Breaking News

Daily Archives: ಸೆಪ್ಟೆಂಬರ್ 4, 2026

ಬೆಳಗಾವಿಯ ನೂತನ ಪೊಲೀಸ್ ಕಮಿಷನರ್‌ ಅಧಿಕಾರ ಸ್ವೀಕಾರ

ಬೆಳಗಾವಿ: ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅವರು ವರ್ಗಾವಣೆ ಆಗಿರುವ ಬೆನ್ನಲೆ ಐಪಿಎಸ್ ಅಧಿಕಾರಿ ಪ್ರಕಾಶ ನಿಕ್ಕಂ ಅವರು ಅಧಿಕಾರ ಸ್ವೀಕರಿಸಿದರು. ಇಂದು ನಗರದ ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ ನೂತನ ಪೊಲೀಸ್ ಕಮಿಷನರ್ ಪ್ರಕಾಶ ನಿಕ್ಕಂ ಅವರಿಗೆ ಪೊಲೀಸ್ ಗೌರವದೊಂದಿಗೆ ಸ್ವಾಗತಿಸಿಲಾಯಿತು‌. ಬೆಳಗಾವಿಯಿಂದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್‌ಗೆ ವರ್ಗಾವಣೆಯಾಗಿರುವ ಭೂಷಣ ಬೋರಸೆ ಅವರು, ಪ್ರಕಾಶ ನಿಕ್ಕಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ವೇಳೆ ವೇಳೆ ಬೆಳಗಾವಿ ಎಸ್ ಪಿ …

Read More »

ಗಣೇಶ ಉತ್ಸವ: ಪಾಲಿಕೆ ಮೇಯರ್, ಆಯುಕ್ತರಿಂದ ಸಿದ್ಧತೆ ಪರಿಶೀಲನೆ

ಬೆಳಗಾವಿ: ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಆಯುಕ್ತರು ಗುರುವಾರ ಬೆಳಿಗ್ಗೆ ನಗರ ಸಂಚಾರ ಮಾಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಇದಕ್ಕೂ ಮೊದಲು ಗಣಪತಿ ಮೂರ್ತಿಗಳನ್ನು ವಿಸರ್ಜಿಸುವ  ಕಪಿಲೇಶ್ವರ ಹೊಂಡದ ಆವರಣದಲ್ಲಿ ಮೇಯರ್, ನಗರ ಸೇವಕರು ಹಾಗೂ ಆಯುಕ್ತರು ಪೂಜೆ ಸಲ್ಲಿಸಿ ‌ಸಿದ್ಧತೆಗಳಿಗೆ ಚಾಲನೆ ನೀಡಿದರು. ನಂತರ ಗಣೇಶ ಮೂರ್ತಿಗಳು ಸಾಗುವ ಮೆರವಣಿಗೆ ಮಾರ್ಗಗಳಾದ ಚೆನ್ನಮ್ಮ ವೃತ್ತ, ಸಮಾದೇವಿ, ಮಾರುತಿ, ಗಣಪತಿ, ರಾಮಲಿಂಗ ಖಿಂಡ್ ಗಲ್ಲಿಗಳು, ಸಂಭಾಜಿ, ತಿಲಕ್, ಹೇಮು ಕಲಜಿ …

Read More »

ಸೆ. 6 ರಂದು ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ಎರಡನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 06.09.2026 ರಂದು ಬೆಳಗ್ಗೆ 9. ಘಂಟೆಯಿಂದ ಸಂಜೆ 4, ಘಂಟೆಯವರೆಗೆ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡಸಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, …

Read More »

ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ: ರಕ್ತದಾನ ಶಿಬಿರಕ್ಕೆ ಪ್ರಾದೇಶಿಕ ಆಯುಕ್ತರಿಂದ ಚಾಲನೆ

ಬೆಳಗಾವಿ: ಜಿಲ್ಲಾ ಪಂಚಾಯತ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾದ್ಯಂತ ಗುರುವಾರ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸರ್ಕಾರಿ ನೌಕರರು, ಸಿಬ್ಬಂದಿ, ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಬಂದು ರಕ್ತದಾನ ಮಾಡಿದರು. ಜಿಲ್ಲೆಯ ಎಲ್ಲ ತಾಲೂಕು ಸೇರಿದಂತೆ ಒಟ್ಟು 23 ಸ್ಥಳಗಳಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ವಿಶೇಷ ಚೇತನರು, ಪೌರಕಾರ್ಮಿಕರು, ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರು, ರೈತರು, …

Read More »

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ

 ಬೆಳಗಾವಿ: ಬೆಳಗಾವಿ ಆರ್‌ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಧಾರ್ಮಿಕ ಹಾಗೂ ಸಾಂಸ್ಕೃತಿಕ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಸೆಪ್ಟೆಂಬರ್ 4 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಪವಾಸ ಆಚರಣೆ ನಡೆಯಲಿದೆ. ಬೆಳಗ್ಗೆ 8 ಕ್ಕೆ ಶ್ರೀ ಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆ, 11:30ಕ್ಕೆ ಲಕ್ಷ ತುಳಸಿ ಅರ್ಚನೆ ಸಮಾಪ್ತಿ ಮುಂತಾದ ಕಾರ್ಯಕ್ರಮ ನಡೆಯಲಿವೆ. 12 ಗಂಟೆಯಿಂದ ವಿವಿಧ ಭಜನಾ ಮಂಡಳಿಗಳಿಂದ ಹರಿ …

Read More »