Breaking News

Daily Archives: ಸೆಪ್ಟೆಂಬರ್ 4, 2026

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್ – ಅಮಾನತು ಆದೇಶಕ್ಕೆ ತಡೆ

ಕಲಬುರಗಿ: ಆರ್‌ಎಸ್‌ಎಸ್  ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿ ಕಲಬುರಗಿಯ  ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KAT) ತೀರ್ಪು ನೀಡಿದೆ. ಅಮಾನತುಗೊಂಡ ಶಿಕ್ಷಕರು ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು ಇಂದು (ಸೆ.3) ವಿಚಾರಣೆ ನಡೆಸಿತು. ಈ ವೇಳೆ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಸರ್ಕಾರಿ ಶಾಲೆಯ ಶಿಕ್ಷಕರಾದ ಗುರುರಾಜ್ ಜೋಷಿ ಹಾಗೂ ಅಣ್ಣಾ ಸಾಹೇಬ್ ದೇಶಮುಖ ಅವರನ್ನು …

Read More »

ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಉದ್ಯಾನ ಭೂಮಿ ಬಳಕೆ ಮಸೂದೆ ಹಿಂಪಡೆದ ಸರ್ಕಾರ

ಬೆಂಗಳೂರು: ಸಾರ್ವಜನಿಕರು, ಪರಿಸರವಾದಿಗಳು ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ (ತಿದ್ದುಪಡಿ) ಮಸೂದೆಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 1975ರ ಕರ್ನಾಟಕ ಸರ್ಕಾರಿ ಉದ್ಯಾನಗಳ (ಸಂರಕ್ಷಣೆ) ಕಾಯ್ದೆಗೆ ತಿದ್ದುಪಡಿ ತಂದು, ಉದ್ಯಾನವನಗಳ ಒಟ್ಟು ವಿಸ್ತೀರ್ಣದಲ್ಲಿ ಶೇ. 5ರಷ್ಟು ಭೂಮಿಯನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಳ್ಳಲು ಸರ್ಕಾರ ಉದ್ದೇಶಿಸಿತ್ತು. ವಿಧಾನಸಭೆಯಲ್ಲಿ ಚರ್ಚೆಯಿಲ್ಲದೆ ಅಂಗೀಕಾರಗೊಂಡಿದ್ದ ಈ ಮಸೂದೆಗೆ ಸಾರ್ವಜನಿಕ ವಲಯದಿಂದ ಭಾರೀ …

Read More »

ಭ್ರಷ್ಟರನ್ನು ನೇಮಿಸಿ ಒಳ್ಳೆಯ ಆಡಳಿತ ನೀಡಲು ಸಾಧ್ಯಾನಾ? – ಶಿವಶಂಕರಪ್ಪ ಸಾಹುಕಾರ್‌ಗೆ ಹೈಕೋರ್ಟ್‌ ಛೀಮಾರಿ

ಬೆಂಗಳೂರು: ಭ್ರಷ್ಟರನ್ನು ನೇಮಿಸಿ ಒಳ್ಳೆಯ ಆಡಳಿತ ನೀಡಲು ಸಾಧ್ಯಾನಾ ಎಂದು ಮಾಜಿ ಕೆಪಿಎಸ್‌ಸಿ ಅಧ್ಯಕ್ಷ್ಯ ಶಿವಶಂಕರಪ್ಪ ಸಾಹುಕಾರ್‌ಗೆ  ಹೈಕೋರ್ಟ್‌ ಛೀಮಾರಿ ಹಾಕಿದೆ. ಕೆಪಿಎಸ್‌ಸಿ ನೇಮಕಾತಿ ಹಗರಣ‌ ಪ್ರಕರಣ ಸಂಬಂಧ ಶಿವಶಂಕರಪ್ಪ ಸಾಹುಕಾರ್‌ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಪೀಠ ವಿಚಾರಣೆ ನಡೆಸಿತು. ಈ ವೇಳೆ ಶಿವಶಂಕರಪ್ಪ ಸಾಹುಕಾರ್‌ ಪರವಾಗಿ ವಾದಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ಪ್ರಕರಣದಲ್ಲಿ ನಮ್ಮ …

Read More »

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಶಾಸಕ ಸುರೇಶ್‌ಗೌಡ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮಂಡ್ಯ: ಕರ್ತವ್ಯನಿರತ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಕಳೆದ ಆಗಸ್ಟ್ 12 ರಂದು ಮಂಡ್ಯ  ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಸವಿತಾ ಅವರ ಮೇಲೆ ಐಶ್ವರ್ಯ ಕಪಾಳಮೋಕ್ಷ ಮಾಡಿದ್ದರು. ಈ ಘಟನೆ ಕುರಿತಂತೆ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ …

Read More »

ಸೆ.21ರಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ

ಬೆಂಗಳೂರು: ಸೆ.21ರಿಂದ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ  ನಡೆಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಶೇಷ ಅಧಿವೇಶನಕ್ಕೆ ಒಪ್ಪಿಗೆ ನೀಡಲಾಗಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 23ರವರೆಗೆ ಒಟ್ಟು ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದೆ. ಈ ಮೊದಲು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ …

Read More »

ಕೆಎಂಎಫ್ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿ – 14 ಸಾವಿರ ಲೀಟರ್ ಹಾಲು ರಸ್ತೆಪಾಲು

