ಹಾಸನ: ಜಿಲ್ಲೆಯಲ್ಲಿ ನವವಿವಾಹಿತೆ ನಿಗೂಢವಾಗಿ ಕಣ್ಮರೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಾವತಿ ನಾಲೆಯಲ್ಲಿ ಸತತ ನಾಲ್ಕು ದಿನದಿಂದ ಶೋಧ ಕಾರ್ಯ ನಡೆಯುತ್ತಿದ್ದು, ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕುರುವಂಕ ಗ್ರಾಮದ ನವವಿವಾಹಿತೆ ಪ್ರಿಯಾಂಕಾ (24) ಕಣ್ಮರೆಯಾಗಿದ್ದಾರೆ. ಸೆ.19ರ ರಾತ್ರಿ ಸುಮಾರು 9 ಗಂಟೆಗೆ ಪ್ರಿಯಾಂಕಾ ಕಾಲುವೆಗೆ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಬಳಿಕ ಚನ್ನರಾಯಪಟ್ಟಣ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಚಿಕ್ಕನಾಯಕನಹಳ್ಳಿ ಬಳಿಯ ಹೇಮಾವತಿ ನಾಲೆಯಲ್ಲಿ …
Read More »Daily Archives: ಸೆಪ್ಟೆಂಬರ್ 24, 2026
PSI ನೇಮಕಾತಿಯಲ್ಲಿ ಅಕ್ರಮ – ಆರ್‌ಡಿ ಪಾಟೀಲ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ
ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್, ಆರ್‌ಡಿ ಪಾಟೀಲ್ ವಿರುದ್ಧದ ಇತರೆ ಪ್ರಕರಣಗಳ ಮಾಹಿತಿ ಕೇಳಿದೆ. ಅದಕ್ಕೆ ನಮ್ಮ ವಿರುದ್ಧ 22 ಪ್ರಕರಣಗಳಿವೆ, ಅದರ ಮಾಹಿತಿ ನಮ್ಮಲ್ಲಿ ಇದೆ ಎಂದು ಆರ್‌ಡಿ ಪಾಟೀಲ್ ಪರ ವಕೀಲರು ವಾದಿಸಿದರು. ಈ ವೇಳೆ ಆರ್‌ಡಿ ಪಾಟೀಲ್ ವಿರುದ್ಧ 24 …
Read More »ಕಸ್ತೂರಿ ರಂಗನ್ ವರದಿ; ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರ ನೇಮಕ: ಡಿಕೆಶಿ
ಬೆಂಗಳೂರು: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಸ್ಪಷ್ಟ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರನ್ನು ನೇಮಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಮಂಗಳವಾರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಸಿಎಂ ಉತ್ತರಿಸಿದರು. ನನಗಿರುವ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು ಕಸ್ತೂರಿ ರಂಗನ್ ವರದಿ …
Read More »ವಿಧಾನಸೌಧದಲ್ಲೇ ಕೈ ಶಾಸಕರ ಮಧ್ಯೆ ಜಟಾಪಟಿ – ನಾರಾಯಣಸ್ವಾಮಿ ವಿರುದ್ಧ ರೂಪಾ ಶಶಿಧರ್ ಆಕ್ರೋಶ
ಬೆಂಗಳೂರು: ರಾಜ್ಯ ವಿಧಾನಸಭೆಯ ಕಲಾಪದ ವೇಳೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕರ ನಡುವಿನ ಆಂತರಿಕ ಅಸಮಾಧಾನ ಮತ್ತು ಬಣ ರಾಜಕೀಯ ಸದನದಲ್ಲೇ ಬಹಿರಂಗವಾಗಿ ಸ್ಫೋಟಗೊಂಡಿದೆ. ಭೋಜನ ವಿರಾಮದ ಬಳಿಕ ಕಲಾಪ ಮುಂದೂಡಿಕೆಯಾಗುತ್ತಿದ್ದಂತೆ, ಕೋಲಾರ ಜಿಲ್ಲೆಯ ಕಾಂಗ್ರೆಸ್ ಶಾಸಕರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಶಾಸಕಿ ರೂಪಾ ಶಶಿಧರ್ ತಮ್ಮದೇ ಪಕ್ಷದ ಶಾಸಕರ ಎದುರು ಮೇಜು ಕುಟ್ಟಿ ಸಿಟ್ಟು ಹೊರಹಾಕಿದ ಪ್ರಸಂಗ ನಡೆದಿದೆ. ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಕಲಾಪ …
Read More »ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಕೇಸ್ – ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ಬಳಸುತ್ತಿರುವ ಸಿಸಿಟಿವಿ ದೃಶ್ಯ ಔಟ್
