ಕಾರವಾರ: ವೀಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದಡಿ ಇಸ್ರೇಲ್ ಪ್ರಜೆಯನ್ನ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಸ್ರೇಲ್‌ನ ಮಾರ್ಚಾವಿ ಅಸ್ಸಾಪ್ ಎಂಬ ವಿದೇಶಿ ಪ್ರಜೆಯನ್ನು ಹೊನ್ನಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸ್ಸಾಪ್ ಅವರ ವೀಸಾ ಅವಧಿ 2025ರ ಏಪ್ರಿಲ್‌ನಲ್ಲೇ ಮುಕ್ತಾಯಗೊಂಡಿತ್ತು ಆದರೂ ತನ್ನ ಗುರುತನ್ನ ಹೇಳದೇ ಅಕ್ರಮವಾಗಿ ದೇಶದಲ್ಲಿ ಸುತ್ತಾಡುತಿದ್ದ. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಉಳಿದುಕೊಂಡಿದ್ದು ಗೋಕರ್ಣದಿಂದ ಮುರುಡೇಶ್ವರದತ್ತ ಕಾಲ್ನಡಿಗೆಯಲ್ಲಿ …
Read More »Daily Archives: ಸೆಪ್ಟೆಂಬರ್ 17, 2026
ಖ್ಯಾತ ನಟ ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರನ್ನು ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಭಾರತೀಯ ಸಿನಿಮಾದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಹೆಸರಿನಲ್ಲಿ ಈ ಪ್ರಶಸ್ತಿ ಸ್ಥಾಪಿಸಲಾಗಿದೆ. ಸಿನಿಮಾ ರಂಗದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಸೆಪ್ಟೆಂಬರ್ 22 ರಂದು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಗುಜರಾತ್‌ನ ಕೆವಾಡಿಯಾದಲ್ಲಿ …
Read More »ಸೆ.18 ರಿಂದ ರಾಜ್ಯದಲ್ಲಿ ಅಮಿತ್ ಶಾ 2 ದಿನ ಪ್ರವಾಸ
ಬೆಳಗಾವಿ/ ಧಾರವಾಡ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 18 ಮತ್ತು 19 ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ ಅಮಿತ್ ಶಾ ಅವರ ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸೆ.18 ರಾತ್ರಿ 10 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿರುವ ಅಮಿತ್ ಶಾ, …
Read More »ಶಾಸಕನನ್ನ ಹೊತ್ತು ಕುಣಿದ ಪೊಲೀಸರು; ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರು ಸಿಬ್ಬಂದಿ ವರ್ಗಾವಣೆ
ಶಿವಮೊಗ್ಗ: ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಶಾಸಕರನ್ನೇ ಹೊತ್ತು ಕುಣಿದ ಪೊಲೀಸ್ ಸಿಬ್ಬಂದಿಯನ್ನ ಶಿಸ್ತುಕ್ರಮದ ಭಾಗವಾಗಿ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ನಗರದ ಕೋಟೆ ಶ್ರೀ ಭೀಮೇಶ್ವರ ದೇವಾಲಯದ ಬಳಿ ಸಾಗುತ್ತಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶಾಸಕ ಚನ್ನಬಸಪ್ಪ ಅವರು ಭಾಗಿಯಾಗಿದ್ದರು. ಈ ವೇಳೆ ಶಾಸಕರನ್ನ ಹೊತ್ತು ಕುಣಿದ ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಗಣೇಶ್ …
Read More »ಅಮಾವಾಸ್ಯೆ ದಿನ ಒಡವೆಗೆ ಪೂಜೆ ನೆಪದಲ್ಲಿ ವಂಚನೆ – ನಕಲಿ ಜ್ಯೋತಿಷಿ ನಂಬಿ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಮಹಿಳೆ
ಬೆಂಗಳೂರು: ಚೌಡೇಶ್ವರಿ ದೇವಿಗೆ ಪೂಜೆ ಮಾಡುವ ನೆಪದಲ್ಲಿ ನಕಲಿ ಜ್ಯೋತಿಷಿ ಮಹಿಳೆಯೊಬ್ಬರಿಂದ ಬರೋಬ್ಬರಿ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಟರಾಯನಪುರ ನಿವಾಸಿ 62 ವರ್ಷದ ಶಾಂತಮ್ಮ ವಂಚನೆಗೊಳಗಾದ ಮಹಿಳೆ. ವಿಕ್ಟೋರಿಯಾ ಆಸ್ಪತ್ರೆಯ ಫುಟ್‌ಪಾತ್‌ನಲ್ಲಿ ಜ್ಯೋತಿಷ್ಯ ಹೇಳುತ್ತಿದ್ದ ವೆಂಕಟೇಶ್ ವಂಚಿಸಿದ ಖತರ್ನಾಕ್ ಜ್ಯೋತಿಷಿ. ಆರೋಗ್ಯ ಸಮಸ್ಯೆ ಹಿನ್ನೆಲೆ ಶಾಂತಮ್ಮ ಆಗಾಗ ವಿಕ್ಟೋರಿಯಾ ಆಸ್ಪತ್ರೆಗೆ ತೆರಳುತ್ತಿದ್ದರು. ಇದೇ ವೇಳೆ ಜ್ಯೋತಿಷಿ ವೆಂಕಟೇಶ್‌ನನ್ನು ಭೇಟಿಯಾಗಿದ್ದರು. ತಮ್ಮ …
Read More »ತುಮಕೂರಿನಲ್ಲಿ ಹಿಟ್ & ರನ್ – ನವದಂಪತಿ ಸಾವು
