ಕೋಲಾರ: ಸಾಲ (Debt) ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಮಗ ಕೊಂದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಇನ್ನೂ ಘಟನೆ ಸಂಬಂಧ 24 ಗಂಟೆಯೊಳಗೆ ಪ್ರಕರಣ ಭೇದಿಸಿ ಆರೋಪಿಯನ್ನ ಬಂಧಿಸಲಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸಾಲ ತೀರಿಸಲು ತಂದೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಮಗನೇ ತಂದೆಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಇದಾಗಿದೆ. ಬಂಗಾರಪೇಟೆ ಪಟ್ಟಣದ ವಿಜಯನಗರ …
Read More »Daily Archives: ಸೆಪ್ಟೆಂಬರ್ 3, 2026
ರಾಹುಲ್ ಗಾಂಧಿ ಸಾರ್ವಕರ್‌ರನ್ನ ಮುಸ್ಲಿಮರ ದ್ವೇಷಿಯಂತೆ ಬಿಂಬಿಸಿದ್ದಾರೆ: ಸಂಬಂಧಿ
ಮುಂಬೈ: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮುಸ್ಲಿಮರನ್ನು ದ್ವೇಷಿಸುತ್ತಿರಲಿಲ್ಲ. ಬದಲಿಗೆ ಅವರ ಪ್ರಗತಿಗೆ ಅಗತ್ಯವಾದ ಮಾರ್ಗಗಳನ್ನು ತಮ್ಮ ಬರಹಗಳಲ್ಲಿ ವಿವರಿಸಿದ್ದರು ಎಂದು ಸಾವರ್ಕರ್ ಅವರ ಮೊಮ್ಮಗನ ಮಗ ಸತ್ಯಕಿ ಸಾವರ್ಕರ್ ಪುಣೆ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 2023ರಲ್ಲಿ ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಭಾಷಣಕ್ಕೆ ಸಂಬಂಧಿಸಿದಂತೆ ಸತ್ಯಕಿ ಸಾವರ್ಕರ್ ದಾಖಲಿಸಿರುವ ಮಾನಹಾನಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಸತ್ಯಕಿ ಅವರು ಸಾಕ್ಷ್ಯ ಹೇಳಿಕೆ ನೀಡುತ್ತಿದ್ದು, …
Read More »ಭೂ ಮಂಜೂರಾತಿಗಾಗಿ ಮಾಜಿ ಯೋಧ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ದೇಶಕ್ಕಾಗಿ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ, ಶತ್ರುಗಳ ವಿರುದ್ಧ ಹೋರಾಟದ ವೇಳೆ ಕಾಲಿಗೆ ಗಾಯ ಮಾಡಿಕೊಂಡಿದ್ದ ಮಾಜಿ ಯೋಧರೊಬ್ಬರು ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿದ್ದ ಶಿವಾನಂದ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿರುವ ಮಾಜಿ ಯೋಧ. ಶಿವಾನಂದ ರೆಡ್ಡಿ ಎಂಎಲ್‌ಐ-ಮರಾಠ ಲೈಟ್ ಇನ್ಫೆಂಟ್ರಿ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸಿದ್ದರು. ಯುದ್ಧದ ಸಂದರ್ಭದಲ್ಲಿ ಕಾಲಿಗೆ ಗಾಯಗೊಂಡಿದ್ದ ಶಿವಾನಂದ ರೆಡ್ಡಿ ನಿವೃತ್ತಿಯ ಬಳಿಕ ಸರ್ಕಾರದಿಂದ …
Read More »ತರಗತಿ ನಡೆಯುತ್ತಿದ್ದಗಲೇ ಕೊಠಡಿಯ ಮೇಲ್ಛಾವಣಿ ಕುಸಿತ – ನಾಲ್ವರು ಮಕ್ಕಳಿಗೆ ಗಾಯ
ಬಾಗಲಕೋಟೆ: ತರಗತಿಯಲ್ಲಿ ಶಿಕ್ಷಕರಿಂದ ಮಕ್ಕಳು ಪಾಠ ಕೇಳುತ್ತಿದ್ದ ವೇಳೆಯಲ್ಲೇ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್ ದಿಢೀರ್ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ದಿನನಿತ್ಯದಂತೆ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಮೇಲ್ಛಾವಣಿಯ ಪ್ಲಾಸ್ಟರಿಂಗ್ ಹಾಗೂ ಕಾಂಕ್ರೀಟ್ ಚೂರುಗಳು ಏಕಾಏಕಿ ಮಕ್ಕಳ ಮೇಲೆ ಬಿದ್ದಿವೆ. ಘಟನೆಯಿಂದ ನಾಲ್ವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು …
Read More »ಬರಪೀಡಿತ ಜಿಲ್ಲೆಗಳ ಪಟ್ಟಿಯಿಂದ ಬೆಳಗಾವಿ ಹೊರಕ್ಕೆ: ರೈತರ ಆಕ್ರೋಶ
ಚಿಕ್ಕೋಡಿ : ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಜಿಲ್ಲೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದೆ. ಮಳೆಯ ಕೊರತೆಯಿಂದ ಮೆಕ್ಕೆಜೋಳ, ಸೋಯಾಬಿನ್, ತೊಗರಿ, ಅಲಸಂದಿ ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಥಣಿ ತಾಲೂಕಿನಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಬಾವಿಗಳು ಬತ್ತುವ ಹಂತ ತಲುಪಿವೆ. ಕೊಳವೆಬಾವಿಗಳಿಂದಲೂ ಅಲ್ಪ …