ಮುಂಬೈ: ಪ್ರತಿಷ್ಠಿತ ಐಐಟಿ ಬಾಂಬೆಯ ದ್ವಿತೀಯ ವರ್ಷದ ಬಿ.ಟೆಕ್ ವಿದ್ಯಾರ್ಥಿ ಸಾಹಿಲ್ ವಾಕೋಡೆ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಇದೀಗ ಮಹತ್ವದ ಸಿಸಿಟಿವಿ ದೃಶ್ಯಾವಳಿಗಳು ಬೆಳಕಿಗೆ ಬಂದಿವೆ. ಸೆಪ್ಟೆಂಬರ್ 18ರಂದು ಪರೀಕ್ಷಾ ಕೊಠಡಿಯಲ್ಲಿ ಸಾಹಿಲ್ ಮೊಬೈಲ್ ಫೋನ್ ಬಳಸುತ್ತಿರುವ ಹಾಗೂ ಇನ್ವಿಜಿಲೇಟರ್ ಆಗಿದ್ದ ಪ್ರಾಧ್ಯಾಪಕರು ಆತನನ್ನು ವಿಚಾರಿಸಿ ಕೊಠಡಿಯಿಂದ ಹೊರಗೆ ಕಳುಹಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡಿರುವ ಮುಂಬೈ ಪೊಲೀಸರ ಕ್ರೈಂ ಬ್ರಾಂಚ್ ತನಿಖಾ …
Read More »ರಾಜ್ಯದಲ್ಲಿ ಭೀಕರ ಬರ|ಶೇ.50ರಷ್ಟು ಮೊತ್ತವನ್ನು ಮಧ್ಯಂತರ ಪರಿಹಾರವಾಗಿ ಬಿಡುಗಡೆ ಮಾಡಿ – ಮೋದಿಗೆ ಡಿಕೆಶಿ ಪತ್ರ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು ತುರ್ತಾಗಿ ಮಧ್ಯಂತರ ಪರಿಹಾರವನ್ನು ಬಿಡುಗಡೆ ಮಾಡಿ ಎಂದು ಸಿಎಂ ಡಿಕೆ ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ 76 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಒಟ್ಟು ಸಂಖ್ಯೆ 177ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ, ನಷ್ಟದ ಸಮಗ್ರ ಮೌಲ್ಯಮಾಪನ ಪೂರ್ಣಗೊಳ್ಳುವ ಮೊದಲೇ ತುರ್ತಾಗಿ …
Read More »ಬಡವರು, ಉಳ್ಳವರು ಎಂದು ಹೇಗೆ ವಿಗಂಡಣೆ ಮಾಡುತ್ತೀರಿ: ಬಿಜೆಪಿ ನಾಯಕರಿಗೆ ಸಿಎಂ ಡಿಕೆಶಿ ಪ್ರಶ್ನೆ
ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ಕೊಡಬೇಡಿ ಎಂದು ಹೇಳುತ್ತಿದ್ದೀರ. ಹಾಗಾದರೆ ನಿಮ್ಮ ಪ್ರಕಾರ, ಬಡವರು, ಉಳ್ಳವರು ಅಂದರೆ ಯಾರು, ಹೇಗೆ ವಿಂಗಡಿಸುತ್ತೀರಿ ಎನ್ನುವುದನ್ನು ವಿವರಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ವಿಪಕ್ಷಗಳಿಗೆ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಬುಧವಾರ ಬರ ಪರಿಸ್ಥಿತಿಯ ಚರ್ಚೆಯ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಅವರು, ರೈತರಿಗೆ ಗ್ಯಾರಂಟಿಗಳನ್ನು ನಿಲ್ಲಿಸಿ. ಆ ಹಣವನ್ನು ಬರ ಪರಿಹಾರಕ್ಕೆ ಬಳಸಿ ಎಂದು ಸಲಹೆ ನೀಡಿದರು. ಇದಕ್ಕೆ ದನಿಗೂಡಿಸಿದ ಬಿಜೆಪಿ ಶಾಸಕ …
Read More »ಒಣಗುತ್ತಿದೆ ಬೆಳೆ, ಕರಗುತ್ತಿದೆ ಕಾಸು – ಟ್ಯಾಂಕರ್ ಮೊರೆ ಹೋದ ರೈತರು
ಬಳ್ಳಾರಿ: ವಿಜಯನಗರ ಜಿಲ್ಲೆಯಾದ್ಯಂತ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟ ಪರಿಣಾಮ ಅನ್ನದಾತರು ಕಂಗಾಲಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು, ಒಣಗುತ್ತಿರುವ ರಾಗಿ ಬೆಳೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ಮೂಲಕ ನೀರು ಹರಿಸುವ ಹರಸಾಹಸಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಕೊಟ್ಟೂರು ತಾಲೂಕಿನ ನಿಂಬಳಗೇರಿ ಗ್ರಾಮದಲ್ಲಿ ರೈತರ ಈ ಸಂಕಷ್ಟದ ಪರಿಸ್ಥಿತಿ ಎದ್ದು ಕಾಣುತ್ತಿದೆ. ಗ್ರಾಮದ ಪ್ರಮುಖ ರೈತರಾದ ಸುರೇಶ ಶೆಟ್ಟಿ ಹಾಗೂ ಅಂಗಡಿ ಗಂಗಾಧರ ಎಂಬುವವರು ತಮ್ಮ ಒಟ್ಟು …
Read More »ಉತ್ತರ ಕನ್ನಡದಲ್ಲಿ ಭಾರಿ ಮಳೆ ಎಚ್ಚರಿಕೆ: ಸೆ.24 ರಂದು ಯೆಲ್ಲೋ ಅಲರ್ಟ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಸೆಪ್ಟೆಂಬರ್ 24ರಂದು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಸೆ.24ರಂದು ಭಾರಿ ಮಳೆಯೊಂದಿಗೆ ಗುಡುಗು-ಮಿಂಚು ಮತ್ತು ಬಿರುಗಾಳಿ ಸಾಧ್ಯತೆ ಇದೆ. ಸೆ.25ರಂದು ಗುಡುಗು-ಮಿಂಚು …
Read More »
Laxmi News 24×7