Breaking News

Monthly Archives: ಆಗಷ್ಟ್ 2026

ಹಾಸ್ಯನಟ ಚಿಕ್ಕಣ್ಣ-ಪಾವನಾ ಅದ್ಧೂರಿ ರಿಸೆಪ್ಷನ್; ಗಣ್ಯರು, ಸಿನಿತಾರೆಯರಿಂದ ವಿಶ್

ಕಾಮಿಡಿ ಕಿಂಗ್ ಎಂದೇ ಗುರುತಿಸಿಕೊಂಡಿರುವ ಸ್ಯಾಂಡಲ್‌ವುಡ್ ಹಾಸ್ಯನಟ ಚಿಕ್ಕಣ್ಣ  ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ಉದ್ಯಮಿ ಪಾವನಾ ಗೌಡ ಜೊತೆ ನಾಳೆ ಭಾನುವಾರ ಸಪ್ತಪದಿ ತುಳಿಯಲಿದ್ದಾರೆ. ಮದುವೆಗೂ ಮೊದಲು ಇಂದು ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ಅದ್ಧೂರಿ ರೆಸೆಪ್ಷನ್ ಆಯೋಜಿಸಲಾಗಿದೆ. ಆರತಕ್ಷತೆ ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಹಾಗೂ ಪಾವನಾ ಗೌಡ ಜೋಡಿ ಎಲ್ಲರ ಗಮನಸಳೆದಿದ್ದಾರೆ. ಚಿಕ್ಕಣ್ಣ ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಶರ್ಟ್ ಹಾಗೂ ನೀಲಿ ಬ್ಲೇಜರ್ ಧರಿಸಿದ್ದರೆ, ಪಾವನಾ ಗೌಡ ನೀಲಿ ಬಣ್ಣದ …

Read More »

ಕೆಪಿಎಸ್‌ಸಿ ನೇಮಕಾತಿ ಹಗರಣ – IAS ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅರೆಸ್ಟ್‌

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅವರನ್ನು ಬಂಧಿಸಲಾಗಿದೆ. ವಿಚಾರಣೆಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಗ್ಯಾನೇಂದ್ರ ಅವರನ್ನು ಸಿಐಡಿ ಅರೆಸ್ಟ್‌ ಮಾಡಿದೆ. ನಿನ್ನೆ 11 ಗಂಟೆಗಳ ಕಾಲ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಇಂದು ಮಧ್ಯಾಹ್ನ 12 ಗಂಟೆಯಿಂದ ಮತ್ತೆ ವಿಚಾರಣೆ ನಡೆಸಿದ್ದರು.

Read More »

ಟಾಕ್ಸಿಕ್‌ ಸಿನಿಮಾ, ಯಶ್‌ ನಟನೆ ಹಾಡಿಹೊಗಳಿದ ರಿಷಬ್‌ ಶೆಟ್ಟಿ

ಟಾಕ್ಸಿಕ್‌ ಸಿನಿಮಾ ಹಾಗೂ ಯಶ್‌ ಅವರ ಅಭಿನಯವನ್ನು ಕಾಂತಾರ ನಟ ರಿಷಬ್‌ ಶೆಟ್ಟಿ ಹಾಡಿಹೊಗಳಿದ್ದಾರೆ. ಕನ್ನಡ ಸಿನಿಮಾವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ನಿಮ್ಮ ಬದ್ಧತೆಯನ್ನು ನಾವು ಗೌರವಿಸುತ್ತೇವೆ ಎಂದು ರಿಷಬ್‌ ಶ್ಲಾಘಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ರಿಷಬ್‌ ಶೆಟ್ಟಿ, ಒಬ್ಬ ಕಲಾವಿದನಾಗಿ, ನೀವು ಒಂದು ಪಾತ್ರವನ್ನು ನಿರ್ವಹಿಸಿದಾಗ, ಅದನ್ನು ನಿಮ್ಮ ಹೃದಯದಿಂದ ಜೀವಂತಗೊಳಿಸಲು ಪ್ರಯತ್ನಿಸುತ್ತೀರಿ. ಇಲ್ಲಿ, ಒಬ್ಬ ಪ್ರಭಾವಿ ವ್ಯಕ್ತಿಯ ಹೋರಾಟವನ್ನು ಚಿತ್ರಿಸಿರುವ ದೃಢವಿಶ್ವಾಸದಿಂದ ನಾನು ನಿಜವಾಗಿಯೂ ಪ್ರಭಾವಿತನಾಗಿದ್ದೇನೆ ಎಂದು …

Read More »

