Breaking News

Monthly Archives: ಸೆಪ್ಟೆಂಬರ್ 2026

ಕ್ಲೈಮ್ಯಾಕ್ಸ್‌ ಹಂತಕ್ಕೆ ತಲುಪಿದ ಪಾದಯಾತ್ರೆ – ಬಳ್ಳಾರಿ ಜಿಲ್ಲೆಗೆ ಎಂಟ್ರಿ ಕೊಟ್ಟ ಬಿಜೆಪಿ ನಾಯಕರು

ಬಳ್ಳಾರಿ: ರಾಜ್ಯ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ  ನೇತೃತ್ವದಲ್ಲಿ ರಾಯಚೂರು  ಜಿಲ್ಲೆಯ ಲಿಂಗಸಗೂರಿನಿಂದ  ಆರಂಭವಾದ ಬಳ್ಳಾರಿ ಚಲೋ  ಪಾದಯಾತ್ರೆ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಪಾದಯಾತ್ರೆ ಇಂದು ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಎಂಟ್ರಿಕೊಟ್ಟಿದೆ. ಗುರುವಾರ ಸಂಜೆ ಬಳ್ಳಾರಿ ನಗರದ ಮುನ್ಸಿಪಲ್ ಮೈದಾನದಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಯಲಿದ್ದು, 9ನೇ ದಿನವಾದ ಇಂದೂ 20 ಕಿಲೋಮೀಟರ್ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ನಾಯಕರಿಗೆ ಮಾರ್ಗಮಧ್ಯೆ ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿ …

Read More »

ಕೆಂಪು ಕೋಟೆ ಬ್ಲಾಸ್ಟ್‌ ಆತ್ಮಾಹುತಿ ದಾಳಿ – ಕಾರಿನೊಳಗೇ ಐಇಡಿ ಸ್ಫೋಟಿಸಿದ್ದ ಉಮರ್; ಎನ್‌ಐಎ ಚಾರ್ಜ್‌ಶೀಟ್‌

ನವದೆಹಲಿ: ಇಲ್ಲಿನ ಕೆಂಪು ಕೋಟೆ ಬಳಿ ಸಂಭವಿಸಿದ್ದ ಸ್ಫೋಟವು  ಆತ್ಮಹತ್ಯಾ ಬಾಂಬ್ ದಾಳಿಯಾಗಿದ್ದು, ಆರೋಪಿ ಉಮರ್ ಉನ್ ನಬಿ ತಾನು ಚಲಾಯಿಸುತ್ತಿದ್ದ ಐ20 ಕಾರಿನೊಳಗಿನಿಂದಲೇ ಸುಧಾರಿತ ಸ್ಫೋಟಕ ಸಾಧನ  ಸ್ಫೋಟಿಸಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ  ಇಂದು ಸಲ್ಲಿಸಿದ 7,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ. ಕಳೆದ ವರ್ಷ ನವೆಂಬರ್ 10ರಂದು ನಡೆದ ಈ ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿದ್ದರು. ವೃತ್ತಿಯಲ್ಲಿ ವೈದ್ಯರಾಗಿರುವ ಹಾಗೂ ಫರೀದಾಬಾದ್‌ನ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಸಹಾಯಕ …

Read More »

ಬೈ ಬೈ ಪಪ್ಪಾ ಎಂದು ಚೆನಾಬ್ ನದಿಗೆ ಜಿಗಿದ ಯುವತಿ – ವಿಡಿಯೋ ವೈರಲ್‌

ಶ್ರೀನಗರ: ಯುವತಿಯೊಬ್ಬಳು ತಂದೆಗೆ ʻಬೈ ಬೈ ಪಪ್ಪಾʼ ಎಂದು ಚೆನಾಬ್ ನದಿಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಜಮ್ಮು ಮತ್ತು ಕಾಶ್ಮೀರದ  ದೋಡಾದ ಪ್ರೇಮ್ ನಗರದಲ್ಲಿ ನಡೆದಿದೆ. ಯುವತಿ ನದಿಗೆ ಜಿಗಿಯುತ್ತಿರುವ ವಿಡಿಯೋ ವ್ಯಕ್ತಿಯೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಯುವತಿ ಆತ್ಮಹತ್ಯೆ ಮಾಡುವುದಾಗಿ ತಿಳಿಸಿ ʻಬೈ ಬೈ ಪಪ್ಪಾʼ ಎಂದು ನದಿಗೆ ಜಿಗಿದಿರುವುದು ಸೆರೆಯಾಗಿದೆ. ಯುವತಿಗಾಗಿ SDRF ತಂಡ ಮತ್ತು ಸ್ಥಳೀಯ ನಿವಾಸಿಗಳು ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆಕೆಯ ಸುಳಿವು …

