Breaking News

Monthly Archives: ಸೆಪ್ಟೆಂಬರ್ 2026

ಮಾತು ಕೇಳದ ಅಧಿಕಾರಿಗಳನ್ನ ಕೆಲಸದಿಂದ ವಜಾ ಮಾಡ್ತೀನಿ: ಬಸವರಾಜ ರಾಯರೆಡ್ಡಿ ವಾರ್ನಿಂಗ್‌

ಕೊಪ್ಪಳ: ಯಾವ ಅಧಿಕಾರಿ ಮಾತು ಕೇಳಲ್ಲ ಹೇಳಿ, ಮಾತು ಕೇಳದ ಅಧಿಕಾರಿಗಳನ್ನ ಕೆಲಸದಿಂದ ವಜಾ ಮಾಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಖಡಕ್‌ ಎಚ್ಚರಿಕೆ ನೀಡಿದರು. ಕೊಪ್ಪಳದ ಗುನ್ನಾಳ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದೇ ವೇಳೆ ನಾನು ಫುಲ್ ಬ್ಯುಸಿ ಇರ್ತೇನೆ. ಡಿಜಿಟಲ್ ಸಿಗ್ನೇಚರ್ ಮಾಡಿ ಲೆಟರ್ ಕೊಟ್ಟುಬಿಡಿ ಎಂದು ಪಿಎಗೆ ಸೂಚಿಸಿದರು. ಯಾರು ಮಾತು ಕೇಳುವುದಿಲ್ಲ ನನಗೆ ಹೇಳು, ಅವರನ್ನ …

Read More »

ಶಿಕ್ಷಕರಿಗೂ ಪ್ರತಿಭಾ ಕಾರಂಜಿ, ಕ್ರೀಡಾಕೂಟ: ಮುಂದಿನ ವರ್ಷ ಮೂರು ದಿನ ಶಿಕ್ಷಕರ ಹಬ್ಬ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಶಿಕ್ಷಕರ ದಿನಾಚರಣೆಯನ್ನು ಮುಂದಿನ ವರ್ಷದಿಂದ ಮೂರು ದಿನಗಳ ವಿಶೇಷ ಕಾರ್ಯಕ್ರಮವಾಗಿ ಆಯೋಜಿಸಿ, ಶಿಕ್ಷಕರ ಪ್ರತಿಭೆ ಹಾಗೂ ಕ್ರೀಡಾಸಕ್ತಿಗೆ ವೇದಿಕೆ ಕಲ್ಪಿಸಲಾಗುವುದು ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಘೋಷಿಸಿದರು. ಬೆಳಗಾವಿಯ ಗಾಂಧಿ ಭವನದಲ್ಲಿ ನಡೆದ, ಗ್ರಾಮೀಣ ಕ್ಷೇತ್ರದ ಶಿಕ್ಷಕರ ದಿನಾಚರಣೆ, ಪ್ರತಿಭಾ ಕಾರಂಜಿ, ಕಲೋತ್ಸವ ಹಾಗೂ ಕ್ರೀಡಾಕೂಟಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪ್ರತಿವರ್ಷ ಶಿಕ್ಷಕರು ಮಕ್ಕಳಿಗಾಗಿ ಪ್ರತಿಭಾ ಕಾರಂಜಿ, ಕಲೋತ್ಸವ ಹಾಗೂ ಕ್ರೀಡಾಕೂಟಗಳನ್ನು ಆಯೋಜಿಸುತ್ತಾರೆ. ಮಕ್ಕಳಲ್ಲಿರುವ …

Read More »

ಕರ್ನಾಟಕಕ್ಕೆ ಮತ್ತೆ ಕಾವೇರಿ ಆಘಾತ – ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸಲು CWMA ಸೂಚನೆ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತವಾಗಿದೆ. ರಾಜ್ಯದ ಅಧಿಕಾರಿಗಳ ಪ್ರಬಲ ವಾದದ ಹೊರತಾಗಿಯೂ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್‌ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ  ಮಹತ್ವದ ಸೂಚನೆ ನೀಡಿದೆ. ಈ ಮೂಲಕ ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿ  ಆದೇಶವನ್ನ ಎತ್ತಿಹಿಡಿದಿದೆ. CWMA ಅಧ್ಯಕ್ಷ ಎಸ್.ಕೆ. ಹಲ್ದಾರ್ ಅವರ ನೇತೃತ್ವದಲ್ಲಿ ಇಂದು ಪ್ರಾಧಿಕಾರದ …

