ಧಾರವಾಡ: ಕಲಬುರಗಿಯ ಕೋರ್ಟ್ ವೃತ್ತದ ಬಳಿ ಪ್ರತಿಷ್ಠಾಪಿಸಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೂರ್ತಿ ತೆರವುಗೊಳಿಸಿದ್ದನ್ನು ವಿರೋಧಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಯಿತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಸಿದ್ದರಾಮಯ್ಯ ಅವರು ಅಹಿಂದ ಹಾಗೂ ಹಾಲುಮತದ ನಾಯಕರು. ಸಿದ್ದರಾಮಯ್ಯ ಅವರ ಶಕ್ತಿ ಏನೆಂಬುದು ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ಹೈಕಮಾಂಡ್‌ಗೆ ಗೊತ್ತಿದೆ. ಜನನಾಯಕರಾಗಿರುವ ಸಿದ್ದರಾಮಯ್ಯ ಅವರ ಮೂರ್ತಿಯನ್ನು …
Read More »Daily Archives: ಸೆಪ್ಟೆಂಬರ್ 21, 2026
ಬಿಡದಿ ಟೌನ್‌ಶಿಪ್ ವಿರುದ್ಧ ಮುಂದುವರಿದ ಹೋರಾಟ – ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತರು
ರಾಮನಗರ: ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟ ಮುಂದುವರಿದಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿ ರೈತರು ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಬಿಡದಿ- ಹಾರೋಹಳ್ಳಿ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದ ರೈತರು, ರಸ್ತೆ ಮಧ್ಯೆ ಎತ್ತಿನ ಗಾಡಿ, ಟ್ರಾಕ್ಟರ್ ನಿಲ್ಲಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೊರಕೆ ಹಿಡಿದು ಕುಳಿತ ಮಹಿಳೆಯರು ಸರ್ಕಾರದ ವಿರುದ್ಧ ಕಿಡಿಕಾರಿದರು. ಕೂಡಲೇ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸಬೇಕು. ಸರ್ಕಾರ ರಚನೆ ಮಾಡಿದ ಸಮಿತಿ ಕಾರ್ಯಾರಂಭ …
Read More »ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು
ಕೊಪ್ಪಳ: ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲಿಯೇ ವೃದ್ಧೆ ಮೃತಪಟ್ಟಿರುವ ಘಟನೆ ಕೊಪ್ಪಳದ ಬಿ.ಟಿ ಪಾಟೀಲ್ ನಗರದಲ್ಲಿ ನಡೆದಿದೆ. ನಜಮುನಿಸಾ ಬೇಗಂ (91) ಮೃತಪಟ್ಟ ವೃದ್ಧೆ. ನಜಮುನಿಸಾ ಬೇಗ್‌ಂ ಮನೆ ಮುಂದೆ ನಿಂತುಕೊಂಡಿದ್ದರು. ಈ ವೇಳೆ ನಜಮುನಿಸಾ ಬೇಗಂ ಮೇಲೆ ಕೋತಿ ದಾಳಿ ನಡೆಸಿ ತಳ್ಳಿದೆ. ಈ ಪರಿಣಾಮ ನಜಮುನಿಸಾ ಬೇಗಂ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಜಮುನಿಸಾ ಬೇಗಂ ಅವರನ್ನು ಎಬ್ಬಿಸಲು ಬಂದ ಮಹಿಳೆಯ ಮೇಲೂ ಕೋತಿ ದಾಳಿ …
Read More »ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದರ್ಥ: ಶಿವಲಿಂಗೇಗೌಡ ಸ್ಪಷ್ಟನೆ
