Breaking News

Monthly Archives: ಸೆಪ್ಟೆಂಬರ್ 2026

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮುಖ್ಯ ಶಿಕ್ಷಕ ಸಾವು

ಧಾರವಾಡ: ಕರ್ತವ್ಯದ ಮೇಲಿದ್ದಾಗಲೇ ಹೃದಯಾಘಾತದಿಂದ  ಶಾಲಾ ಮುಖ್ಯ ಶಿಕ್ಷಕ  ಸಾವನ್ನಪ್ಪಿದ ಘಟನೆ ಧಾರವಾಡ  ನಗರದ ಮಾಳಮಡ್ಡಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಐಐ ಮುಲ್ಲಾನವರ್ (59) ಹೃದಯಾಘಾತದಿಂದ ಸಾವನ್ನಪ್ಪಿದ ಮುಖ್ಯ ಶಿಕ್ಷಕ. ಕಳೆದ ಎರಡು ದಿನಗಳ ಹಿಂದೆ ಶುಕ್ರವಾರ ಶಾಲೆಯಲ್ಲಿ ಇದ್ದಾಗಲೇ ಹೃದಯಾಘಾತವಾಗಿತ್ತು. ಈ ವೇಳೆ ಶಾಲೆಯಲ್ಲಿ ಇದ್ದ ಶಿಕ್ಷಕರು ಮುಖ್ಯ ಶಿಕ್ಷಕ ಮುಲ್ಲಾನವರನ್ನು ಆಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮುಖ್ಯ ಶಿಕ್ಷಕ ಸಾವನ್ನಪ್ಪಿದ್ದಾರೆ. ಶುಕ್ರವಾರ ಸಂಜೆ ಮುಖ್ಯ …

Read More »

ಸಚಿವ ಬಾಲಕೃಷ್ಣರ ಕಾರು ತಡೆದು, ದೃಷ್ಟಿ ತೆಗೆದು ಊಟಕ್ಕೆ ಕರೆದ ವೃದ್ಧೆ

ರಾಮನಗರ: ರಸ್ತೆಯಲ್ಲಿ ತೆರಳುತ್ತಿದ್ದ ಸಚಿವ ಬಾಲಕೃಷ್ಣ ಅವರ ಕಾರನ್ನು ತಡೆದು ವೃದ್ಧೆಯೊಬ್ಬರು, ಸಚಿವರನ್ನು ಊಟಕ್ಕೆ ಕರೆದ ಪ್ರಸಂಗ ನಡೆಯಿತು. ಸಚಿವರಿಗೆ ದೃಷ್ಟಿ ತೆಗೆದು, ನಿನಗೆ ಒಳ್ಳೆಯದು ಆಗಲಪ್ಪ ಅಂತ ವೃದ್ಧೆ ಆಶೀರ್ವದಿಸಿದರು. ಮಾಗಡಿಗೆ ತೆರಳುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಬಾಲಕೃಷ್ಣರ ಕಾರನ್ನು ತಡೆದು ದೇವಮ್ಮ ಎಂಬ ವೃದ್ಧೆಯೊಬ್ಬರು ಆತ್ಮೀಯವಾಗಿ ಮಾತುಕತೆ ನಡೆಸಿದರು. ಈ ಸಂಭಾಷಣೆಯ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ವೃದ್ಧೆ ದೇವಮ್ಮ ಸಚಿವರ ಕಾರನ್ನು …

Read More »

ಸರ್ಕಾರಿ ಗೋಮಾಳ, ಕೆರೆ ಜಾಗ ಒತ್ತುವರಿ ಆರೋಪ – ನಾಲ್ಕು ಲಾರಿ, ಟ್ರ‍್ಯಾಕ್ಟರ್ ಸೀಜ್

ಬೆಂಗಳೂರು: ಸರ್ಕಾರಿ ಗೋಮಾಳ  ಹಾಗೂ ಕೆರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲು ಘನತ್ಯಾಜ್ಯ ಮತ್ತು ಕಟ್ಟಡ ತ್ಯಾಜ್ಯ ತುಂಬಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಅಧಿಕಾರಿಗಳು ದಾಳಿ ನಡೆಸಿ ನಾಲ್ಕು ಲಾರಿ ಹಾಗೂ ಒಂದು ಟ್ರ‍್ಯಾಕ್ಟರ್ ಅನ್ನು ವಶಕ್ಕೆ ಪಡೆದಿದ್ದಾರೆ. ಜಿಗಣಿ  ಸಮೀಪದ ವಡೇರಹಳ್ಳಿ ಗ್ರಾಮದ ಸರ್ವೇ ನಂಬರ್ 20ರಲ್ಲಿ ಘಟನೆ ನಡೆದಿದೆ. ಇಲ್ಲಿ ಸುಮಾರು 2 ಎಕರೆ 14 ಗುಂಟೆ ಸರ್ಕಾರಿ ಗೋಮಾಳ ಜಾಗವಿದೆ. ಈ ಪ್ರದೇಶದಲ್ಲಿ ಈ ಹಿಂದೆ …

