ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಮಳೆಯ ಪ್ರಮಾಣ ಗಣನೀಯವಾಗಿ ಕುಸಿದಿದೆ. ಇದರ ಪರಿಣಾಮ ಜಿಲ್ಲೆಯ ಜಲಮೂಲಗಳ ಮೇಲೂ ಆಗಿದ್ದು, ಸಾಮಾನ್ಯವಾಗಿ ಮಳೆಗಾಲದಲ್ಲಿ ನೀರಿನಿಂದ ತುಂಬಿ ಹರಿಯುತ್ತಿದ್ದ ಭಾಗಮಂಡಲದ ಪವಿತ್ರ ತ್ರಿವೇಣಿ ಸಂಗಮದಲ್ಲೇ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನು ಅಕ್ಟೋಬರ್ 17ರಂದು ಕಾವೇರಿ ತೀರ್ಥೋದ್ಭವ ನಡೆಯಲಿದ್ದು, ಸಾವಿರಾರು ಭಕ್ತರು ಭಾಗಮಂಡಲಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಸ್ನಾನ ಹಾಗೂ …
Read More »Daily Archives: ಸೆಪ್ಟೆಂಬರ್ 22, 2026
ಬಿಹಾರದಲ್ಲಿ ಅಪ್ರಾಪ್ತರ ಮೇಲೆ ಹಲ್ಲೆ – ಮೂವರು ಅರೆಸ್ಟ್
ಪಾಟ್ನಾ: ಬಿಹಾರದಲ್ಲಿ ನಡೆದ ಅಪ್ರಾಪ್ತ ಬಾಲಕಿ ಮತ್ತು ಬಾಲಕನ ಮೇಲಿನ ಹಲ್ಲೆ ಹಾಗೂ ಲೈಂಗಿಕ ಕಿರುಕುಳದ ಘಟನೆ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19 ರಂದು ಬಿಹಾರದ ಜಮುಯಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. 10ನೇ ತರಗತಿಯ ಅಪ್ರಾಪ್ತ ಜೋಡಿ ಕೋಚಿಂಗ್ ಕ್ಲಾಸ್ ಮುಗಿಸಿ ಸ್ಕೂಟರ್‌ನಲ್ಲಿ ಮನೆಗೆ ಮರಳುತ್ತಿದ್ದಾಗ, ಪುಂಡರ ಗುಂಪೊಂದು ಅವರನ್ನು ರಸ್ತೆಯಲ್ಲೇ ತಡೆದಿದೆ. ಗುಂಪು ಬಾಲಕನ …
Read More »ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರು ದುರ್ಮರಣ
ಕಲಬುರಗಿ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವನಪ್ಪಿರುವ ಘಟನೆ ಕಮಲಾಪುರ್ ತಾಲೂಕಿನ ನಾಗೂರು ಗ್ರಾಮದ ಜಮೀನಿನಲ್ಲಿ ನಡೆದಿದೆ. ಜಮೀನು ಮಾಲೀಕರಾದ ಲಕ್ಷ್ಮೀ ಗುತ್ತೇದಾರ್ (45) ಮತ್ತು ಕೂಲಿ ಮಹಿಳೆ ಸೈಜಾದ್ ಬಿ ಮೃತ ದುರ್ದೈವಿಗಳು. ಇಬ್ಬರು ಜಮೀನಿನಲ್ಲಿ ಕೆಲಸ ಮಾಡುವಾಗ ಜೋರಾಗಿ ಮಳೆ ಶುರುವಾಗಿದೆ. ಈ ವೇಳೆ ಇಬ್ಬರು ಮಹಿಳೆಯರು ಮರದಡಿ ಕುಳಿತು ಊಟ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಮಲಾಪುರ ತಹಶಿಲ್ದಾರ್ ಭೇಟಿ …
Read More »ಪಶ್ಚಿಮ ಘಟ್ಟಗಳ ರಕ್ಷಣೆ – ರಾಜ್ಯ ಸರ್ಕಾರ ಸಮಿತಿ ರಚಿಸಲಿ: ಬಿ.ಕೆ.ಹರಿಪ್ರಸಾದ್
ಬೆಂಗಳೂರು: ಪಶ್ಚಿಮಘಟ್ಟದ ಸಂಪೂರ್ಣ ಪ್ರದೇಶವನ್ನು ಒಂದೇ ನಿಯಮದಡಿ ತರುವ ಬದಲು, ದಟ್ಟ ಅರಣ್ಯ ಪ್ರದೇಶಗಳಿಗೆ ಮಾತ್ರ ಕಠಿಣ ಪರಿಸರ ಸಂರಕ್ಷಣಾ ಕ್ರಮಗಳನ್ನು ರೂಪಿಸಬೇಕು. ಈ ಕುರಿತು ರಾಜ್ಯ ಸರ್ಕಾರವೇ ತಜ್ಞರ ಸಮಿತಿ ರಚಿಸಿ ಸಮಗ್ರ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದರು. ವಿಧಾನಮಂಡಲ ಅಧಿವೇಶನದಲ್ಲಿ ಪಶ್ಚಿಮಘಟ್ಟ ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಮಾತನಾಡಿದ ಅವರು, ಪರಿಸರವಾದಿಗಳ ಹೋರಾಟದ …
