ಬೆಳಗಾವಿ: ಬಹುನಿರೀಕ್ಷಿತ ಬೆಳಗಾವಿ-ಕಿತ್ತೂರು-ಧಾರವಾಡ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರದ ನಿರ್ಲಕ್ಷೃ, ಭೂ ಸ್ವಾಧೀನ ಪರಿಹಾರ ಬಿಡುಗಡೆ ಮಾಡದಿರುವುದರಿಂದ ಯೋಜನೆ ನನೆಗುದಿಗೆ ಬಿದ್ದಿದೆ ಎಂದು ಸಂಸದ ಜಗದೀಶ ಶೆಟ್ಟರ್ ದೂರಿದರು. ನಗರದ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಯೋಜನೆಗೆ ಅಗತ್ಯವಿರುವ 1,200 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈಗಾಗಲೇ ರೈತರು ಭೂಮಿ ಬಿಟ್ಟುಕೊಟ್ಟಿದ್ದಾರೆ. ಆದರೆ, ರಾಜ್ಯ ಸರ್ಕಾರವು 400 ಕೋಟಿ ರೂ. ಪರಿಹಾರ ಪೈಕಿ ಇಲ್ಲಿಯವರೆಗೆ 50 …
Read More »Daily Archives: ಸೆಪ್ಟೆಂಬರ್ 9, 2026
ಕಾರ್ಮಿಕರ ಕಿಟ್ ವಿತರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ
ಚಿಕ್ಕೋಡಿ: ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯ ಒದಗಿಸಲು ಒತ್ತು ನೀಡುವುದರ ಜತೆಗೆ ಕಾರ್ಮಿಕರ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮ ಪಂಚಾಯತ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕ ಫಲಾನುಭವಿಗಳಿಗೆ ಕಿಟ್ ವಿತರಣೆ ಕಾರ್ಯಕ್ರಮ ಅವರು ಮಾತನಾಡಿದರು. ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಸರ್ಕಾರವು ಕಾರ್ಮಿಕರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗಾಗಿ ಹಲವು …
Read More »ಕರ್ನಾಟಕದಲ್ಲಿ ಭತ್ತದ ಬಿತ್ತನೆಗೆ ಮುಂಗಾರು ಹೊಡೆತ – 4.28 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಆಗದ ಕಾರಣ ಭತ್ತದ ಬಿತ್ತನೆ ಪ್ರಮಾಣ ಗಣನೀಯವಾಗಿ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಕರ್ನಾಟಕದಲ್ಲಿ 4.28 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬಿತ್ತನೆ ಕಡಿಮೆಯಾಗಿದೆ. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದ್ರೆ ಭತ್ತದ ಬಿತ್ತನೆ ಪ್ರಮಾಣದಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಇಳಿಕೆ ಕಂಡುಬಂದಿದೆ. ಇನ್ನೂ ಕರ್ನಾಟಕ ಮಾತ್ರವಲ್ಲದೇ ದೇಶದ ವಿವಿಧ ರಾಜ್ಯಗಳಲ್ಲೂ ಭತ್ತದ ಬಿತ್ತನೆ ಪ್ರಮಾಣದಲ್ಲಿ ಕುಸಿತ ಕಂಡುಬಂದಿದೆ. ಕಳೆದ …
Read More »ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ಆತ್ಮಹತ್ಯೆ – ಡೆತ್‌ನೋಟ್ ಪತ್ತೆ!
ನವದಹೆಲಿ: ದೆಹಲಿ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರಾಕೇಶ್ ಮೆಹ್ತಾ ಅವರು ನೋಯ್ಡಾದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ನಿವೃತ್ತ ಐಎಎಸ್ ಅಧಿಕಾರಿ ಮೆಹ್ತಾ ಅವರ ಮೃತದೇಹ ಸೆಕ್ಟರ್ 82 ರಲ್ಲಿರುವ ವಸತಿ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಫೇಸ್-2 ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳ ಪರಿಶೀಲಿಸಿದ ಬಳಿಕ ಮೃತದೇಹವನ್ನ ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. …
Read More »ಭಾರತದ 7.8% ಜಿಡಿಪಿ ಬೆಳವಣಿಗೆ ವಿಶ್ವಕ್ಕೆ ಹೊಸ ಭರವಸೆ – ಪ್ರಧಾನಿ ಮೋದಿ
ಮುಂಬೈ: ಜಾಗತಿಕ ಮಟ್ಟದಲ್ಲಿ ಸವಾಲಿನ ಪರಿಸ್ಥಿತಿ ಮುಂದುವರಿದಿದ್ದರೂ, ಏಪ್ರಿಲ್–ಜೂನ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ ಶೇ.7.8ರಷ್ಟು ಬೆಳವಣಿಗೆ ದಾಖಲಿಸಿದೆ. ಇದು ಸಂಘರ್ಷಗಳು, ವ್ಯಾಪಾರ ಉದ್ವಿಗ್ನತೆ ಹಾಗೂ ಇಂಧನ ಮತ್ತು ತೈಲ ಪೂರೈಕೆ ಸರಪಳಿಗಳಲ್ಲಿನ ಅಡೆತಡೆಗಳ ನಡುವೆಯೂ ವಿಶ್ವಕ್ಕೆ ಹೊಸ ಭರವಸೆ ಮೂಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು. ಮುಂಬೈನಲ್ಲಿ ನಡೆದ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನ 3ನೇ ಹಂತದ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಜಗತ್ತು ದೀರ್ಘಕಾಲದಿಂದ ಸಂಘರ್ಷ ಮತ್ತು ಅನಿಶ್ಚಿತತೆಯ …
Read More »ಸಿದ್ಧಾರ್ಥ ಟ್ರಸ್ಟ್‌ಗೆ ನಿಯಮಬಾಹಿರವಾಗಿ ಸೈಟ್ ವಿಚಾರ – ಖರ್ಗೆ ಕುಟುಂಬ ವಿರುದ್ಧದ ಕೇಸ್‌ಗೆ ಹೈಕೋರ್ಟ್ ತಿರುವು!
