Breaking News

Monthly Archives: ಸೆಪ್ಟೆಂಬರ್ 2026

ಯುಜಿ ನೀಟ್ 3ನೇ ಸುತ್ತಿನ ಕೌನ್ಸೆಲಿಂಗ್ ಸೆ. 24ರಿಂದ ಆರಂಭ-ಕೆಇಎ

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ  ಮೂರನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ  ಪ್ರಾಧಿಕಾರ ಸೆ.24ರಿಂದ ಆರಂಭಿಸಲಿದೆ. 3ನೇ ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ತಾವು ಸೇರಲು ಇಚ್ಛಿಸುವ ಕೋರ್ಸ್ ಶುಲ್ಕಗಳ ಆಧಾರದ ಮೇಲೆ ಸೆ.28ರೊಳಗೆ ಕಾಷನ್ ಡೆಪಾಸಿಟ್ ಕಟ್ಟುವುದು ಕಡ್ಡಾಯ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಕಾಷನ್ ಡೆಪಾಸಿಟ್ ಕಟ್ಟಿದ ಅಭ್ಯರ್ಥಿಗಳಿಗೆ ಸೆ.25ರಿಂದ 29ರವರೆಗೆ ಹೊಸದಾಗಿ ಆಪ್ಷನ್ಸ್ ದಾಖಲಿಸಲು ಅವಕಾಶ …

Read More »

ಹಿರಿಯ ನಟ ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ – ಸದನದಲ್ಲಿ ಪರಮೇಶ್ವರ್ ಅಭಿನಂದನೆ

ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ಅಭಿನಂದನೆ ಸಲ್ಲಿಸಿದರು. ಸದನದಲ್ಲಿ ಮಾತನಾಡಿದ ಅವರು, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾಗಿದೆ. ಚಿತ್ರರಂಗದಲ್ಲಿ ಕೆಲಸ ಮಾಡಿದ ಎಲ್ಲರಿಗೂ ಸುಲಭವಾಗಿ ದೊರೆಯುವ ಪ್ರಶಸ್ತಿ ಇದಲ್ಲ. ಅಂತಹ ಪ್ರತಿಷ್ಠಿತ ಪ್ರಶಸ್ತಿಯನ್ನು ಅನಂತ್ ನಾಗ್ ಅವರು ಪಡೆದಿರುವುದು ಮಹತ್ವದ ಸಂಗತಿ. ರಾಷ್ಟ್ರ ಮಟ್ಟದಲ್ಲಿ ಕಲಾವಿದರ …

Read More »

ನೀವು ಮಾಡಿರೋದು ದೇಶದ್ರೋಹ; ಟೈಂ ಬರುತ್ತೆ, ನಿಮ್ಮನ್ನ ಹಿಡಿಯುತ್ತೇವೆ – ರಾಹುಲ್‌ ಗಾಂಧಿ ಎಚ್ಚರಿಕೆ

ನವದೆಹಲಿ: ನೀವು ಮಾಡಿರುವುದು ದೇಶದ್ರೋಹ, ನಾನು ಚುನಾವಣಾ ಆಯೋಗ ಮತ್ತು ಅದರ ಅಧಿಕಾರಿಗಳಿಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಸಮಯ ಬಂದೇ ಬರುತ್ತೆ, ನೀವು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ನಿಮ್ಮನ್ನ ಹಿಡಿಯುತ್ತೇನೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ  ಎಚ್ಚರಿಕೆ ನೀಡಿದ್ದಾರೆ. ʻಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ವಿಚಾರದಲ್ಲಿ ಚುನಾವಣಾ ಆಯೋಗದೊಳಗೆ  ಆಂತರಿಕ ಭಿನ್ನಮತ ಉಂಟಾಗಿದೆʼ ಎನ್ನುವ ವರದಿ ಬೆನ್ನಲ್ಲೇ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಎಕ್ಸ್‌ ಖಾತೆಯಲ್ಲಿ ವಿಡಿಯೋ …

