Breaking News

Monthly Archives: ಸೆಪ್ಟೆಂಬರ್ 2026

ಕಸ್ತೂರಿ ರಂಗನ್ ವರದಿ, ಬರ ಪರಿಸ್ಥಿತಿ; ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ರಾಜಕೀಯ ಬೇಡ, ಒಗ್ಗಟ್ಟು ಇರಲಿ: ಪರಮೇಶ್ವರ್

ಬೆಂಗಳೂರು: ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಗಂಭೀರ ಬರ ಪರಿಸ್ಥಿತಿಯ ಕುರಿತು ವಿಧಾನಮಂಡಲದಲ್ಲಿ ಪಕ್ಷಾತೀತವಾಗಿ ಸಮಗ್ರ ಚರ್ಚೆ ನಡೆಸಿ, ರಾಜ್ಯದ ಹಿತಾಸಕ್ತಿಗೆ ಪೂರಕವಾದ ಒಮ್ಮತದ ನಿರ್ಣಯ ಕೈಗೊಳ್ಳಬೇಕಿದೆ ಎಂದು ಉಪಮುಖ್ಯಮಂತ್ರಿ, ಕಂದಾಯ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ವಿಧಾನಪರಿಷತ್‌ನಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯ 7ನೇ ಕರಡು ಪ್ರತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಗದಿತ ಅವಧಿಯೊಳಗೆ ತನ್ನ ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿದೆ. ಸರ್ಕಾರದ ಅಭಿಪ್ರಾಯವನ್ನಷ್ಟೇ …

Read More »

ರಸ್ತೆ ದಾಟುವಾಗ ಕಾರು ಡಿಕ್ಕಿ – ನೇಮಕಾತಿ ಪತ್ರ ಪಡೆಯಲು ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿ ಸಾವು

ಮೈಸೂರು: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮೈಸೂರು  ಜಿಲ್ಲೆಯ ನಂಜನಗೂಡಿನ  ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. 19 ವರ್ಷದ ಪ್ರಿತೇಶ್ ಜೈನ್ ಮೃತ ವಿದ್ಯಾರ್ಥಿ. ಕೋರ್ಸ್ ಪೂರ್ಣಗೊಳಿಸಿ ಉದ್ಯೋಗಕ್ಕೂ ಆಯ್ಕೆಯಾಗಿದ್ದ. ನೇಮಕಾತಿ ಪ್ರಮಾಣಪತ್ರ ಪಡೆಯಲು ಕಾಲೇಜಿಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಕಾಲೇಜು ಮುಂಭಾಗದಲ್ಲಿ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ …

Read More »

ರೈಲಿನಲ್ಲಿ ಅಕ್ರಮ ಗಾಂಜಾ ಸಾಗಾಟ – ಆರೋಪಿ ವಶಕ್ಕೆ, 5 ಲಕ್ಷ ರೂ. ಮೌಲ್ಯದ 10 ಕೆಜಿ ಗಾಂಜಾ ಸೀಜ್

ಕೋಲಾರ: ರೈಲಿನಲ್ಲಿ ಅಕ್ರವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ 10 ಕೆಜಿ ಗಾಂಜಾವನ್ನು ಸೀಜ್ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ  ನಡೆದಿದೆ. ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಲ್ಲಿಕೋಟೆ ಮೂಲದ ನರೇಂದ್ರ ಕರಣ್ (23) ಆರೋಪಿ. ಈತ ಹೊರ ರಾಜ್ಯದಿಂದ ಅಕ್ರಮವಾಗಿ ರೈಲಿನಲ್ಲಿ ಗಾಜಾ ಸಾಗಿಸುತ್ತಿದ್ದ. ಅಲ್ಲದೇ ಬಂಗಾರಪೇಟೆ ನಗರದ ರೈಲ್ವೆ ನಿಲ್ದಾಣದಲ್ಲಿ ಮಾರಾಟ, ಸಾಗಾಟ ಮಾಡುತ್ತಿದ್ದ. ಬಂಗಾರಪೇಟೆ ರೈಲು …