Read More »ಬಿಡದಿ ರೈತರ ಮೇಲೆ ದೌರ್ಜನ್ಯ – ಹಿರಣ್ಯಾಕ್ಷನ ಪಾಪದ ಕೊಡ ತುಂಬುತ್ತಿದೆ: ಹೆಚ್‌ಡಿಕೆ ಕಿಡಿ
ಬೆಂಗಳೂರು: ಬಿಡದಿಯ ಬೈರಮಂಗಲದಲ್ಲಿ ಪ್ರತಿಭಟನೆ ನಡೆಸಲು ಮುಂದಾದ ರೈತರ ಮೇಲೆ ಅಮಾನುಷವಾಗಿ ದಬ್ಬಾಳಿಕೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ; ‘ಹಿರಣ್ಯಾಕ್ಷ’ನ ಪಾಪದ ಕೊಡ ತುಂಬುತ್ತಿದೆ ಎಂದು ಗುಡುಗಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕದಲ್ಲಿ ನಾಗರಿಕ ಸರ್ಕಾರವಿದೆಯೋ ಅಥವಾ ರಾಕ್ಷಸ ಸರ್ಕಾರ ಇದೆಯೋ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ತಮ್ಮ ಭೂಮಿ ಉಳಿಸಿಕೊಳ್ಳಲು ಬಿಡದಿಯ ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ. …
Read More »ಸಿಡಿಲು ಬಡಿದು ದೇವಾಲಯದ ಮಹಾದ್ವಾರದ ಗೋಪುರದಲ್ಲಿ ಬಿರುಕು
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ವಂದಲಿ ಗ್ರಾಮದಲ್ಲಿ ದೇವಸ್ಥಾನದ ನಿರ್ಮಾಣ ಹಂತದ ಮಹಾದ್ವಾರದ ಗೋಪುರಕ್ಕೆ ಸಿಡಿಲು ಬಡಿದ ಪರಿಣಾಮ ಬಿರುಕು ಬಿಟ್ಟಿದೆ. ಗ್ರಾಮದ ಐತಿಹಾಸಿಕ ಬಲಭೀಮ ಆಂಜನೇಯ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದಿದೆ. ಸಿಡಿಲು ಬಡಿದ ಪರಿಣಾಮ ನಿರ್ಮಾಣ ಹಂತದ ಗೋಪುರದ ಹಲವು ಭಾಗಗಳಿಗೆ ಹಾನಿಯಾಗಿದೆ. ಗ್ರಾಮಸ್ಥರು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ ಗೋಪುರ ಅಂತಿಮ ಹಂತದಲ್ಲಿತ್ತು. ಘಟನೆಯಿಂದ ಮಹಾಗೋಪುರದ ಮೇಲೆ ಹಾರಿಸಲಾಗಿದ್ದ ಭಗವಾಧ್ವಜಗಳು ಸುಟ್ಟು ಕರಕಲಾಗಿವೆ. ಅಲಂಕಾರಿಕ ಗೊಂಬೆಗಳ …
Read More »ದಪ್ಪ ಚರ್ಮದ ಸರ್ಕಾರದ ಚಳಿ ಬಿಡಿಸುತ್ತೇವೆ, ಮತ್ತೊಂದು ವಿಕೆಟ್ ಬೀಳುವ ಭಯ: ಆಶೋಕ್
ಬೆಂಗಳೂರು: ಇದು ದಪ್ಪ ಚರ್ಮದ ಸರ್ಕಾರ. ಈ ಸರ್ಕಾರಕ್ಕೆ ಚಳಿ ಬಿಡಿಸುವ ಮತ್ತು ಕಿವಿ ಹಿಂಡುವ ಕೆಲಸವನ್ನು ಸದನದಲ್ಲಿ ಮಾಡೇ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಇವರು, ಕಳೆದ ಬಾರಿ ನಾವು ವಿಧಾನಸಭೆ ಕಲಾಪದಲ್ಲಿ ಈ ಸರ್ಕಾರಕ್ಕೆ ಚಳಿ ಬಿಡಿಸಿದ್ದೆವು. ನಮ್ಮ ಹೋರಾಟದಿಂದ ಒಂದು ವಿಕೆಟ್ ಬಿದ್ದು ಹೋಯಿತು. ಈ ಬಾರಿಯೂ ವಿರೋಧ ಪಕ್ಷವಾಗಿ ನಮ್ಮ ಕೆಲಸವನ್ನು ಸಮರ್ಥವಾಗಿ ಮಾಡುತ್ತೇವೆ …
