Breaking News

Monthly Archives: ಆಗಷ್ಟ್ 2026

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?

ಬೆಂಗಳೂರು: ಕತ್ರಿಗುಪ್ಪೆಯ ಕಾಮಾಕ್ಯ ಎಲೆಕ್ಟ್ರಿಕಲ್ ಡಿಪೋ 13ರಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಪ್ರತಿಭಟನೆ ನಡೆಸಿದ್ದಾರೆ. ಇದರ ಪರಿಣಾಮ 100ಕ್ಕೂ ಹೆಚ್ಚು ಬಿಎಂಟಿಸಿ  ಇವಿ ಬಸ್‌ಗಳ ಕಾರ್ಯಚರಣೆ ಸ್ಥಗಿತಗೊಂಡಿತ್ತು. ಮಾತುಕತೆ ಬಳಿಕ ಬಸ್‌ ಸೇವೆ ಪುನರಾರಂಭಗೊಂಡಿದೆ.ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಚಾಲಕರು ವೇತನ ಹೆಚ್ಚಳಕ್ಕೆ ಆಗ್ರಹಿಸಿದ್ದಾರೆ. ಬೇರೆ ಡಿಪೋಗಳಲ್ಲಿ ಚಾಲಕರಿಗೆ ದಿನಕ್ಕೆ 950 ರೂ. ನೀಡಲಾಗುತ್ತಿದೆ. ಆದರೆ ನಮಗೆ 850 ರೂ. ನಿಗದಿ ಮಾಡಲಾಗಿದೆ. ಹೀಗಾಗಿ ನಮಗೂ 950 …

Read More »

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ – ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್

ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ  ಸೆಲ್‌ನಲ್ಲಿ ಮೊಬೈಲ್ ಪತ್ತೆಯಾದ ಕೇಸ್ ಸಂಬಂಧ ಜೈಲಧಿಕಾರಿಯನ್ನು ಸಸ್ಪೆಂಡ್ ಮಾಡಿ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣ ರಂಗಾಪುರ ಅನ್ನು ಸಸ್ಪೆಂಡ್ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಖೈದಿಗಳು ಧರಿಸುವ ಬಿಳಿ ಬಟ್ಟೆ ಧರಿಸ್ತಿರಲಿಲ್ಲ. ಇದೀಗ ಅಂಡ್ರಾಯ್ಡ್ ಮೊಬೈಲ್ ಸಹ ಸಿಕ್ಕಿದೆ. ಹೀಗಾಗಿ ಕರ್ತವ್ಯ ಲೋಪದ ಕಾರಣ ಕೇಳಿ ಜೈಲು …

Read More »

ಶಿವಗಂಗೆ ಟೆಕ್ಕಿ ಮಿಸ್ಸಿಂಗ್ ಕೇಸ್‌: ಪ್ಲ್ಯಾನ್ ಮಾಡಿಯೇ ಅದ್ವೈತ್ ನಾಪತ್ತೆ ?

ಬೆಂಗಳೂರು: ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾಗಿರುವ ಟೆಕ್ಕಿ  ಅದ್ವೈತ್ ಉಪಾಧ್ಯಾಯ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ಅದ್ವೈತ್ ಆತ್ಮಹತ್ಯೆ  ಮಾಡಿಕೊಂಡಿರುವಂತೆ ಬಿಂಬಿಸಿ ಉದ್ದೇಶಪೂರ್ವಕವಾಗಿ ನಾಪತ್ತೆಯಾಗಿದ್ದಾನಾ ಎಂಬ ಅನುಮಾನ ಪೊಲೀಸರಿಗೆ ಮೂಡಿದೆ. ಕಳೆದ ಮೂರು ದಿನಗಳಿಂದ ಪೊಲೀಸರ ಐದು ತಂಡಗಳು ಶಿವಗಂಗೆ ಬೆಟ್ಟವನ್ನು ಇಂಚಿಂಚಾಗಿ ಪರಿಶೀಲನೆ ನಡೆಸಿವೆ. ಬೆಟ್ಟದ ಹಲವು ಭಾಗಗಳಲ್ಲಿ ಶೋಧ ನಡೆಸಿದರೂ, ಇದುವರೆಗೂ ಅದ್ವೈತ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಅಥವಾ ಆತನಿಗೆ ಏನಾದರೂ ಆಗಿರುವುದಕ್ಕೆ ಒಂದೇ ಒಂದು …

