Breaking News

Daily Archives: ಸೆಪ್ಟೆಂಬರ್ 30, 2026

ರಾಜ್ಯದ ರೈತರಿಗೆ ಗುಡ್‌ನ್ಯೂಸ್‌ – ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಒಪ್ಪಿಗೆ

ನವದೆಹಲಿ: ಕನಿಷ್ಠ ಬೆಂಬಲ ಬೆಲೆಯಲ್ಲಿ ಕರ್ನಾಟಕದಲ್ಲಿ ಸೂರ್ಯಕಾಂತಿ, ಹೆಸರುಕಾಳುಸೋಯಾಬೀನ್ ಖರೀದಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ಪ್ರಹ್ಲಾದ್‌ ಜೋಶಿ ಈ ವಿಚಾರವನ್ನು ತಿಳಿಸಿ ಕರ್ನಾಟಕದ ರೈತ ಬಾಂಧವರ ಹಿತ ಕಾಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಪ್ರಮುಖ ಹಾಗೂ ರೈತಪರ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ. ಜೋಶಿ ಪೋಸ್ಟ್‌ನಲ್ಲಿ ಏನಿದೆ? 2026-27ರ ಮುಂಗಾರು ಋತುವಿನಲ್ಲಿ …

Read More »

ನಿಮ್ಮ ಜೀವನದಲ್ಲೇ ಒಂದು ಚುನಾವಣೆ ಗೆಲ್ಲೋಕೆ ಆಗಿಲ್ಲ: ಬಿ.ಕೆ.ಹರಿಪ್ರಸಾದ್ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಬಿಕೆ ಹರಿಪ್ರಸಾದ್‌ರವರ  ಹಿನ್ನೆಲೆ ಏನೆಂದು ಎಲ್ಲರಿಗೂ ಗೊತ್ತಿದೆ. ನಿಮ್ಮ ಜೀವನದಲ್ಲೇ ಒಂದು ಚುನಾವಣೆ ಗೆಲ್ಲೋಕೆ ಆಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ತಿರುಗೇಟು ನೀಡಿದ್ದಾರೆ. ಶಿಕಾರಿಪುರದಿಂದ ಕಾಂಗ್ರೆಸ್ ಪಾದಯಾತ್ರೆ ನಡೆಸುವ ವಿಚಾರದ ಕುರಿತು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ರವರಿಗೆ ನಮ್ಮ ಬಳ್ಳಾರಿ ಪಾದಯಾತ್ರೆ ಪ್ರೇರಣೆ ಕೊಟ್ಟಿದೆ. ರಾಜ್ಯ ಸರ್ಕಾರದ ಸೊಕ್ಕನ್ಬು ಅಡಗಿಸುವಲ್ಲಿ ನಮ್ಮ ಬಳ್ಳಾರಿ ಪಾದಯಾತ್ರೆ ಯಶಸ್ವಿಯಾಗಿದೆ. ನನ್ನ ಕ್ಷೇತ್ರದಲ್ಲೇ ಬಿ.ಕೆ ಹರಿಪ್ರಸಾದ್ ಪ್ರಾರಂಭ …

Read More »

ಮೊಬೈಲ್ ಬಿಟ್ಟು ಚೆನ್ನಾಗಿ ಓದು ಎಂದ ಪೋಷಕರು; ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ

ಹಾವೇರಿ: ಮೊಬೈಲ್ ಫೋನ್ ಬಳಕೆ  ಕಡಿಮೆ ಮಾಡಿ, ಓದಿಕೊಳ್ಳುವಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು 16 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಹರ್ಷ ಮೋರೆ (16) ಎಂದು ಗುರುತಿಸಲಾಗಿದೆ. ಹರ್ಷ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ. ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಾಲಕ ಹೆಚ್ಚು ಸಮಯ ಮೊಬೈಲ್ ಬಳಸುತ್ತಿರುವುದನ್ನು ಗಮನಿಸಿದ ಪೋಷಕರು, ಮೊಬೈಲ್ ಬಿಟ್ಟು ವಿದ್ಯಾಭ್ಯಾಸದ ಕಡೆ ಹೆಚ್ಚಿನ …