Read More »ಪೇಜಾವರ ಶ್ರೀ ಭೇಟಿ ಮಾಡಿದ ಅಮಿತ್ ಶಾ
ನವದೆಹಲಿ: ವಸಂತ್ ಕುಂಜ್‌ನಲ್ಲಿರುವ ಪೇಜಾವರ ಮಠದ ಶಾಖೆ ವೇದವ್ಯಾಸ ಗುರುಕುಲದಲ್ಲಿ 39ನೇ ಚಾತುರ್ಮಾಸ್ಯ ವ್ರತ ನಿರತರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ (ಸೆ.21) ಭೇಟಿ ಮಾಡಿ, ಆಶೀರ್ವಾದ ಪಡೆದರು. ಸಂಜೆ 4.30ರ ಸುಮಾರಿಗೆ ವೇದವ್ಯಾಸ ಗುರುಕುಲಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಗುರುಕುಲದ ವಿದ್ಯಾರ್ಥಿಗಳು ವೇದಘೋಷದೊಂದಿಗೆ ಪೂರ್ಣಕುಂಭ ಸ್ವಾಗತ ನೀಡಿದರು. ಡಾ.ವರಖೇಡಿ ಶ್ರೀನಿವಾಸ ಆಚಾರ್ಯ, ಡಾ. ವಿಠೋಬಾಚಾರ್ಯ ಹಾಗೂ ವಾಸುದೇವ …
Read More »ವಿದೇಶಕ್ಕೆ ಹಾರಲು ಸಿದ್ಧವಾಗಿದ್ದ ‘ಮಹಾಭಾರತ’ದ ಭೀಮ ಅರೆಸ್ಟ್ – 14 ದಿನ ಜೈಲಿಗೆ
ಖ್ಯಾತ ಪೌರಾಣಿಕ ಧಾರಾವಾಹಿ‘ಮಹಾಭಾರತದಲ್ಲಿ ಭೀಮನ ಪಾತ್ರದ ಮೂಲಕ ಮನೆಮಾತಾಗಿದ್ದ ನಟ ಹಾಗೂ ವೃತ್ತಿಪರ ಕುಸ್ತಿಪಟು ಸೌರವ್ ಗುರ್ಜರ್ ಲೈಂಗಿಕ ದೌರ್ಜನ್ಯ ಮತ್ತು ವಂಚನೆ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಶೋಷಣೆ ನಡೆಸಿದ್ದಾರೆ ಎಂದು ಆರೋಪಿಸಿ 29 ವರ್ಷದ ಯುವತಿಯೊಬ್ಬರು ನೀಡಿದ ದೂರಿನನ್ವಯ ಹೈದರಾಬಾದ್‌ನ ಗಚಿಬೌಲಿ ಠಾಣಾ ಪೊಲೀಸರು ಸೌರವ್ ಗುರ್ಜರ್ ಅವರನ್ನು ಬಂಧಿಸಿದ್ದಾರೆ. ಈ ಬಂಧನ ಸೆಪ್ಟೆಂಬರ್ 17ರಂದೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. …
Read More »ರಾಮ ಮಂದಿರದಲ್ಲಿ 105 ಬಾರಿ ಕಾಣಿಕೆ ಕಳವು, ಸೆ.25ರ ಒಳಗಡೆ ಚಾರ್ಜ್‌ಶೀಟ್ ಸಲ್ಲಿಕೆ: ಸುಪ್ರೀಂಗೆ ಎಸ್‌ಐಟಿ
ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ದೇಣಿಗೆ ಹಣ ಮತ್ತು ಚಿನ್ನಾಭರಣಗಳ ಕಳವಿಗೆ ಸಂಬಂಧಿಸಿದಂತೆ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾಗಳಲ್ಲಿ 105 ಬಾರಿ ಕಳ್ಳತನದ ದೃಶ್ಯಗಳು ಸೆರೆಯಾಗಿವೆ ಎಂಬ ಆಘಾತಕಾರಿ ಅಂಶವನ್ನು ವಿಶೇಷ ತನಿಖಾ ತಂಡ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಎಸ್‌ಐಟಿ ಸಿದ್ಧಪಡಿಸಿರುವ ಪ್ರಗತಿ ವರದಿಯ ವಿವರಗಳನ್ನು ಇಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದರು. ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಸೆಪ್ಟೆಂಬರ್ 25ರೊಳಗೆ ದೋಷಾರೋಪ ಪಟ್ಟಿ(Charge …
Read More »
Laxmi News 24×7