Breaking News

Daily Archives: ಸೆಪ್ಟೆಂಬರ್ 26, 2026

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ – ಮಂತ್ರಾಲಯದಲ್ಲಿ ನದಿ ತೀರಕ್ಕೆ ತೆರಳದಂತೆ ಸೂಚನೆ

ರಾಯಚೂರು: ತುಂಗಭದ್ರಾ ನದಿಯಲ್ಲಿ  ನೀರಿನ ಹರಿವು ಹೆಚ್ಚಳವಾಗಿದ್ದು, ಪರಿಣಾಮ ಮಂತ್ರಾಲಯದಲ್ಲಿ  ನದಿ ತೀರಕ್ಕೆ ತೆರಳದಂತೆ ಮಠದ ಆಡಳಿತ ಮಂಡಳಿ ಭಕ್ತರಿಗೆ ಸೂಚನೆ ನೀಡಲಾಗಿದೆ. ತುಂಗಭದ್ರಾ ಜಲಾಶಯದಿಂದ  ನದಿಗೆ 2,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಜೊತೆಗೆ ಮಳೆ ಬರುತ್ತಿರುವುದರಿಂದ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಮಂತ್ರಾಲಯದಲ್ಲಿ ಭಕ್ತರ ಸುರಕ್ಷತೆಗೆ ಹೆಚ್ಚುವರಿ ಭದ್ರತೆಗಾಗಿ ಶ್ರೀರಾಘವೇಂದ್ರ ಸ್ವಾಮಿಗಳ ಮಠದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮಠದ ಆಡಳಿತ ಮಂಡಳಿ ಹಾಗೂ ಮಂತ್ರಾಲಯ ಪೊಲೀಸರಿಂದ …

Read More »

650 ವರ್ಷಗಳ ಹಿಂದಿನ ಶಿವಲಿಂಗ ಪತ್ತೆ; ಕಾಡುಪಾಲಾಗಿದ್ದ ಮಹದೇವ ದೇಗುಲ ಪುನರುಜ್ಜೀವನಕ್ಕೆ ಗ್ರಾಮಸ್ಥರ ಸಂಕಲ್ಪ

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ಹೊರವಲಯದ ಐಮಂಗಲ ಗ್ರಾಮದಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ. ಸುಮಾರು 650 ವರ್ಷಗಳ ಹಿಂದಿನ ಮಹದೇವ ದೇವಾಲಯ ಇಲ್ಲಿ ಇತ್ತು ಎಂಬ ನಂಬಿಕೆ ಗ್ರಾಮಸ್ಥರಲ್ಲಿ ಮೂಡಿದ್ದು, ಕಾಡುಪಾಲಾಗಿದ್ದ ದೇವಾಲಯವನ್ನು ಪುನರುಜ್ಜೀವನಗೊಳಿಸಲು ಗ್ರಾಮಸ್ಥರು ಮುಂದಾಗಿದ್ದಾರೆ. ಐಮಂಗಲ ಗ್ರಾಮದಿಂದ ಚೆಂಬೆಬೆಳ್ಳೂರು ರಸ್ತೆಯಲ್ಲಿ ಸುಮಾರು 3 ಕಿಲೋಮೀಟರ್ ದೂರದಲ್ಲಿರುವ ಕಾಡಿನ ಪ್ರದೇಶದಲ್ಲಿ ಶಿವಲಿಂಗ, ಬಸವ ಮೂರ್ತಿ, ಗರ್ಭಗುಡಿಯ ಕುರುಹು, ತೀರ್ಥಕುಂಡ ಸೇರಿದಂತೆ ಹಲವು ಅವಶೇಷಗಳು ಪತ್ತೆಯಾಗಿವೆ. ಚಳಿ, ಮಳೆ, ಗಾಳಿ, …

Read More »

ತಾಯಿಯ ಸಾವಿನಲ್ಲೂ ಸಾರ್ಥಕತೆ ಮೆರೆದ ಮಕ್ಕಳು; 7-8 ಜನರ ಬಾಳಿಗೆ ಬೆಳಕಾದ ಕುಸುಮಾ!