Read More »

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಸಾವು

ಭೋಪಾಲ್‌: ಮಧ್ಯಪ್ರದೇಶದ  ಸಾಗರ್ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಜನ ಸಾವನ್ನಪ್ಪಿದ್ದಾರೆ. ಶನಿವಾರ‌ ರಾತ್ರಿ ಘೂಘರ್, ನೌರಾಜ್, ಬರಾಜ್ ಸುತ್ತಮುತ್ತಲಿನ ಪ್ರದೇಶಗಳ ಜನರು ವಿಷಪೂರಿತ ಮದ್ಯ ಸೇವಿಸಿ ಅಸ್ವಸ್ಥರಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. 9 ಮಂದಿ ಸಾವಿಗೆ ವಿಷಪೂರಿತ ಮದ್ಯ ಕಾರಣವೆಂದು ಶಂಕಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ಇನ್ನೂ …

Read More »

200ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸುವ ಹುನ್ನಾರ – ಬಿಜೆಪಿ ಏಜೆಂಟ್‌ ಬಂಧನ

ರಾಂಚಿ: ಜಾರ್ಖಂಡ್‌ನ ಗೋದ್ಡಾ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಬೂತ್‌ ಮಟ್ಟದ ಏಜೆಂಟ್‌ (BLA) ಒಬ್ಬನನ್ನ ಪೊಲೀಸರು ಬಂಧಿಸಿದ್ದಾರೆ. ವಿನಯ್‌ ಕುಮಾರ್‌ ಮಂಡಲ್‌ ಬಂಧಿತ ಬಿಜೆಪಿ ಏಜೆಂಟ್‌. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಳೆ ಸುಮಾರು 200 ಫಾರ್ಮ್‌-7 ಅರ್ಜಿಗಳನ್ನು ಸಲ್ಲಿಸಿ, ಮತದಾರರ ಹೆಸರುಗಳನ್ನ ಪಟ್ಟಿಯಿಂದ ತೆಗೆದುಹಾಕಲು ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬಳಿಕ ಏಜೆಂಟ್‌ನನ್ನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಗೋದ್ಡಾ ಬ್ಲಾಕ್‌ನ ಪಚ್ರುಖಿ ಗ್ರಾಮದ …

Read More »

ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ – ಮಹಿಳೆ ಸಾವು, ನಾಲ್ವರಿಗೆ ಗಾಯ

ಮಂಡ್ಯ: ಚಲಿಸುತ್ತಿದ್ದ ಕಾರಿಗೆ  ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೆಕೆರೆ ಗೇಟ್  ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗುಜರಾತ್ ಮೂಲದ, ಬೆಂಗಳೂರಿನ ನಿವಾಸಿ ಸುಧಾ ಜೈನ್ (58) ಮೃತ ಮಹಿಳೆ. ಶ್ರವಣಬೆಳಗೊಳದಿಂದ ಬೆಂಗಳೂರಿಗೆ ಕುಟುಂಬ ವಾಪಸ್ಸಾಗುತ್ತಿದ್ದ ವೇಳೆ ಮತ್ತೊಂದು ಕಾರು ಹಿಂದಿಕ್ಕುವ ಭರದಲ್ಲಿ ಅತೀವೇಗವಾಗಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. …

Read More »

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

ಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಶಿವಾಜಿನಗರ ತಾಂಡಾದಲ್ಲಿ ನಡೆದಿದೆ. ಸಂತೋಷ ಲಮಾಣಿ ಎಂಬುವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ. ಕುಟುಂಬಸ್ಥರೆಲ್ಲರೂ ಎರಡು ದಿನಗಳಿಂದ ಮನೆ ದೇವರಿಗೆ ತೆರಳಿದ್ದರು. ಆದರೆ, ಇಂದು ಬೆಳಗಿನ ಜಾವ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ನಂತರ ಸ್ಥಳಕ್ಕೆ …

Read More »

ಇರಾನ್-ಇಸ್ರೇಲ್-ಅಮೆರಿಕ ಯುದ್ಧದ ಎಫೆಕ್ಟ್; ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ

