Breaking News

Monthly Archives: ಆಗಷ್ಟ್ 2026

ಆಸ್ಟ್ರೇಲಿಯಾ ಶಿಖರದ ತುತ್ತತುದಿಯಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ ಕೊಡಗಿನ ಮಹಿಳೆ

ಮಡಿಕೇರಿ: ಸ್ವಾತಂತ್ರ್ಯ  ದಿನದಂದು ಆಸ್ಟ್ರೇಲಿಯಾದ ಅತಿ ಎತ್ತರದ ಮೌಂಟ್ ಕೊಸ್ಸಿಯಸ್ಕೊ ಶಿಖರದ ತುತ್ತತುದಿಯಲ್ಲಿ ಭಾರತದ ತ್ರಿವರ್ಣ ಧ್ವಜ ಹೆಮ್ಮೆಯಿಂದ ಹಾರಾಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದವರು ಕೊಡಗಿನ ದಿಟ್ಟ ಮಹಿಳೆ ಜಮ್ಮಡ ಪ್ರೀತ್ ಅಪ್ಪಯ್ಯ. ಹಿಮ, ಕೊರೆವ ಚಳಿ ಮತ್ತು ಪ್ರಬಲ ಗಾಳಿಯ ನಡುವೆಯೂ ಶಿಖರ ತಲುಪಿ, ಕೊಡವ ಸಾಂಪ್ರದಾಯಿಕ ಉಡುಪಿನಲ್ಲೇ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಪ್ರೇಮದ ಜೊತೆಗೆ ಕೊಡಗಿನ ಅಸ್ಮಿತೆಯನ್ನೂ ವಿಶ್ವದ ಮುಂದೆ ಅನಾವರಣಗೊಳಿಸಿದ್ದಾರೆ. ಆಗಸ್ಟ್ 10ರಿಂದ 19ರವರೆಗೆ …

Read More »

ಸ್ವಾತಂತ್ರ್ಯೋತ್ಸವ ಸಂಭ್ರಮ – ಹೆಲಿಕಾಪ್ಟರ್‌ನಲ್ಲಿ ಹಾರಾಡಿದ ಕಡೇನಂದಿಹಳ್ಳಿ ಸರ್ಕಾರಿ ಶಾಲೆ ಮಕ್ಕಳು

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ  ತಾಲೂಕಿನ ಕಡೇನಂದಿಹಳ್ಳಿ  ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು  80ನೇ ಸ್ವಾತಂತ್ರ್ಯ ದಿನಾಚರಣೆಯನ್ನ  ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಸ್ವಾತಂತ್ರ್ಯೋತ್ಸವದ ವಿಶೇಷ ದಿನದಂದು ಶಾಲೆಯ 12 ಪ್ರತಿಭಾವಂತ ವಿದ್ಯಾರ್ಥಿಗಳು ಹೆಲಿಕಾಪ್ಟರ್‌ನಲ್ಲಿ ಹಾರಾಡಿ ಸಂಭ್ರಮಿಸಿದ್ದಾರೆ. ಕಡೇನಂದಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಮತ್ತು ಕ್ರೀಡೆಯಲ್ಲಿ ಪ್ರತಿಭಾನ್ವಿತರಾದ ಮಕ್ಕಳನ್ನು ಹೆಲಿಕಾಪ್ಟರ್‌ ಪ್ರಯಾಣಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಆದರಂತೆ ಜಾನ್ಹವಿ, ಧ್ರುವ, ಹೇಮಂತ್, ಜೀವಿತಾ, ಚಂದನ್, ನಂದನ್, ವಿದ್ಯಾಶ್ರೀ, ಪೃಥ್ವಿಕ್, ರಚಿತಾ, ವಿಜಯ್, ಅನುಶ್ರೀ …

Read More »

ಅರಣ್ಯಕ್ಕೆ ಅಕ್ರಮ ಪ್ರವೇಶ ಮಾಡಿದ್ರು, 4 ಬ್ಯಾಗ್‌ನಲ್ಲಿ ಜಿಂಕೆ ಮಾಂಸ ವಶಕ್ಕೆ: ಬೇಟೆಗಾರರ ಎನ್‌ಕೌಂಟರ್ ಬಗ್ಗೆ ರಾಮಲಿಂಗಾರೆಡ್ಡಿ ರಿಯಾಕ್ಷನ್

ಬೆಂಗಳೂರು: ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ  ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗ್ಗೆ 6:30 ಕೋಲಾರಗೆ ಹೋಗುವಾಗ ಮೆಸೇಜ್ ಬಂತು. ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ರಿಪೋರ್ಟ್ ಕೊಡಿ ಅಂತ ಹಿರಿಯ ಅಧಿಕಾರಿಗಳಿಗೆ ಕೇಳಿದ್ದೆ. ಮೀಸಲು ಅರಣ್ಯ ಪ್ರದೇಶ ಅದು. ನಾಡ ಬಂದೂಕುಧಾರಿಗಳು ಯಾವುದೇ ಬಂದೂಕಿಗೆ ಲೈಸೆನ್ಸ್ ಇಲ್ಲ. ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿದ್ದಾರೆ. ನಾಲ್ಕು …