ಆನೇಕಲ್: ತಾಯಿಯ ಸಾವಿನ ನೋವಿನ ನಡುವೆಯೂ ಇಬ್ಬರು ಪುಟ್ಟ ಮಕ್ಕಳು ಹಾಗೂ ಪತಿ ಕೈಗೊಂಡ ಮಹತ್ವದ ನಿರ್ಧಾರ ಹಲವರ ಬದುಕಿಗೆ ಹೊಸ ಆಶಾಕಿರಣವಾಗಿದೆ. ಮೆದುಳು ನಿಷ್ಕ್ರಿಯಗೊಂಡ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬ ಸಾರ್ಥಕತೆ ಮೆರೆದಿದೆ. ಜಿಗಣಿ  ಸಮೀಪದ ಹಾರಗದ್ದೆಯ ದ್ಯಾವಸಂದ್ರ ಗ್ರಾಮದ ನಿವಾಸಿ ಕುಸುಮಾ (39) ಅಂಗಾಂಗ ದಾನ ಮಾಡಿದ ಮಹಿಳೆ. ಖಾಸಗಿ ಕಂಪನಿಯೊಂದನ್ನ ನಡೆಸುತ್ತಿದ್ದ ಕುಸುಮಾ ಅವರ ಪತಿ ಜಯಶಂಕರ್. ದಂಪತಿಗೆ ಓರ್ವ ಹೆಣ್ಣು ಹಾಗೂ …

Read More »

ಸರ್ಕಾರದಿಂದ ಬಾರದ ಕೋಟ್ಯಂತರ ರೂಪಾಯಿ ಅನುದಾನ – ಪತ್ರ ಬರೆದು ಕೆಆರ್‌ಐಡಿಎಲ್ ಎಇಇ ನಾಪತ್ತೆ!

ಗದಗ: ರಾಜ್ಯ ಸರ್ಕಾರದ ಅನುದಾನ ಬಾರದಕ್ಕೆ ಪತ್ರ ಬರೆದು KRIDL ಎಇಇ (ಸಹಾಯಕ ಕಾರ್ಯಪಾಲಕ ಎಂಜಿನಿಯರ್) ಅಧಿಕಾರಿ ನಾಪತ್ತೆಯಾದ ಘಟನೆ ಗದಗನಲ್ಲಿ ನಡೆದಿದೆ. ರಾಜ್ಯ ಸರ್ಕಾರದಿಂದ ಅನುದಾನ  ಬಿಡುಗಡೆಯಾಗದೇ ಉಂಟಾದ ಆರ್ಥಿಕ ಸಂಕಷ್ಟವೇ ಅಧಿಕಾರಿಯ ನಾಪತ್ತೆಗೆ ಕಾರಣ ಎನ್ನುವ ಪ್ರಶ್ನೆ ಇದೀಗ ಕಾಡುತ್ತಿದೆ. ಬೆಂಗಳೂರಿನ  ಕೆಆರ್‌ಐಡಿಎಲ್‌ನ ಇಇ ಅವರಿಗೆ ಪತ್ರ ಬರೆದು ಫರ್ವೀಜ್ ನಾಪತ್ತೆಯಾಗಿದ್ದಾರೆ. ಪತ್ರದಲ್ಲಿ ಅನುದಾನ ಬಿಡುಗಡೆಯಾಗದಿರುವ ಕುರಿತು ಉಲ್ಲೇಖಿಸಲಾಗಿದೆ. ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗದ ಕಾರಣ ತಾವು …

Read More »

ಒಂದು ತಿಂಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಚ್.ಹೊಸಹಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಜನಸಾಮಾನ್ಯರು ಹಾಗೂ ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕಳೆದ ಒಂದು ತಿಂಗಳಿಂದ ಹೆಚ್.ಹೊಸಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷವಾಗಿ ನಿರಂತರ ಭಯದ ವಾತಾವರಣ ಸೃಷ್ಟಿಸಿತ್ತು. ಈ ಚಿರತೆಯು ಈವರೆಗೆ ಒಟ್ಟು 8 ಮೇಕೆಗಳು, 2 ನಾಯಿಗಳು, 1 ಹಸುವಿನ ಕರು ಹಾಗೂ 1 ಎಮ್ಮೆ ಕರುವನ್ನು ಬೇಟೆಯಾಡಿ ತಿಂದಿತ್ತು. …

Read More »

ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವ ತಿರಸ್ಕರಿಸಿದ ಟ್ರಂಪ್‌ – ಮಧ್ಯಂತರ ಚುನಾವಣೆ ಬಳಿಕ ಮತ್ತೆ ಬಾಂಬ್‌ ದಾಳಿ?

