Breaking News

Monthly Archives: ಆಗಷ್ಟ್ 2026

ಬಿಹಾರದಲ್ಲಿ ಮಹಿಳೆ, ಇಬ್ಬರು ಮಕ್ಕಳು ಅನುಮಾನಾಸ್ಪದ ಸಾವು – ಕೊಲೆ ಶಂಕೆ

ಪಾಟ್ನಾ: ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಿಹಾರದ ನವಾಡಾ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ನಡೆದ ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮೃತ ಮಹಿಳೆಯನ್ನು ನಿದಾ ಖಾತೂನ್ (37) ಎಂದು ಗುರುತಿಸಲಾಗಿದೆ. ಅವರ ನಾಲ್ಕು ವರ್ಷದ ಪುತ್ರಿ ಸರಿಯಾ ಖಾತೂನ್ ಹಾಗೂ …

Read More »

KRSನಿಂದ ತಮಿಳುನಾಡಿಗೆ 4,917 ಕ್ಯೂಸೆಕ್ ನೀರು ರಿಲೀಸ್‌

ಮಂಡ್ಯ: ಕಬಿನಿ ಜಲಾಶಯದ ಬಳಿಕ ಇದೀಗ ಕೃಷ್ಣರಾಜ ಸಾಗರ ಅಣೆಕಟ್ಟಿನ ನೀರಿನ ವಿಚಾರವೂ ರಾಜ್ಯದಲ್ಲಿ ಚರ್ಚೆಗೆ ಬಂದಿದೆ. ಈ ನಡುವೆ KRS ಜಲಾಶಯಕ್ಕೆ ಕೇವಲ 1,961 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಆದರೆ, ಡ್ಯಾಂನಿಂದ ನದಿಗೆ 4,917 ಕ್ಯೂಸೆಕ್‌ಗೂ ಅಧಿಕ ನೀರು ಹೊರಬಿಡಲಾಗುತ್ತಿದೆ. KRSನಿಂದ ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಒಳಹರಿವಿಗಿಂತ ಹೊರಹರಿವು ಹೆಚ್ಚಾಗಿರುವುದೇ ಈಗ ರೈತರ ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆ ಕುಡಿಯುವ ನೀರು …

Read More »

ಗೋಕರ್ಣದ ತದಡಿಯಲ್ಲಿ ಬೋಟ್ ಮುಳುಗಡೆ – ನಾಲ್ವರು ಮೀನುಗಾರರ ರಕ್ಷಣೆ

ಕಾರವಾರ: ಹೂಳು ಮತ್ತು ಅಲೆಗಳ ಅಬ್ಬರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಸಮುದ್ರದ ಅಳವೆಯಲ್ಲಿ ಮುಳಗಿ ಹೋಗಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರನ್ನ ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಭಾಗದ ತದಡಿ ಬಂದರಿನಲ್ಲಿ ನಡೆದಿದೆ. ಸುರೇಂದ್ರ ಹರಿಕಂತ್ರ ಎನ್ನುವವರಿಗೆ ಸೇರಿದ ಲಕ್ಷ್ಮೀಕೃಪ ಎನ್ನುವ ಹೆಸರಿನ ಬೋಟ್ ಇದಾಗಿದ್ದು, ಇಂದು ಗೋಕರ್ಣದ ತದಡಿಯ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಆದರೇ ಸ್ವಲ್ಪ ದೂರದಲ್ಲೇ ಹೂಳು ತುಂಬಿದ ಅಳವೆಯಲ್ಲಿ …

Read More »

ಇಡಿ ದಾಳಿಯ ನಡುವೆಯೂ ಬಿಗ್‌ ರಿಲೀಫ್‌ – ಅಮಾನತು ರದ್ದು, ಮತ್ತೆ ಶಿವಶಂಕರಪ್ಪಗೆ ಕೆಪಿಎಸ್‌ಸಿ ಅಧ್ಯಕ್ಷ ಪಟ್ಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಭ್ರಷ್ಟಾಚಾರ ಆರೋಪ ಹಾಗೂ ಜಾರಿ ನಿರ್ದೇಶನಾಲಯದ (ED) ತನಿಖೆಯ ನಡುವೆಯೇ, ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ, ನಿಯಮಾವಳಿಗಳ ಉಲ್ಲಂಘನೆಯಾಗಿದೆ. ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟ ಯಾವುದೇ ಸಲಹೆ ಅಥವಾ ಶಿಫಾರಸು …