Read More »

ವಿಕಸಿತ ಭಾರತಕ್ಕಾಗಿ ಶ್ರಮಿಸೋಣ: ಮೂಗನೂರಮಠ

ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಸ್ವತಂತ್ರ ದಿನಾಚರಣೆ ಬಾಗಲಕೋಟೆ: ಸರ್ವೋತ್ತಮ ಆಡಳಿತ, ಸುಭದ್ರ ರಾಜ್ಯ ನಿರ್ಮಾಣಕ್ಕಾಗಿ ಜ್ಞಾನ, ಕೌಶಲ್ಯ ಮತ್ತು ಸದ್ಗುಣಗಳಿಂದ ಹೋರಾಡುವುದರ ಮೂಲಕ ಸ್ವತಂತ್ರ ಭಾರತವನ್ನು ವಿಕಸಿತ ಭಾರತವನ್ನಾಗಿ ಮಾಡುವ ಹೊಣೆಗಾರಿಕೆ ಪ್ರತಿಯೊಬ್ಬ ಪ್ರಜೆಯ ಮೇಲಿದೆ ಎಂದು ಪ್ರಾಚಾರ್ಯರಾದ ಎಸ್. ಆರ್ ಮೂಗನೂರಮಠ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಕಲಾಹಾವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡಿದರು. ಹೋರಾಟಗಾರರ ಪ್ರಾಣ ಬಲಿದಾನದಿಂದ ಬಂದ ಸ್ವಾತಂತ್ರ್ಯ ಭಾರತವನ್ನು ವಿಕಸಿತ …

Read More »

ನೈಜಿರಿಯಾದ ಕತ್ತಲಲ್ಲಿ ಕಾರಿನ ಬಾಗಿಲು ಬಡಿದ ಮಕ್ಕಳು ಇಂದು ವೈದ್ಯರು: ಸದ್ಗುರು ಶ್ರೀ ಮಧುಸೂದನ ಸಾಯಿ

ಬೆಂಗಳೂರು: ನೈಜಿರಿಯಾದಲ್ಲಿ ನನ್ನ ಕಾರು ಹೋಗುತ್ತಿದ್ದಾಗ ಕತ್ತಲಿನಲ್ಲಿ ಇಬ್ಬರು ಮಕ್ಕಳು ನನ್ನ ಕಾರಿನ ಬಾಗಿಲು ತಟ್ಟಿದ್ದರು. ಅದು ಅಪಾಯಕಾರಿ ಸನ್ನಿವೇಶವಾಗಿದ್ದರೂ ನಾನು ಗಾಜು ಇಳಿಸಿ ಮಕ್ಕಳನ್ನು ನೋಡಿದೆ. ಅವರು ವೈದ್ಯರಾಗಬೇಕು (Doctor) ಎಂದು ಕೋರಿದರು. ಆ ಬಾಲಕ, ಬಾಲಕಿಯರು ಇಂದು ಮುದ್ದೇನಹಳ್ಳಿಯಲ್ಲಿ  ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ ಎಂದು “ಒನ್ ವಲ್ಡ್ ಒನ್ ಫ್ಯಾಮಿಲಿ ಮಿಷನ್” ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ವಿವರಿಸಿದರು. ನಗರದ  ಅರಮನೆ ಮೈದಾನದಲ್ಲಿ ಶುಕ್ರವಾರ (ಆ …

Read More »

ಅಂಡಮಾನ್‌ ಸಮುದ್ರದಲ್ಲಿ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ – ಆರ್‌.ಅಶೋಕ್‌ ಪುತ್ರ ಶರತ್‌ಗೆ ಸನ್ಮಾನ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸ್ವರಾಜ್‌ ದ್ವೀಪ್‌ನಲ್ಲಿ ಸಮುದ್ರದ ನೀರಿನಲ್ಲಿ ಅತಿ ದೊಡ್ಡ ರಾಷ್ಟ್ರಧ್ವಜ  ಹಾರಿಸುವ ಮೂಲಕ ಐತಿಹಾಸಿಕ ಸಾಧನೆಯಲ್ಲಿ ಭಾಗಿಯಾದ ಬೆಂಗಳೂರಿನ ಶರತ್ ಅಶೋಕ್  ಅವರನ್ನು ಅಂಡಮಾನ್‌ ನಿಕೋಬಾರ್‌ನ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ.ಜೋಶಿ ಸನ್ಮಾನಿಸಿದರು. ಲೋಕ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿನ್ನೆಸ್ ವಿಶ್ವ ದಾಖಲೆಯ ಪ್ರಮಾಣ ಪತ್ರವನ್ನು ಲೆಪ್ಟಿನೆಂಟ್‌ ಗರ್ವನರ್‌ ಅಡ್ಮಿರಲ್ ಡಿ.ಕೆ.ಜೋಶಿ, ಶರತ್‌ ಅಶೋಕ್‌ ಅವರಿಗೆ ನೀಡಿ ಸನ್ಮಾನಿಸಿದರು. 2026 ರ ಮೇ 2 …