Read More »

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷ ಮುಖ್ಯವಲ್ಲ, ಜಿ.ಟಿ ದೇವೇಗೌಡ ಮಾತ್ರ ಮುಖ್ಯ – ಜಿಟಿಡಿ ಖಡಕ್‌ ಹೇಳಿಕೆ

ಮೈಸೂರು: ಕಳೆದ 3 ವರ್ಷಗಳಿಂದ ಜೆಡಿಎಸ್‌ನಿಂದ ನನಗೆ ಅವಮಾನವಾಗಿದೆ ಎಂದು ಶಾಸಕ ಜಿ.ಟಿ. ದೇವೇಗೌಡ  ಬೇಸರ ವ್ಯಕ್ತಪಡಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ  ಜನರಿಂದ ಇಂದು ನಡೆದ ರಾಜಕೀಯ ಮೆರವಣಿಗೆ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವಿರುದ್ಧ ಅಬ್ಬರಿಸಿದ್ದಾರೆ. ನಾನು ಜೆಡಿಎಸ್ (JDS) ಶಾಸಕ. ಆದರೆ ಜೆಡಿಎಸ್‌ನ ಯಾವುದೇ ಕಾರ್ಯಕ್ರಮಕ್ಕೂ ನನ್ನನ್ನು ಕರೆಯಲಿಲ್ಲ. ಯಾವುದೇ ಜೆಡಿಎಸ್ ಸಮಾವೇಶಕ್ಕೂ ಕರೆಯದೆ ನನ್ನಗೆ ಅವಮಾನ ಮಾಡಿದರು. ಈ ಅವಮಾನಕ್ಕೆ ಉತ್ತರಕ್ಕಾಗಿ ನಮ್ಮ ಜನ …

Read More »

ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಆರೋಪಿಯಿಂದ ಹುಬ್ಬಳ್ಳಿ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ  ಅವಳಿ ನಗರದ ನೂತನ ಪೊಲೀಸ್ ಆಯುಕ್ತ ಭೂಷಣ ಬೋರಸೆ ಅವರು ಅಧಿಕಾರ ಸ್ವೀಕರಿಸುವ ವೇಳೆ ಗಾಂಜಾ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಬ್ಬರು ಸನ್ಮಾನ ಮಾಡಿರೋದು ಭಾರೀ ವಿವಾದಕ್ಕೆ ಕಾರಣವಾಗಿದೆ. ಮಾದಕವಸ್ತು ಸಾಗಾಟ ಮತ್ತು ಕೊಲೆ ಪ್ರಕರಣದ ಆರೋಪಿ ಖೇತ್‌ಸಿಂಗ್ ರಾಜಪುರೋಹಿತ ಸನ್ಮಾನ ಮಾಡಿದ್ದಾನೆ. ಅಲ್ಲದೇ ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿ ಅಮಿತ್ ಬದ್ದಿಯೂ ಕೂಡ ಆಯುಕ್ತರಿಗೆ ಸನ್ಮಾನ ಮಾಡಿದ್ದು, ಹೂಗುಚ್ಛ ನೀಡುವ ಫೋಟೋ …

Read More »

KPSC ಅಕ್ರಮದ ವಿರುದ್ಧ ಅಖಾಡಕ್ಕಿಳಿದ ವಿದ್ಯಾರ್ಥಿಗಳು; ರಾಜ್ಯದಲ್ಲಿ ಜೆನ್-ಝೀ ಮಾದರಿ ಹೋರಾಟಕ್ಕೆ ಪ್ಲ್ಯಾನ್‌

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣದ ವಿರುದ್ಧ ವಿದ್ಯಾರ್ಥಿಗಳೇ ಅಖಾಡಕ್ಕೆ ಇಳಿದಿದ್ದಾರೆ. ರಾಜ್ಯದಲ್ಲಿ ಜೆನ್-ಝೀ ಮಾದರಿ ಹೋರಾಟಕ್ಕೆ ಯುವಕರು ಮುಂದಾಗಿದ್ದಾರೆ. ಕೆಪಿಎಸ್‌ಸಿ ಅಕ್ರಮದ ಬಗ್ಗೆ ಅಪರಾಧ ತನಿಖಾ ಇಲಾಖೆ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದು, ಈ ಬೆಳವಣಿಗೆ ನಡುವೆ ವಿದ್ಯಾರ್ಥಿಗಳು ತಾವೇ ಪ್ರತಿಭಟನೆಗೆ ಮುಂದಾಗಿದ್ದಾರೆ. ದೆಹಲಿಯಲ್ಲಿ ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಹೋರಾಟದ ಮಾದರಿಯಲ್ಲಿಯೇ ಈ ಪ್ರತಿಭಟನೆ ನಡೆಯಲಿದೆ. ಬೆಂಗಳೂರಿನಲ್ಲಿ ಇದೇ ತಿಂಗಳ ಎರಡನೇ ವಾರದಿಂದ …

Read More »

ಊಟ ಮಾಡುವಾಗ ಹೃದಯಾಘಾತ – ಮಗಳು, ಅಳಿಯನ ಕಣ್ಣೆದುರೇ ಪ್ರಾಣಬಿಟ್ಟ ವ್ಯಕ್ತಿ!