ತುಮಕೂರು: ಹಿಟ್ & ರನ್‌ಗೆ ನವದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಮೇಲೆ ನಡೆದಿದೆ. ದರ್ಶನ್ (25), ಉಷಾರಾಣಿ (21) ಮೃತ ದಂಪತಿ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ ದಂಪತಿ ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಮಂಗಳವಾರ ಬೈಕ್‌ನಲ್ಲಿ ಬೆಂಗಳೂರಿನ ಮಾರ್ಗದತ್ತ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, …
Read More »ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು
ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ನಡೆದಿದೆ. ವರ್ಷ (23) ಮೃತ ಯುವತಿ. ಬೆಂಗಳೂರಿನ ನಾಗಸಂದ್ರದ ನಿವಾಸಿ ವರ್ಷ ಶುಕ್ರವಾರ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಜೊತೆ ಟ್ರಿಪ್‌ಗೆಂದು ಬಂದಿದ್ದಳು. ಈ ಮೂವರು ಶನಿವಾರ, ಭಾನುವಾರ ಹಾಗೂ ಸೋಮವಾರ ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಫಾಲ್ಸ್ ಸೇರಿದಂತೆ ಹಲವೆಡೆ ಸುತ್ತಾಡಿದ್ದರು. ಅಲ್ಲದೇ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ನಲ್ಲಿ ಒಂದೇ ರೂಂನಲ್ಲಿ ಮೂವರು ತಂಗಿದ್ದರು. …
Read More »ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ತೂಕ-ಅಳತೆ ಅಕ್ರಮ
ಬೆಂಗಳೂರು: ಹೋಟೆಲ್, ಬೇಕರಿ ಬಳಿಕ ಈಗ ಪೆಟ್ರೋಲ್ ಬಂಕ್‌ಗಳಿಗೆ ಸರ್ಕಾರ ಬಿಸಿ ಮುಟ್ಟಿಸಿದೆ. ರಾಜ್ಯದ 5,946 ಪೆಟ್ರೋಲ್ ಬಂಕ್‌ಗಳ ಪೈಕಿ, 805 ಬಂಕ್‌ಗಳ ಪರೀಕ್ಷೆ ನಡೆಸಲಾಗಿದ್ದು, 768 ಬಂಕ್‌ಗಳು ತೂಕ-ಅಳತೆಯಲ್ಲಿ ಅಕ್ರಮ ಮಾಡಿರೋದು ಗೊತ್ತಾಗಿದೆ. ಬಂಕ್‌ಗಳ ವಂಚನೆ ಬಗ್ಗೆ ದೂರು ನೀಡಲು 18005991100 ಸಹಾಯವಾಣಿ ಆರಂಭಿಸಲಾಗಿದೆ. ಬಂಕ್‌ಗಳ ಮುಂದೆ ಟೋಲ್ ನಂಬರ್ ಪ್ರದರ್ಶಿಸುವುದು ಕಡ್ಡಾಯವಾಗಿದೆ. ಈ ಮಧ್ಯೆ, ಬೆಂಗಳೂರಿನಲ್ಲಿ ಪೊಲೀಸರು ಜಪ್ತಿ ಮಾಡಿರುವ ವಾಹನಗಳನ್ನ ತೆರವು ಮಾಡುವ ಕಾರ್ಯಕ್ಕೆ ಸರ್ಕಾರ …
Read More »ನಾಗರಹೊಳೆ ಸುತ್ತ 7.5 ಕಿಮೀ ವರೆಗೆ ಪರಿಸರ ಸೂಕ್ಷ್ಮ ವಲಯ: ಕೇಂದ್ರದಿಂದ ಕರಡು ಅಧಿಸೂಚನೆ
ನವದೆಹಲಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸುತ್ತಮುತ್ತಲಿನ 573.95 ಚದರ ಕಿಲೋಮೀಟರ್ ಪ್ರದೇಶವನ್ನು ಗುರುತಿಸಿ, ಅಲ್ಲಿ ಕೆಲವು ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಎರಡನೇ ಬಾರಿಗೆ ಪರಿಸರ ಸೂಕ್ಷ್ಮ ವಲಯ ಕುರಿತ ಕರಡು ಅಧಿಸೂಚನೆಯನ್ನು ಹೊರಡಿಸಿದೆ. 843.96 ಚದರ ಕಿಲೋಮೀಟರ್ ವಿಸ್ತೀರ್ಣದ ಹುಲಿ ಸಂರಕ್ಷಿತ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ವಾಣಿಜ್ಯ ಚಟುವಟಿಕೆಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈ ಕರಡು ಪ್ರತಿಯನ್ನು ಹೊರತಂದಿದೆ. …
Read More »50 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ತಹಸೀಲ್ದಾರ್
ಧಾರವಾಡ: 50 ಲಕ್ಷ ರೂ. ಲಂಚ ಪಡೆಯುವಾಗ ತಹಸೀಲ್ದಾರ್‌ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ್ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಭೂಮಿ ಸಿ ಖರಾಬ್ ತೆಗೆಯಲು ಒಂದು ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮುಧೋಳ್ ಮೂಲದ ಡೆವಲಪರ್ ಮಂಜುನಾಥ ಅಂಗಡಿ ಎಂಬಾತನ ಬಳಿ 1 ಕೋಟಿಗೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 50 ಲಕ್ಷ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಧಾರವಾಡ ತಾಲೂಕಿನ ಯರಿಕೊಪ್ಪ ಬಳಿ …
Read More »
Laxmi News 24×7