Read More »

ವೈದ್ಯನಿಂದ ಯುವತಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ; FIR ದಾಖಲು

ಬೆಂಗಳೂರು: ವೈದ್ಯನ ವಿರುದ್ಧ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕೊಡಿಗೆಹಳ್ಳಿಯ ವಿಖ್ಯಾತ್‌ ಡಯಾಗ್ನೋಸ್ಟಿಕ್ ವೈದ್ಯ ಯುವರಾಜ್ ಮನೋಹರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೆಲಸದ ವೇಳೆ ಪ್ರಜ್ಞೆ ತಪ್ಪಿಸುವ ಮಾತ್ರೆ ನೀಡಿ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದೇ ವೇಳೆ ವಿಡಿಯೋ ಮಾಡಿಕೊಂಡು, ಬ್ಲ್ಯಾಕ್‌ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಮಾಡಲಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ. ಸದ್ಯ ವೈದ್ಯ …

Read More »

ರೀಲ್ಸ್‌ಗಾಗಿ 30 ಅಡಿ ಎತ್ತರದಿಂದ ಡ್ಯಾಂಗೆ ಜಿಗಿದ ವ್ಯಕ್ತಿ – ಎರಡೂ ಕಾಲುಗಳ ಮೂಳೆ ಮುರಿತ

ಲಕ್ನೋ: ರೀಲ್ಸ್ ಹುಚ್ಚಿಗಾಗಿ ವ್ಯಕ್ತಿಯೊಬ್ಬ 30 ಅಡಿ ಎತ್ತರದಿಂದ ಡ್ಯಾಂಗೆ ಜಿಗಿದ ಪರಿಣಾಮ ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಝಾನ್ಸಿಯ ಪಹುಜ್ ಡ್ಯಾಂನಲ್ಲಿ ಭಾನುವಾರ ಘಟನೆ ನಡೆದಿದೆ. ಪುಷ್ಪೇಂದ್ರ ಎಂಬ 38 ವರ್ಷದ ವ್ಯಕ್ತಿ ತನ್ನ ಸ್ನೇಹಿತರೊಂದಿಗೆ ರೀಲ್ಸ್ ಶೂಟ್ ಮಾಡಲು ಡ್ಯಾಂಗೆ ತೆರಳಿದ್ದ. ವಿಭಿನ್ನ ಹಾಗೂ ಸಾಹಸಮಯ ದೃಶ್ಯ ಸೆರೆಹಿಡಿಯುವ ಉದ್ದೇಶದಿಂದ ಪುಷ್ಪೇಂದ್ರ ಡ್ಯಾಂನ ವೀಕ್ಷಣಾ ಸ್ಥಳದ ರೈಲಿಂಗ್ ದಾಟಿ ಸುಮಾರು …

Read More »

ಅಂಗನವಾಡಿ ಕಾರ್ಯಕರ್ತೆಯರ ವೇತನ 4,000 ರೂ. ಹೆಚ್ಚಳ – 5 ಲಕ್ಷದವರೆಗೆ ಆರೋಗ್ಯ ಸೇವೆ; ಸಿಎಂ ಯೋಗಿ ಬಂಪರ್‌ ಗಿಫ್ಟ್‌!

ಅಯೋಧ್ಯೆ: ಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಬಂಪರ್‌ ಗಿಫ್ಟ್‌ ಕೊಟ್ಟಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 8,000 ರೂ. ನಿಂದ 12,000 ರೂ.ಗೆ ಹೆಚ್ಚಿಸುವುದಾಗಿ ಹಾಗೂ ಸಹಾಯಕಿಯರ ಗೌರವಧನ 4,000 ರೂ. ನಿಂದ 6,000 ರೂ.ಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಅಯೋಧ್ಯೆ ಪ್ರವಾಸದ ವೇಳೆ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ …

Read More »

ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ – 2ನೇ ಪ್ರಯತ್ನದಲ್ಲಿ ಸೇಫ್‌ ಲ್ಯಾಂಡಿಂಗ್!