Read More »

ಕರ್ನಾಟಕ ಸೇರಿ 28 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ: ಅ.23ರಂದು ಮತದಾನ

ನವದೆಹಲಿ: ಕರ್ನಾಟಕ  ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ  28 ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಸೆ.29ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಸಲು ಅ.6 ಕೊನೆಯ ದಿನವಾಗಿದ್ದು, ಅ.7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಅ.9ರವರೆಗೆ ನಾಮಪತ್ರ ಹಿಂಪಡೆಯಬಹುದು. ಬಳಿಕ ಅ.23ರಂದು ಬೆಳಗ್ಗೆ 8ರಿಂದ …

Read More »

ಪಹಣಿ ತಿದ್ದುಪಡಿಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ – ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ

ಚಿತ್ರದುರ್ಗ: ಪಹಣಿ ತಿದ್ದುಪಡಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಎಫ್‌ಡಿಎ  ಓರ್ವ ಲೋಕಾಯುಕ್ತ  ಅಧಿಕಾರಿಗಳ ಬಲೆಗೆ ಸಿಲುಕಿರುವ ಘಟನೆ ಚಿತ್ರದುರ್ಗದ  ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದ ಹನುಮಂತಪ್ಪ ಎಂಬವರ ಬಳಿ ಎಫ್‌ಡಿಎ ಬಸವರಾಜ್, ಪಹಣಿ ತಿದ್ದುಪಡಿಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಕಚೇರಿಯಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಬಸವರಾಜ್‌ನನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಖೆಡ್ಡಾಗೆ ಬೀಳಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಕೌಲಾಪುರೆ …

Read More »

ನಂದಿನಿ ಹಾಲಿನ ದರ 8 ರೂ. ಹೆಚ್ಚಳ ಮಾಡಿ – ಡಿಕೆಶಿಗೆ ಒಕ್ಕೂಟಗಳ ಮನವಿ

ಬೆಂಗಳೂರು: ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.8ರಿಂದ ರೂ.10ರಷ್ಟು ಹೆಚ್ಚಿಸಲು ಕರ್ನಾಟಕ ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್  ಅವರಿಗೆ ಮನವಿ ಸಲ್ಲಿಸಿದೆ. ವಿಧಾನಸೌಧದಲ್ಲಿ ಶಿವಕುಮಾರ್ ಅವರನ್ನು ಹಾಲು ಒಕ್ಕೂಟಗಳ ನಿಯೋಗವು ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರು, “ಕಳೆದ 10 ವರ್ಷಗಳಲ್ಲಿ ಪಶು ಆಹಾರ ದರದಲ್ಲಿನ ಹೆಚ್ಚಳ, …

Read More »

ಪೊಲೀಸ್ ಅಧಿಕಾರಿಗೆ ನಿಂದನೆ – ಪ್ರತಾಪ್ ಸಿಂಹ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

ಮೈಸೂರು: ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷಣ ಹಾಗೂ ಪೊಲೀಸ್ ಅಧಿಕಾರಿಯೊಬ್ಬರಿಗೆ ಜಾತಿ ನಿಂದನೆ ಮತ್ತು ಬೆದರಿಕೆ ಹಾಕಿದ ಆರೋಪದ ಮೇಲೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿ ಎಫ್‌ಐಆರ್  ದಾಖಲಾಗಿದೆ. ಟಿ. ನರಸೀಪುರ ತಾಲೂಕಿನ ಕೈಯಂಬಳ್ಳಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಕ್ರೀಡಾ ಕಲಾ ಸಂಘದ …

Read More »

