ಬೆಂಗಳೂರು: ಏಕಾಏಕಿ ಮನೆಗೆ ನುಗ್ಗಿ ವಿವಾಹಿತೆಯನ್ನು ಕಿಡ್ನ್ಯಾಪ್ ಮಾಡಿ, ಎಸ್ಕೇಪ್ ಆಗಲು ಯತ್ನಿಸಿದ ಗ್ಯಾಂಗ್ ಎದುರಿಗೆ ಬಂದವರ ಮೇಲೆಲ್ಲಾ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಯುವತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ, ಅಪಹರಿಸಿದ್ದಾರೆ. ಕಿಡ್ನ್ಯಾಪ್‌ಗೆ ಯತ್ನಿಸಿದ ಮೂವರು ಕೂಡ ರಾಜಸ್ಥಾನದವರೆಂದು ತಿಳಿದುಬಂದಿದೆ. ಇತ್ತೀಚಿಗೆ ವ್ಯಕ್ತಿಯೋರ್ವ ರಾಜಸ್ಥಾನ ಮೂಲದ ಯುವತಿಯನ್ನು ಪ್ರೀತಿಸಿ, ಮದುವೆಯಾಗಿ ಕಳೆದ 15 ದಿನದ ಹಿಂದಷ್ಟೇ ಅಗ್ರಹಾರ ದಾಸರಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು ಎಂದು ತಿಳಿದುಬಂದಿದೆ. …
Read More »Daily Archives: ಸೆಪ್ಟೆಂಬರ್ 17, 2026
ಚವ್ಹಾಟ ಗಲ್ಲಿ ಬೆಂಕಿ ಅವಘಡ ಪ್ರಕರಣ: ಚಿಕಿತ್ಸೆ ಫಲಿಸದೆ ತಂದೆ-ಮಗ ಸಾವು, ಮೃತರ ಸಂಖ್ಯೆ 6ಕ್ಕೆ ಏರಿಕೆ
ಬೆಳಗಾವಿ: ಗಣೇಶೋತ್ಸವ ಹಬ್ಬದ ದಿನವೇ ಬೆಂಕಿ ಅವಘಡ ಸಂಭವಿಸಿ ಬೆಳಗಾವಿ ನಗರದ ಚವ್ಹಾಟ ಗಲ್ಲಿಯಲ್ಲಿ ನಾಲ್ವರು ಮೃತಪಟ್ಟು, ಮೂವರು ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಗಾಯಗೊಂಡಿದ್ದ ತಂದೆ-ಮಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಬೆಳಗಾವಿ ನಗರದ ಚವ್ಹಾಟ ಗಲ್ಲಿ ಬಳಿಯ ಢೋರ್ ಗಲ್ಲಿಯಲ್ಲಿ ಸೋಮವಾರ ಮಧ್ಯ ರಾತ್ರಿ ಭೀಕರ ಬೆಂಕಿ ಅವಘಡ ಸಂಭವಿಸಿತ್ತು. ಬೆಂಕಿಯ ಕೆನ್ನಾಲೆಯಲ್ಲಿ ಬೆಂದು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ …
Read More »ಬೆಳೆಹಾನಿಗೆ ತ್ವರಿತ ಪರಿಹಾರ ಒದಗಿಸಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆ, ಕೃಷಿ, ಬೆಳೆ ವಿಮೆ, ನೀರಾವರಿ, ಜಾನುವಾರುಗಳಿಗೆ ಮೇವು ಸಂಗ್ರಹಣೆ ಸಂಬಂಧಿಸಿದಂತೆ ಅಗತ್ಯವಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳು ಮುನ್ನೆಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಮಳೆ ಕೊರತೆಯಿಂದ ಬೆಳೆ ಹಾನಿಯಂತಹ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಅರ್ಹ ರೈತರಿಗೆ ನಿಯಮಾನುಸಾರ ಪರಿಹಾರ ಒದಗಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ (ಸೆ.16) ನಡೆದ 2026-27ನೇ …
Read More »ಎಂಜಿನಿಯರ್ಸ್ ಡೇ–2026 ಕಾರ್ಯಕ್ರಮದಲ್ಲಿ ಶಾಸಕ ಆಸಿಫ್ (ರಾಜು) ಸೇಠ್ ಭಾಗಿ
ಬೆಳಗಾವಿ ಮತ್ತು ಚಿಕ್ಕೋಡಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗಗಳ ವತಿಯಿಂದ ಆಯೋಜಿಸಲಾಗಿದ್ದ ಎಂಜಿನಿಯರ್ಸ್ ಡೇ–2026 ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಠ್ ಅವರು ಭಾಗವಹಿಸಿದರು. ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಎಂಜಿನಿಯರ್‌ಗಳ ಸೇವೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅವರ ಮಹತ್ವದ ಪಾತ್ರವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜು ಸೇಠ್ ಅವರು, ಜನರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು …
Read More »ಎಫ್‌ಐಆರ್ ದಾಖಲಿಸಿದ ಪಿಎಸ್‌ಐ ಕಾರಿಗೆ ಬೆಂಕಿಯಿಟ್ಟ ಕಾನ್‌ಸ್ಟೇಬಲ್
ಕಲಬುರಗಿ: ಪೇದೆಯೋರ್ವ ಮಹಿಳೆಯ ಮೇಲೆ ಹಲ್ಲೆ ನಡೆಸಿ ಆಕೆಯ ಮನೆ ಜಖಂಗೊಳಿಸಿದ್ದಕ್ಕೆ ಪ್ರಕರಣ ದಾಖಲಿಸಿಕೊಂಡ ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ್ ತಾಲೂಕಿನ ಮಹಾಗಾಂವ ಗ್ರಾಮದಲ್ಲಿ ನಡೆದಿದೆ. ಚಿಂಚೋಳಿ ಠಾಣೆಯ ಪೇದೆ ರಾಜಶೇಖರ್‌ಗೆ ಪರಿಚಯವಿರುವ ಮಹಿಳೆ ಹಾಗೂ ಪೇದೆ ನಡುವೆ ಜಗಳ ನಡೆದಿದ್ದು, ಈ ವೇಳೆ ಆಕೆಯ ಮೇಲೆ ಹಲ್ಲೆ ನಡೆಸಿ ಮನೆಗೆ ನುಗ್ಗಿ ಪೇದೆ ದಾಂಧಲೆ ನಡೆಸಿದ್ದಾರೆ. ಈ ಕುರಿತು ಮಹಾಗಾಂವ ಠಾಣೆಗೆ ಮಹಿಳೆ …
Read More »
Laxmi News 24×7