Breaking News

Daily Archives: ಸೆಪ್ಟೆಂಬರ್ 3, 2026

ಇಸ್ಕಾನ್‌ನಲ್ಲಿ ಸೆ.3 ರಿಂದ 5 ರವರೆಗೆ ಅದ್ಧೂರಿ ಶ್ರೀ ಕೃಷ್ಣ ಜನ್ಮಾಷ್ಟಮಿ – ವಿಶೇಷ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

ಬೆಂಗಳೂರು: ಇಸ್ಕಾನ್‌ನ ಎಲ್ಲಾ ದೇವಾಲಯಗಳಲ್ಲಿ ಸೆಪ್ಟೆಂಬರ್ 3 ರಿಂದ 5 ರವರೆಗೆ ಮೂರು ದಿನಗಳ ಕಾಲ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ವೈಭವದಿಂದ ಆಚರಿಸಲು ಸಕಲ ಸಿದ್ಧತೆಗಳು ನಡೆದಿವೆ. ಹಬ್ಬದ ದಿನಗಳಲ್ಲಿ ವಿಶೇಷ ಮಹಾ ಅಭಿಷೇಕ, ಮಹಾಮಂಗಳಾರತಿ, 56 ಬಗೆಯ ಖಾದ್ಯಗಳ ಚಪ್ಪನ್ ಭೋಗ್’ ಪ್ರಿಯವಾದ ಮಖನ್ ಮಿಶ್ರಿ (ಬೆಣ್ಣೆ-ಸಕ್ಕರೆ) ನೈವೇದ್ಯ, ಪುಷ್ಪಾಂಜಲಿ ಸೇವೆ, ಭವ್ಯ ಪಲ್ಲಕ್ಕಿ ಉತ್ಸವ ಹಾಗೂ ಜುಲನ್ ಸೇವೆ (ಜೋಕಾಲಿ ಸೇವೆ)ಗಳು ನೆರವೇರಲಿವೆ. ಗೋ ಪೂಜೆ, …

Read More »

ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ

ರಾಯಚೂರು: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ  355ನೇ ಆರಾಧನಾ ಮಹೋತ್ಸವಕ್ಕೆ ಸರ್ವ ಸಮರ್ಪಣೋತ್ಸವದೊಂದಿಗೆ ಅದ್ಧೂರಿ ತೆರೆ ಬಿದ್ದಿದೆ. ಏಳುದಿನಗಳ ಸಪ್ತರಾತ್ರೋತ್ಸವ ಮುಕ್ತಾಯಗೊಂಡಿದೆ. ರಾಯರ ಉತ್ತರಾರಾಧನೆ ಬಳಿಕ ಎರಡು ದಿನಗಳ ಕಾಲ ಆರಾಧನೆ ಹಿನ್ನೆಲೆ ರಾಯರ ಮಠದಲ್ಲಿ ವಿಶೇಷ ಪೂಜೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು ಸರ್ವ ಸಮರ್ಪಣೋತ್ಸವದೊಂದಿಗೆ ಆರಾಧನಾ ಮಹೋತ್ಸವಕ್ಕೆ ತೆರೆ ಎಳೆಯಲಾಗಿದೆ. ಎಲ್ಲಾ ಉತ್ಸವ ವಾಹನಗಳನ್ನು ಭವ್ಯವಾದ ಮರದ ರಥದ ಮೇಲೆ ಇರಿಸಿ ವೈಭವದ ರಥೋತ್ಸವದ ಮೂಲಕ ಹೊರತರುವುದು ಕೊನೆಯ …

Read More »

ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಅಮರಾವತಿ: ವಿಶ್ವಪ್ರಸಿದ್ಧ ತಿರುಮಲ ಬೆಟ್ಟದ ವೆಂಕಟೇಶ್ವರ ದೇವಾಲಯವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಗಳ  ಉಪ ಕಾರ್ಯನಿರ್ವಾಹಕ ಅಧಿಕಾರಿ ಮೆಂಡು ಲೋಕನಾಥಮ್‌ಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಆಂಧ್ರಪ್ರದೇಶ ಭ್ರಷ್ಟಾಚಾರ ನಿಗ್ರಹ ದಳ  ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿತು. ಟಿಟಿಡಿ ಅಧಿಕಾರಿಯು ತನ್ನ ಆದಾಯದ ಮೂಲಗಳಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ ಎಂಬ ಆರೋಪದ ತನಿಖೆಯ ಭಾಗವಾಗಿ ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಶೋಧ ಕಾರ್ಯ ನಡೆಸಲಾಯಿತು. ಡಿಎಸ್ಪಿ ಶ್ರೀನಿವಾಸ ರಾವ್ ನೇತೃತ್ವದ …

