Breaking News

Monthly Archives: ಸೆಪ್ಟೆಂಬರ್ 2026

ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್

ಬೆಂಗಳೂರು: ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು ಅಂತ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು, ಕರ್ನಾಟಕ ಜನತೆಗೆ ಒಂದು ವಿಷಯ ಹೇಳ್ತೀನಿ. ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳತನ ಸಂಘದ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು. ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ, ಶ್ರೀರಾಮುಲು ಅಂತ ವಾಗ್ದಾಳಿ ‌ನಡೆಸಿದ್ದಾರೆ. ಬಿಜೆಪಿ ಅವಧಿಯಲ್ಲಿ ಕೋವಿಡ್ ಹಗರಣ, ಬೋವಿ ನಿಗಮ ಹಗರಣ, ನೀಟ್ ಹಗರಣ, ದೇವರಾಜ್ …

Read More »

ಕಾಂಗ್ರೆಸ್ ಶಾಸಕನಿಂದ ಕಮೀಷನ್ ಆರೋಪ ವಿಚಾರ ತನಿಖೆ ಆಗಲಿ: ಯು‌.ಟಿ. ಖಾದರ್

ಬೆಂಗಳೂರು: ಸಚಿವರ ಹೆಸರಿನಲ್ಲಿ ಕಮೀಷನ್ ಕೇಳಿದ ಪ್ರಕರಣ ತನಿಖೆ ಆಗಲಿ ಎಂದು ಸಚಿವ ಯುಟಿ. ಖಾದರ್ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕ ಅಶೋಕ್ ರೈ ವರಿಂದ 7% ಕಮೀಷನ್ ಆರೋಪ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವರ ಹೆಸರು ಹೇಳಿ ಕಮೀಷನ್ ತಗೋತಿದ್ದಾರೆ ಅಂತ ಆರೋಪ ಮಾಡಿದ್ದಾರೆ. ಗ್ರಾಮೀಣಾಭಿವೃದ್ದಿ ಸಚಿವರು ತಕ್ಷಣ ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಗೆ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರಿಗೂ ನಾನು ತನಿಖೆ ಮಾಡೋಕೆ ಮನವಿ …

Read More »

ಕೋಲಾರದ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಣ ಹೋಮ – ವಿಷ ಪ್ರಾಶನ ಶಂಕೆ

ಕೋಲಾರ: ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳ ಮಾರಣಹೋಮವಾಗಿರುವ ಘಟನೆ ಕೋಲಾರ ನಗರದ ಅಮ್ಮಾನಿ ಕೆರೆಯಲ್ಲಿ ನಡೆದಿದೆ. ವಿಷ ಪ್ರಾಶನದಿಂದ ಮೀನುಗಳ ಮಾರಣಹೋಮವಾಗಿರುವ ಶಂಕೆ ವ್ಯಕ್ತವಾಗಿದೆ. ಕೆರೆಯಲ್ಲಿದ್ದ ಕ್ಯಾಟ್ ಫಿಶ್‌ಗಳನ್ನು ಸಾಯಿಸಿ ಹೊಸ ತಳಿಯ ಮೀನುಗಳನ್ನು ಬಿಡಲು ವಿಷ ಹಾಕಿರಬಹುದು ಎಂದು ಶಂಕಿಸಲಾಗಿದೆ. ಮೀನುಗಳ ಮಾರಣ ಹೋಮದಿಂದ ಕೆರೆ ಗಬ್ಬು ನಾರುತ್ತಿದ್ದು, ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಸಣ್ಣನೀರಾವರಿ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಕೆರೆಯಲ್ಲಿದ್ದ ನೀರಿನ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ …

Read More »

ಭಾರತದ ಜಿಡಿಪಿ 7.8% ಬೆಳವಣಿಗೆ ಅನ್ನೋದೆ ಬೋಗಸ್: ಸಂತೋಷ್ ಲಾಡ್

ಬೆಂಗಳೂರು : ಭಾರತದ ಜಿಡಿಪಿ 7.8% ಬೆಳವಣಿಗೆ ಅನ್ನೋದೆ ಬೋಗಸ್ ಎಂದು ಸಚಿವ ಸಂತೋಷ್ ಲಾಡ್  ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು ಏನನ್ನಾದರೂ ಹೇಳಿದರೆ ಮೋದಿ ವಿರುದ್ದ ಮಾತಾಡುತ್ತೀವಿ, ಸುಳ್ಳು ಹೇಳುತ್ತೀವಿ ಅಂತಾರೆ. ನಾವು ಮೋದಿ ವಿರುದ್ದವೇ ಮಾತಾಡಿರಬಹುದು. ಆದರೆ, ವೈಯಕ್ತಿಕವಾಗಿ ಅಲ್ಲ. 7.8% ಜಿಡಿಪಿ ಅನ್ನೋದೆ ಬೋಗಸ್ ಅಂತ ಕಿಡಿಕಾರಿದರು. ಇವರು ಜಿಡಿಪಿ ಘೋಷಣೆ ಮಾಡಿದ ಕೂಡಲೇ 6 ಸಾವಿರ ಕೋಟಿ ವಿದೇಶಿ ಬಂಡವಾಳ ಹೂಡಿಕೆ …