ಹಾಸನ: ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದು ಅರ್ಥ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಮಾತಿನ ಭರದಲ್ಲಿ ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ಧರ್ಮ ಎಂಬ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಕಲೇಶಪುರದಲ್ಲಿ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಒಬ್ಬ ವ್ಯಕ್ತಿ ಕೆಲಸ ಮಾಡಿಕೊಡಬೇಕಾದರೆ ಲಂಚ ಕೇಳುತ್ತಾರೆ ಎಂದು ಹೇಳಿದ್ದರು. ಕಾನೂನಿನಲ್ಲಿ ಅವಕಾಶ ಇಲ್ಲ, …
Read More »ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು
ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಭದ್ರಾವತಿ ತಾಲೂಕಿನ ದೇವರಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಮೃತ ಯುವಕನನ್ನ ರಾಕೇಶ್ (20) ಎಂದು ಗುರುತಿಸಲಾಗಿದೆ. ಭದ್ರಾವತಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್, ಭದ್ರಾವತಿ ತಾಲೂಕಿನ ರಂಗನಾಥಪುರದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ. ಭಾನುವಾರ ಸಂಜೆ ಆರಂಭಗೊAಡಿದ್ದ ಗಣೇಶ ವಿಸರ್ಜನಾ ಮೆರವಣಿಗೆ ತಡರಾತ್ರಿ …
Read More »ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು
ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿರೈತ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಗಶಾಮಣ್ಣ (60) ಮೃತ ದುರ್ದೈವಿ. ರಂಗಶಾಮಣ್ಣ ಎಂದಿನಂತೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ತೆರಳುತ್ತಿದ್ದರು. ಈ ವೇಳೆ ವಿದ್ಯುತ್ ತಂತಿ ಕಟ್ ಆಗಿ ನೆಲಕ್ಕೆ ಬಿದ್ದಿತ್ತು. ಇದನ್ನು ಗಮನಿಸದೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ರೈತ ರಂಗಶಾಮಣ್ಣ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಘಟನೆಗೆ ಕಾರಣ …
Read More »ಹಕ್ಕುಪತ್ರಕ್ಕಾಗಿ ಬೆಂಗಳೂರಿಗೆ 550 ಕಿ.ಮೀ ಪಾದಯಾತ್ರೆ ಆರಂಭಿಸಿದ ಬಾಗಲಕೋಟೆಯ ಗ್ರಾಮಸ್ಥರು
ಬಾಗಲಕೋಟೆ: ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ನಿರಂತರ ನಿರ್ಲಕ್ಷ್ಯಕ್ಕೆ ಬೇಸತ್ತ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕೊಣ್ಣೂರು ಮಡ್ಡಿ ಪ್ಲಾಟ್‌ನ ನೂರಾರು ಗ್ರಾಮಸ್ಥರು ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ರಾಜಧಾನಿ ಬೆಂಗಳೂರಿಗೆ ಬರೋಬ್ಬರಿ 550 ಕಿಲೋಮೀಟರ್ ಸುದೀರ್ಘ ಪಾದಯಾತ್ರೆ ಆರಂಭಿಸಿದ್ದಾರೆ. ಕಳೆದ 30 ವರ್ಷಗಳಿಂದ ಸೂರು ಮತ್ತು ಹಕ್ಕುಪತ್ರಕ್ಕಾಗಿ ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲಾಮಟ್ಟದಲ್ಲಿ ಯಾವುದೇ ನ್ಯಾಯ ಸಿಗದ ಹಿನ್ನೆಲೆಯಲ್ಲಿ, ಅಂತಿಮವಾಗಿ ಮುಖ್ಯಮಂತ್ರಿಗಳ ಮೊರೆ ಹೋಗಲು ಗ್ರಾಮಸ್ಥರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. …