Read More »

ಪ್ರದೋಷ್‌ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಅರ್ಜಿ; ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್‌ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೋಮವಾರಕ್ಕೆ ಮುಂದೂಡಿದೆ. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಾಗಪ್ರಸನ್ನ ಅವರು, ಈಗ ಟ್ರಯಲ್ ಆಗಲ್ಲ, ಮೂರು ದಿನ ರಜೆ ಇದೆ. ಸೋಮವಾರಕ್ಕೆ ಆದೇಶ ಪ್ರಕಟ ಮಾಡುವುದಾಗಿ ತಿಳಿಸಿದ್ದಾರೆ. 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು‌‌. ಹೈಕೋರ್ಟ್‌ನಲ್ಲಿ ದರ್ಶನ್‌ ಪರ ವಕೀಲರು ನಿನ್ನೆ …

Read More »

ಎಂಪಿಟಿ, ಎಂಎಹೆಚ್ಎಸ್ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ: ಕೆಇಎ

ಬೆಂಗಳೂರು: ಎಂಪಿಟಿ, ಎಂಎಸ್ಸಿ, ಮಾಸ್ಟರ್ ಅಲೈಡ್ ಹೆಲ್ತ್ ಸೈನ್ಸ್ ಈ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಮೆರಿಟ್ ನಿರ್ಧರಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆ.5 ಕೊನೆ ದಿನ. ಆನ್‌ಲೈನ್ ಮೂಲಕ ನೋಂದಾಯಿಸಿಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಕೋರ್ಸ್‌ಗಳಲ್ಲಿ ಪದವಿ ಮಾಡಿರಬೇಕು. ಕರ್ನಾಟಕದವರಾಗಿರಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಡಿಸಿಇಟಿ: ಎರಡನೇ ಸುತ್ತಿನ ಆಪ್ಷನ್ಸ್ ದಾಖಲು …

Read More »

ಶಾಲಾ ಮಕ್ಕಳ ಸುರಕ್ಷತೆ: ಶಾಲಾ ಬಸ್ ಚಾಲಕರು, ನಿರ್ವಾಹಕರು, ಆಡಳಿತ ಮಂಡಳಿಗೆ ಜಾಗೃತಿ ಕಾರ್ಯಕ್ರಮ

ಮಂಗಳೂರು: ನಗರ ಸಂಚಾರ ಪೊಲೀಸ್ ವತಿಯಿಂದ ಶಾಲಾ ಮಕ್ಕಳ ಬಸ್ ಸುರಕ್ಷತೆ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಬುಧವಾರ ಮಂಗಳೂರಿನ ಪುರಭವನದಲ್ಲಿ ನಡೆಯಿತು. ಸದರಿ ಕಾರ್ಯಕ್ರಮದಲ್ಲಿ ಮಂಗಳೂರು ನಗರದ ವಿವಿಧ ಶಾಲೆಗಳ ಶಾಲಾ ಬಸ್ ಚಾಲಕರು, ಮಾಲಿಕರು, ಬಸ್ ಮ್ಯಾನೇಜರ್‌ಗಳು ಹಾಗೂ ಶಾಲಾ ಆಡಳಿತ ಮಂಡಳಿಯ ಸುಮಾರು 600 ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಮುಖ್ಯವಾಗಿ ಶಾಲಾ ಬಸ್ ಚಾಲಕರು ಹಾಗೂ ನಿರ್ವಾಹಕರು ಪಾಲಿಸಬೇಕಾದ ಕಾನೂನು …

Read More »