ರಾಮನಗರ: ಊಟ ಮಾಡುತ್ತಿದ್ದಾಗಲೇ ಹೃದಯಾಘಾತ  ಸಂಭವಿಸಿ ಮಗಳು, ಅಳಿಯನ ಎದುರಲ್ಲೇ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ರಾಮನಗರ ತಾಲೂಕಿನ ಮಂಚಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗಯ್ಯ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಮಗಳು ಹಾಗೂ ಅಳಿಯನೊಂದಿಗೆ ಸಂತೋಷದಿಂದ ಊಟ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿದ್ದು, ಪ್ರಾಣಬಿಟ್ಟಿದ್ದಾರೆ. ಸೋಫಾದ ಮೇಲೆ ಕುಳಿತು ಊಟ ಮಾಡುವಾಗ ಕುಸಿದು ಬೀಳುವ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಏಕಾಏಕಿ ಕುಳಿತ ಜಾಗದಲ್ಲೇ ಕುಸಿದ ತಂದೆಯನ್ನ ಮೊದಲಿಗೆ ಅಲ್ಲೇ ಊಟ …

Read More »

ಹರಿದ ನೆತ್ತರು – ರೌಡಿಶೀಟರ್ ಭೀಕರ ಹತ್ಯೆ

ಶಿವಮೊಗ್ಗ: ತಾಲೂಕಿನ ರಾಮಿನಕೊಪ್ಪದಲ್ಲಿ ರೌಡಿಶೀಟರ್‌ ಭೀಕರ ಹತ್ಯೆಯಾಗಿರುವ ಘಟನೆ ನಡೆದಿದೆ. ಕಿರಣ್ ಅಲಿಯಾಸ್ ಕುಳ್ಳಿ ಕಿರಣ್‌ (32) ಕೊಲೆಯಾದ ರೌಡಿಶೀಟರ್. ಶಿವಮೊಗ್ಗ ನಗರದ ಸಿಗೇಹಟ್ಟಿ- ಭಾರತಿ ಕಾಲೋನಿ ನಿವಾಸಿ. ರಾಮಿನಕೊಪ್ಪ ಬಳಿ ಸ್ನೇಹಿತರ ಜೊತೆಯಿದ್ದ ಕಿರಣ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಗಂಭೀರ ಗಾಯಗೊಂಡ ಕಿರಣ್ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರೌಡಿಶೀಟರ್ ಕಿರಣ್ ಮೃತದೇಹ ರವಾನಿಸಲಾಗಿದೆ. ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ …

Read More »

ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವು

ನವದೆಹಲಿ: ಭಾನುವಾರ ಮಧ್ಯಾಹ್ನ ದೆಹಲಿಯ ಸತ್ಯನಿಕೇತನದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಿತಿ ಗಂಭೀರವಾಗಿದೆ. ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಒಂಬತ್ತು ಜನರನ್ನು ರಕ್ಷಿಸಲಾಗಿದೆ. ಘಟನೆಯ ಬಗ್ಗೆ ದೆಹಲಿ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ‘ದೆಹಲಿಯ ಸತ್ಯನಿಕೇತನದಲ್ಲಿ ಕಟ್ಟಡ ಕುಸಿತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. …

Read More »

ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಶುಭಾರಂಭ; ಇವ್ರೇ ನೋಡಿ ಈ ಬಾರಿ ಮನೆಯೊಳಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್‌ 13 ಅದ್ಧೂರಿಯಾಗಿ ಆರಂಭವಾಗಿದೆ. ಗ್ರ್ಯಾಂಡ್‌ ಓಪನಿಂಗ್‌ನಲ್ಲಿ ಒಬ್ಬೊಬ್ಬರಾಗಿ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ, ಕಿರುತೆರೆ, ಸೋಷಿಯಲ್ ಮೀಡಿಯಾ ಸೇರಿದಂತೆ ವಿವಿಧ ಕ್ಷೇತ್ರಗಳ ಪರಿಚಿತ ಮುಖಗಳು ಈ ಬಾರಿ ಬಿಗ್‌ಬಾಸ್ ಮನೆಯಲ್ಲಿದ್ದಾರೆ. ಈ ಬಾರಿ ಸ್ಪರ್ಧಿಗಳ ಎಂಟ್ರಿ ಕೂಡ ವಿಭಿನ್ನವಾಗಿತ್ತು. ಕೆಲವರು ಟಾಸ್ಕ್‌ ಮೂಲಕ, ಇನ್ನು ಕೆಲವರು ತಮ್ಮದೇ ಸ್ಟೈಲ್‌ನಲ್ಲಿ ಬಿಗ್‌ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಕಿಚ್ಚ ಸುದೀಪ್‌ ಜೊತೆ …

Read More »