ಈ ಬಾರಿ ದಸರಾ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ: ಸಿಎಂ

ಮೈಸೂರು: ಈ ಬಾರಿಯ ದಸರಾವನ್ನುಅದ್ಧೂರಿಯಾಗಿ ಮತ್ತು ಬಹಳ ವಿಭಿನ್ನವಾಗಿ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾದ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ. ಮಿಲಿಟರಿ, ಸೇನಾ ಪಡೆ ಮೆರವಣಿಗೆಯಲ್ಲಿ ಬರಲಿದೆ. ಕನ್ನಡದ ಚಿತ್ರ ನಟ, ನಟಿಯರು ಕೂಡ ಮೆರವಣಿಗೆಯಲ್ಲಿ ಸಾಗಲಿದ್ದಾರೆ. ಒಂದೇ ಪ್ರಕಾರದ 5 ಜಾನಪದ ಕಲಾವಿದರಿಗೆ ಈ ಬಾರಿ ಅವಕಾಶ ಇಲ್ಲ. ಬದಲಾದ ಕಾಲಕ್ಕೆ ತಕ್ಕಂತೆ ಮೆರವಣಿಗೆಯ ರೂಪವನ್ನ …

Read More »

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವು

ಚಿಕ್ಕಮಗಳೂರು: ಜೂಜು ಅಡ್ಡೆ ಮೇಲೆ ಪೊಲೀಸರು  ದಾಳಿ ನಡೆಸಿದ ವೇಳೆ ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಕಾಫಿತೋಟದಲ್ಲಿ ನಡೆದಿದೆ. ಗುಡ್ಡೆಕೊಪ್ಪ ಗ್ರಾಮದ ರಮೇಶ್ (35) ಮೃತ ದುರ್ದೈವಿ. ಬಾಸಾಪುರ ಅರಣ್ಯ ಪ್ರದೇಶದಲ್ಲಿ ಕಳೆದ ರಾತ್ರಿ ಗುಂಪೊಂದು ಅಂದರ್-ಬಾಹರ್ ಆಡುತ್ತಿತ್ತು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಬಾಳೆಹೊನ್ನೂರು ಪೊಲೀಸರು ದಾಳಿ ನಡೆಸಿದ್ದರು. ಅಲ್ಲಿದ್ದ 9 ಜನ ಪರಾರಿಯಾಗಲು ಯತ್ನಿಸಿದ್ದು, ಅದರಲ್ಲಿ ಇಬ್ಬರನ್ನು …

Read More »

2028ಕ್ಕೆ ನಾಗೇಂದ್ರ ಎಲ್ಲಿ ಸ್ಪರ್ಧಿಸುತ್ತಾರೋ, ನಾನು ಅಲ್ಲೇ ನಿಲ್ತೀನಿ: ಸವಾಲು ಸ್ವೀಕರಿಸಿದ ಶ್ರೀರಾಮುಲು

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಚುನಾವಣಾ ಅಖಾಡಕ್ಕೆ ಬನ್ನಿ ಎಂಬ ನಾಗೇಂದ್ರ  ಸವಾಲನ್ನು ಮಾಜಿ ಸಚಿವ ಶ್ರೀರಾಮುಲು ಸ್ವೀಕರಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಶ್ರೀರಾಮುಲು, ನಾಗೇಂದ್ರ ಜನತಾ ನ್ಯಾಯಾಲಯಕ್ಕೆ ಬನ್ನಿ ಅಂದಿದ್ದಾರೆ. ಜನತಾ ನ್ಯಾಯಾಲಯಕ್ಕೆ ಹೋಗಲು ಈಗಲೇ ಯಾಕೆ ಅಷ್ಟೊಂದು ಅವಸರ ಅವರಿಗೆ? ಈಗ ಅವರೇ ರಾಜೀನಾಮೆ ಕೊಟ್ಟು ಅವರೇ ಸ್ಪರ್ಧಿಸಲಿ. ಆದರೆ, 2028 ಕ್ಕೆ ನಾಗೇಂದ್ರ ಎಲ್ಲಿ ಸ್ಪರ್ಧೆ ಮಾಡ್ತಾರೋ, ನಾನೂ ಅಲ್ಲೇ ನಿಲ್ತೇನೆ ಅಂತ ಶ್ರೀರಾಮುಲು …

Read More »

ಆಯುರ್ವೇದ ಕ್ಷೇತ್ರದ ಸಾಧನೆಗೆ ಡಾ. ರೂಪೇಶ್ ಸಾಳುಂಕೆ ಅವರಿಗೆ ‘ಕರ್ನಾಟಕ ಆರೋಗ್ಯ ರಕ್ಷಣಾ ವೈದ್ಯ ರತ್ನ’ ಪ್ರಶಸ್ತಿ