ಗುಲಾಮಗಿರಿಯಿಂದ ಹೊರಬಂದರೆ ವಿಕಾಸ

ಬೋರಗಾಂವ: ರಾಜ್ಯ ಸರ್ಕಾರ ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳ ಅಭಿವೃದ್ಧಿಗೆ ಬದ್ಧವಾಗಿದೆ. ಬಡವರಿಗೆ ಭೂಮಿ ಮತ್ತು ಆಶ್ರಯ ನೀಡಲು ಯೋಜನೆ ರೂಪಿಸಲಾಗುತ್ತಿದ್ದು, ಬೋರಗಾಂವ ಪಟ್ಟಣದಿಂದ ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.  ಪಟ್ಟಣದಲ್ಲಿ ಸೋಮವಾರ ಹಮ್ಮಿ ಕೊಂಡಿದ್ದ ಸಾಹಿತ್ಯ ರತ್ನ, ಡಾ.ಅಣ್ಣಾಭಾವು ಸಾಠೆ ಅವರ 106ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತ ನಾಡಿ, ಅಣ್ಣಾಭಾವು ಸಾಠೆ ಅವರ ಕಾರ್ಯ ಮಾದಿಗ ಸಮುದಾಯ ಸೇರಿದಂತೆ ಕೆಳಮಟ್ಟದಲ್ಲಿರುವರಿಗೆ ಸ್ಫೂರ್ತಿದಾಯಕವಾಗಿದೆ. …

Read More »

ಬಿಜೆಪಿ ಹಗರಣದ ದಾಖಲೆ ಬಿಡುಗಡೆ ಮಾಡಲಿ- ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಕೆಪಿಎಸ್‌ಸಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿರುವ ಬಿಜೆಪಿ ನಾಯಕರು ಈವರೆಗೂ ದಾಖಲೆ ಬಿಡುಗಡೆ ಮಾಡದೆ ಜನರ ದಾರಿ ತಪ್ಪಿಸುತ್ತಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ದಾಖಲೆ ಬಿಡುಗಡೆ ಮಾಡಿದ ನಂತರವಷ್ಟೇ ಅದರಲ್ಲಿರುವ ಅಂಶಗಳನ್ನು ಪರಿಶೀಲಿಸಲು ಸಾಧ್ಯ. ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ವಿಚಾರಣೆ ನಡೆದಿದೆ. ಗೃಹ ಸಚಿವ ಪ್ರಿಯಾಂಕಾ ಖರ್ಗೆ ಕೆಪಿಎಸ್‌ಸಿಗೆ ಸಂಬಂಧಪಟ್ಟವರಲ್ಲ. ದಾಖಲೆಗಳು ಹೊರಬಂದ …

Read More »

ಮೋದಿ ಜನ್ಮದಿನಕ್ಕೆ ಸಮಾಜಮುಖಿ ಕಾರ್ಯಕ್ರಮಗಳ ಸೇವಾ ಸಂಕಲ್ಪ ಅಭಿಯಾನ

ಬೆಳಗಾವಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಜಿಲ್ಲೆಯ್ಯದ್ಯಂತ ಸೇವಾ ಸಂಕಲ್ಪ ಅಭಿಯಾನ ಆಯೋಜಿಸಿ, ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ತಿಳಿಸಿದರು. ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ,ನರೇಂದ್ರ ಮೋದಿ  ಸಾರ್ವಜನಿಕ ಜೀವನದಲ್ಲಿ 25 ವರ್ಷಗಳ ಸುದೀರ್ಘ ಪಯಣ ಪೂರ್ಣಗೊಳಿಸುತ್ತಿದ್ದು, ಈ ಅವಧಿಯಲ್ಲಿ ಜನಸೇವೆ, …

Read More »

Belagavi: ಲಕ್ಷಕ್ಕೂ ಹೆಚ್ಚು ತೆರಿಗೆ ಬಾಕಿದಾರರಿಗೆ ನೋಟೀಸ್

ಬೆಳಗಾವಿ :ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವರ್ಷಗಳಿಂದ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿರುವ  ಆಸ್ತಿಗಳ ಮಾಲೀಕರಿಗೆ ಕೂಡಲೇ ನೋಟೀಸ್ ಜಾರಿ ಮಾಡಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಪಾಲಿಕೆ ಆಯುಕ್ತ ಕಾರ್ತಿಕ್‌ಎಂ. ಸೂಚಿಸಿದರು. ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಬುಧವಾರ ನಡೆದ ಕಂದಾಯ ಶಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಪಾಲಿಕೆ ತೆರಿಗೆ ಕಟ್ಟದೆ ಸೌಲಭ್ಯ ಪಡೆದುಕೊಳ್ಳುತ್ತಿರುವ ಲಕ್ಷಕ್ಕೂ ಹೆಚ್ಚು ಕರ ಬಾಕಿದಾರರಿಗೆ ನೋಟೀಸ್ ನೀಡುವುದರ ಜತೆಗೆ ವಾರದ ಗಡುವು ನೀಡಬೇಕು. ಆದರೂ, ತೆರಿಗೆ …

Read More »