Read More »ಕೆಆರ್‌ಐಡಿಎಲ್ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್
ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ 7% ಲಂಚ ಪಡೆಯುತ್ತಿರುವ ಇಬ್ಬರು ಸಚಿವರನ್ನು ಕೂಡಲೇ ವಜಾ ಮಾಡಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರಾದರೂ ಲಂಚ ಪಡೆದರೆ ನನಗೆ ಕರೆ ಮಾಡಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಈಗ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅಧಿಕೃತವಾಗಿ ಪತ್ರ ಬರೆದು ಭ್ರಷ್ಟಾಚಾರದ ವಿರುದ್ಧ …
Read More »ಇಸ್ಕಾನ್‌ನಲ್ಲಿ ಸೆ.3 ರಿಂದ 5 ರವರೆಗೆ ಅದ್ಧೂರಿ ಶ್ರೀ ಕೃಷ್ಣ ಜನ್ಮಾಷ್ಟಮಿ – ವಿಶೇಷ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ
ಬೆಂಗಳೂರು: ಇಸ್ಕಾನ್‌ನ ಎಲ್ಲಾ ದೇವಾಲಯಗಳಲ್ಲಿ ಸೆಪ್ಟೆಂಬರ್ 3 ರಿಂದ 5 ರವರೆಗೆ ಮೂರು ದಿನಗಳ ಕಾಲ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ವೈಭವದಿಂದ ಆಚರಿಸಲು ಸಕಲ ಸಿದ್ಧತೆಗಳು ನಡೆದಿವೆ. ಹಬ್ಬದ ದಿನಗಳಲ್ಲಿ ವಿಶೇಷ ಮಹಾ ಅಭಿಷೇಕ, ಮಹಾಮಂಗಳಾರತಿ, 56 ಬಗೆಯ ಖಾದ್ಯಗಳ ಚಪ್ಪನ್ ಭೋಗ್’ ಪ್ರಿಯವಾದ ಮಖನ್ ಮಿಶ್ರಿ (ಬೆಣ್ಣೆ-ಸಕ್ಕರೆ) ನೈವೇದ್ಯ, ಪುಷ್ಪಾಂಜಲಿ ಸೇವೆ, ಭವ್ಯ ಪಲ್ಲಕ್ಕಿ ಉತ್ಸವ ಹಾಗೂ ಜುಲನ್ ಸೇವೆ (ಜೋಕಾಲಿ ಸೇವೆ)ಗಳು ನೆರವೇರಲಿವೆ. ಗೋ ಪೂಜೆ, …
Read More »ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ
ರಾಯಚೂರು: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಸರ್ವ ಸಮರ್ಪಣೋತ್ಸವದೊಂದಿಗೆ ಅದ್ಧೂರಿ ತೆರೆ ಬಿದ್ದಿದೆ. ಏಳುದಿನಗಳ ಸಪ್ತರಾತ್ರೋತ್ಸವ ಮುಕ್ತಾಯಗೊಂಡಿದೆ. ರಾಯರ ಉತ್ತರಾರಾಧನೆ ಬಳಿಕ ಎರಡು ದಿನಗಳ ಕಾಲ ಆರಾಧನೆ ಹಿನ್ನೆಲೆ ರಾಯರ ಮಠದಲ್ಲಿ ವಿಶೇಷ ಪೂಜೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು ಸರ್ವ ಸಮರ್ಪಣೋತ್ಸವದೊಂದಿಗೆ ಆರಾಧನಾ ಮಹೋತ್ಸವಕ್ಕೆ ತೆರೆ ಎಳೆಯಲಾಗಿದೆ. ಎಲ್ಲಾ ಉತ್ಸವ ವಾಹನಗಳನ್ನು ಭವ್ಯವಾದ ಮರದ ರಥದ ಮೇಲೆ ಇರಿಸಿ ವೈಭವದ ರಥೋತ್ಸವದ ಮೂಲಕ ಹೊರತರುವುದು ಕೊನೆಯ …
Read More »ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
ಅಮರಾವತಿ: ವಿಶ್ವಪ್ರಸಿದ್ಧ ತಿರುಮಲ ಬೆಟ್ಟದ ವೆಂಕಟೇಶ್ವರ ದೇವಾಲಯವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಗಳ ಉಪ ಕಾರ್ಯನಿರ್ವಾಹಕ ಅಧಿಕಾರಿ ಮೆಂಡು ಲೋಕನಾಥಮ್‌ಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಆಂಧ್ರಪ್ರದೇಶ ಭ್ರಷ್ಟಾಚಾರ ನಿಗ್ರಹ ದಳ ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿತು. ಟಿಟಿಡಿ ಅಧಿಕಾರಿಯು ತನ್ನ ಆದಾಯದ ಮೂಲಗಳಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ ಎಂಬ ಆರೋಪದ ತನಿಖೆಯ ಭಾಗವಾಗಿ ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಶೋಧ ಕಾರ್ಯ ನಡೆಸಲಾಯಿತು. ಡಿಎಸ್ಪಿ ಶ್ರೀನಿವಾಸ ರಾವ್ ನೇತೃತ್ವದ …
Read More »ಪ್ರದೋಷ್ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಅರ್ಜಿ; ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಾಗಪ್ರಸನ್ನ ಅವರು, ಈಗ ಟ್ರಯಲ್ ಆಗಲ್ಲ, ಮೂರು ದಿನ ರಜೆ ಇದೆ. ಸೋಮವಾರಕ್ಕೆ ಆದೇಶ ಪ್ರಕಟ ಮಾಡುವುದಾಗಿ ತಿಳಿಸಿದ್ದಾರೆ. 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ನಿನ್ನೆ …
Read More »
Laxmi News 24×7