ಕೆಲ ದೇಶಗಳ ನೌಕಾ ನೆಲೆಗಳು ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಇದರ ಎಫೆಕ್ಟ್ ಇದೀಗ ಬೆಂಗಳೂರಿನ ಡ್ರೈ ಫ್ರೂಟ್ಸ್ ಮಾರುಕಟ್ಟೆ ಮೇಲೂ ಬಿದ್ದಿದೆ. ಡ್ರೈ ಫ್ರೂಟ್ಸ್ ಸಪ್ಲೈ ಕಡಿಮೆಯಾಗಿದ್ದು, ಬೆಲೆಗಳು ಶೇ.30ರಿಂದ 40ರಷ್ಟು ಏರಿಕೆಯಾಗಿದೆ. ಇರಾನ್ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಿಂದ ರಾಜ್ಯಕ್ಕೆ ಬರುತ್ತಿದ್ದ ಡ್ರೈ ಫ್ರೂಟ್ಸ್ ಸಪ್ಲೈ ಬಹುತೇಕ ಸ್ಥಗಿತವಾಗಿದೆ. ಕಳೆದ ಮೂರು ತಿಂಗಳಿನಿಂದ ಬೆಂಗಳೂರಿಗೆ ಬರುತ್ತಿದ್ದ ಡ್ರೈ ಫ್ರೂಟ್ಸ್‌ನಲ್ಲಿ ಕೊರತೆ ಎದುರಾಗಿದೆ. ಇರಾನ್ ಸೇರಿದಂತೆ ಮಧ್ಯಪ್ರಾಚ್ಯದ ಹಲವು ದೇಶಗಳು …

Read More »

ಬೆಂಗಳೂರಲ್ಲಿ ಅಹಿಂದ ಸಮಾವೇಶ ಮಾಡುತ್ತಿಲ್ಲ: ಯತೀಂದ್ರ ಸಿದ್ದರಾಮಯ್ಯ

ರಾಯಚೂರು: ಬೆಂಗಳೂರಲ್ಲಿ ಅಹಿಂದ ಸಮಾವೇಶ  ಮಾಡುತ್ತಿಲ್ಲ. ಹಿಂದುಳಿದ ವರ್ಗಗಳ ಒಕ್ಕೂಟದ ಸಮಾವೇಶ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ  ಹೇಳಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಕ್ಕೂಟದ ರಜತ ಮಹೋತ್ಸವ ಕಾರ್ಯಕ್ರಮ ಮಾಡುತ್ತಿದ್ದಾರೆ. ಅದಕ್ಕೆ ನಮ್ಮ ತಂದೆಯವರನ್ನ ಕರೆದಿದ್ದಾರೆ. ಹಾಗೇ ಹಿಂದುಳಿದ ವರ್ಗಗಳ ನಾಯಕರನ್ನ ಕರೆದಿದ್ದಾರೆ. ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಅದನ್ನ ಮಾಡುತ್ತಿಲ್ಲ. ನಾವು ರಾಜಕೀಯ ಮಾಡುವುದಕ್ಕೆ ಪ್ರತಿಪಕ್ಷಗಳ ವಿರುದ್ಧ ನಾವು ಕಾರ್ಯಕ್ರಮ ಮಾಡುತ್ತಲೇ ಇರುತ್ತೇವೆ. ರಾಯಚೂರಿನಲ್ಲೂ …

Read More »

ವಿಟ್ಲಪಿಂಡಿ ಉತ್ಸವ ವೇಳೆ ರಥದಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ವೇಳೆ ಅನಿರೀಕ್ಷಿತ ಅವಘಡವೊಂದು ನಡೆದಿದೆ. ಚಿನ್ನದ ರಥದಲ್ಲಿ ರಥಾರೂಢವಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು ಉತ್ಸವದ ಬಳಿಕ ಇಳಿಸುವ ವೇಳೆ, ಪರ್ಯಾಯ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಗಳ ಕೈಯಿಂದ ಮೂರ್ತಿ ಜಾರಿ ಕೆಳಗೆ ಬಿದ್ದು ಭಗ್ನವಾಗಿದೆ. ಘಟನೆ ಕಂಡು ಸ್ಥಳದಲ್ಲಿದ್ದ ಭಕ್ತರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ವಿಟ್ಲಪಿಂಡಿ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ಚಾತುರ್ಮಾಸದ …

Read More »