ಬೆಂಗಳೂರು: ಕೆಎಂಎಫ್  ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದ ಘಟನೆ ಹೆಬ್ಬಾಳ ಸಮೀಪ ನಡೆದಿದೆ. ಕೆಎಂಎಫ್‌ಗೆ ಹೊರಟಿದ್ದ ಹಾಲಿನ ಟ್ಯಾಂಕರ್ ಹೆಬ್ಬಾಳ ಸಮೀಪ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್ ಮುಚ್ಚಳ ಮುಚ್ಚಲು ಸಾರ್ವಜನಿಕರು ಪರದಾಡಿದ್ದಾರೆ. ಇನ್ನೂ ಕೆಲವರು ನೀರಿನ ಬಾಟಲಿಯಲ್ಲಿ ಹಾಲು ತುಂಬಿಕೊಂಡಿದ್ದಾರೆ. ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ …

Read More »

ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್

ಬೆಂಗಳೂರು: ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು ಅಂತ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು, ಕರ್ನಾಟಕ ಜನತೆಗೆ ಒಂದು ವಿಷಯ ಹೇಳ್ತೀನಿ. ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳತನ ಸಂಘದ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು. ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ, ಶ್ರೀರಾಮುಲು ಅಂತ ವಾಗ್ದಾಳಿ ‌ನಡೆಸಿದ್ದಾರೆ. ಬಿಜೆಪಿ ಅವಧಿಯಲ್ಲಿ ಕೋವಿಡ್ ಹಗರಣ, ಬೋವಿ ನಿಗಮ ಹಗರಣ, ನೀಟ್ ಹಗರಣ, ದೇವರಾಜ್ …

Read More »

ಕಾಂಗ್ರೆಸ್ ಶಾಸಕನಿಂದ ಕಮೀಷನ್ ಆರೋಪ ವಿಚಾರ ತನಿಖೆ ಆಗಲಿ: ಯು‌.ಟಿ. ಖಾದರ್

ಬೆಂಗಳೂರು: ಸಚಿವರ ಹೆಸರಿನಲ್ಲಿ ಕಮೀಷನ್ ಕೇಳಿದ ಪ್ರಕರಣ ತನಿಖೆ ಆಗಲಿ ಎಂದು ಸಚಿವ ಯುಟಿ. ಖಾದರ್ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕ ಅಶೋಕ್ ರೈ ವರಿಂದ 7% ಕಮೀಷನ್ ಆರೋಪ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವರ ಹೆಸರು ಹೇಳಿ ಕಮೀಷನ್ ತಗೋತಿದ್ದಾರೆ ಅಂತ ಆರೋಪ ಮಾಡಿದ್ದಾರೆ. ಗ್ರಾಮೀಣಾಭಿವೃದ್ದಿ ಸಚಿವರು ತಕ್ಷಣ ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಗೆ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರಿಗೂ ನಾನು ತನಿಖೆ ಮಾಡೋಕೆ ಮನವಿ …

Read More »

ಕೋಲಾರದ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಣ ಹೋಮ – ವಿಷ ಪ್ರಾಶನ ಶಂಕೆ

ಕೋಲಾರ: ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳ ಮಾರಣಹೋಮವಾಗಿರುವ ಘಟನೆ ಕೋಲಾರ ನಗರದ ಅಮ್ಮಾನಿ ಕೆರೆಯಲ್ಲಿ ನಡೆದಿದೆ. ವಿಷ ಪ್ರಾಶನದಿಂದ ಮೀನುಗಳ ಮಾರಣಹೋಮವಾಗಿರುವ ಶಂಕೆ ವ್ಯಕ್ತವಾಗಿದೆ. ಕೆರೆಯಲ್ಲಿದ್ದ ಕ್ಯಾಟ್ ಫಿಶ್‌ಗಳನ್ನು ಸಾಯಿಸಿ ಹೊಸ ತಳಿಯ ಮೀನುಗಳನ್ನು ಬಿಡಲು ವಿಷ ಹಾಕಿರಬಹುದು ಎಂದು ಶಂಕಿಸಲಾಗಿದೆ. ಮೀನುಗಳ ಮಾರಣ ಹೋಮದಿಂದ ಕೆರೆ ಗಬ್ಬು ನಾರುತ್ತಿದ್ದು, ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಸಣ್ಣನೀರಾವರಿ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಕೆರೆಯಲ್ಲಿದ್ದ ನೀರಿನ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ …

Read More »

ಭಾರತದ ಜಿಡಿಪಿ 7.8% ಬೆಳವಣಿಗೆ ಅನ್ನೋದೆ ಬೋಗಸ್: ಸಂತೋಷ್ ಲಾಡ್

ಬೆಂಗಳೂರು : ಭಾರತದ ಜಿಡಿಪಿ 7.8% ಬೆಳವಣಿಗೆ ಅನ್ನೋದೆ ಬೋಗಸ್ ಎಂದು ಸಚಿವ ಸಂತೋಷ್ ಲಾಡ್  ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು ಏನನ್ನಾದರೂ ಹೇಳಿದರೆ ಮೋದಿ ವಿರುದ್ದ ಮಾತಾಡುತ್ತೀವಿ, ಸುಳ್ಳು ಹೇಳುತ್ತೀವಿ ಅಂತಾರೆ. ನಾವು ಮೋದಿ ವಿರುದ್ದವೇ ಮಾತಾಡಿರಬಹುದು. ಆದರೆ, ವೈಯಕ್ತಿಕವಾಗಿ ಅಲ್ಲ. 7.8% ಜಿಡಿಪಿ ಅನ್ನೋದೆ ಬೋಗಸ್ ಅಂತ ಕಿಡಿಕಾರಿದರು. ಇವರು ಜಿಡಿಪಿ ಘೋಷಣೆ ಮಾಡಿದ ಕೂಡಲೇ 6 ಸಾವಿರ ಕೋಟಿ ವಿದೇಶಿ ಬಂಡವಾಳ ಹೂಡಿಕೆ …

Read More »