ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ಕೊಡಬೇಡಿ ಎಂದು ಹೇಳುತ್ತಿದ್ದೀರ. ಹಾಗಾದರೆ ನಿಮ್ಮ ಪ್ರಕಾರ, ಬಡವರು, ಉಳ್ಳವರು ಅಂದರೆ ಯಾರು, ಹೇಗೆ ವಿಂಗಡಿಸುತ್ತೀರಿ ಎನ್ನುವುದನ್ನು ವಿವರಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ವಿಪಕ್ಷಗಳಿಗೆ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಬುಧವಾರ ಬರ ಪರಿಸ್ಥಿತಿಯ ಚರ್ಚೆಯ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಅವರು, ರೈತರಿಗೆ ಗ್ಯಾರಂಟಿಗಳನ್ನು ನಿಲ್ಲಿಸಿ. ಆ ಹಣವನ್ನು ಬರ ಪರಿಹಾರಕ್ಕೆ ಬಳಸಿ ಎಂದು ಸಲಹೆ ನೀಡಿದರು. ಇದಕ್ಕೆ ದನಿಗೂಡಿಸಿದ ಬಿಜೆಪಿ ಶಾಸಕ …
Read More »Monthly Archives: ಸೆಪ್ಟೆಂಬರ್ 2026
ಒಣಗುತ್ತಿದೆ ಬೆಳೆ, ಕರಗುತ್ತಿದೆ ಕಾಸು – ಟ್ಯಾಂಕರ್ ಮೊರೆ ಹೋದ ರೈತರು
ಬಳ್ಳಾರಿ: ವಿಜಯನಗರ ಜಿಲ್ಲೆಯಾದ್ಯಂತ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟ ಪರಿಣಾಮ ಅನ್ನದಾತರು ಕಂಗಾಲಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು, ಒಣಗುತ್ತಿರುವ ರಾಗಿ ಬೆಳೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ಮೂಲಕ ನೀರು ಹರಿಸುವ ಹರಸಾಹಸಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಕೊಟ್ಟೂರು ತಾಲೂಕಿನ ನಿಂಬಳಗೇರಿ ಗ್ರಾಮದಲ್ಲಿ ರೈತರ ಈ ಸಂಕಷ್ಟದ ಪರಿಸ್ಥಿತಿ ಎದ್ದು ಕಾಣುತ್ತಿದೆ. ಗ್ರಾಮದ ಪ್ರಮುಖ ರೈತರಾದ ಸುರೇಶ ಶೆಟ್ಟಿ ಹಾಗೂ ಅಂಗಡಿ ಗಂಗಾಧರ ಎಂಬುವವರು ತಮ್ಮ ಒಟ್ಟು …
Read More »ಉತ್ತರ ಕನ್ನಡದಲ್ಲಿ ಭಾರಿ ಮಳೆ ಎಚ್ಚರಿಕೆ: ಸೆ.24 ರಂದು ಯೆಲ್ಲೋ ಅಲರ್ಟ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಸೆಪ್ಟೆಂಬರ್ 24ರಂದು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಸೆ.24ರಂದು ಭಾರಿ ಮಳೆಯೊಂದಿಗೆ ಗುಡುಗು-ಮಿಂಚು ಮತ್ತು ಬಿರುಗಾಳಿ ಸಾಧ್ಯತೆ ಇದೆ. ಸೆ.25ರಂದು ಗುಡುಗು-ಮಿಂಚು …
Read More »ಹಳ್ಳದ ನೀರಲ್ಲಿ ಮುಳುಗಿ ಇಬ್ಬರು ಮಕ್ಕಳು ದುರ್ಮರಣ
ರಾಮನಗರ: ಆಟವಾಡಲು ತೋಟಕ್ಕೆ ಹೋಗಿದ್ದ ಮಕ್ಕಳು ಹಳ್ಳದ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಕನಕಪುರ ತಾಲೂಕಿನ ಗುಣಗನಹಳ್ಳಿ ಗ್ರಾಮದಲ್ಲಿ ನಡೆದಿದೆ ಗ್ರಾಮದ ಶ್ರೀನಿವಾಸ್ ಹಾಗೂ ಪದ್ಮಾವತಿ ಪುತ್ರ ಮಧು (14) ಹಾಗೂ ನಾರಾಯಣ್-ಮಾಧುರಿ ಎಂಬುವವರ ಪುತ್ರ ಶ್ರೀಹರಿ (8) ಮೃತ ಮಕ್ಕಳು. ಕೆಲ ದಿನಗಳಿಂದ ಸುರಿದ ಮಳೆಯಿಂದ ಗ್ರಾಮದ ಹೊರವಲಯದ ಹಳ್ಳ ತುಂಬಿತ್ತು. ನಿನ್ನೆ ತೋಟಕ್ಕೆ ಆಟವಾಡಲು ಹೋಗಿದ್ದ ಮಕ್ಕಳು, ಹಳ್ಳದಲ್ಲಿ ಈಜಾಡುವಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಕ್ಕಳನ್ನು …