Read More »

ತಮಿಳುನಾಡಿಗೆ ನೀರು ಬಿಟ್ರೆ ನಾನೇ ಹೋರಾಟ ಮಾಡ್ತೀನಿ: ಗಣಿಗ ರವಿಕುಮಾರ್

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ರಾಜ್ಯ ಸರ್ಕಾರದ ವಿರುದ್ಧ ನಾನೇ ಹೋರಾಟ ಮಾಡುತ್ತೇನೆ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ  ನೀರು ಬಿಡಬಾರದು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ತಮಿಳುನಾಡಿಗೆ ನೀರು ಬಿಟ್ರೆ ನಾನೇ ಹೋರಾಟ ಮಾಡ್ತೀನಿ. ನಾನು ರೈತರ ಪರ, ರೈತರಿಗಾಗಿ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ. ರಾಜ್ಯದ ಸಂಸದರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. …

Read More »

ಜೈಲಲ್ಲಿ ಮೊಬೈಲ್ ಪತ್ತೆ | ಪ್ರಜ್ವಲ್ ರೇವಣ್ಣ ವಿರುದ್ಧ FIR – ಸಿಸಿಬಿ ಇನ್ಸ್‌ಪೆಕ್ಟರ್‌ ನೀಡಿದ ದೂರಿನಲ್ಲೇನಿದೆ?

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಈ ಸಂಬಂಧ ಎಫ್‌ಐಆರ್  ದಾಖಲಾಗಿದೆ. ಸಿಸಿಬಿ ಅಧಿಕಾರಿಗಳ ದಾಳಿ ವೇಳೆ ಮೊಬೈಲ್ ಪತ್ತೆಯಾಗಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿಸಿಬಿ ಇನ್ಸ್‌ಪೆಕ್ಟರ್‌ ಸುಬ್ರಮಣ್ಯಸ್ವಾಮಿ ಅವರು ಪೊಲೀಸರಿಗೆ ವಿವರವಾದ ದೂರು ನೀಡಿದ್ದಾರೆ. ದೂರಿನಲ್ಲೇನಿದೆ? ಬೆಂಗಳೂರು ನಗರ …

Read More »

ಶಿವಂ ಅಸೋಸಿಯೇಟ್ಸ್, ಅಂಗ ಸಂಸ್ಥೆಗಳಿಂದ ಸುಮಾರು 2110 ಕೋಟಿ ವಂಚನೆ: ಇಡಿ

ಬೆಳಗಾವಿ: ಶಿವಂ ಅಸೋಸಿಯೇಟ್ಸ್ (ವಿರುದ್ಧದ ವಂಚನೆ ಪ್ರಕರಣಕ್ಕೆ ಇದೀಗ ಜಾರಿ  ನಿರ್ದೇಶನಾಲಯ (ED) ಎಂಟ್ರಿಯಾಗಿದೆ. ದಾಳಿ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು ವಿವರಗಳು ಬಹಿರಂಗವಾಗಿವೆ. ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ವಿರುದ್ಧ ಜಿಲ್ಲಾಡಳಿತ ಸಾರಿದ್ದ ಸಮರದ ಬಳಿಕ ಇದೀಗ ಪ್ರಕರಣವನ್ನು ಜಾರಿ ನಿರ್ದೇಶನಾಲಯ  ಕೈಗೆತ್ತಿಕೊಂಡಿತ್ತು. ದಾಳಿ ನಡೆಸಿದ ಬಳಿಕ ಇಡಿ ತನ್ನ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಶಿವಾನಂದ ನೀಲಣ್ಣವರ್ ಒಡೆತನದ …

Read More »

ಡಿಕೆಶಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

ಬೆಂಗಳೂರು: ಹಲವು ಸುತ್ತಿನ ಸಭೆಯ ಬಳಿಕ ಡಿಕೆ ಶಿವಕುಮಾರ್‌  ಸಂಪುಟದ ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಚಲುವರಾಯಸ್ವಾಮಿ ಅವರಿಗೆ ಕೃಷಿ, ಜಮೀರ್‌ ಅಹ್ಮದ್‌ ಅವರಿಗೆ ಗೃಹ ಮತ್ತು ವಕ್ಫ್‌ ಖಾತೆಯನ್ನು ನೀಡಲಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಮುನಿಯಪ್ಪ ಅವರಿಗೆ ಆಹಾರ ಖಾತೆಯನ್ನು ನೀಡಲಾಗಿತ್ತು. ಆದರೆ ಈ ಬಾರಿ ಸಮಾಜ ಕಲ್ಯಾಣ ಸಚಿವಾಲಯವನ್ನು ನೀಡಲಾಗಿದೆ. ಮುನಿಯಪ್ಪ ಅವರು ಸಮಾಜಕಲ್ಯಾಣ ಖಾತೆ ಬೇಕೇಂದು ಪಟ್ಟು ಹಿಡಿದಿದ್ದರು. ಅದರಂತೆ ಈಗ ಆ ಖಾತೆಯನ್ನೇ ಹಂಚಿಕೆ ಮಾಡಲಾಗಿದೆ. …

Read More »

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ದಿಢೀರ್‌ ರಾಜೀನಾಮೆ

ಮುಂಬೈ: ಟಾಟಾ ಸನ್ಸ್ ಕಾರ್ಯಾಧ್ಯಕ್ಷ ಎನ್. ಚಂದ್ರಶೇಖರನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ಅವಧಿ ಪೂರ್ಣಗೊಂಡ ನಂತರ ಮರುನೇಮಕಗೊಳ್ಳಲು ತಾನು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 18 ರಂದು ನಡೆಯಲಿರುವ ಟಾಟಾ ಸನ್ಸ್ ವರ್ಷಿಕ ಮಹಾಸಭೆಗೂ ಮುನ್ನವೇ ಈ ಮಹತ್ವದ ಬೆಳವಣಿಗೆ ನಡೆದಿದೆ. 2027ರ ಫೆಬ್ರವರಿವರೆಗೆ ಚಂದ್ರಶೇಖರನ್ ಅವರ ಅಧಿಕಾರವಧಿ ಇದೆ. ಆಗಸ್ಟ್ 18ರ ಎಜಿಎಂ ಸಭೆಯಲ್ಲಿ ಅವರ ಮರುನೇಮಕದ ಕುರಿತು ಪಾಲುದಾರರು ಮತದಾನ ಮಾಡಬೇಕಿತ್ತು. ಈ …

Read More »

ಯತೀಂದ್ರಗೆ ಆರೋಗ್ಯ ಇಲಾಖೆ? – ವಕ್ಫ್ ಖಾತೆಗೆ ಖಾದರ್‌ ಬೇಡಿಕೆ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಚಿವರ ಖಾತೆ ಹಂಚಿಕೆಗೆ ತೀವ್ರ ಕುತೂಹಲ ಮೂಡಿದ್ದು, ಕಡೆಗಳಿಗೆಯಲ್ಲಿ ಪ್ರಮುಖ ಖಾತೆಗಳಿಗಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಸಚಿವ ಯು.ಟಿ. ಖಾದರ್ ಅವರ ಬಳಿ ಇರುವ ಆರೋಗ್ಯ ಇಲಾಖೆಯನ್ನು ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ವಹಿಸುವ ಸಾಧ್ಯತೆಗಳಿವೆ. ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ತಮಗೆ ನೀಡಿದರೆ, ಆರೋಗ್ಯ ಇಲಾಖೆಯನ್ನು ಬಿಟ್ಟುಕೊಡಲು ಯು.ಟಿ. ಖಾದರ್ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಈಗ ಜಮೀರ್ ಅಹಮದ್ ಖಾನ್ ಅವರಿಗೆ ವಕ್ಫ್ ಹಾಗೂ …

Read More »

ವಾಟಾಳ್ ಕರೆ ನೀಡಿದ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ವಾಟಾಳ್ ನಾಗರಾಜ್  ನೇತೃತ್ವದಲ್ಲಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಬಂದ್‌ನಿಂದ ಸಾರ್ವಜನಿಕರಿಗೆ ತೊಂದರೆಯೇ ಹೆಚ್ಚು. ಹೀಗಾಗಿ ಈಗಿನ ಪರಿಸ್ಥಿತಿಯಲ್ಲಿ ಬಂದ್ ನಡೆಸುವುದು ಬೇಡ., ಅದರ ಬದಲು ವಿಭಿನ್ನ ರೀತಿಯಲ್ಲಿ ಹೋರಾಟ ಮಾಡೋಣ ಎಂದು ವಾಟಾಳ್ ನಾಗರಾಜ್ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ. …

Read More »