Breaking News

Daily Archives: ಸೆಪ್ಟೆಂಬರ್ 5, 2026

ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿ

ಬೆಂಗಳೂರು: “ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆಸರ್ವಪಕ್ಷ ನಿಯೋಗ ಕರೆದೊಯ್ಯಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬರಗಾಲ ಎಂದು ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ ಸಾಲಮನ್ನಾ ಮಾಡಿಸುವ ಜವಾಬ್ದಾರಿ ಹೊರಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಇತರೆ ನಾಯಕರು ತಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರ ಸರ್ಕಾರದಿಂದ ಅನುದಾನ ಹಾಗೂ …

Read More »

ನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿ

ಬೆಂಗಳೂರು: ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆದಿರುವ ಕುರಿತು ಸಿಎಂ ‘ಯು-ಟರ್ನ್’ ಮಾಡಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಸಿಎಂ ಡಿಕೆ ಶಿವಕುಮಾರ್‌  ಕಿಡಿಕಾರಿದ್ದಾರೆ. ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, “ನಾನು ಯೂಟರ್ನ್ ಏಕೆ ಮಾಡಬೇಕು. ಜನರ ಭಾವನೆಗಳಿಗೆ ಬೆಲೆ ನೀಡಲಾಗಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿ ಏನಾಗಿದೆ ಎಂಬ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈ ಬಗ್ಗೆ ಚರ್ಚೆಯಾಗಬೇಕು ಅಂತ ಹೇಳಿದ್ದಾರೆ. ಲಾಲ್‌ಬಾಗ್‌ನಲ್ಲಿಯೇ ಟನಲ್ ಮಾಡಬೇಕೆಂಬ ಉದ್ದೇಶವಿಲ್ಲ. ಇದಕ್ಕೆ …

Read More »

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

ತಿರುವನಂತಪುರಂ:ನಿಲ್ಲಿಸಿದ್ದ ಗೂಡ್ಸ್ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೇರಳದ  ತ್ರಿಶ್ಯೂರು ಜಿಲ್ಲೆಯಲ್ಲಿ ನಡೆದಿದೆ. ಮೃತರ ಪೈಕಿ ಐವರನ್ನು ತಮಿಳುನಾಡಿನ ಸೇಲಂ ಮೂಲದ ವಿಶ್ವ (20), ದಿಂಡಿಗಲ್ ಮೂಲದ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈ ಮೂಲದ ಸಂತೋಷ್ (20) ಮತ್ತು ಪ್ರಸನ್ನ ಎಂದು ಗುರುತಿಸಲಾಗಿದೆ. ಉಳಿದ ಮೂವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಮೃತರೆಲ್ಲರೂ ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪಿ.ಎಸ್.ಎಂ. …

Read More »

ಸವದತ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಸಿಕ್ತು ಚಿನ್ನದ ನಿಧಿ!

ಬೆಳಗಾವಿ: ಸವದತ್ತಿ  ತಾಲೂಕಿನ ಇಂಚಲ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಕೂಲಿ ಕಾರ್ಮಿಕರಿಗೆ ಗಂಗರ ಕಾಲದ ಚಿನ್ನದ ನಿಧಿ ಸಿಕ್ಕಿದೆ. ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುವಾಗ ಗಡಿಗೆಯಲ್ಲಿ 14‌ ಚಿನ್ನದ ನಾಣ್ಯಗಳು ಕಾರ್ಮಿಕರಿಗೆ ಸಿಕ್ಕಿವೆ. ಸುಮಾರು 54.8 ಗ್ರಾಂ ತೂಕದ 8.27 ಲಕ್ಷ ರೂ. ಮೌಲ್ಯದ ನಾಣ್ಯಗಳಾಗಿವೆ. ನಿಧಿಯನ್ನು ಅಧಿಕಾರಿಗಳಿಗೆ ಒಪ್ಪಿಸಿ ಕೂಲಿ ಕಾರ್ಮಿಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಪಿಡಿಒ, ತಾಲೂಕು ಪಂಚಾಯ್ತಿ ಸಿಬ್ಬಂದಿ ಸಮ್ಮುಖದಲ್ಲಿ ಸವದತ್ತಿ ತಹಶೀಲ್ದಾರ್‌ ಅವರಿಗೆ …