Read More »

ಸಿಎಂ ಆಗಿದ್ದಾಗಲೇ ನೈಸ್‌ ರದ್ದು ಮಾಡಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ: ಹೆಚ್‌ಡಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

ಬೆಂಗಳೂರು: ಹೆಚ್‌ಡಿ ಕುಮಾರಸ್ವಾಮಿ ಅವರೇ ಈ ಹಿಂದೆ ಮುಖ್ಯಮಂತ್ರಿಯಾಗಿದ್ದರು. ಪೆನ್ನು-ಪೇಪರ್ ಕೈಯಲ್ಲಿದ್ದಾಗಲೇ ನೈಸ್‌ ಯೋಜನೆಯನ್ನು  ರದ್ದು ಮಾಡಿದ್ದರೆ ಇವತ್ತು ಯಾವುದೇ ಸಮಸ್ಯೆಯೇ ಇರುತ್ತಿರಲಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರು ನೈಸ್  ಯೋಜನೆಯ ಕುರಿತು ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ತಮ್ಮ ಕೈಯಲ್ಲೇ ಅಧಿಕಾರವಿದ್ದಾಗ ಏನನ್ನೂ ಮಾಡದೆ, ಈಗ ರಾಜಕೀಯಕ್ಕಾಗಿ ಮಾತನಾಡಿದರೆ ಹೇಗೆ? ಈಗಲೂ ಅವರು ಕೇಂದ್ರ ಸರ್ಕಾರಕ್ಕೆ ಹೇಳಿ …

Read More »

5 ತಿಂಗಳಿಗೂ ಹೆಚ್ಚು ಕಾಲ ಚಿಕಿತ್ಸೆ ನೀಡಿದರೂ ಬದುಕುಳಿಯಲಿಲ್ಲ; ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು

ಮಡಿಕೇರಿ: ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಸುಮಾರು 19 ವರ್ಷದ ಗಂಡಾನೆಯೊಂದು ಮೃತಪಟ್ಟಿದೆ. ಕಾದಾಟದಲ್ಲಿ ಗಾಯಗೊಂಡು, ಮುರಿದ ದಂತದೊಂದಿಗೆ ಶಿಬಿರಕ್ಕೆ ಬಂದಿದ್ದ ಆನೆಗೆ ಅರಣ್ಯ ಇಲಾಖೆ ಕಳೆದ ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ ನೀಡಿತ್ತು. ತಜ್ಞ ವೈದ್ಯರ ತಂಡದಿಂದಲೂ ಚಿಕಿತ್ಸೆ ನೀಡಲಾಗಿತ್ತು. ಆದರೆ, ಇಂದು ಬೆಳಗ್ಗೆ ಆನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಆನೆಯನ್ನು ಪ್ರತ್ಯೇಕವಾಗಿಟ್ಟು, ಯಾವುದೇ ರೀತಿಯ ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಆರೈಕೆ ಮಾಡಲಾಗಿತ್ತು. ಪ್ರತಿದಿನ ಆ್ಯಂಟಿಬಯೋಟಿಕ್ಸ್, …

Read More »

ಗೊಡ್ಡು ಬೆದರಿಕೆಗೆ ಹೆದರಲ್ಲ, ನನ್ನ ಆಸ್ತಿ ಬಗ್ಗೆ ಕೇಳಲು ಅವರೇನು ಐಟಿ ಅಧಿಕಾರಿನಾ: ಹೆಚ್‌ಡಿಕೆಗೆ ಡಿಕೆಶಿ ತಿರುಗೇಟು