Read More »ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು
ದಾವಣಗೆರೆ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಗೆಹಳ್ಳಿ ಗ್ರಾಮದ ಗುಣವತಿ (36) ಮೃತ ದುರ್ದೈವಿ. ಒಂದು ದಿನದ ಹಿಂದೆಯಷ್ಟೇ ಗುಣವತಿ ನ್ಯಾಮತಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಆಕೆಯ ಆರೋಗ್ಯದಲ್ಲಿ ಏರುಪೇರಾಗಿತ್ತು. ತಕ್ಷಣವೇ ಆಕೆಯನ್ನ ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸುವ ವೇಳೆಗೆ ಬಾಣಂತಿ ಸಾವನ್ನಪ್ಪಿದ್ದಾರೆ. ಈ …
Read More »ಕಚೇರಿಯಲ್ಲೇ ಚಿಕ್ಕಬಳ್ಳಾಪುರ ರೈತ ಸಂಘದ ತಾಲೂಕು ಅಧ್ಯಕ್ಷ ನೇಣಿಗೆ ಶರಣು
ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚಿಕ್ಕಬಳ್ಳಾಪುರ ತಾಲೂಕು ಅಧ್ಯಕ್ಷ ಮರಳುಕುಂಟೆ ರಾಮಾಂಜಿನಪ್ಪ ಅವರು ನಗರದಲ್ಲಿರುವ ರೈತ ಸಂಘದ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ(Suicide) ಶರಣಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬಡಾವಣೆಯ ಹಾಲು ಉತ್ಪಾದಕರ ಸಹಕಾರ ಸಂಘದ (ಡೈರಿ) ಮೇಲ್ಭಾಗದಲ್ಲಿರುವ ರೈತ ಸಂಘದ ಕಚೇರಿಯ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಡೆತ್ನೋಟ್ ಕೂಡ ಲಭ್ಯವಾಗಿದೆ. ಡೆತ್ನೋಟ್ನಲ್ಲಿ ಏನಿದೆ? ಪೊಲೀಸರು ವಶಪಡಿಸಿಕೊಂಡಿರುವ ಡೆತ್ನೋಟ್ನಲ್ಲಿ …
Read More »SIR ಬಗ್ಗೆ ಚುನಾವಣಾ ಆಯೋಗದಲ್ಲಿ ಭಿನ್ನಮತವಿಲ್ಲ, ಎಲ್ಲಾ ನಿರ್ಧಾರಗಳೂ ಸರ್ವಾನುಮತದಿಂದ ಕೂಡಿವೆ: ಆಯೋಗ ಸ್ಪಷ್ಟನೆ
ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಬಗ್ಗೆ ಚುನಾವಣಾ ಆಯೋಗದಲ್ಲಿ ಯಾವುದೇ ಭಿನ್ನಮತ ಇಲ್ಲ, ಎಲ್ಲಾ ನಿರ್ಧಾರಗಳೂ ಸರ್ವಾನುಮತದಿಂದಲೇ ಕೂಡಿವೆ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಈ ಮೂಲಕ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಚುನಾವಣಾ ಆಯೋಗದೊಳಗೆ ಆಂತರಿಕ ಭಿನ್ನಮತ ಉಂಟಾಗಿದೆ ಎಂಬ ವರದಿಯನ್ನು ಚುನಾವಣಾ ಆಯೋಗ ಬುಧವಾರ ತಳ್ಳಿಹಾಕಿದೆ. ಎಸ್ಐಆರ್ ಸೇರಿದಂತೆ ಆಯೋಗ ಕೈಗೊಂಡಿರುವ ಎಲ್ಲಾ ನಿರ್ಧಾರಗಳೂ ಸರ್ವಾನುಮತದಿಂದಲೇ ಕೂಡಿವೆ ಎಂದು …