Read More »

ರಿಯಲ್ ಎಸ್ಟೇಟ್ ಗುಂಗಿನಿಂದ ಹೊರಬಂದು ಪ್ರಜಾಸೇವೆ ನೆನಪಿಸಿಕೊಂಡ ಸಿಎಂಗೆ ಧನ್ಯವಾದ – ನಿಖಿಲ್‌ ಲೇವಡಿ

ಬೆಂಗಳೂರು: ರಿಯಲ್ ಎಸ್ಟೇಟ್ ಆಡಳಿತದ ಗುಂಗಿನಿಂದ ಹೊರಬಂದು, ಕೊನೆಗೂ “ಪ್ರಜಾಸೇವೆ”  ನೆನಪಿಸಿಕೊಂಡ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಅವರಿಗೆ ಧನ್ಯವಾದಗಳು ಎಂದು ನಿಖಿಲ್ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಕಳೆದ 3 ವರ್ಷಗಳಿಂದ ಜನಸಾಮಾನ್ಯರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಈಗ ಮಾಡುತ್ತಿರುವ ಈ ಕಾರ್ಯಕ್ರಮ ʻಬ್ರಾಂಡ್ ಬೆಂಗಳೂರು’ ಮಾದರಿಯ ಮತ್ತೊಂದು ಪ್ರಚಾರದ ಗಿಮಿಕ್ ಅಷ್ಟೇ ಎಂಬುದು ರಾಜ್ಯದ ಜನರಿಗೆ ಚೆನ್ನಾಗಿ ತಿಳಿದಿದೆ.‌ ಕ್ಯಾಮೆರಾಗಳಿಗೆ ಪೋಸ್ ಕೊಡುವ ಮೊದಲು, ನಾಡಿನ ಈ ಜ್ವಲಂತ ಪ್ರಶ್ನೆಗಳಿಗೆ ಉತ್ತರಿಸಿ …

Read More »

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣ

ಬೆಳಗಾವಿ: ಅತಿ ವೇಗವಾಗಿ ಬಂದು ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ದುರ್ಮಣ ಹೊಂದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಕ್ರಾಸ್ ಬಳಿ ಘಟನೆ ನಡೆದಿದ್ದು, ಹುಕ್ಕೇರಿ ತಾಲೂಕಿನ ಕೆಎಂ ನಾಗನೂರು ಗ್ರಾಮದ ವಿನಯ ವಿಜಯ ಹಿರೇಮಠ (19), ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರವಣ ಗುರುಸಿದ್ದಯ್ಯ ಹಿರೇಮಠ (17) ಸ್ಥಳದಲ್ಲೇ ಸಾವು ಸಾವನ್ನಪ್ಪಿದ್ದಾರೆ.‌ ಅಪಘಾತ ನಡೆಯುತ್ತಿದ್ದಂತೆ ಸ್ಥಳದಲ್ಲಿ ಟಿಪ್ಪರ್ ಬಿಟ್ಟು ಚಾಲಕ …

Read More »

ಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರು

ಬೆಳಗಾವಿ: ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು 2 ಲಕ್ಷ ಮೌಲ್ಯದ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮೂಡಲಗಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಬಳಿ ಕಳುವಾಗಿದ್ದ ಬೈಕ್ ಪ್ರಕರಣ ಭೇದಿಸಿದ ಮೂಡಲಗಿ ಪೊಲೀಸ್ ಠಾಣೆ ಸಿಬ್ಬಂದಿ​ ಸುಭಾಷ್ ಶಿವನಪ್ಪ ರಡ್ಡೇರಟ್ಟಿ (34) ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಪಿಎಸ್‌ಐ ವೈ. ಎಸ್. ಬಿಸನಾಳ ನೇತೃತ್ವದ ತನಿಖಾ ತಂಡದಿಂದ ಯಶಸ್ವಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ​ಮೂಡಲಗಿ-ಮಸಗುಪ್ಪಿ ರಸ್ತೆಯ ಎಪಿಎಂಸಿ ದ್ವಾರದ …

