ಮೈಸೂರು: ಕಳೆದ 3 ವರ್ಷಗಳಿಂದ ಜೆಡಿಎಸ್‌ನಿಂದ ನನಗೆ ಅವಮಾನವಾಗಿದೆ ಎಂದು ಶಾಸಕ ಜಿ.ಟಿ. ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಜನರಿಂದ ಇಂದು ನಡೆದ ರಾಜಕೀಯ ಮೆರವಣಿಗೆ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವಿರುದ್ಧ ಅಬ್ಬರಿಸಿದ್ದಾರೆ. ನಾನು ಜೆಡಿಎಸ್ (JDS) ಶಾಸಕ. ಆದರೆ ಜೆಡಿಎಸ್‌ನ ಯಾವುದೇ ಕಾರ್ಯಕ್ರಮಕ್ಕೂ ನನ್ನನ್ನು ಕರೆಯಲಿಲ್ಲ. ಯಾವುದೇ ಜೆಡಿಎಸ್ ಸಮಾವೇಶಕ್ಕೂ ಕರೆಯದೆ ನನ್ನಗೆ ಅವಮಾನ ಮಾಡಿದರು. ಈ ಅವಮಾನಕ್ಕೆ ಉತ್ತರಕ್ಕಾಗಿ ನಮ್ಮ ಜನ …
Read More »Daily Archives: ಸೆಪ್ಟೆಂಬರ್ 7, 2026
ʻಗೌರಿ ಲಂಕೇಶ್ʼ ಕೊಲೆ ಕೇಸ್ ಆರೋಪಿಯಿಂದ ಹುಬ್ಬಳ್ಳಿ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿ ನಗರದ ನೂತನ ಪೊಲೀಸ್ ಆಯುಕ್ತ ಭೂಷಣ ಬೋರಸೆ ಅವರು ಅಧಿಕಾರ ಸ್ವೀಕರಿಸುವ ವೇಳೆ ಗಾಂಜಾ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಬ್ಬರು ಸನ್ಮಾನ ಮಾಡಿರೋದು ಭಾರೀ ವಿವಾದಕ್ಕೆ ಕಾರಣವಾಗಿದೆ. ಮಾದಕವಸ್ತು ಸಾಗಾಟ ಮತ್ತು ಕೊಲೆ ಪ್ರಕರಣದ ಆರೋಪಿ ಖೇತ್‌ಸಿಂಗ್ ರಾಜಪುರೋಹಿತ ಸನ್ಮಾನ ಮಾಡಿದ್ದಾನೆ. ಅಲ್ಲದೇ ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿ ಅಮಿತ್ ಬದ್ದಿಯೂ ಕೂಡ ಆಯುಕ್ತರಿಗೆ ಸನ್ಮಾನ ಮಾಡಿದ್ದು, ಹೂಗುಚ್ಛ ನೀಡುವ ಫೋಟೋ …
Read More »KPSC ಅಕ್ರಮದ ವಿರುದ್ಧ ಅಖಾಡಕ್ಕಿಳಿದ ವಿದ್ಯಾರ್ಥಿಗಳು; ರಾಜ್ಯದಲ್ಲಿ ಜೆನ್-ಝೀ ಮಾದರಿ ಹೋರಾಟಕ್ಕೆ ಪ್ಲ್ಯಾನ್
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣದ ವಿರುದ್ಧ ವಿದ್ಯಾರ್ಥಿಗಳೇ ಅಖಾಡಕ್ಕೆ ಇಳಿದಿದ್ದಾರೆ. ರಾಜ್ಯದಲ್ಲಿ ಜೆನ್-ಝೀ ಮಾದರಿ ಹೋರಾಟಕ್ಕೆ ಯುವಕರು ಮುಂದಾಗಿದ್ದಾರೆ. ಕೆಪಿಎಸ್‌ಸಿ ಅಕ್ರಮದ ಬಗ್ಗೆ ಅಪರಾಧ ತನಿಖಾ ಇಲಾಖೆ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದು, ಈ ಬೆಳವಣಿಗೆ ನಡುವೆ ವಿದ್ಯಾರ್ಥಿಗಳು ತಾವೇ ಪ್ರತಿಭಟನೆಗೆ ಮುಂದಾಗಿದ್ದಾರೆ. ದೆಹಲಿಯಲ್ಲಿ ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಹೋರಾಟದ ಮಾದರಿಯಲ್ಲಿಯೇ ಈ ಪ್ರತಿಭಟನೆ ನಡೆಯಲಿದೆ. ಬೆಂಗಳೂರಿನಲ್ಲಿ ಇದೇ ತಿಂಗಳ ಎರಡನೇ ವಾರದಿಂದ …
Read More »ಊಟ ಮಾಡುವಾಗ ಹೃದಯಾಘಾತ – ಮಗಳು, ಅಳಿಯನ ಕಣ್ಣೆದುರೇ ಪ್ರಾಣಬಿಟ್ಟ ವ್ಯಕ್ತಿ!