25 ವರ್ಷಗಳ ಆಯುರ್ವೇದ ಸೇವೆ ಹಾಗೂ ಸಾಮಾಜಿಕ ಕಾಳಜಿಗೆ ಸಂದ ಗೌರವ ಬೆಳಗಾವಿ: ಆಯುರ್ವೇದ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಲ್ಲಿಸುತ್ತಿರುವ ಗಣನೀಯ ಸೇವೆ, ಆಯುರ್ವೇದದ ಪ್ರಚಾರ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿಯ ಖ್ಯಾತ ಆಯುರ್ವೇದ ತಜ್ಞ ಡಾ. ರೂಪೇಶ್ ಸಾಳುಂಕೆ ಅವರಿಗೆ ಪ್ರತಿಷ್ಠಿತ ‘ಕರ್ನಾಟಕ ಆರೋಗ್ಯ ರಕ್ಷಣಾ ವೈದ್ಯ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಆಗಸ್ಟ್ 23, 2026ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಸಿಗ್ನೇಚರ್ ಮೀಡಿಯಾ …

Read More »

ಅ.3 ಮತ್ತು 4ರಂದು ‘ಸತೀಶ್ ಅಣ್ಣಾ ಚೆಸ್ ಟೂರ್ನಾಮೆಂಟ್ ಸೀಸನ್–04’: ಸಚಿವ ಸತೀಶ್ ಜಾರಕಿಹೊಳಿ

  ಬೆಳಗಾವಿ: ಪ್ರತಿ ವರ್ಷದಂತೆ ಈ ಬಾರಿಯೂ ನಾಲ್ಕನೇ ಬಾರಿಗೆ ‘ಸತೀಶ್ ಅಣ್ಣಾ ಚೆಸ್ ಟೂರ್ನಾಮೆಂಟ್’ ಆಯೋಜಿಸಲಾಗುತ್ತಿದ್ದು, ಅಕ್ಟೋಬರ್ 3 ಮತ್ತು 4ರಂದು ನಗರದ ಮರಾಠಾ ಮಂದಿರದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಶನಿವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕಳೆದ ಮೂರು ವರ್ಷಗಳಿಂದ ಅಂತಾರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಗಳನ್ನು ಯಶಸ್ವಿಯಾಗಿ ಆಯೋಜಿಸಲಾಗುತ್ತಿದೆ. ಚೆಸ್ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ …

Read More »

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಹಿಂಡಲಗಾದಲ್ಲಿ ರೇಣುಕಾ ಮಂದಿರದ ಕಾಂಪೌಂಡ್ ವಾಲ್‌, ಬಸರಿಕಟ್ಟಿಯಲ್ಲಿ ಶಾಲಾ ಕೊಠಡಿಗಳ ಉದ್ಘಾಟನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಚಾಲನೆ ನೀಡಲಾಯಿತು. ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಶಿಕ್ಷಣ, ಧಾರ್ಮಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಹಿಂಡಲಗಾದಲ್ಲಿ ರೇಣುಕಾ ಮಂದಿರದ ಕಾಂಪೌಂಡ್ ವಾಲ್‌ಗೆ ಭೂಮಿಪೂಜೆ ಹಿಂಡಲಗಾ ಗ್ರಾಮದ ಶ್ರೀ ರೇಣುಕಾ ಮಂದಿರದ ಆವರಣಕ್ಕೆ ಕಾಂಪೌಂಡ್ ವಾಲ್ ನಿರ್ಮಿಸುವ ಕಾಮಗಾರಿಗೆ …

Read More »

ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ಗೊತ್ತಿದೆ: ಡಿಸಿ ವಿರುದ್ಧ ರೇವಣ್ಣ ಗರಂ

ಹಾಸನ: ದಬ್ಬಾಳಿಕೆ ಮಾಡಲಿ ಯಾವ ರೀತಿ ರಿಪೇರಿ ಮಾಡಬೇಕು ಗೊತ್ತಿದೆ ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರ ವಿರುದ್ಧ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಕಿಡಿಕಾರಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಗ್ರಾಮ ಪಂಚಾಯ್ತಿ ಚುನಾವಣೆಗೆ ಮೀಸಲು ನಿಗದಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಡಿಸಿಯವರು ಮೀಸಲು ನಿಗದಿ ಸಂಬಂಧ ಯಾಕೆ ತಹಸೀಲ್ದಾರ್‌ಗೆ ಪತ್ರ ಬರೆದರು? ಅವರಿಂದ ವರದಿ ಪಡೆದ ಬಳಿಕ ಮೀಸಲು ನಿಗದಿ ಬದಲಾವಣೆ ಮಾಡಿದ್ದು ಯಾಕೆ? …

Read More »