Read More »

ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಎಂಎಲ್‌ಸಿ ಅವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಸಮಸ್ಯೆಯನ್ನು ಪ್ರತ್ಯೇಕವಾಗಿ ಆಲಿಸಿದ ಚನ್ನರಾಜ ಹಟ್ಟಿಹೊಳಿ ಅವರು, ಸಾರ್ವಜನಿಕರು ಸಲ್ಲಿಸಿದ್ದ ವಿವಿಧ ಅರ್ಜಿಗಳನ್ನು ಪರಿಶೀಲಿಸಿದರು.ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳು, ವಿವಿಧ ಸೌಲಭ್ಯಗಳ ಪಡೆಯುವಿಕೆ, ಸ್ಥಳೀಯ ಮೂಲಸೌಕರ್ಯ, ಕಂದಾಯ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಸಮಸ್ಯೆಗಳ ಸ್ವರೂಪ ಹಾಗೂ ಸಂಬಂಧಿಸಿದ ಇಲಾಖೆಗಳ …

Read More »

ಬೃಹತ್ ರಕ್ತದಾನ ಶಿಬಿರ: ಜಿಲ್ಲೆಯಲ್ಲಿ ಮೂರನೇ ಅತಿ ಹೆಚ್ಚು ರಕ್ತ ಸಂಗ್ರಹಿಸಿದ ಕೀರ್ತಿ ಖಾನಾಪೂರಕ್ಕೆ

ಬೆಳಗಾವಿ: ಬೆಳಗಾವಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಖಾನಾಪೂರ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ “ಗುರು ಶಿಕ್ಷಕ ನಮನ-ರಕ್ತದಾನ, ಜೀವದಾನ” ಎಂಬ ಸಂದೇಶದೊಂದಿಗೆ ಖಾನಾಪೂರ ಪಟ್ಟಣ ಪಂಚಾಯತಿಯ ಮಂಗಲ ಕಾರ್ಯಾಲಯ ಹಾಗೂ ಸಮುದಾಯ ಆರೋಗ್ಯ ಕೇಂದ್ರ, ನಂದಗಡದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಖಾನಾಪೂರ ಮತಕ್ಷೇತ್ರದ ಶಾಸಕರಾದ ವಿಠ್ಠಲ ಹಲಗೇಕರ ಅವರು ಶಿಬಿರಕ್ಕೆ ಚಾಲನೆ ನೀಡಿ ರಕ್ತದಾನಿಗಳಿಗೆ ಪ್ರೋತ್ಸಾಹ ನೀಡಿದರು. ವಿವಿಧ ಇಲಾಖೆಗಳ ಅಧಿಕಾರಿ–ಸಿಬ್ಬಂದಿ, …

Read More »

ಅಧರ್ಮದ ನಡುವೆ ಧರ್ಮದ ಉದಯವೇ ಶ್ರೀ ಕೃಷ್ಣನ ಆಗಮನ: ಡಾ. ಮಹೇಶ್ ವಾಘಣ್ಣವರ

ಬೆಳಗಾವಿ: ಶ್ರೀ ಕೃಷ್ಣನ ಜನ್ಮವನ್ನು ಕೇವಲ ಒಂದು ಪೌರಾಣಿಕ ಘಟನೆ ಎಂದು ನೋಡುವುದಕ್ಕಿಂತ, ಅಧರ್ಮದ ನಡುವೆ ಧರ್ಮದ ಉದಯ ಎಂಬ ಅರ್ಥದಲ್ಲಿ ನೋಡುವುದು ಸೂಕ್ತ ಎಂದು ವೈದ್ಯರಾದ ಡಾ. ಮಹೇಶ್ ವಾಘಣ್ಣವರ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ  ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜರುಗಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು …

Read More »