Breaking News

Daily Archives: ಸೆಪ್ಟೆಂಬರ್ 11, 2026

ನನ್ನ ದವಡೆ ಮೇಲೆ ಇಂದಿಗೂ ಗಾಯದ ಗುರುತಿದೆ: ಸಿಎಂ ವಿಜಯ್‌ಗೆ ಸ್ಟಾಲಿನ್ ತಿರುಗೇಟು

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ತಮ್ಮ ದವಡೆಯ ಮೇಲೆ ಒಂದು ಕೈಯಿಟ್ಟು ಸನ್ನೆ ಮಾಡಿ ವ್ಯಂಗ್ಯವಾಡಿದ್ದ ಮುಖ್ಯಮಂತ್ರಿ ಜೋಸೆಫ್ ವಿಜಯ್‌ಗೆ  ಡಿಎಂಕೆ  ಮುಖ್ಯಸ್ಥ ಹಾಗೂ ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ `ತಂಬಿ’ ಅಂತಲೇ ತಿರುಗೇಟು ನೀಡಿದ್ದಾರೆ. ಕರುಣಾನಿಧಿ ನೇತೃತ್ವದ ಡಿಎಂಕೆ ಸರ್ಕಾರವನ್ನು ವಜಾಗೊಳಿಸಿದ ಬಳಿಕ ಪೊಲೀಸರು ತಮ್ಮನ್ನು ಬಂಧಿಸಿದ ಘಟನೆ ಹಾಗೂ 1976ರಲ್ಲಿ ಜೈಲಿನಲ್ಲಿ ಅನುಭವಿಸಿದ ಭೀಕರ ಯಾತನೆಗಳನ್ನು ನೆನಪಿಸಿಕೊಂಡಿರುವ ಸ್ಟಾಲಿನ್, ತಮ್ಮ `ಎಕ್ಸ್’ ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿದ್ದಾರೆ. 1976ರ ಜನವರಿ 31ರಂದು …

Read More »

ಆನ್‌ಲೈನ್‌ ಶಾಪಿಂಗ್‌ ಮಾಡೋರು ತಿಳಿಯಲೇಬೇಕಾದ 7 ನಿಯಮಗಳೇನು?

ನವದೆಹಲಿ: ದೇಶದಲ್ಲಿ ಆನ್‌ಲೈನ್‌ ಶಾಪಿಂಗ್‌ ಮಾಡುವ ಗ್ರಾಹಕರಿಗೆ ಇನ್ಮುಂದೆ ಹಲವು ಬದಲಾವಣೆಗಳು ಎದುರಾಗಲಿವೆ. ಇ-ಕಾಮರ್ಸ್‌  ವೇದಿಕೆಗಳು ಉತ್ಪನ್ನಗಳ ಬೆಲೆ, ರಿಯಾಯಿತಿ, ಸರ್ಚ್‌ ರಿಸಲ್ಟ್‌ಗಳು ಹಾಗೂ ಪ್ರಾಯೋಜಿತ ಉತ್ಪನ್ನಗಳನ್ನು ಪ್ರದರ್ಶಿಸುವ ರೀತಿಯಲ್ಲಿ ಹೊಸ ನಿಯಮಗಳು ಜಾರಿಗೆ ಬರಲಿವೆ. ಗ್ರಾಹಕರಿಗೆ ಹೆಚ್ಚಿನ ಬೆಲೆ ಪಾರದರ್ಶಕತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಗ್ರಾಹಕ ಸಂರಕ್ಷಣಾ (ಇ-ಕಾಮರ್ಸ್) ನಿಯಮಗಳು, 2020ಕ್ಕೆ ತಿದ್ದುಪಡಿ ಮಾಡಿದೆ. ಬೆಲೆ ಪಾರದರ್ಶಕತೆ, ಪ್ರಾಯೋಜಿತ ಉತ್ಪನ್ನಗಳ ಪ್ರದರ್ಶನ, ಸರ್ಚ್‌ ರಿಸಲ್ಟ್‌ಗಳಲ್ಲಿ ಹಸ್ತಕ್ಷೇಪ ಹಾಗೂ …

Read More »

ಲಕ್ನೋ-ದಮ್ಮಾಮ್ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ – ಅಹಮದಾಬಾದ್‌ನಲ್ಲಿ ತುರ್ತು ಲ್ಯಾಂಡಿಂಗ್

ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ  ‘ಬಾಂಬ್’ ಎಂದು ಬರೆಯಲಾಗಿದ್ದ ಟಿಶ್ಯೂ ಪೇಪರ್ ಪತ್ತೆಯಾದ ಹಿನ್ನೆಲೆಯಲ್ಲಿ ವಿಮಾನವನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಗುರುವಾರ ಸಂಜೆ ಸುಮಾರು 5:55ಕ್ಕೆ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಇಳಿದಿದ್ದು, ಸಿಬ್ಬಂದಿ ಸೇರಿದಂತೆ ಒಟ್ಟು 133 ಮಂದಿ ವಿಮಾನದಲ್ಲಿದ್ದರು. ತುರ್ತು ಲ್ಯಾಂಡಿಂಗ್ ಬಳಿಕ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಯಿತು. ಟಿಶ್ಯೂ ಪೇಪರ್‌ನಲ್ಲಿ `ಬಾಂಬ್’ ಎಂಬ ಪದ …

Read More »