Read More »

ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ನನ್ನ ಜತೆ ಚರ್ಚೆಗೆ ಬರಲಿ – ಚೆಲುವರಾಯಸ್ವಾಮಿ ಸವಾಲ್

ಬೆಂಗಳೂರು: ಕುಮಾರಸ್ವಾಮಿಗೆ  ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲು ಯಾರು ತಟ್ಟಿದರು ಅಂತ ಚರ್ಚೆಗೆ ನನ್ನ ಜೊತೆ ಬರಲು ಅಂತ ಸಚಿವ ಚೆಲುವರಾಯಸ್ವಾಮಿ ಸವಾಲ್ ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ ಮನೆ ಬಾಗಿಲು ಬಡಿದರು ಎಂಬ ಕುಮಾರಸ್ವಾಮಿ ಆರೋಪ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ನನ್ನ ಜತೆ ಕುಮಾರಸ್ವಾಮಿ ಚರ್ಚೆಗೆ ಬರಲಿ. ಸಿಎಂ ಆಗಿದ್ದಾಗ ಕುಮಾರಸ್ವಾಮಿ ಎರಡು ದಿನ ಎಲ್ಲಿಗೆ ಹೋಗಿದ್ರು? …

Read More »

ಕಾರವಾರ ಕದಂಬ ನೌಕಾನೆಲೆಯ ಸಿಬ್ಬಂದಿ ನಾಪತ್ತೆ – ಪ್ರಕರಣದ ಸುತ್ತ ಹಲವು ಅನುಮಾನ

ಕಾರವಾರ: ಕದಂಬ ನೌಕಾನೆಲೆಯಲ್ಲಿ  ಸೇಲರ್  ಆಗಿ ಕರ್ತವ್ಯ ನಿರ್ವಹಿಸುತಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಆಂದ್ರಪ್ರದೇಶದ ಅನಂತಪುರದ ಕುಂಟಿಮಡ್ಡಿ ಗ್ರಾಮದ ದಿನೇಶ್ ಕುಮಾರ್ (28) ಕಾಣೆಯಾದ‌ ಸಿಬ್ಬಂದಿ. ಅ.27 ರಂದು ಕದಂಬ ನೌಕಾನೆಲೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ವೇಳೆ ಮಧ್ಯಾಹ್ನ 2 ಗಂಟೆ ವೇಳೆಗೆ ಅವರು ನಾಪತ್ತೆಯಾಗಿದ್ದರು. ಈ ಕುರಿತು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದಿನಿಂದಲೂ ಪಾಕಿಸ್ತಾನದ ಬೇಹುಗಾರಿಕಾ ತಂಡ ಹನಿಟ್ರ್ಯಾಪ್ …

Read More »

ಸಾರಿಗೆ ಬಸ್, ಪಿಕಪ್ ವಾಹನದ ನಡುವೆ ಭೀಕರ ಅಪಘಾತ – ಓರ್ವ ಸಾವು, ನಾಲ್ವರಿಗೆ ಗಾಯ

ಹಾಸನ: ಸಾರಿಗೆ ಬಸ್ ಹಾಗೂ ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ  ಜಿಲ್ಲೆ, ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ. ದಿನೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಹಾಗೂ ದುರ್ಗಾಪ್ರಸಾದ್ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಐಸಿಐಸಿಐ ಬ್ಯಾಂಕ್‌ಗೆ ಸೇರಿದ ಬೊಲೆರೋ ಪಿಕಪ್ ವಾಹನ ಎಟಿಎಂಗಳಿಗೆ ಹಣ ತುಂಬಲು ಬರುತ್ತಿತ್ತು. ಈ ವೇಳೆ ಮಂಗಳೂರಿನಿಂದ …

Read More »

‘ನ್ಯಾಯ’ದ ಬಗ್ಗೆ ಉಪದೇಶ ನೀಡುವ ಪಕ್ಷಕ್ಕೆ ಒಂದು ಸುರಕ್ಷಿತ ತರಗತಿಯನ್ನು ಖಾತರಿಪಡಿಸಲಾಗುತ್ತಿಲ್ಲ: ರಾಗಾ ವಿರುದ್ಧ ಅಶೋಕ್ ಟೀಕೆ