ರಾಮನಗರ: ಊಟ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿ ಮಗಳು, ಅಳಿಯನ ಎದುರಲ್ಲೇ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ರಾಮನಗರ ತಾಲೂಕಿನ ಮಂಚಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗಯ್ಯ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಮಗಳು ಹಾಗೂ ಅಳಿಯನೊಂದಿಗೆ ಸಂತೋಷದಿಂದ ಊಟ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿದ್ದು, ಪ್ರಾಣಬಿಟ್ಟಿದ್ದಾರೆ. ಸೋಫಾದ ಮೇಲೆ ಕುಳಿತು ಊಟ ಮಾಡುವಾಗ ಕುಸಿದು ಬೀಳುವ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಏಕಾಏಕಿ ಕುಳಿತ ಜಾಗದಲ್ಲೇ ಕುಸಿದ ತಂದೆಯನ್ನ ಮೊದಲಿಗೆ ಅಲ್ಲೇ ಊಟ …
Read More »ಹರಿದ ನೆತ್ತರು – ರೌಡಿಶೀಟರ್ ಭೀಕರ ಹತ್ಯೆ
ಶಿವಮೊಗ್ಗ: ತಾಲೂಕಿನ ರಾಮಿನಕೊಪ್ಪದಲ್ಲಿ ರೌಡಿಶೀಟರ್ ಭೀಕರ ಹತ್ಯೆಯಾಗಿರುವ ಘಟನೆ ನಡೆದಿದೆ. ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ (32) ಕೊಲೆಯಾದ ರೌಡಿಶೀಟರ್. ಶಿವಮೊಗ್ಗ ನಗರದ ಸಿಗೇಹಟ್ಟಿ- ಭಾರತಿ ಕಾಲೋನಿ ನಿವಾಸಿ. ರಾಮಿನಕೊಪ್ಪ ಬಳಿ ಸ್ನೇಹಿತರ ಜೊತೆಯಿದ್ದ ಕಿರಣ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಗಂಭೀರ ಗಾಯಗೊಂಡ ಕಿರಣ್ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರೌಡಿಶೀಟರ್ ಕಿರಣ್ ಮೃತದೇಹ ರವಾನಿಸಲಾಗಿದೆ. ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ …
Read More »ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವು
ನವದೆಹಲಿ: ಭಾನುವಾರ ಮಧ್ಯಾಹ್ನ ದೆಹಲಿಯ ಸತ್ಯನಿಕೇತನದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಿತಿ ಗಂಭೀರವಾಗಿದೆ. ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಒಂಬತ್ತು ಜನರನ್ನು ರಕ್ಷಿಸಲಾಗಿದೆ. ಘಟನೆಯ ಬಗ್ಗೆ ದೆಹಲಿ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ‘ದೆಹಲಿಯ ಸತ್ಯನಿಕೇತನದಲ್ಲಿ ಕಟ್ಟಡ ಕುಸಿತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. …