Read More »

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

ಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಯಾತ್ರೆಯಲ್ಲಿ ಈಸೂರು ದಂಗೆಯ ಸ್ತಬ್ಧಚಿತ್ರಗಳು ಜನರ ಗಮನ ಸೆಳೆಯಿತು. ತಿರಂಗ ಯಾತ್ರೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಭಾಗಿಯಾಗಿ, ದೇಶದ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ದೇಶಕ್ಕಾಗಿ ಏನಾದ್ರೂ ಕೊಡುಗೆ ನೀಡುವ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು. ‘ಏಕ್ ಭಾರತ್ ಶ್ರೇಷ್ಠ ಭಾರತ್’ ತಿರಂಗಾ ಯಾತ್ರೆ ಮೂಲಕ ದೇಶದ ಜನರನ್ನು …

Read More »

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

ಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್‌ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ನೆರವೇರಿಸಿದ ಧ್ವಜಾರೋಹಣ ಇದಾಗಿದೆ. ಸಿಎಂ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ವಂದೇ ಮಾತರಂ ಗೀತೆ ಹಾಗೂ ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಪ್ರಸ್ತುತಿ ಪಡಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸಿದ …

Read More »

ಬೆಂಗಳೂರಲ್ಲಿ ಶಂಕಿತ ಉಗ್ರನ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ಶಂಕಿತ ಉಗ್ರನ ಬಂಧನವಾಗಿದೆ. ಪಶ್ಚಿಮ ಬಂಗಾಳ ಮೂಲದ ಅಸಾಫುಲ್‌ ಮಲ್ಲಿಕ್‌ ಎಂಬಾತನನ್ನು ಸೆರೆ ಹಿಡಿಯಲಾಗಿದೆ. ಪಾಕಿಸ್ತಾನ ಸೇನೆಯಿಂದ ನಡೆಯುವ ದೌರ್ಜನ್ಯ, ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ವಿವಾದ‌, ಇಸ್ರೇಲ್ ದೇಶಕ್ಕೆ ಪಾಕಿಸ್ತಾನ ಸೇನೆ ಸಹಾಯ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದ. ಅಲ್ಲದೇ, ಮುಸ್ಲಿಮರಿಗೆ ಭಾರತದಲ್ಲಿ ತೊಂದರೆ ಆದರೆ ಇಲ್ಲಿಯೂ ಪ್ರತೀಕಾರಕ್ಕೆ ಮಲ್ಲಿಕ್ ತೀರ್ಮಾನಿಸಿದ್ದ. ​ಪಾಕಿಸ್ತಾನ ಸೇನೆ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಟಿಟಿಪಿ ಎಂಬ ಉಗ್ರ ಸಂಘಟನೆ ಸಂಪರ್ಕ …

Read More »

80ನೇ ಸ್ವಾತಂತ್ರ್ಯೋತ್ಸವದ ಮುನ್ನಾದಿನ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮಾಡಿದ ಭಾಷಣದ ಪೂರ್ಣ ಪಾಠ..

ನವದೆಹಲಿ: 80ನೇ ಸ್ವಾತಂತ್ರ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದ ಪೂರ್ಣ ಪಾಠ ಇಲ್ಲಿದೆ. ನನ್ನ ಪ್ರೀತಿಯ ದೇಶವಾಸಿಗಳೇ ನಮಸ್ಕಾರ! ನಮ್ಮ ಸ್ವಾತಂತ್ರ್ಯೋತ್ಸವದ ಮುನ್ನಾದಿನದಂದು, ಈ ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇನ್ನು ಕೆಲವೇ ಗಂಟೆಗಳಲ್ಲಿ ನಮ್ಮ ದೇಶ ಸ್ವಾತಂತ್ರ್ಯ ಪಡೆದ 80ನೇ ವರ್ಷದ ಶುಭಾರಂಭಕ್ಕೆ ಸಾಕ್ಷಿಯಾಗಲಿದೆ. ದೇಶದಲ್ಲಿರುವ ಹಾಗೂ ವಿದೇಶಗಳಲ್ಲಿ ನೆಲೆಸಿರುವ ಎಲ್ಲ ಭಾರತೀಯರೂ ಈ ರಾಷ್ಟ್ರೀಯ ಹಬ್ಬವನ್ನು ಅತ್ಯಂತ …

Read More »