ಇನ್ನೂ ದೊಡ್ಡ ದೊಡ್ಡ ಮೀನುಗಳಿವೆ – ಇಡಿ ದಾಳಿ ಬಗ್ಗೆ ಸತೀಶ್ ಜಾರಕಿಹೊಳಿ ಫಸ್ಟ್ ರಿಯಾಕ್ಷನ್‌

ಬೆಂಗಳೂರು: ನನ್ನ ದೃಷ್ಟಿಯಲ್ಲಿ ಇಡಿ ರೇಡ್  ರಾಜಕೀಯ ಪ್ರೇರಿತ ಇರಬಹುದು. ನಾನೇ ಲಾಸ್ಟ್ ಅಂದುಕೊಂಡಿದ್ದೆ. ಆದ್ರೆ ನಾನೇ ಮೊದಲಿದ್ದೀನಿ. ಇನ್ನೂ ದೊಡ್ಡ ದೊಡ್ಡ ಮೀನುಗಳು ಇವೆ ಎಂದು ಸಚಿವ ಸತೀಶ್ ಜಾರಕಿಹೊಳಿ  ಹೇಳಿದ್ದಾರೆ. ತಮ್ಮ ನಿವಾಸದ ಮೇಲಿನ ಇಡಿ ದಾಳಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡಿ ದಾಳಿಗೆ ಕಾರಣ ತಕ್ಷಣಕ್ಕೆ ಗೊತ್ತಿಲ್ಲ, ರಾಜಕೀಯ ಪ್ರೇರಿತ ಇರಬಹುದು. ಅವರಿಗೆ ಮಾಹಿತಿ ಇರಬಹುದು. ಆದ್ರೆ ನಮಗೆ ನೋಟಿಸ್ ಕೊಡಬಹುದಿತ್ತು. ನಮ್ಮ ದೃಷ್ಟಿಯಲ್ಲಿ …

Read More »

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಅಗತ್ಯ

ಬೆಳಗಾವಿ:ಬಾಲ ಕಾರ್ಮಿಕ ಪದ್ಧತಿ ಎಂಬ ಸಾಮಾಜಿಕ ಪಿಡುಗನ್ನು ತೊರೆದು ಹಾಕುವುದು ಅಗತ್ಯವಾಗಿದೆ. ಬಾಲ ಕಾರ್ಮಿಕರ ಕುರಿತು ಮಾತನಾಡುವುದು ಸುಲಭವಾಗಿದ್ದು ಇದನ್ನು ತಡೆಗಟ್ಟಲು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ಅವರಣದ ಸಭಾಂಗಣದಲ್ಲಿ ಗುರುವಾರ  ಜರುಗಿದ ಕೃಷಿ ಕ್ಷೇತ್ರದ ಕಬ್ಬು ಕಟಾವು ಕಾರ್ಯದಲ್ಲಿ ಮಕ್ಕಳ ಬಳಕೆ ನಿಷೇಧಿಸಿ ಸಕ್ಕರೆ ಉತ್ಪಾದಕರಿಗೆ ಆಗುವ ಸವಲತ್ತುಗಳ ಕುರಿತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಸಕ್ಕರೆ ಅಂತಾರಾಷ್ಟ್ರೀಯ ಮಟ್ಟದ …

Read More »

ಗೂಡ್ಸ್ ವಾಹನದಲ್ಲಿ ಕದ್ದುಮುಚ್ಚಿ ಸಾಗಿಸುತ್ತಿದ್ದ 400 ಲೀಟರ್ ಗೋವಾ ಮದ್ಯ ವಶ

ಖಾನಾಪುರ: ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಗೂಡ್ಸ್ ವಾಹನದಲ್ಲಿ ಕದ್ದುಮುಚ್ಚಿ ಸಾಗಿಸುತ್ತಿದ್ದ 400 ಲೀಟರ್ ಗೋವಾ ಮದ್ಯವನ್ನು ವಾಹನ ಸಮೇತ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಗುರುವಾರ ತಾಲ್ಲೂಕಿನ ಕಣಕುಂಬಿ ಬಳಿ ಕರ್ನಾಟಕ ಗೋವಾ ಗಡಿಯಲ್ಲಿ ವರದಿಯಾಗಿದೆ. ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆ ಸಂದರ್ಭದಲ್ಲಿ ಕಣಕುಂಬಿ ತನಿಖಾ ಠಾಣೆಯ ಹತ್ತಿರ ಗೋವಾದಿಂದ ಬೆಳಗಾವಿಗೆ ಬರುತ್ತಿದ್ದ ಭಾರತ …

Read More »

ಮಗುವಿನ ಪಾಲಕರ ಪತ್ತೆಗಾಗಿ ಮನವಿ

ಬೆಳಗಾವಿ: ಸವದತ್ತಿ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ- ನರಗುಂದ ರಸ್ತೆಯ ಬಸವಣಕಟ್ಟೆ ಸೇತುವೆ ಕೆಳಭಾಗದಲ್ಲಿ ನವಜಾತ ಗಂಡು ಶಿಶುವನ್ನು ದಿನಾಂಕ 06.07.2026 ರಂದು ಯಾರೋ ಅಪರಿಚಿತರು ಬಿಟ್ಟು ಹೋಗಿದ್ದು, ಸ್ಥಳೀಯ ಗ್ರಾಮಸ್ಥರು ಗಮನಿಸಿ ಪೋಲಿಸರಿಗೆ ಮಾಹಿತಿಯನ್ನು ನೀಡಿರುತ್ತಾರೆ. ತಕ್ಷಣ ಪೋಲಿಸರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ಥಳಕ್ಕೆ ಭೇಟಿ ನೀಡಿ, ಮಗುವನ್ನು ರಕ್ಷಣೆ ಮಾಡಿ ಸವದತ್ತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಜಿಲ್ಲಾ ಆಸ್ಪತ್ರೆಗೆ …

Read More »