ಡಿಜೆ ಸದ್ದಿಗೆ ಹಾರಿಹೋದ ಜೀವ – ನಗುನಗುತ್ತಲೇ ಇದ್ದ 2ನೇ ತರಗತಿ ಬಾಲಕಿ ಕುಸಿದು ಬಿದ್ದು ಸಾವು

ಲಕ್ನೋ: ಉತ್ತರ ಪ್ರದೇಶದ  ಬಲರಾಮ್‌ಪುರದಲ್ಲಿ 2ನೇ ತರಗತಿ ಬಾಲಕಿಯೊಬ್ಬಳು ಶಾಲೆಯಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ಶಾಲೆಯ ಮುಂಭಾಗ ಡಿಜೆ ಮೆರವಣಿಗೆ ಹಾದುಹೋದ ಕೆಲವೇ ಕ್ಷಣದಲ್ಲಿ ಬಾಲಕಿ ಹೃದಯಾಘಾತದಿಂದ  ಸಾವನ್ನಪ್ಪಿದ್ದಾಳೆ. ತರಗತಿಯಲ್ಲಿದ್ದ ಸಿಸಿಟಿವಿಯಲ್ಲಿ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ ವಿಡಿಯೋ ಸೆರೆಯಾಗಿದೆ. ವಿಡಿಯೋದಲ್ಲಿ, ತರಗತಿಯಲ್ಲಿ ಜಗಳವಾಡುತ್ತಿದ್ದ ಇತರ ವಿದ್ಯಾರ್ಥಿಗಳತ್ತ ಬಾಲಕಿ ಬೆರಳು ತೋರಿಸಿ ನಗುತ್ತಿದ್ದಳು. ಇದಾದ ಕೆಲವೇ ಕ್ಷಣಗಳಲ್ಲಿ ಕುರ್ಚಿಯ ಮೇಲೆ ಕುಸಿದುಬಿದ್ದು ಆಕೆ ಮೃತಪಟ್ಟಿರುವುದು ದಾಖಲಾಗಿದೆ. ಸೆ.21ರ ಬೆಳಿಗ್ಗೆ ಸುಮಾರು 11 ಗಂಟೆಗೆ …

Read More »

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಅನಾವರಣ

ನವದೆಹಲಿ: ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಜನ್ಮ ಶತಮಾನೋತ್ಸವವು 2031ರಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ರೂಪಿಸಲಾಗಿರುವ ‘ಜನ್ಮ ಶತಾಬ್ದಿ ಪಂಚವಾರ್ಷಿಕ ಯೋಜನೆ’ಯ ಅಧಿಕೃತ ಲಾಂಛನವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು. ಭೇಟಿಯ ವೇಳೆ ಶ್ರೀ ವಿಶ್ವಪ್ರಸನ್ನ ತೀರ್ಥರು ಪ್ರಧಾನಿ ನರೇಂದ್ರ ಮೋದಿ ಅವರಿಗೆ …

Read More »

ಸಂಕೇಶ್ವರ:ಪತ್ನಿ ತೀರಿಕೊಂಡಿದ್ದರಿಂದ ಮನನೊಂದ ವೈದ್ಯ ಆತ್ಮಹತ್ಯೆ!

ಸಂಕೇಶ್ವರ: ಪತ್ನಿ ತೀರಿಕೊಂಡಿದ್ದರಿಂದ ಮನನೊಂದ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ದಂತ ವೈದ್ಯ ಸಚಿನ ಪಟ್ಟಣಶೆಟ್ಟಿ (೪೮) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಮೃತ ಸಚಿನ ಪಟ್ಟಣಶೆಟ್ಟಿ ಪತ್ನಿ ಕಳೆದ ಹಲವು ತಿಂಗಳುಗಳ ಹಿಂದೆ ತೀರಿಕೊಂಡಿದ್ದು, ಮನನೊಂದು ಹಾಗೂ ಎರಡನೇ ಮದುವೆಯಾಗದೆ ಇರುವುದರಿಂದ ಮಾನಸಿಕವಾಗಿ ನೊಂದು ತಮ್ಮ ಮನೆಯಲ್ಲಿಯೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತನ ತಾಯಿ ದೂರಿನಲ್ಲಿ ಉಲ್ಲೆಖಿಸಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡ ಸಂಕೇಶ್ವರ ಠಾಣೆಯ ಪೊಲೀಸ್‌ರು …

Read More »