Read More »ಬಿಗ್‌ಬಾಸ್ ಕನ್ನಡ ಸೀಸನ್ 13ಕ್ಕೆ ಶುಭಾರಂಭ; ಇವ್ರೇ ನೋಡಿ ಈ ಬಾರಿ ಮನೆಯೊಳಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 13 ಅದ್ಧೂರಿಯಾಗಿ ಆರಂಭವಾಗಿದೆ. ಗ್ರ್ಯಾಂಡ್ ಓಪನಿಂಗ್‌ನಲ್ಲಿ ಒಬ್ಬೊಬ್ಬರಾಗಿ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ, ಕಿರುತೆರೆ, ಸೋಷಿಯಲ್ ಮೀಡಿಯಾ ಸೇರಿದಂತೆ ವಿವಿಧ ಕ್ಷೇತ್ರಗಳ ಪರಿಚಿತ ಮುಖಗಳು ಈ ಬಾರಿ ಬಿಗ್‌ಬಾಸ್ ಮನೆಯಲ್ಲಿದ್ದಾರೆ. ಈ ಬಾರಿ ಸ್ಪರ್ಧಿಗಳ ಎಂಟ್ರಿ ಕೂಡ ವಿಭಿನ್ನವಾಗಿತ್ತು. ಕೆಲವರು ಟಾಸ್ಕ್ ಮೂಲಕ, ಇನ್ನು ಕೆಲವರು ತಮ್ಮದೇ ಸ್ಟೈಲ್‌ನಲ್ಲಿ ಬಿಗ್‌ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಕಿಚ್ಚ ಸುದೀಪ್ ಜೊತೆ …
Read More »ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ – ಮಹಿಳೆ ಸಾವು, ನಾಲ್ವರಿಗೆ ಗಾಯ
ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೆಕೆರೆ ಗೇಟ್ ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗುಜರಾತ್ ಮೂಲದ, ಬೆಂಗಳೂರಿನ ನಿವಾಸಿ ಸುಧಾ ಜೈನ್ (58) ಮೃತ ಮಹಿಳೆ. ಶ್ರವಣಬೆಳಗೊಳದಿಂದ ಬೆಂಗಳೂರಿಗೆ ಕುಟುಂಬ ವಾಪಸ್ಸಾಗುತ್ತಿದ್ದ ವೇಳೆ ಮತ್ತೊಂದು ಕಾರು ಹಿಂದಿಕ್ಕುವ ಭರದಲ್ಲಿ ಅತೀವೇಗವಾಗಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. …
Read More »ಅಹಿಂದ ದಾಳ ಉರುಳಿಸಿದ ಸಿದ್ದರಾಮಯ್ಯ – ಸಮಾವೇಶಕ್ಕೆ ಜಾರಕಿಹೊಳಿಗೆ ಆಹ್ವಾನವೇ ಇಲ್ಲ
ಬೆಂಗಳೂರು: ಇಲ್ಲಿನ ಅರಮನೆ ಮೈದಾನದಲ್ಲಿ ಅಹಿಂದ ಕಹಳೆ ಮೊಳಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ಅಹಿಂದ ಚಳುವಳಿಗೆ 25 ವರ್ಷ ಪೂರ್ಣ ಹಿನ್ನಲೆ ಇಂದು ಅರಮನೆ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಮಾಡಲಾಯಿತು. ಆದರೆ ಅಹಿಂದ ಚಳುವಳಿಯಲ್ಲಿ ಸಿದ್ದರಾಮಯ್ಯಗೆ ಬೆನ್ನೆಲುಬಾಗಿ ನಿಂತಿದ್ದ ಸತೀಶ್ ಜಾರಕಿಹೊಳಿಗೆ ಮಾತ್ರ ಇಂದಿನ ಸಮಾವೇಶಕ್ಕೆ ಆಹ್ವಾನ ನೀಡಿರಲಿಲ್ಲ. ಹೌದು, ಸಿದ್ದರಾಮಯ್ಯ-ಸತೀಶ್ ಜಾರಕಿಹೊಳಿ ಒಂದು ಕಾಲದಲ್ಲಿ ಗುರು-ಶಿಷ್ಯರು. ಅಹಿಂದ …
Read More »
Laxmi News 24×7