Read More »ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ
ವಿಜಯಪುರ: ಬರಗಾಲ ಪೀಡಿತ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ, ಚಡಚಣ ತಾಲೂಕು ಕೈಬಿಟ್ಟ ಹಿನ್ನೆಲೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಲವು ಬಾರಿ ಮನವಿ ಮಾಡಿದರೂ ಇಂಡಿ ಹಾಗೂ ಚಡಚಣ ತಾಲೂಕು ಬರ ಘೋಷಣೆ ಆಗಿಲ್ಲ. ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಬೇಸರಗೊಂಡು ಸ್ಪೀಕರ್ ಅವರನ್ನ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಈಗಿನ ರಾಜಕೀಯ ವಾತಾವಣರದಲ್ಲಿ ಬಲಾಢ್ಯರಿಗೆ, ಒತ್ತಡ ತಂತ್ರಗಳನ್ನು ಹೆಣೆಯುವವರಿಗೆ …
Read More »ಬೇರೊಬ್ಬನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ವಿದ್ಯಾರ್ಥಿನಿಯ ಕೊಲೆ – ಆತ್ಮಹತ್ಯೆ ಅಂತ ಬಿಂಬಿಸಿದ್ದ ಲೆಕ್ಚರರ್ ಅರೆಸ್ಟ್
ಹೈದರಾಬಾದ್: ಶಿಕ್ಷಕರೆಂದರೆ ವಿದ್ಯಾರ್ಥಿಗಳಿಗೆ ಬದುಕುಕಟ್ಟಿಕೊಡುವ ಮಾರ್ಗದರ್ಶಕ. ಆದರೆ ಇಂದಿನ ಜಗತ್ತಿನಲ್ಲಿ ಕೆಲವು ಕಡೆ ಶಿಕ್ಷಕ ಎನ್ನುವ ಪದದ ಅರ್ಥ ಬೇರೆಯೇ ಆಗಿಬಿಟ್ಟಿದೆ. ತೆಲಂಗಾಣದಲ್ಲಿ ಇಂತಹದ್ದೇ ಒಂದು ಘಟನೆ ಬೆಳಕಿಗೆ ಬಂದಿದೆ. ಬೇರೊಬ್ಬನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಒತ್ತಾಯದಿಂದ ಕೀಟನಾಶಕ ಸೇವಿಸಿ ಉಪನ್ಯಾಸಕ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಥಂಡ್ರಾ ಅಕ್ಷಿತಾರಾಣಿ (20) ಹಾಗೂ ಬಂಧಿತ ಲೆಕ್ಚರ್ನನ್ನು ನವೀನ್ ಕುಮಾರ್ ಎಂದು ಗುರುತಿಸಲಾಗಿದೆ. ಮೃತ ಯುವತಿ …
Read More »ಬಾಲಕಿ ಮೇಲೆ ಗ್ಯಾಂಗ್ರೇಪ್; ಪಾರ್ಕ್ ಹತ್ತಿರದ ಮಹಿಳಾ ಕಾಲೇಜು ಬಂದ್ ಮಾಡಿ ಆನ್ಲೈನ್ ಕ್ಲಾಸ್
ನವದೆಹಲಿ: ಪೊಲೀಸರ ಸೋಗಿನಲ್ಲಿ ಬಂದು 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣ ಇಡೀ ದೆಹಲಿಯನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆ ಬೆನ್ನಲ್ಲೇ ಕಲ್ಕಾಜಿ ಮಂದಿರದ ಬಳಿ ಇರುವ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ತರಗತಿಗಳನ್ನು ರದ್ದುಗೊಳಿಸಿ ಆನ್ಲೈನ್ ಕ್ಲಾಸ್ ನಡೆಸಲಾಗಿದೆ. ಕಲ್ಕಾಜಿ ದೇವಾಲಯದ ಸಮೀಪವಿರುವ ಆಸ್ತಾ ಕುಂಜ್ ಪಾರ್ಕ್ನಲ್ಲಿ ಈ ಘಟನೆ ನಡೆದಿದೆ. ಲೇಡಿ ಶ್ರೀ ರಾಮ್ ಕ್ಯಾಂಪಸ್ ಘಟನೆ ನಡೆದ ಸ್ಥಳದಿಂದ 2 ಕಿಲೋಮೀಟರ್ ದೂರದಲ್ಲಿದೆ. ವಿದ್ಯಾರ್ಥಿಗಳ …
Read More »
Laxmi News 24×7