ಬೆಂಗಳೂರು: ಭಾರತಕ್ಕೆ ‘ನ್ಯಾಯ’ದ ಬಗ್ಗೆ ಉಪದೇಶ ನೀಡುವ ಪಕ್ಷಕ್ಕೆ ಒಂದು ಸುರಕ್ಷಿತ ತರಗತಿಯನ್ನು ಖಾತರಿಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಶಾಲಾ ಮೇಲ್ಛಾವಣಿ ಕುಸಿತ ಪ್ರಕರಣ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಕರ್ನಾಟಕದ ಖಟಾಖಟ್ ರೂಫ್ ಶಾಲೆಯಲ್ಲಿ `ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮ ನಡೆಸುವ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನಿಸಿದ್ದಾರೆ. ನೀವು ನ್ಯಾಯದ …

Read More »

KPSC Scam: ಕನ್ನಾಳೆ ಮನೆಯಲ್ಲಿ 15 ಗ್ರೂಪ್ ಬಿ ಹಾಲ್ ಟಿಕೆಟ್ ಪತ್ತೆ

ಬೆಂಗಳೂರು: ಕೆಪಿಎಸ್‌ಸಿ ಭ್ರಷ್ಟಾಚಾರ (KPSC Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಸವರಾಜ್ ಕನ್ನಾಳೆ ಮನೆ ಮೇಲೆ ದಾಳಿ ನಡೆಸಿದ ವೇಳೆ 15 ಗ್ರೂಪ್ ಬಿ ಹಾಲ್ ಟಿಕೆಟ್‌ಗಳು ಪತ್ತೆಯಾಗಿವೆ. ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು, ಬಸವರಾಜ್ ಕನ್ನಾಳೆ ಮನೆಯಲ್ಲಿ ಸಿಕ್ಕ ಸಾಕ್ಷ್ಯಗಳನ್ನು ನೋಡಿ ದಂಗಾಗಿದ್ದಾರೆ. ಶೋಧದ ವೇಳೆ ಬಸವರಾಜ್ ಮನೆಯಲ್ಲಿ ಬರೋಬ್ಬರಿ 15 ಪರೀಕ್ಷೆಗಳ ಹಾಲ್ ಟಿಕೆಟ್‌ಗಳು ಪತ್ತೆಯಾಗಿವೆ. ಕೇವಲ ಪಶು ವೈದ್ಯಾಧಿಕಾರಿ ಹುದ್ದೆ ಮಾತ್ರವಲ್ಲದೆ ಬಿ-ಗ್ರೂಪ್ ಹುದ್ದೆಗಳು ಹಾಗೂ ಕೆಎಎಸ್‌ …

Read More »

ನಾಡಿನಾದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ

ಬೆಂಗಳೂರು: ನಾಡಿನಲ್ಲೆಡೆ ಇಂದು ಬೃಂದಾವನದ ನಂದನ ಶ್ರೀ ಕೃಷ್ಣನ ಜನ್ಮಾಷ್ಟಮಿಯ ಸಂಭ್ರಮ. ಬೆಂಗಳೂರಿನ ವೇಣು ಮಾದವನ ದೇವಾಲಯಗಳಲ್ಲಿ ಶ್ರೀಕೃಷ್ಣಾಷ್ಟಮಿಯ ಸಂಭ್ರಮ ಜೋರಾಗಿಯೇ ನಡೆಯುತ್ತಿದೆ. ಇದರೊಂದಿಗೆ ರಾಜ್ಯದ ವಿವಿಧ ಶ್ರೀಕೃಷ್ಣನ ಸನ್ನಿಧಿಗಳಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಬೆಂಗಳೂರಿನ ಪ್ರಸಿದ್ಧ ಇಸ್ಕಾನ್ ದೇವಾಲಯದಲ್ಲೂ ಶ್ರೀ ಕೃಷ್ಣನ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಹಬ್ಬದ ದಿನ ಬೃಂದಾವನದ ಟೀಮ್‌ನಿಂದ ಮುಖ್ಯ ಮಂದಿರದಲ್ಲಿ ನವಿಲಿನ ಅಲಂಕಾರ ಮಾಡಲಾಗಿದೆ. ರಂಗ ಮಂದಿರದಲ್ಲಿ ವಿಶೇಷವಾಗಿ ರಾಧ – ಕೃಷ್ಣ ಉತ್ಸವ …

Read More »