Read More »

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ ಇಂದು (ಆ.18) ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ಬಿಡದಿ ಟೌನ್‌ಶಿಪ್ ವಿರೋಧಿಸಿ ಕರೆ ಕೊಟ್ಟಿದ್ದ ಪಾದಯಾತ್ರೆ ಎರಡೇ ದಿನಕ್ಕೆ ಮೊಟಕುಗೊಳಿಸಲಾಗಿತ್ತು. ಹೀಗಾಗಿ ಇಂದು ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶದ ಮೂಲಕ ವಿರೋಧ ವ್ಯಕ್ತಪಡಿಸಲಾಯ್ತು. ದೇವೇಗೌಡರು, ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಾನು ಚರ್ಚೆಗೆ ಸಿದ್ಧ, ಬನ್ನಿ ಮಾತಾಡೋಣ: ಪ್ರತಿಭಟನಾ ಸಮಾವೇಶದಲ್ಲಿ ಮಾತಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ  ಸರ್ಕಾರಕ್ಕೆ ಸವಾಲೆಸೆದರು. …

Read More »

ವಂದೇ ಮಾತರಂ ವಿರೋಧಿಸುವವರು ದೇಶ ಬಿಟ್ಟು ಹೋಗಿ: ಬಿಜೆಪಿ ಶಾಸಕ ಚನ್ನಬಸಪ್ಪ

ಬೆಂಗಳೂರು: ವಂದೇ ಮಾತರಂ ಭಾರತದ ಅಸ್ಮಿತೆ. ಅದನ್ನು ವಿರೋಧಿಸುವವರು ದೇಶ ಬಿಟ್ಟು ಹೋಗಿ ಎಂದು ಬಿಜೆಪಿ ಶಾಸಕ ಚನ್ನಬಸಪ್ಪ ಗರಂ ಆಗಿದ್ದಾರೆ. ಸೋನಿಯಾ ಗಾಂಧಿ ಅವರಿಂದ ವಂದೇ ಮಾತರಂಗೆ ಅಪಮಾನ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ, ವಂದೇ ಮಾತರಂ ವಿರೋಧಿಸುವ ಅನೇಕ ಜೀವಿಗಳು ಈ ದೇಶದಲ್ಲಿವೆ. ಸ್ವಾತಂತ್ರ‍್ಯ ಪೂರ್ವದಲ್ಲಿ ಕೂಡಾ ಇವರು ಈ ರೀತಿಯ ಚಟುವಟಿಕೆಗಳಿಗೆ ಶಕ್ತಿ ಕೊಡುತ್ತಿದ್ದರು. ದೇಶದ ಕಾನೂನು ವಿರೋಧ ಮಾಡಬಹುದು ಎಂಬ ಮಾನಸಿಕತೆ ಅಕ್ಷಮ್ಯ. ವಂದೇ …

Read More »

ಬಂಕ್‌ಗಳಲ್ಲಿ E10 ಪೆಟ್ರೋಲ್ ಪೂರೈಕೆ ಕಷ್ಟ: ತೈಲ ಸಚಿವಾಲಯ

ನವದೆಹಲಿ: E20 ಜೊತೆಗೆ E10 ಪೆಟ್ರೋಲ್‌ ಸಿಗಬೇಕೆಂಬ ಬೇಡಿಕೆ ವ್ಯಕ್ತವಾಗುತ್ತಿದ್ದಂತೆ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಲಭ್ಯವಾಗಿದೆ. ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್ ಪೂರೈಕೆ ಮಾಡುವುದು ಪ್ರಾಯೋಗಿಕವಾಗಿ ಜಾರಿಗೆ ತರುವುದು ಕಷ್ಟಕರ ಎಂದು ತೈಲ ಸಚಿವಾಲಯದ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ತೈಲ ಮಾರುಕಟ್ಟೆ ಕಂಪನಿಗಳಿಗೆ  ವಿವಿಧ ರೀತಿಯ ಪೆಟ್ರೋಲ್ ಮಿಶ್ರಣಗಳನ್ನು ದಾಸ್ತಾನು ಮಾಡುವುದು ಮತ್ತು ಮಾರಾಟ ಮಾಡುವುದು ಹೆಚ್ಚುವರಿ ಕಾರ್ಯಾಚರಣೆ ಹಾಗೂ ಆರ್ಥಿಕ ಹೊರೆಯನ್ನು ಉಂಟುಮಾಡುತ್ತದೆ. ವಿವಿಧ ದರ್ಜೆಯ ಇಂಧನಗಳ …