ಲಕ್ನೋ: ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ  ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ (ಇಂದು) ಲಕ್ನೋ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಮೊದಲ ಲ್ಯಾಂಡಿಂಗ್ ಪ್ರಯತ್ನ ಸ್ಥಗಿತಗೊಳಿಸಿ ‘ಗೋ-ಅರೌಂಡ್’  ಮಾಡಿದೆ. ಬಳಿಕ 2ನೇ ಪ್ರಯತ್ನದಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ವರದಿಗಳು ತಿಳಿಸಿವೆ. ‘ಗೋ-ಅರೌಂಡ್’ ಎಂದರೆ ವಿಮಾನವು ಲ್ಯಾಂಡಿಂಗ್‌ಗೆ ಮುನ್ನ ಇಳಿಯುವ ಪ್ರಕ್ರಿಯೆಯನ್ನ ಸ್ಥಗಿತಗೊಳಿಸಿ ಮತ್ತೆ ಮೇಲಕ್ಕೆ ಏರಿ, ಪರಿಸ್ಥಿತಿ ಅನುಕೂಲಕರವಾದ ನಂತರ ಮತ್ತೊಮ್ಮೆ ಲ್ಯಾಂಡಿಂಗ್‌ಗೆ ಪ್ರಯತ್ನಿಸುವ …

Read More »

ಸಚಿವ ಸತೀಶ್‌ ಜಾರಕಿಹೊಳಿ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿ

ಬೆಂಗಳೂರು: ಸಚಿವ ಸತೀಶ್‌ ಜಾರಕಿಹೊಳಿ  ಅವರ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದೆ. ಬೆಂಗಳೂರು, ಬೆಳಗಾವಿ, ಮಹಾರಾಷ್ಟ್ರ ಸೇರಿದಂತೆ 15 ಕಡೆ ದಾಳಿ ನಡೆದಿದೆ. ಮಂಜುನಾಥ್‌ ಅಬಕಾರಿ ಅಕ್ರಮದ ಮೇಲೆ ಈ ಹಿಂದೆ ಇ.ಡಿ ದಾಳಿ ಮಾಡಿತ್ತು. 18 ಅನಧಿಕೃತ ಲೈಸೆನ್ಸ್‌ ಕೊಡುವುದಕ್ಕೆ ಸತೀಶ್‌ ಜಾರಕಿಹೊಳಿ ಸಹಾಯ ಮಾಡಿದ್ದರೆಂಬ ಆರೋಪ ಇದೆ. ವಿದೇಶದಲ್ಲಿ ಹಣ ಹೂಡಿಕೆಗೆ ಜಾರಕಿಹೊಳಿ ಸಹಾಯ ಮಾಡಿದ್ದ ಆರೋಪವಿದೆ. 3 ಕೋಟಿಯಷ್ಟು ಅಕ್ರಮ ವಿದೇಶಿ ಹಣ …

Read More »

ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದ ಎಫ್‌ಡಿಎ – ಚಿಕಿತ್ಸೆ ಫಲಿಸದೇ ಸಾವು

ಕಾರವಾರ: ಕರ್ತವ್ಯದಲ್ಲಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕಚೇರಿಯಲ್ಲೇ ಕುಸಿದುಬಿದ್ದ ಕಾರವಾರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ಪಂಡರಿನಾಥ್ ವಿ. ನಾಯ್ಕ (51) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ ಎಂದಿನಂತೆ ಕಚೇರಿಗೆ ಆಗಮಿಸಿದ್ದ ಪಂಡರಿನಾಥ್ ನಾಯ್ಕ ಅವರು ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕಚೇರಿಯಲ್ಲೇ ಕುಸಿದುಬಿದ್ದಿದ್ದಾರೆ. ಘಟನೆ ಗಮನಿಸಿದ ಕಚೇರಿ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿ, ತಹಶೀಲ್ದಾರ್ …

Read More »

ಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡಿಆರ್‌ಐ ಅಧಿಕಾರಿಗಳು  ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗಾಂಧಿನಗರದಲ್ಲಿ 180 ನಕ್ಷತ್ರ ಆಮೆಗಳನ್ನು  ವಶಪಡಿಸಿಕೊಂಡಿದ್ದಾರೆ. ಟ್ರಾಲಿ ಬ್ಯಾಗ್‌ನಲ್ಲಿ ನಕ್ಷತ್ರ ಆಮೆಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹತ್ತು ಸಾವಿರಕ್ಕೆ ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಯತ್ನಿಸಿದ್ದು, ಪ್ರಕರಣ ಸಂಬಂಧ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಓರ್ವ ವ್ಯಕ್ತಿ ಕಲಾಸಿಪಾಳ್ಯದಿಂದ ನಕ್ಷತ್ರ ಆಮೆಗಳನ್ನು ತಂದುಕೊಟ್ಟಿದ್ದ. ಘಟನೆ ಸಂಬಂದ …

Read More »