Read More »ಯುಪಿಎ ರಚಿಸಿದ ಗಾಡ್ಗೀಳ್ ವರದಿಯೇ ಇಂದಿನ ಸಮಸ್ಯೆಗೆ ಮೂಲ: ಅಶೋಕ್ ವಾಗ್ದಾಳಿ
ಬೆಂಗಳೂರು: ಪಶ್ಚಿಮ ಘಟ್ಟ ಸಂರಕ್ಷಣೆ ವಿಚಾರದಲ್ಲಿ ಎದುರಾಗಿರುವ ಪ್ರಸ್ತುತ ಬಿಕ್ಕಟ್ಟಿಗೆ ಅಂದಿನ ಯುಪಿಎ ಸರ್ಕಾರ ರಚಿಸಿದ ಮಾಧವ ಗಾಡ್ಗೀಳ್ ವರದಿಯೇ ಮೂಲ ಕಾರಣ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಕಸ್ತೂರಿ ರಂಗನ್ ವರದಿ ಕುರಿತು ವಿಧಾನಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವರದಿಯ ಪರಿಣಾಮಗಳ ಕುರಿತು ಕಳವಳ ವ್ಯಕ್ತಪಡಿಸುವುದರ ಜತೆಗೆ ರಾಜ್ಯ ಸರ್ಕಾರಕ್ಕೆ ಮೂರು ಪ್ರಮುಖ ಸಲಹೆಗಳನ್ನು ನೀಡಿದರು. ತಾಪಿ ನದಿಯಿಂದ …
Read More »ಹನೂರು ತಾಲೂಕಲ್ಲಿ ಮಳೆ ಆರ್ಭಟ; ಮನೆ, ಬೃಹತ್ ಮರ, ವಿದ್ಯುತ್ ಕಂಬಗಳು ಕುಸಿತ – ಕೊಚ್ಚಿಹೋದ ಚೆಕ್ ಡ್ಯಾಂ
ಚಾಮರಾಜನಗರ: ಹನೂರು ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ಲಾಜರ್ ದೊಡ್ಡಿಯಲ್ಲಿ ಚೆಕ್ ಡ್ಯಾಂ ಕೊಚ್ಚಿ ಹೋಗಿದೆ. ಸುಮಾರು 12 ವರ್ಷಗಳ ಹಿಂದೆ ಚೆಕ್ ಡ್ಯಾಂ ಕಟ್ಟಲಾಗಿತ್ತು. ನೀರಿನಲ್ಲಿ ರಭಸಕ್ಕೆ ಚೆಕ್ ಡ್ಯಾಂ ಅಳವಡಿಸಿದ್ದ ಕಲ್ಲುಗಳು ಕುಸಿತವಾಗಿವೆ. ಈ ಭಾಗದ ಜನರ ನೀರಾವರಿಗೆ ಅನುಕೂಲವಾಗಿತ್ತು. ಹೊಸ ಚೆಕ್ ಡ್ಯಾಂ ನಿರ್ಮಾಣ ಮಾಡಿಕೊಡುವಂತೆ ಸ್ಥಳೀಯರ ಮನವಿ ಮಾಡಿದ್ದಾರೆ. ಮನೆ ಕುಸಿತ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ …
Read More »`ವಂದೇ ಮಾತರಂ’ಗೆ ಕತ್ತರಿ; ಕಾಂಗ್ರೆಸ್ ವಿರುದ್ಧ ಸಂಸತ್ತಿನಲ್ಲಿ ರಣಕಹಳೆ: ಪ್ರಹ್ಲಾದ್ ಜೋಶಿ
ನವದೆಹಲಿ: `ವಂದೇ ಮಾತರಂ’ ಗೀತೆಯನ್ನು ಎರಡೇ ಚರಣಕ್ಕೆ ಕತ್ತರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಣಕಹಳೆ ಮೊಳಗಿಸಲಿದ್ದೇವೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ) ಎಚ್ಚರಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಕಾಂಗ್ರೆಸ್ ಪಕ್ಷ ದೇಶವಿರೋಧಿ ಕ್ರೂರ ಮನಸ್ಥಿತಿ ಹೊಂದಿದ್ದು, ಕರ್ನಾಟಕದಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದೆ. ಸರ್ಕಾರ ಕಾನೂನು ಬಾಹಿರವಾಗಿ ಮನಸೋ ಇಚ್ಛೆ ಫರ್ಮಾನು ಹೊರಡಿಸುತ್ತಿದೆ. ವಿಧಾನಸೌಧದಲ್ಲಿ `ವಂದೇ ಮಾತರಂ’ ಗೀತೆಯನ್ನು ಕಾನೂನು …
Read More »
Laxmi News 24×7