್ಯ ತಪಾಸಣಾ ಯಂತ್ರ ಕೇಂದ್ರ ಉದ್ಘಾಟನೆ. ​ಬೆಳಗಾವಿ: ನಗರದ ಖಾಸಗಿ ಹೋಟೆಲ್‌ನಲ್ಲಿ ಫೀಪಲ್ಸ್ ಹೆಲ್ತ್ ಕೇರ್ ಟ್ರಸ್ಟ್, ಲೋಕ ಕಲ್ಯಾಣ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಹಾಗೂ ಯುವಾಂಶ್ ಎಂಟರ್‌ಪ್ರೈಸಸ್ ಜಂಟಿ ಆಶ್ರಯದಲ್ಲಿ ಆರೋಗ್ಯ ಜಾಗೃತಿ ಶಿಬಿರ ಹಾಗೂ ಕೃತಕ ಬುದ್ಧಿಮತ್ತೆ (AI) ಆಧಾರಿತ ನೂತನ ಆರೋಗ್ಯ ತಪಾಸಣಾ ಯಂತ್ರದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಯಶಸ್ವಿಯಾಗಿ ನಡೆಯಿತು. ​ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಮಾಜ ಸೇವಕ …

Read More »

ಆಸ್ಟನ್ ಮಾರ್ಟಿನ್ ಕಾರು ಡಿಕ್ಕಿ, ಯುವತಿ ಸಾವು; ರಾಜ್ಯಸಭಾ ಎಂಪಿ ಪುತ್ರನ ವಿರುದ್ದ ಕೇಸ್‌ ದಾಖಲು

ಹೈದರಾಬಾದ್: ಐಷಾರಾಮಿ ಆಸ್ಟನ್ ಮಾರ್ಟಿನ್ ಕಾರು ಡಿಕ್ಕಿಯಾಗಿ 26 ವರ್ಷದ ಯುವತಿಯೊಬ್ಬರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ, ರಾಜ್ಯಸಭಾ ಸಂಸದ ಲಿಂಗಮನೇನಿ ರಮೇಶ್ ಅವರ ಪುತ್ರ ಲಿಂಗಮನೇನಿ ಸಂಜುಶ್ (21) ವಿರುದ್ಧ ಅತಿವೇಗ ಮತ್ತು ಅಜಾಗರೂಕ ಚಾಲನೆಯ ಆರೋಪದಡಿ ಪ್ರಕರಣ ದಾಖಲಾಗಿದೆ. ಇನಾರ್ಬಿಟ್ ಮಾಲ್‌ನಲ್ಲಿರುವ ಲೈಫ್‌ಸ್ಟೈಲ್ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತಿ ಮುಖಿ, ಆಗಸ್ಟ್ 16ರ ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ತಮ್ಮ ಸಹೋದ್ಯೋಗಿ ಪೂಜಾ ಜೊತೆ ಊಟಕ್ಕೆ …

Read More »

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ

ಬೆಂಗಳೂರು: ರಂಗಭೂಮಿ ಕ್ಷೇತ್ರದಲ್ಲಿ ದೀರ್ಘಕಾಲದಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಹಿರಿಯ ಹಾಗೂ ಪ್ರತಿಭಾವಂತ ಕಲಾವಿದರನ್ನು ಗೌರವಿಸುವ ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ ಸಾಧನೆ ಗೌರವ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿನಿಧಿ ಪುರಸ್ಕಾರಗಳ ಪಟ್ಟಿ ಪ್ರಕಟವಾಗಿದೆ. ಕನ್ನಡ ರಂಗಭೂಮಿ ಹಾಗೂ ಬೆಳ್ಳಿತೆರೆಯಲ್ಲಿ ತಮ್ಮ ವಿಶಿಷ್ಟ ಅಭಿನಯ, ಕಂಠಸಿರಿ ಮತ್ತು ವಿಭಿನ್ನ ಪಾತ್ರಗಳ ಮೂಲಕ ಮನೆಮಾತಾಗಿರುವ ಹಿರಿಯ ನಟ ಡಾ. ಮುಖ್ಯಮಂತ್ರಿ ಚಂದ್ರು ಅವರು ಈ ಬಾರಿಯ …

Read More »

ಪಾಗಲ್‌ ಪ್ರೇಮಿ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ – ಆರೋಪಿ ಅರೆಸ್ಟ್‌

ಬೆಂಗಳೂರು: ಪಾಗಲ್‌ ಪ್ರೇಮಿಯ ಕಾಟಕ್ಕೆ ಬೇಸತ್ತು ವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಇಂದಿರಾನಗರದ ಲಕ್ಷ್ಮೀಪುರಂನಲ್ಲಿ ನಡೆದಿದೆ. ಆ.6 ರಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಕವಿತಾ (21) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಿಳೆಗೆ 2024 ರಲ್ಲಿ ಮದುವೆಯಾಗಿದ್ದು 1.5 ವರ್ಷದ ಮಗು ಸಹ ಇತ್ತು. ಇತ್ತೀಚೆಗೆ ಮಹಿಳೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಪೊಲೀಸ್‌ ತನಿಖೆ ವೇಳೆ ಪಾಗಲ್‌ ಪ್ರೇಮಿಯ ಕಾಟ ಬೆಳಕಿಗೆ ಬಂದಿದೆ. …

Read More »

ಪ್ಯಾಕ್‌ ಮಾಡದ ಖಾದ್ಯ ತೈಲ ಮಾರಾಟಕ್ಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ 7 ವರ್ಷ ಜೈಲು

ಮುಂಬೈ: ಮಹಾರಾಷ್ಟ್ರದಲ್ಲಿ ಸಡಿಲ (ಪ್ಯಾಕ್ ಮಾಡದ) ಖಾದ್ಯ ತೈಲ ಮಾರಾಟ ಮಾಡುವುದನ್ನು ರಾಜ್ಯ ಆಹಾರ ಮತ್ತು ಔಷಧ ಆಡಳಿತ  ನಿಷೇಧಿಸಿದೆ. ನಿಯಮ ಉಲ್ಲಂಘಿಸಿದವರಿಗೆ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವುದಾಗಿ FDA ಆಯುಕ್ತ ತುಕಾರಾಮ್ ಮುಂಡೆ ಎಚ್ಚರಿಸಿದ್ದಾರೆ. ಇತ್ತೀಚೆಗೆ ಹೆಚ್ಚಿನ ಪ್ರಮಾಣದಲ್ಲಿ ಖಾದ್ಯ ತೈಲದಲ್ಲಿ ಕಲಬೆರಕೆ ಮಾಡುತ್ತಿರುವುದು ಕಂಡುಬರುತ್ತಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಹೀಗಾಗಿ ಯಾವುದೇ ರಾಜಿ ಇಲ್ಲ ಎಂದು ಮುಂಡೆ ತಿಳಿಸಿದ್ದಾರೆ. ತಪ್ಪುದಾರಿಗೆಳೆಯುವ …

Read More »