Read More »

ಕಚೇರಿಯಲ್ಲೇ ಚಿಕ್ಕಬಳ್ಳಾಪುರ ರೈತ ಸಂಘದ ತಾಲೂಕು ಅಧ್ಯಕ್ಷ ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚಿಕ್ಕಬಳ್ಳಾಪುರ ತಾಲೂಕು ಅಧ್ಯಕ್ಷ ಮರಳುಕುಂಟೆ ರಾಮಾಂಜಿನಪ್ಪ ಅವರು ನಗರದಲ್ಲಿರುವ ರೈತ ಸಂಘದ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬಡಾವಣೆಯ ಹಾಲು ಉತ್ಪಾದಕರ ಸಹಕಾರ ಸಂಘದ (ಡೈರಿ) ಮೇಲ್ಭಾಗದಲ್ಲಿರುವ ರೈತ ಸಂಘದ ಕಚೇರಿಯ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಡೆತ್‌ನೋಟ್ ಕೂಡ ಲಭ್ಯವಾಗಿದೆ. ಡೆತ್‌ನೋಟ್‌ನಲ್ಲಿ ಏನಿದೆ? ಪೊಲೀಸರು ವಶಪಡಿಸಿಕೊಂಡಿರುವ ಡೆತ್‌ನೋಟ್‌ನಲ್ಲಿ …

Read More »

ಸೆ. 24ರಂದು ಡಿಕೆಶಿ – ಮೋದಿ ಭೇಟಿ

ಬೆಂಗಳೂರು: ಇದೇ 24 ರಂದು ಸಿಎಂ ಡಿಕೆ ಶಿವಕುಮಾರ್‌ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಕಸ್ತೂರಿ ರಂಗನ್ವ ರದಿಯ ವಿಚಾರದಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ. ರಾಜ್ಯದ ಬಹುತೇಕ ತಾಲೂಕುಗಳಲ್ಲಿ ಮಳೆಯ ಕೊರತೆಯಿಂದ ಭೀಕರ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ತ್ವರಿತವಾಗಿ ಪರಿಹಾರ ನಿಧಿ ಬಿಡುಗಡೆ ಮಾಡುವಂತೆ …

Read More »

ಹಿರಿಯ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್‌ ನಾಗ್‌  ಅವರಿಗೆ ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ’  ನೀಡಿ ಗೌರವಿಸಲಾಗಿದೆ. ಇಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ಅನಂತ್‌ ನಾಗ್‌  ಅವರಿಗೆ 2024ನೇ ಸಾಲಿನ ‘ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.  ಭಾರತೀಯ ಸಿನಿಮಾದ ಪಿತಾಮಹ ದಾದಾಸಾಹೇಬ್‌ …

Read More »

ನಾಲೆಯಲ್ಲಿ ನವವಿವಾಹಿತೆ ಕಣ್ಮರೆ – ಪತಿ ವಿರುದ್ಧ ಕೊಲೆ ಆರೋಪ

ಹಾಸನ: ನಾಲೆಯಲ್ಲಿ ನವವಿವಾಹಿತೆ ಕಣ್ಮರೆಯಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿನಡೆದಿದೆ. ಜಯಶೀಲಾ.ಬಿ.ಕೆ (ಪ್ರಿಯಾಂಕ 24) ಅನುಮಾನಾಸ್ಪದವಾಗಿ ಕಣ್ಮರೆಯಾದ ಮಹಿಳೆ. ಎಂಟು ತಿಂಗಳ ಹಿಂದೆ ಕುರುವಂಕ ಗ್ರಾಮದ ರಾಜಶೇಖರ (27) ಎಂಬಾತನ ಜೊತೆ ಪ್ರಿಯಾಂಕಳನ್ನು ಮದುವೆ ಮಾಡಿಕೊಡಲಾಗಿತ್ತು. ರಾಜಶೇಖರ ಬಡ್ಡಿ ವ್ಯವಹಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಮದುವೆಯಾದ ಬಳಿಕ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಎರಡು ಬಾರಿ ರಾಜಿ ಪಂಚಾಯ್ತಿ ಸಹ ಮಾಡಲಾಗಿತ್ತು. ವರದಕ್ಷಿಣೆಗಾಗಿ ಪತಿಯೇ ಕೊಲೆ ಮಾಡಿದ್ದಾನೆ ಎಂದು …