ಟೆಹ್ರಾನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಅವರು ಇರಾನ್‌ ನೀಡಿದ್ದ 7 ದಿನಗಳ ಕದನ ವಿರಾಮ ಪ್ರಸ್ತಾವವನ್ನ ತಿರಸ್ಕರಿಸಿದ್ದಾರೆ. ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕದ ಮಧ್ಯಂತರ ಚುನಾವಣೆಗಳ  ಬಳಿಕ ಇರಾನ್‌ ಮೇಲೆ ಅಮೆರಿಕದ ಬಾಂಬ್‌ ದಾಳಿ ಮತ್ತೆ ಆರಂಭವಾಗಲಿದೆ. ಈ ಬಗ್ಗೆ ಟ್ರಂಪ್‌ ತಮ್ಮ ಸಹಾಯಕರಿಗೆ ತಿಳಿಸಿದ್ದಾರೆ ಎಂದು ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ತನ್ನ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವುಗೊಳಿಸಿದರೆ, ಹಾರ್ಮುಜ್ ಜಲಸಂಧಿಯನ್ನ ಮತ್ತೆ …

Read More »

ಭಯೋತ್ಪಾದನೆಗೆ ತಕ್ಕ ಬೆಲೆ ತೆರಲೇಬೇಕು – ಪಾಕ್ ಪ್ರಧಾನಿಗೆ ಭಾರತ ತರಾಟೆ

ವಾಷಿಂಗ್ಟನ್: ವಿಶ್ವಸಂಸ್ಥೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್  ಭಾಷಣಕ್ಕೆ ಭಾರತದ ತಿರುಗೇಟು ನೀಡಿದ್ದು, ಭಯೋತ್ಪಾದನೆ ತಕ್ಕ ಬೆಲೆ ತೆರಲೇಬೇಕಾಗುತ್ತದೆ ಎಂದು ಭಾರತದ ರಾಜತಾಂತ್ರಿಕ ಅಧಿಕಾರಿ ಪೆಟಲ್ ಗಹ್ಲೋಟ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಶ್ವಸಂಸ್ಥೆಯ 81ನೇ ಸಾಮಾನ್ಯ ಸಭೆಯಲ್ಲಿ ಶೆಹಬಾಜ್ ಶರೀಫ್ ಭಾರತದ ವಿರುದ್ಧ ಮಾಡಿದ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದನ್ನು ಖಂಡಿಸಿದ ಅವರು, ಜಮ್ಮು ಮತ್ತು ಕಾಶ್ಮೀರದ  ಕುರಿತ ಪಾಕಿಸ್ತಾನದ ಪ್ರಸ್ತಾಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. …

Read More »

ಗೋಕಾಕದ ಕುಖ್ಯಾತ ರೌಡಿ ಗೂಂಡಾ ಕಾಯ್ದೆಯಡಿ ಬಂಧನ

ಗೋಕಾಕ: ಪಟ್ಟಣದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಕುಖ್ಯಾತ ರೌಡಿ ವಿಶಾಲ ತಾಯಿ ಸರೋಜಾ ಮೇಸ್ತ್ರಿ (29) ನನ್ನು ಗೋಕಾಕ ಶಹರ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ರವಾನಿಸಿದ್ದಾರೆ. ಆರೋಪಿ ಮೇಲೆ 10 ಗಂಭೀರ ಪ್ರಕರಣ: ಆದಿಜಾಂಬವ ನಗರದ ನಿವಾಸಿಯಾದ ಈತನ ಮೇಲೆ ಗೋಕಾಕ ಶಹರ ಠಾಣೆಯಲ್ಲಿ 01-ಕೊಲೆ ಪ್ರಕರಣ, 03-ಕೊಲೆಗೆ ಯತ್ನ, 01-ಆಯುಧ ಕಾಯ್ದೆ, 01-ಸರ್ಕಾರಿ ನೌಕರರ ಮೇಲೆ ಹಲ್ಲೆ ಮತ್ತು 03-ಇತರೆ …

Read More »

ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿದ ಡಿಸಿಎಂ ಪರಮೇಶ್ವರ್

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಸ್ಥಳೀಯ ಶಾಸಕರಾದ ಅಶೋಕ್ ಎಂ. ಪಟ್ಟಣ, ರಾಜು ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ …

Read More »

ಗಣೇಶ ವಿಸರ್ಜನೆ ವೇಳೆ ದುರಂತ: ಬೆಳಗಾವಿಯಲ್ಲಿ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ನಡೆದಿದೆ. ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆಗೆ ಇಳಿದಿದ್ದ ಯುವಕ ನೀರಿನಲ್ಲಿ ಮುಳುಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನ ಶವವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಘಟನೆ ಕುರಿತು ತುರ್ತು ಕರೆ ಬಂದ ತಕ್ಷಣ ಸೋಶಿಯಲ್ ವರ್ಕರ್ ರೆಸ್ಕ್ಯೂ ಟೀಂ ಬೆಳಗಾವಿ ಸ್ಥಳಕ್ಕೆ ಧಾವಿಸಿದೆ. ಸುಮಾರು 15 ನಿಮಿಷಗಳಲ್ಲಿ …

Read More »