ಬೆಂಗಳೂರು: ಖಾಸಗಿ ದೂರು ಸಲ್ಲಿಕೆಯಲ್ಲಿನ ಪ್ರಮಾಣ ಪತ್ರದ ತಾಂತ್ರಿಕ ದೋಷ ಮುಂದಿಟ್ಟುಕೊಂಡು ರಾಜಕಾರಣಿಗಳ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವ ಬದಲಿಗೆ ವಿಚಾರಣಾ ನ್ಯಾಯಾಲಯ ಸ್ವತಃ ವಿಚಾರಣೆಗೆ ಮುಂದಾಗುವುದು ತರವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಮೂಲಕ, ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ( ನಿಯಮಬಾಹಿರವಾಗಿ ನಿವೇಶನ ಮಂಜೂರು ಮಾಡಲಾಗಿದೆ’ ಎಂಬ ದೂರಿನ ಪ್ರಕರಣವನ್ನ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯಕ್ಕೆ ಹಿಂದಿರುಗಿಸಿ ಆದೇಶಿಸಿದೆ. …
Read More »ಅಪಘಾತದಲ್ಲಿ ಗಾಯಗೊಂಡ ಮಹಿಳೆ ಆರೋಗ್ಯ ವಿಚಾರಿಸಿದ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರವಾಸದಲ್ಲಿದ್ದ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು, ಬೆಕ್ಕಿನಕೇರಿ ಗ್ರಾಮದ ಮುಖಂಡರಾದ ನಾರಾಯಣ ಬೆಳಗಾಂವ್ಕರ್ ಅವರ ಪತ್ನಿ ಶ್ರೀಮತಿ ಶಾಂತಾ ಅವರು ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿರುವ ವಿಷಯ ತಿಳಿದು, ತಕ್ಷಣ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಾರಾಯಣ ಬೆಳಗಾಂವ್ಕರ್ ಅವರು ತಮ್ಮ ಪತ್ನಿ ಶಾಂತಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಶಾಂತಾ ಅವರಿಗೆ ಗಾಯಗಳಾಗಿದ್ದವು. …
Read More »ಮಹಿಳೆಯರ ದೂರುಗಳಿಗೆ ಸ್ಪಂದಿಸಿ, ಜನಸ್ನೇಹಿ ಪೊಲೀಸ್ ಸೇವೆ ನೀಡಿ: ನಾಗಲಕ್ಷ್ಮಿ ಚೌಧರಿ ಸೂಚನೆ
ಬೆಳಗಾವಿ: ಹತ್ತು ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಎಲ್ಲ ಸಂಸ್ಥೆಗಳು, ಕಚೇರಿಗಳು ಹಾಗೂ ಕೆಲಸದ ಸ್ಥಳಗಳಲ್ಲಿ ಆಂತರಿಕ ದೂರು ಸಮಿತಿ (ಐಸಿಸಿ)ಯನ್ನು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸೂಚಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನ …
Read More »ಸೆ.11 ರಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
ಬೆಳಗಾವಿ: ರಾಜ್ಯ ಸರ್ಕಾರದ ಸೂಚನೆಯನ್ವಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ಸೆಪ್ಟೆಂಬರ 5 ರಂದು ಖಾನಾಪುರ ತಾಲೂಕಿನ ಲೋಕಮಾನ್ಯ ಭವನದಲ್ಲಿ ನಿಗದಿಯಾಗಿದ್ದ ಪ್ರಜಾ ಸೇವೆ ಆಂದೋಲನ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿ ದಿನಾಂಕ:11-09-2026 ರ ಶುಕ್ರವಾರ ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮರು ನಿಗದಿಪಡಿಸಲಾಗಿದೆ. ಸಭೆಯಲ್ಲಿ ಸ್ಥಳೀಯ ಶಾಸಕರು ಉಪಸ್ಥಿತರಿರಲಿದ್ದು, ಯರಗಟ್ಟಿ/ಸವದತ್ತಿ ತಾಲೂಕಿನ …
Read More »
Laxmi News 24×7