ನವದೆಹಲಿ: ನಾನು ಯಾವುದೇ ಗೊಡ್ಡು ಬೆದರಿಕೆ ಅಥವಾ ಬ್ಲ್ಯಾಕ್‌ಮೇಲ್‌ಗೆ ಹೆದರುವ ಜಾಯಮಾನದವನಲ್ಲ. ನನ್ನ ಬಳಿ ಆಸ್ತಿ ಇದೆ, ಯಾಕೆ ಇರಬಾರದು? ನನ್ನ ಆಸ್ತಿ ಬಗ್ಗೆ ಕೇಳಲು ಅವರೇನು ಆದಾಯ ತೆರಿಗೆ ಅಧಿಕಾರಿಯೇ ಎಂದು ಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ. ನೈಸ್‌ ಹಗರಣಕ್ಕೆ ಸಂಬಂಧಿಸಿದಂತೆ ಹೆಚ್‌ಡಿಕೆ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ್ದಕ್ಕೆ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಡಿಕೆಶಿ, ನೈಸ್ ಯೋಜನೆಗೆ …

Read More »

ಏನೇ ಭಿನ್ನಾಭಿಪ್ರಾಯಗಳಿದ್ದರೂ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುತ್ತೇವೆ: ಪ್ರದೀಪ್ ಈಶ್ವರ್‌

ಚಿಕ್ಕಬಳ್ಳಾಪುರ: ಎಂ.ಸಿ ಸುಧಾಕರ್‌ ಹಾಗೂ ಶಾಸಕ ಪ್ರದೀಪ್‌ ಈಶ್ವರ್‌  ನಡುವೆ ಬಿನ್ನಾಭಿಪ್ರಾಯಗಳು ಕೇಳಿಬಂದ ಹಿನ್ನೆಲೆಯಲ್ಲೇ ಪ್ರದೀಪ್‌ ಈಶ್ವರ್‌ ಸೋಷಿಯಲ್‌ ಮೀಡಿಯಾ Xನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಎಂ.ಸಿ. ಸುಧಾಕರ್ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ದೂರು ನೀಡಿದೆ. ಶಾಸಕರ ಕಾರ್ಯವೈಖರಿ, ಪಕ್ಷ …

Read More »

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಉಡುಪಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ  ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ. ಮೃತರನ್ನು ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ರಜೆ ಇದ್ದ ಹಿನ್ನೆಲೆ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿ.ಮೀ. ದುರ್ಗಮ ದಾರಿ ಕ್ರಮಿಸಿ ನದಿಗೆ ತೆರಳಿದ್ದರು. ಈ ವೇಳೆ ಆಳವಾದ ನೀರಿಗೆ ತೆರಳಿದ ಭರತ್ ಹಾಗೂ …

Read More »

ಕೆಪಿಎಸ್‌ಸಿ ನೇಮಕಾತಿ ಹಗರಣ – 14 ದಿನ ಇಡಿ ಕಸ್ಟಡಿಗೆ ಬಸವರಾಜ್ ಕನ್ನಾಳೆ

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿಯಲ್ಲಿ ಹಗರಣ ಪ್ರಕರಣ ಸಂಬಂಧ ಮಧ್ಯವರ್ತಿ ಬಸವರಾಜ್ ಕನ್ನಾಳೆಯನ್ನು  14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ 4ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ. ಇಂದು ಬಸವರಾಜ್ ಕನ್ನಾಳೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಇಡಿ ಮನವಿ ಮಾಡಿದೆ. ಇಡಿ ಅಧಿಕಾರಿಗಳ ಮನವಿ ಪುರಸ್ಕರಿಸಿದ 4ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ್ ಬಸವರಾಜ್ ಕನ್ನಾಳೆಯನ್ನು 14 ದಿನ ಕಸ್ಟಡಿಗೆ ನೀಡಿ …

Read More »

ಹಾಸ್ಟೆಲ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಥಿ ನೇಣಿಗೆ ಶರಣು

ಚಿಕ್ಕಬಳ್ಳಾಪುರ: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯೊಬ್ಬ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಜೋಹೆಲ್ (18) ಮೃತ ವಿದ್ಯಾರ್ಥಿ. ಜೋಹೆಲ್ ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ. ಹಾಸ್ಟೆಲ್‌ನ ಕೊಠಡಿಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಪತ್ತೆಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಚನ್ನರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು …

Read More »