Read More »

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿಕೆಶಿ

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಮಂಗಳವಾರ ನಡೆದ ಕಿಯೋನಿಕ್ಸ್‌ನ 50ನೇ ಸಂಸ್ಥಾಪನಾ ದಿನಾಚರಣೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ‌ನೀಡಿದರು. ಕೆಪಿಎಸ್‌ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಾವು ನಂಬಿಕೆ ಇಟ್ಟು ಆಯ್ಕೆ ಮಾಡಿದ ಅಧಿಕಾರಗಳು ಹೀಗೆಲ್ಲಾ ಮಾಡುತ್ತಿದ್ದಾರೆ. ಅಲ್ಲಿರುವ ಸದಸ್ಯರು ಅಂಗಡಿಯನ್ನೇ ತೆರೆದಿದ್ದಾರೆ. ನಮ್ಮ ಪೊಲೀಸ್ ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಒಂದು …

Read More »

ಕೊಡೋದಕ್ಕೆ ಹಣ ಇಲ್ಲ, ಸಿಎಂ ಪುಗ್ಸಟ್ಟೆ ಘೋಷಣೆ ಮಾಡ್ಕೊಂಡು ಹೊರಟಿದ್ದಾರೆ: ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಕೇವಲ ಪುಗ್ಸಟ್ಟೆ ಘೋಷಣೆ ಮಾಡಿಕೊಂಡು ಹೊರಟಿದ್ದಾರೆ, ಕೊಡೋದಕ್ಕೆ ಸರ್ಕಾರದ ಹತ್ತಿರ ಹಣ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ  ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕರಾವಳಿಗೆ ಹೋಗಿ 32-35 ಸಾವಿರ ಕೋಟಿ ರೂ. ಅನೌನ್ಸ್ ಮಾಡಿದ್ದಾರೆ. ಎಲ್ಲಿಂದ ತರುತ್ತಾರೆ ದುಡ್ಡನ್ನು? ರಿಯಲ್ ಎಸ್ಟೇಟ್ ಕಂಪನಿಯಿಂದ ತರುತ್ತಾರಾ ಎಂದು ಪ್ರಶ್ನಿಸಿದ್ದಾರೆ. ವಿಶೇಷ ಅಧಿವೇಶನ ಕರೆದಿರುವುದರ ಹಿಂದೆ ಯಾವುದೇ ರಾಜಕೀಯವಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದರೆ, ಅವರ …

Read More »

ವಂದೇ ಮಾತರಂ ಅರ್ಧಕ್ಕೆ ಕಡಿತ – ಆದೇಶ ಮರುಪರಿಶೀಲನೆಗೆ ಸೂಚಿಸಿ, ಸರ್ಕಾರಕ್ಕೆ ಗೆಹ್ಲೋಟ್‌ ಪತ್ರ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ  ಹೊರಡಿಸಿದ್ದ ಆದೇಶಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್  ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ರಾಜ್ಯ ಸರ್ಕಾರದ ಈ ನಿರ್ಧಾರವು ಕೇಂದ್ರ ಗೃಹ ಸಚಿವಾಲಯದ ಮಾರ್ಗದರ್ಶಿ ಸೂತ್ರಗಳಿಗೆ ಮತ್ತು `ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ಕಾಯ್ದೆ, 2026’ರ ನಿಯಮಗಳಿಗೆ ವಿರುದ್ಧವಾಗಿದೆ ಎಂದು …

Read More »