Read More »

ಚಾಮರಾಜನಗರ ಎನ್‌ಕೌಂಟರ್ | ಅಜ್ಞಾತ ಸ್ಥಳದಿಂದ ವಿಡಿಯೋ ಹರಿಬಿಟ್ಟ 4ನೇ ಆರೋಪಿ ಮಹಿಮಾ ದಾಸ್

ಚಾಮರಾಜನಗರ: ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮೂವರ ಜೊತೆಗಿದ್ದು, ಬಳಿಕ ಪರಾರಿಯಾಗಿದ್ದ ಮಹಿಮಾ ದಾಸ್ ಇದೀಗ ಅಜ್ಞಾತ ಸ್ಥಳದಿಂದ ವಿಡಿಯೋ ಹರಿಬಿಟ್ಟಿದ್ದಾನೆ. ಶೂಟೌಟ್ ನಡೆದ ವೇಳೆ ಸತ್ತ ಮೂವರ ಜೊತೆ ತೆರಳಿದ್ದ ಮಹಿಮಾ ದಾಸ್ ಎಸ್ಕೇಪ್ ಆಗಿದ್ದ. ನಂತರ ಮೈಸೂರಿನ (Mysuru) ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸಚಿವ ಪುಟ್ಟರಂಗಶೆಟ್ಟಿ ಕೂಡ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದ್ದರು. ಆದರೆ ಅದಾದ ಬಳಿಕ ಮಹಿಮಾದಾಸ್ ಮತ್ತೆ ನಾಪತ್ತೆಯಾಗಿದ್ದ. ಇದೀಗ ತಾನಿರುವ ಅಜ್ಞಾತ ಸ್ಥಳದಿಂದ …

Read More »

ಹನೂರು ಎನ್‌ಕೌಂಟರ್‌; ಮೃತರ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ, ಸರ್ಕಾರಿ ಉದ್ಯೋಗ ನೀಡಬೇಕು: ವಿಜಯೇಂದ್ರ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಬಳಿ ನಡೆದ ಅರಣ್ಯ ಎನ್‌ಕೌಂಟರ್‌  ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಕೇವಲ ಮ್ಯಾಜಿಸ್ಟ್ರೇಟ್‌ ತನಿಖೆಗೆ ಸೀಮಿತವಾಗದೆ ಜುಡಿಷಿಯಲ್‌ ತನಿಖೆ ನಡೆಸಿ ಸತ್ಯವನ್ನು ಜನರ ಮುಂದೆ ತರಬೇಕು ಎಂದು ಒತ್ತಾಯಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ಮಾನವೀಯತೆಯ ಆಧಾರದ ಮೇಲೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು. ಅಲ್ಲದೆ, …

Read More »

ಪಿಎಂ ಕೇರ್ಸ್ ಖಾತೆಯಲ್ಲಿದೆ 8,452 ಕೋಟಿ – ಈ ಪೈಕಿ ಎಫ್‌ಡಿಯಲ್ಲಿದೆ 7,846 ಕೋಟಿ!

ನವದೆಹಲಿ: ಕೋವಿಡ್‌ನಂತಹ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು 2020ರಲ್ಲಿ ಸ್ಥಾಪಿಸಲಾದ ಪಿಎಂ ಕೇರ್ಸ್  ನಿಧಿಯಲ್ಲಿ ಸದ್ಯ ಒಟ್ಟು 8,452 ಕೋಟಿ ರೂ. ಹಣವಿದೆ ಎಂದು ಇತ್ತೀಚಿನ ಆಡಿಟ್ ವರದಿ ತಿಳಿಸಿದೆ. ಹಿಂದಿನ ಆರ್ಥಿಕ ವರ್ಷದಲ್ಲಿ (2023-24) ಈ ಮೊತ್ತವು 7,188.63 ಕೋಟಿ ರೂ. ಆಗಿತ್ತು. ಇದಕ್ಕೆ ಹೋಲಿಸಿದರೆ 2024-25 ಸಾಲಿನಲ್ಲಿ ನಿಧಿಯ ಒಟ್ಟು ಮೊತ್ತದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಈ ನಿಧಿಗೆ 2024ರ ಹಣಕಾಸು ವರ್ಷದಲ್ಲಿ 681.81 ಕೋಟಿ ರೂ. ದೇಶೀಯ …

Read More »